ಮುಕುರಂ ಕೈಯೊಳಿರಲ್ಕೆ ನೀರ ನೆಳಲೇಕೈ ಕಾಮಧೇನಿರ್ದುಮೂ |
ಟಕೆ ಗೊಡ್ಡಾಕಳನಾಳ್ವರೇ ಗುಣಯುತರ್ ಪಾಲುಂಡು ಮೇಲುಂಬರೇ ||
ಶುಕನೋದಿಂಗುರೆ ಚೆಲ್ವೆ ಕಾಕರವ ರಂಭಾನೃತ್ಯಕಂ ಡೊಂಬರೇ |
ಸಖರಿಂದುನ್ನತ ವಸ್ತುವೇ ಹರ ಹರಾ ಶ್ರೀ ಚೆನ್ನಸೋಮೇಶ್ವರಾ ||

ಮುಕುರ - ಕನ್ನಡಿ, ಕಾಮಧೇನು - ಕೇಳಿದುದನ್ನು ಕೊಡುವ ದೇವಲೋಕದ ಆಕಳು, ಕಾಕರವ - ಕಾಗೆಯ ಕೂಗು.

— ೧೨ನೇ ಶತಮಾತದಲ್ಲಿದ್ದ ಪಾಲ್ಕುರಿಕೆ ಸೋಮ(*) ಎಂಬ ಕವಿ.

ಕೃಷಿ ಸಂಪದ: ಫೆಬ್ರವರಿ ಸಂಚಿಕೆ

Krushi Sampada 5th Edition

ಮಿಲೇ ಸುರ್

’ಮಿಲೇ ಸುರ್’ ಹಾಡಿಗೊಂದು ಹೊಸ ಸ್ವರ-ಹೊಸ ನುಡಿ...

೧೯೮೮ರಲ್ಲಿ ’ಮಿಲೇ ಸುರ್ ಮೇರಾ ತುಮ್ಹಾರ’ ಎಂಬ ಹಾಡು ಟಿ.ವಿಯಲ್ಲಿ ಬರುತ್ತಿದ್ದಂತೆ ನಾವುಗಳೆಲ್ಲಾ ಗೋಡೆಗೆ ಅಂಟುವ ಹಲ್ಲಿಗಳಂತೆ ಟಿ.ವಿಗೆ ಅಂಟಿಕೊಂಡು ಬಿಡುತ್ತಿದ್ದೆವು. ಹಾಡಿನಲ್ಲಿ ಕನ್ನಡವನ್ನು ಕೇಳಿದಾಗಲಂತೂ ಮೈ-ಪುಳುಕ. ಚಿಕ್ಕ ಮಕ್ಕಳಾಗಿದ್ದ ನಮಗೆ, ಭಾರತದ ಸಂಸ್ಕೃತಿಯ ಕನ್ನಡಿಯಂತಿದ್ದ ಈ ಹಾಡು ಕಣ್ಣಿಗೆ ಹಬ್ಬವೇ ಸರಿ.  ಮುಂದೆ ಓದಿ »

Syndicate content