ನಮ್ಮ ಮಕ್ಕಳಿಗಾಗಿ ಒಂದು ನೀತಿ ಕಥೆ...
16 hours 59 minutes ago - Shreerama Diwanaಭಾವನಾತ್ಮಕ ದೃಶ್ಯದ ತುಣುಕೊಂದು ಸೋಷಿಯಲ್ ಮೀಡಿಯಾದಲ್ಲಿ ಹರಿದಾಡುತ್ತಿದೆ. ಅದರ ಒಳ ಅರ್ಥ ಮಾತ್ರ ವಿಶಾಲವಾಗಿದೆ ಮತ್ತು ತಂದೆ ತಾಯಿ ಅಜ್ಜ ಅಜ್ಜಿ ಮೊದಲಾದ ಹಿರಿಯರನ್ನು ನಿರ್ಲಕ್ಷಿಸುವವರ ಆತ್ಮಕ್ಕೆ ನೇರವಾಗಿ ಚುಚ್ಚುತ್ತದೆ. ನೀವು ಈಗಾಗಲೇ ಇದನ್ನು ನೋಡಿರಬಹುದು ಅಥವಾ ಕೇಳಿರಬಹುದು. ಅದನ್ನು ಮತ್ತೊಮ್ಮೆ ನೆನಪಿಸುತ್ತಾ...
ಒಂದು ಪಾರ್ಕಿನ ಬೆಂಚಿನ ಮೇಲೆ ಎಳೆ ಬಿಸಿಲಿನ ಬೆಳಗಿನ ಸಮಯದಲ್ಲಿ 75-85 ರ ವಯಸ್ಸಿನ ವೃದ್ದರೊಬ್ಬರು ಕುಳಿತಿದ್ದಾರೆ. ಅವರ ಪಕ್ಕದಲ್ಲೇ ಅವರ ಸುಮಾರು 25 ವರ್ಷದ ಮಗ ಪತ್ರಿಕೆ ಓದುತ್ತಾ ಕುಳಿತಿದ್ದಾನೆ. ಆ ಪಾರ್ಕಿನ ನಿಶ್ಯಬ್ದ ವಾತಾವರಣದಲ್ಲಿ ಒಂದು ಮರದಿಂದ ಯಾವುದೋ ಪಕ್ಷಿಯ ವಿಚಿತ್ರ ಧ್ವನಿ ಕೇಳಿ ಬರುತ್ತದೆ. ಆ ತಂದೆಗೆ ಕುತೂಹಲ ಉಂಟಾಗುತ್ತದೆ. ಪತ್ರಿಕೆ ಓದುತ್ತಿದ್ದ ಮಗನನ್ನು " ಕಂದ, ಆ ಧ್ವನಿ ಕೇಳುತ್ತಿದೆಯಲ್ಲ ಅದು ಯಾವ ಹಕ್ಕಿಯ ಧ್ವನಿ ನಿನಗೆ ಗೊತ್ತೆ " ಎಂದು ಕೇಳುತ್ತಾರೆ.
ಓದುವುದರಲ್ಲಿ ಮಗ್ನನಾಗಿದ್ದ ಮಗ ನಿರ್ಲಕ್ಷ್ಯದಿಂದ " ಗೊತ್ತಿಲ್ಲ " ಎಂದು ಉತ್ತರಿಸಿ ಸುಮ್ಮನಾಗುತ್ತಾನೆ. ಆ ಪಕ್ಷಿಯ ಧ್ವನಿ ಮತ್ತೆ ಮತ್ತೆ ಕೇಳಿಬರುತ್ತದೆ. ಆ ಹಿರಿಯರಿಗೆ ಮತ್ತಷ್ಟು ಕುತೂಹಲ ಹೆಚ್ಚಾಗುತ್ತದೆ. ಯೋಚಿಸಿದಷ್ಟು ಯಾವ ಪಕ್ಷಿ ಎಂಬ ಗೊಂದಲ ಉಂಟಾಗುತ್ತದೆ.
ಮತ್ತೊಮ್ಮೆ ಮಗನನ್ನು " ಪುಟ್ಟ ಸರಿಯಾಗಿ ಕೇಳು. ಇದರ ಧ್ವನಿ ನಾನು ಬಹಳ ಕೇಳಿದ್ದೇನೆ. ಆದರೆ ಪಕ್ಷಿಯ ಹೆಸರು ನೆನಪಾಗುತ್ತಿಲ್ಲ. ನಿನಗೆ ತಿಳಿದಿರಬಹುದು " ಎನ್ನುತ್ತಾರೆ. ಪತ್ರಿಕೆ ಓದುತ್ತಿದ್ದ ಮಗನಿಗೆ ಸ್ವಲ್ಪ ಅಸಹನೆ ಉಂಟಾಗುತ್ತದೆ. " ಆಗಲೇ ಹೇಳಿದೆನಲ್ಲಾ ನನಗೆ ಅದೆಲ್ಲಾ ಗೊತ್ತಿಲ್ಲ " ಎಂದು ಧ್ವನಿ ಏರಿಸಿ ಉತ್ತರಿಸುತ್ತಾನೆ.
ಹಿರಿಯರು ಸುಮ್ಮನಾಗುತ್ತಾರೆ. ಸ್ವಲ್ಪ ಹೊತ್ತಿಗೆ ಆ ಪಕ್ಷಿಯ ಧ್ವನಿ ಇನ್ನೂ ಹತ್… ಮುಂದೆ ಓದಿ...