ಇಂದು, ೧೬ ಜುಲೈ ೨೦೧೧ರಂದು, ಸಾರಂಗ ಮೀಡಿಯ, ಆಕೃತಿ ಪುಸ್ತಕ ಮತ್ತು ಮಂದಾರ ಪುಸ್ತಕ ಇವರ ಆಶ್ರಯದಲ್ಲಿ "ಹಂಸನಾದ" ಪುಸ್ತಕದ ಬಿಡುಗಡೆ. ಜೊತೆಯಲ್ಲೇ "ಅಕ್ಟೋಬರ್ ೧೦" ಕಥಾಸಂಕಲನದ...
ಸಂಪದ ›
ಕ್ಷುಲ್ಲಕ ಕಾರಣ, ಅಮಾಯಕರ ಸಾವು
ಕ್ಷುಲ್ಲಕ ಕಾರಣ, ಅಮಾಯಕರ ಸಾವು
ಅಬ್ದುಲ್ ಲತೀಫ್ ಸಯ್ಯದ್
jeddah, saudi arabia
July 21, 2011 - 10:51pm
ಒಬ್ಬಾತ ತನ್ನ ದಿನದ ಕೆಲಸ ಮುಗಿದ ನಂತರ ತನ್ನ ಮಕ್ಕಳಿಗೆಂದು ಗೋಬಿ ಮಂಚೂರಿ ಕಟ್ಟಿಸಿಕೊಂಡು ಮನೆಗೆ ಹೋಗುತ್ತಾನೆ. ಅದನ್ನು ತಿಂದ ಮಕ್ಕಳು ತುಂಬಾ ಖಾರ ಆಯಿತು ಎಂದು ಅಪ್ಪನಲ್ಲಿ ದೂರುತ್ತಾರೆ. ಕೋಪಗೊಂಡ ಅಪ್ಪ ಗೋಬಿ ಮಾರಿದ ಹೋಟೆಲ್ ಗೆ ಬಂದು ಇದರ ಬಗ್ಗೆ ದೂರುತ್ತಾನೆ. ರಾತ್ರಿಯಾದ್ದರಿಂದ ಹೋಟೆಲ್ ಮುಚ್ಚುತ್ತಿದ ಯಜಮಾನ ದೂರಿದ ಗಿರಾಕಿಯ ಮೇಲೆ ಕೈ ಮಾಡುತ್ತಾನೆ, ಇನ್ನಷ್ಟು ತದುಕಲು ಕೆಲಸಗಾರರನ್ನೂ ಕರೆಸುತ್ತಾನೆ. ಎಲ್ಲರ ಬಡಿತ ತಿಂದ ಗಿರಾಕಿ ಕೊನೆಯುಸಿರೆಳೆಯುತ್ತಾನೆ. ಎಂಥ ದುರಂತ ನೋಡಿ. ಮಕ್ಕಳು ಆಸೆ ಪಡುತ್ತಾರೆ ಎಂದೋ ಅಥವಾ ಬೆಳಿಗ್ಗೆ ಮನೆಯಿಂದ ಹೊರಡುವಾಗ ಅಪ್ಪಾ, ಬರುವಾಗ ಗೋಬಿ ತಗೊಂಡು ಬಾ ಎಂದು ಹೇಳಿದ ಪುಟಾಣಿಗಳ ಆಸೆ ಪೂರೈಸಲು ಕಟ್ಟಿಸಿಕೊಂಡು ತಂದ ತಿಂಡಿ ಅವನ ಅವಸಾನಕ್ಕೆ ಕಾರಣ ವಾಗಬಹುದು ಎಂದು ಅವನಿಗೆ ಖಂಡಿತ ಹೊಳೆದಿರಲಿಕ್ಕಿಲ್ಲ. ಬೆಂಗಳೂರಿನಲ್ಲಿ ನಡೆದ ಈ ಘಟನೆ ನಿಜಕ್ಕೂ ಗಾಭರಿ ಹುಟ್ಟಿಸುತ್ತದೆ.
ಇಷ್ಟು ಕ್ಷುಲ್ಲಕ, ಸಾಧಾರಣ ಸಮಸ್ಯೆಯೊಂದು ಒಬ್ಬನ ಸಾವಿನಲ್ಲಿ ಸಮಾಪ್ತಿಯಾದರೆ ನಮ್ಮ ಸಮಾಜ ಯಾವ ದಿಕ್ಕಿನಲ್ಲಿ ಸಾಗುತ್ತಿದೆ? ನಮ್ಮ ಸಹನೆಯ ಮಿತಿ ಈ ರೀತಿ ತಳ ಮುಟ್ಟಲು ಕಾರಣವೇನು? ದಿನ ಬೆಳಗಾದರೆ ಈ ತೆರನಾದ ಮನಕಲಕುವ, ನಾಗರೀಕ ಸಮಾಜ ತಲೆ ತಗ್ಗಿಸುವ ಕೆಲಸಗಳು ದೇಶದ ಎಲ್ಲೆಡೆ ವರದಿ ಆಗುತ್ತಿದ್ದರೂ ನಮಗೆ ಅದು ಒಂದು ಪುಟ್ಟ distraction ಮಾತ್ರವಾಗಿ ಗೋಚರಿಸುವುದು ಖೇದಕರ.
ಮೇಲಿನ ದುರಂತ ದಕ್ಷಿಣ ಭಾರತದ್ದಾದರೆ ಈಗ ಬನ್ನಿ ಉತ್ತರ ಭಾರತಕ್ಕೆ.
ತಾನು ಪ್ರೀತಿಸಿದವನನ್ನು ತನ್ನ ತಂದೆ ಇಷ್ಟ ಪಡಲಿಲ್ಲ ಎಂದು ಪ್ರಿಯಕರ ಮತ್ತು ಅವನ ಮಿತ್ರನನ್ನು ತನ್ನ ತಂದೆಯನ್ನು ಕೊಲ್ಲಲು ಮಗಳು ನಿಯಮಿಸುತ್ತಾಳೆ. ಅವರಿಬ್ಬರೂ ಸೇರಿ ಹುಡುಗಿಯ ತಂದೆಗೆ ಗತಿ ಕಾಣಿಸುತ್ತಾರೆ. ನಂಬಲು ಸಾಧ್ಯವೇ ಈ ಘಟನೆಯನ್ನು? ಇಂಥ ಪೈಶಾಚಿಕ ಪ್ರವೃತ್ತಿಗೆ ಕಾರಣವಾದರೂ ಏನಿರಬಹುದು? ಅಸಹನೆಯ ಕಿಡಿ, ಧ್ವೇಷದ ಮನೋಭಾವ ಇವಕ್ಕೆ ಕಾರಣ ಎಂದು ದೂರುವಂತಿಲ್ಲ. ಏಕೆಂದರೆ ಇವು ಆ ಕ್ಷಣದಲ್ಲಿ ಹುಟ್ಟಿಕೊಂಡ ವಿಕೃತ ಕೃತ್ಯ. ವ್ಯವಸ್ಥಿತವಾಗಿ ನಡೆಯುವ ಹಲ್ಲೆಗಳಿಗೆ ಪರಿಹಾರ ಹಾಗೂ ಹೀಗೂ ಕಂಡು ಕೊಳ್ಳಬಹುದು. ಜನರನ್ನು ಜಾಗೃತಿ ಗೊಳಿಸಬಹುದು. ಧ್ವೇಷ ದಿಂದ ಏನನ್ನೂ ಸಾಧಿಸಲು ಸಾಧ್ಯವಿಲ್ಲ ಎಂದು ಮನವರಿಕೆ ಮಾಡಿ ಕೊಡಬಹುದು. ಅಂಥ ಘಟನೆಗಳು ಮತ್ತೊಮ್ಮೆ ಮರುಕಳಿಸದಂತೆ ಕ್ರಮಗಳನ್ನು ಕೈಗೊಳ್ಳ ಬಹುದು. ಆದರೆ ಈ ರೀತಿ ಥಟ್ಟನೆ ಉದ್ಭವವಾಗುವ ಹಿಂಸೆಗೆ ಏನು ಪರಿಹಾರ? ಮೇಲಿನ ಎರಡು ಪೈಶಾಚಿಕ ಘಟನೆಗಳು ಎಲ್ಲೋ ಒಂದೋ ಎರಡೋ ಆಗಿದ್ದಿದ್ದರೆ ನಿಟ್ಟುಸಿರು ಬಿಟ್ಟು ಮುಂದೆ ಸಾಗಬಹುದಿತ್ತು. ದಿನ ಬೆಳಗಾದರೆ ನಮಗೆ ಎದುರಾಗುವುದು ಇಂಥ ಅವಿವೇಕತನದಿಂದ ಕೂಡಿದ ಹಿಂಸೆಗಳೇ. ಚಿಲ್ಲರೆಗಾಗಿ ಕೊಲೆ, ಚೌಕಾಶಿ ಮಾಡಿದ್ದಕ್ಕೆ ಕೊಲೆ, ಇಟ್ಟುಕೊಂಡವಳಿಗಾಗಿ ಕೊಲೆ, ತನ್ನ ಸೋದರಿಯನ್ನು ಪ್ರೀತಿಸಿದ್ದಕ್ಕಾಗಿ ಕೊಲೆ............ಅಸಹನೆಯ ಕೂಪಕ್ಕೆ ದಬ್ಬಲ್ಪಡುತ್ತಿರುವ ನಮ್ಮ ಸಮಾಜವನ್ನು, ಸಂಸ್ಕಾರವನ್ನು ಪಾರು ಮಾಡಲು ನಾವೇನು ಮಾಡಬಹುದು? ನಾಗರೀಕ, ಪ್ರಜ್ಞಾವಂತ ಸಮಾಜ ಕೇಳಿಕೊಳ್ಳಬೇಕಾದ ಪ್ರಶ್ನೆ.
750 ಹಿಟ್ಸ್
- Login or register to post comments
- 750 ಹಿಟ್ಸ್
ಈ ಪುಟವನ್ನು ಇ-ಮೇಯ್ಲ್ ಮಾಡಿ
Printer-friendly version
ಎಲ್ಲ ಪುಟಗಳು
ನನ್ನ ಬರಹಗಳು
ಇತ್ತೀಚಿನ ಪ್ರತಿಕ್ರಿಯೆಗಳು
ಉ: ನಮ್ಮೂರ ಪ್ರತಿಭೆಗೆ ಶುಭಾಶಯಗಳು - ಸಪ್ತಗಿರಿವಾಸಿ
ಉ: ಕಣ್ಣ ಅಂಚಿನಲಿ - Ajjappa sarver
ಉ: ಕತೆ ಬರೆಯುವ ತಂತ್ರಾಂಶದ ಕತೆ ಕೇಳಿ - ಸಪ್ತಗಿರಿವಾಸಿ
ಉ: ಕಣ್ಣ ಅಂಚಿನಲಿ - ಸಪ್ತಗಿರಿವಾಸಿ
ಉ: ಜೊತೆಯಲ್ಲಿಲ್ಲದವಳ ನೆನೆದು, ನೆನೆದುಹೊದೆ ಮಳೆಯಲಿ ಅವಳ ಜೊತೆಯಲಿ - ಸಪ್ತಗಿರಿವಾಸಿ






...


ಪ್ರತಿಕ್ರಿಯೆಗಳು