ಚಿಂತನಾ ಚಾವಡಿ
ಪುರೋಹಿತ ಪುಡಾರಿಗಳು ಮತ್ತು ದೇವರು
April 8, 2008 - 4:56pm — vinayaka(ಈ ಲೇಖನ ಆರಂಭಿಸುವ ಮುನ್ನವೇ ಒಂದಿಷ್ಟು ಸಂಗತಿಗಳನ್ನು ಹೇಳಿಬಿಡುತ್ತೇನೆ. ಈ ಲೇಖನಕ್ಕೆ ಕೊಟ್ಟಿರುವ ಶಿರ್ಷಿಕೆ ಅಥವಾ ತಲೆ ಬರಹ ತೀರಾ ಕೆಟ್ಟದಾಗಿದೆ ಅಂತಾ ನಾನು ಬಲ್ಲೆ. ಹಾಗಂತ ಇದು ಯಾವುದೋ ಒಂದು ವರ್ಗವನ್ನು ಕುರಿತಾಗಿ ಅವಹೇಳನ ಮಾಡುವ ಅಥವಾ ಯಾವುದೋ ಒಂದು ವರ್ಗದ ದ್ವೇಷಿಯಾಗಿ ಏಕಮುಖಿ ಚಿಂತನೆಯೊಂದಿಗೆ ಬರೆಯುತ್ತಿರುವ ಬರಹವಲ್ಲ. ಪ್ರಸ್ತುತದ ಒಂದು ಸಮಸ್ಯೆಯೊಂದನ್ನು ಕೈಗೆತ್ತಿಕೊಂಡು ಅದರ ಎಡ ಬಲಗಳ ಸುತ್ತ ಅವಲೋಕಿಸಲು ಹೊರಟ್ಟಿದ್ದೇನೆ . ಇಲ್ಲಿ ಪರ ವಿರೋದಗಳ ದ್ವಂದ ಮಿಶ್ರಣದ ಎರಡು ಮಜಲುಗಳ ಅವಲೋಕನ ಇದೆ. ಆ ನಿಲುವು ನನ್ನೊಳಗಿನ ಗೊಂದಲ ಅಂತಾನೂ ನೀವು ಭಾವಿಸಬಹುದು. ಇಲ್ಲಿ ಮುಕ್ತ ಚರ್ಚೆಗೆ ಅವಕಾಶವಿದೆ. ಇಲ್ಲಿನ ಬರಹಕ್ಕಿಂತ ಭಿನ್ನವಾದೊಂದು ಆಲೋಚನೆ ನಿಮ್ಮಿಂದ ಹರಿದು ಬಂದರೆ ಖಂಡಿತಾ ಅದನ್ನು ನಾನು ಸ್ವೀಕರಿಸುತ್ತೇನೆ.)
ಅದ್ಯಾಕೋ ಬೆಂಗಳೂರೆಂಬ ಈ ಹಾಳು ಕಾಂಕ್ರೀಟು ಜಂಗಲ್ಲು ಸೇರಿದ ಮೇಲೆ ನನಗಂತೂ ದೇವರಿಗೆ ಕೈ ಮುಗಿಯಬೇಕು, ದೇವಸ್ಥಾನಕ್ಕೆ ಎಂಟ್ರಿಕೊಡಬೇಕು ಅಂತಾನೆ ಅನ್ನಿಸ್ತಾ ಇಲ್ಲ. ಮನೆಯಲ್ಲಿದ್ದರೆ ಕನಿಷ್ಟಪಕ್ಷ ಬೆಳಿಗ್ಗೆ ಎದ್ದವನಾದರೂ ದೇವರಿಗೆ ಕೈಮುಗಿಯುತ್ತಿದ್ದೆ. ಆದರೆ ಬೆಂಗಳೂರೆಂಬ ಮಹಾನಗರಿಯ ಒಂದಿಷ್ಟು ಪುಡಾರಿ ಪುರೋಹಿತರನ್ನು ಕಂಡ ಮೇಲೆ ಆ ಸಂಪ್ರದಾಯವೂ ನನ್ನಿಂದ ದೂರವಾಗಿದೆ. ನಿನ್ನಿಂದ ದೂರವಾಗಿರುವ ಸಂಪ್ರದಾಯವೊಂದಕ್ಕೆ ಬಡಪಾಯಿ ಪುರೋಹಿತನ್ನ ಯಾಕೆ ಬಲಿಪಶು ಮಾಡ್ತಿಯಾ ಅಂತಾ ಗೆಳೆಯನೊಬ್ಬ ಕೇಳಿದ್ದ. ಅಲ್ಲೋ ಆ ದೇವರಿಗೆ ತನ್ನ ಬಳಿಯಿರುವ ಅರ್ಚಕನೇ ದೇವರ ಹೆಸರುಹೇಳಿಕೊಂಡು ಲಫಡಾ ಮಾಡಲು ಹೊರಟಿರುವುದು ಕಣ್ಣೆದುರಿಗೆ ಕಾಣುತ್ತಿದ್ದರು ಅದನ್ನು ತಡೆಗಟ್ಟಲು ಸಾಧ್ಯವಿಲ್ಲ ಅಂತಾದರೆ ಅವನೆಂತಹ ದೇವರೋ! ಅಂತಾ ತಿರುಗಿ ಉತ್ತರ ನೀಡಿದ್ದೆ!
ಹೌದು ಇವತ್ತು ದೇವಸ್ಥಾನವೆಂಬುದು ಹಣಗಳಿಕೆಯ ಕೇಂದ್ರವಾಗಿದೆ! ಬೆಂಗಳುರಿನಲ್ಲಿ ಕೆಲ ಪುರೋಹಿತ ಪುಡಾರಿಗಳು ದೇವರ ಹೆಸರು ಹೇಳಿಕೊಂಡು, ಇಲ್ಲಸಲ್ಲದ ವಿಚಿತ್ರ ಕಥೆಗಳನ್ನೆಲ್ಲಾ ಹೇಳಿಕೊಂಡು ಅದ್ಯಾವ ಪರಿ ಹಣ ಮಾಡ್ತಾ ಇದ್ದಾರೆ ಅಂದ್ರೆ? ಅದನ್ನು ನೆನಸಿಕೊಂಡ್ರೇನೆ ಭಯವಾಗತ್ತೆ. ಇವತ್ತು ಪೂಜೆಗಳಿಗೂ ಕಾಂಟ್ರಾಕ್ಟ್ ಪದ್ದತಿ ತಂದಿದ್ದಾರೆ! ಅಂದರೆ ಯಾವುದೋ ಒಂದು ಕಾರ್ಯಕ್ರಮವನ್ನು ಇಡಿ ಇಡಿಯಾಗಿ ಕಂಟ್ರಾಕ್ಟ್ ತೆಗೆದುಕೋಳ್ಳೋದು! ಬಿಲ್ಡ್‍ರ್ಸ ಎಲ್ಲಾ ಬಿಲ್ಡಿಂಗ್ ಕಾಂಟ್ರಾಕ್ಟ್ ಹಿಡಿತಾರಲ್ಲ ಅಂತಹದ್ದೇ ಅದು! ಇನ್ನೂ ಅವರು ಬರೆದುಕೊಡುವ ಪೂಜಾ ಸಾಮಾಗ್ರಿಗಳ ಪಟ್ಟಿಯೋ! ಪುಜಾರಿ ಮನೆಯಲ್ಲಿ ಖಾಲಿಯಾದ ಬೇಳೆಕಾಳುಗಳೆಲ್ಲಾ ಆ ಪಟ್ಟಿಯಲ್ಲಿ ಇರತ್ತೆ ಅಂದ್ರೆ ತಪ್ಪಾಗಲಾರದೇನೋ! ದೇವರು ಇದ್ದಾನೋ, ಇಲ್ಲವೋ ಅನ್ನೋದು ಸೆಕೆಂಡರಿ ವಿಚಾರ. ಆದ್ರೆ ಆತನ್ನನ್ನು ನಂಬಿಕೊಂಡು ಆತನ ಆರಾಧನೆಗೆ ನಾವು ಅಳವಡಿಸಿಕೊಂಡ ಪೂಜಾವಿಧಾನಗಳಿದೆಯಲ್ಲಾ ಅವುಗಳ ಹಿಂದಿರುವ ಕಲ್ಪನೆ ನಿಜಕ್ಕೂ ಅದ್ಬುತ. ನಾನು ಒಂದ್ಸಾರಿ ಹೀಗೆ ಮೂರ್ತಿರಾಯರ “ದೇವರು” ಅನ್ನೋ ಪುಸ್ತಕ ಓದಿಕೊಂಡು ನಂತರ ಹಿರಿಯ ಸಂಸ್ಕೃತ ವಿದ್ವಾಂಸ ಹತ್ತಿರ ಸಾರ್ ನಂಗೆ ಆ ಪುಸ್ತಕದ ಕುರಿತಾಗಿ ನನ್ನಲೇ ಒಂದಿಷ್ಟು ಅನುಮಾನಗಳಿವೆ ಅಂತಾ ಕೇಳಿದೆ. ಅದ್ಕೆ ಅವರು ಕೊಟ್ಟಿದ್ದು ಒಂದೇ ಸಾಲಿನ ಉತ್ತರ. “ನೀನು ದೇವರ ಕುರಿತಾಗಿ ಎಷ್ಟು ಪುಸ್ತಕ ಓದಿದ್ದೀಯಪ್ಪಾ” ಅಂತಾ. ಅಷ್ಟೊತ್ತಿಗೆ ನಂಗೆ ನನ್ನ ಬಾಲಿಶತನದ ಅರಿವಾಗಿತ್ತು. ಮುಂದೆ ಓದಿ »





RSS: