ಹೊಸಗನ್ನಡ ಕಾವ್ಯಶ್ರೀ (ಭಾಗ ೫೩) - ಶ್ರೀನಿವಾಸ
1 day 11 hours ago - Ashwin Rao K Pಶ್ರೀನಿವಾಸ’ ಕಾವ್ಯನಾಮದ ಮಾಸ್ತಿ ವೆಂಕಟೇಶ್ ಅಯ್ಯಂಗಾರ್ ಅವರು ಕನ್ನಡ ಸಣ್ಣಕತೆಗಳ ರಚನೆಗೆ ಖಚಿತ ರೂಪ ನೀಡುವುದಕ್ಕೆ ಕಾರಣರಾದ ಆದ್ಯರು. ಕೋಲಾರದ ಮಾಲೂರಿನ ಮಾಸ್ತಿ ಗ್ರಾಮದಲ್ಲಿ ೧೮೯೧ರ ಜೂನ್ ೮ರಂದು ಜನಿಸಿದರು. ತಂದೆ ರಾಮಸ್ವಾಮಿ ಅಯ್ಯಂಗಾರ್ ತಾಯಿ ತಿರುಮಲ್ಲಮ್ಮ. ಪ್ರೌಢವಿದ್ಯಾಭ್ಯಾಸವನ್ನು ಮೈಸೂರಿನ ವೆಸ್ಲಿಯನ್ ಹೈಸ್ಕೂಲಿನಲ್ಲೂ, ಎಫ್.ಎ. ಅನ್ನು ಮಹಾರಾಜ ಕಾಲೇಜಿನಲ್ಲೂ ಮುಗಿಸಿ ಬೆಂಗಳೂರಿನ ಸೆಂಟ್ರಲ್ ಕಾಲೇಜಿನಲ್ಲಿ ಬಿ.ಎ ಮುಗಿಸಿ ಮದರಾಸಿನ ಪ್ರೆಸಿಡೆನ್ಸಿ ಕಾಲೇಜಿನಲ್ಲಿ ಎಂಎ ಪದವಿ (೧೯೧೪) ಪಡೆದರು.
ಮೈಸೂರು ಸರ್ಕಾರದ ಅಸಿಸ್ಟೆಂಟ್ ಕಮೀಷನರ್ (೧೯೧೪) ಆಗಿ ಕೆಲಸಕ್ಕೆ ಸೇರಿದರು. ಸರ್ ಎಂ. ವಿಶ್ವೇಶ್ವರಯ್ಯನವರ ಕೈಕೆಳಗೆ ಕೆಲಸ ಮಾಡಿದ ಮಾಸ್ತಿ ಅವರು ಸಬ್ ಡಿವಿಜನ್ ಆಫೀಸರ್ (೧೯೨೭) ಮ್ಯಾಜಿಸ್ಟ್ರೇಟ್ ಮತ್ತು ಕಂಟ್ರೋಲರ್ (೧೯೩೦) ಡೆಪ್ಯುಟಿ ಕಮೀಷನರ್ (೧೯೩೪) ಎಕ್ಸೈಜ್ ಕಮೀಷನರ್ (೧೯೪೦) ಮೊದಲಾದ ಉನ್ನತ ಹುದ್ದೆಗಳಲ್ಲಿ ಸೇವೆ ಸಲ್ಲಿಸಿ ೧೯೪೩ರಲ್ಲಿ ಸ್ವಇಚ್ಛೆಯಿಂದ ಸರ್ಕಾರಿ ಸೇವೆಯಿಂದ ನಿವೃತ್ತರಾದರು.
ಕನ್ನಡ ಸಾಹಿತ್ಯ ಪರಿಷತ್ತಿನ ಉಪಾಧ್ಯಕ್ಷರಾಗಿ, ಅಧ್ಯಕ್ಷರಾಗಿ ಸೇವೆ ಸಲ್ಲಿಸಿರುವ ಇವರು ‘ಜೀವನ’ ಮಾಸಪತ್ರಿಕೆಯನ್ನು ೨೫ ವರ್ಷ ಪ್ರಕಟಿಸಿದರು. ಕನ್ನಡ ಏಕೀಕರಣಕ್ಕೆ ಶ್ರಮಿಸಿದರು. ಸಹಾಯನಿಧಿ ಮೂಲಕ ಕನ್ನಡ ಲೇಖಕರನ್ನು ಬೆಳಕಿಗೆ ತಂದರು. ಪಿಇಎನ್ ಸಂಸ್ಥೆಯ ಉಪಾಧ್ಯಕ್ಷರಾಗಿ (೧೯೬೪) ಆಯ್ಕೆಯಾಗಿದ್ದರು. ಅಖಿಲ ಭಾರತ ಪ್ರಾಚ್ಯ ಸಮ್ಮೇಳನ ಕನ್ನಡ ವಿಭಾಗದ ಅಧ್ಯಕ್ಷರಾಗಿದ್ದರು..
ಮೈಸೂರು ಮಹಾರಾಜರು ರಾಜಸೇವಾ ಪ್ರಸಕ್ತ ಬಿರುದು ನೀಡಿದರು. ಕರ್ನಾಟಕ ವಿಶ್ವವಿದ್ಯಾಲಯದಿಂದ ಗೌರವ ಡಾಕ್ಟರೇಟ್ (೧೯೫೬), ಕೇಂದ್ರ ಸಾಹಿತ್ಯ ಅಕಾಡೆಮಿ ಬಹುಮಾನ (೧೯೬೮), ವರ್ಧಮಾನ ಪ್ರಶಸ್ತಿ, ಮೈಸೂರು ವಿಶ್ವವಿದ… ಮುಂದೆ ಓದಿ...