ಶಾಲೆಗಳಿಗೆ ಕಂಪ್ಯೂಟರ್ ಕೊಡುಗೆ ನೀಡಿ
August 11, 2010 - 10:46am
ಈಗ ಕಂಪ್ಯೂಟರ್ ಎಲ್ಲಾ ಕ್ಷೇತ್ರಗಳಲ್ಲಿಯೂ ವ್ಯಾಪಿಸಿದೆ. ಆದರೂ ಗ್ರಾಮೀಣ ಪ್ರದೇಶದಲ್ಲಿ ಕಂಪ್ಯೂಟರ್ ಅಷ್ಟೊಂದು ಬಳಕೆಯಲ್ಲಿಲ್ಲ. ಅದಕ್ಕೆ ಬಹುಷಃ ಗ್ರಾಮೀಣ ಪ್ರದೇಶಿಗರಿಗೆ ಕಂಪ್ಯೂಟರ್ ಜ್ಞಾನ ಕಡಿಮೆಯಿರುವುದೇ ಕಾರಣವಿರಬಹುದು. ಗ್ರಾಮೀಣ ಪ್ರದೇಶದಲ್ಲಿ ಕಂಪ್ಯೂಟರ್ ಶಿಕ್ಷಣ ನೀಡುವ ಸಂಸ್ಥೆಗಳೂ ಸಾಕಷ್ಟಿಲ್ಲ. ಶಾಲೆಗಳಲ್ಲಿ ಮಕ್ಕಳಿಗೆ ಕಂಪ್ಯೂಟರ್ ಶಿಕ್ಷಣ ನೀಡಲು ಕ್ರಮ ಕೈಗೊಂಡಿದ್ದರೂ, ಕೆಲವು ಶಾಲೆಗಳಲ್ಲಿ ಕಂಪ್ಯೂಟರ್ ಇದ್ದರೆ ಕಲಿಸಲು ಶಿಕ್ಷಕರಿರುವುದಿಲ್ಲ, ಶಿಕ್ಷಕರಿದ್ದರೆ ಕಲಿಸಲು ಸಾಕಷ್ಟು ಕಂಪ್ಯೂಟರ್‌ಗಳೇ ಇರುವುದಿಲ್ಲ! ನಾನು ಹೈಸ್ಕೂಲಿನಲ್ಲಿ ಕಲಿಯುತ್ತಿದ್ದಾಗ ಇಡೀ ಶಾಲೆಗೆ ಒಂದೇ ಒಂದು ಕಂಪ್ಯೂಟರ್ ಇತ್ತು. ಅದರಲ್ಲೇ ಎಲ್ಲರೂ ಕಲಿಯಬೇಕಿತ್ತು. Read more about ಶಾಲೆಗಳಿಗೆ ಕಂಪ್ಯೂಟರ್ ಕೊಡುಗೆ ನೀಡಿ
ನಿಮಗೆ ಈ ಬರಹ ಇಷ್ಟವಾಯಿತೇ? ತಿಳಿಸಿ:




