ಕ್ರಿಯೇಟೀವ್
ಮಲೆನಾಡಿನ ಬ್ಯಾಸಿಗಿ ದಿನಚರಿ......!
May 2, 2008 - 11:28am — vinayakaಮೊನ್ನೆ ಸಾಗರದಲ್ಲಿಅಣ್ಣನ ಪುಸ್ತಕದ ಬಿಡುಗಡೆ ಇತ್ತು ಅಂತಾ ನೆವ ಮಾಡಿಕೊಂಡು ಅಂತೂ ಎರಡು ದಿನದ ಮಟ್ಟಿಗೆ ಮನೆಗೆ ಹೋಗಿ ಬಂದೆ. ಬಸ್‌ಸ್ಯ್ಟಾಂಡ್ ಇಳಿದು ಮನೆ ಕಡೆ ಹೆಜ್ಜೆಹಾಕೋವಾಗ ಅದ್ಯಾಕೋ ದೀಡೀರನೇ ಮಲೆನಾಡಿನ ಬೇಸಿಗೆ ನೆನಪಾಯಿತು. ಅಂದಹಾಗೇ ಬೇಸಿಗೆಯಲ್ಲಿ ಮನೆಗೆ ಹೋಗದೇ,ನೇರಳೆ ಹಣ್ಣು, ಈಚಲು ಹಣ್ಣು, ಸಂಪಿಗೆ ಹಣ್ಣು , ಕಬ್ಬಿನಾಲೆ ಇವನೆಲ್ಲಾ ಕಾಣದೆ ಸುಮಾರು ಐದು ವರ್ಷಗಳೇ ಕಳೆದುಹೋಗಿತ್ತು. ನಾವು ಇಸ್ಕುಲಿಗೆ ಹೋಗುತ್ತಿದ್ದ ಕಾಲದಲ್ಲಿ ಬೇಸಿಗೆ ಅಂದ್ರೆ ನಮಗೆ ಬೊಂಬಾಟ್ ಕಾಲ. ಆವಾಗಿನ ನಮ್ಮ ದಿನಚರಿ ಅಂದ್ರೆ.....ಛೇ ಇವತ್ತು ಅದನ್ನು ನೆನಸಿಕೊಂಡ್ರೆ ತುಂಬಾ ಫೀಲ್ ಆಗತ್ತೆ.
ಬೆಳಿಗ್ಗೆ ಆರು ಗಂಟೆಗೆ ಶುರು ನಮ್ಮ ಕಿರಿಕೆಟ್ಟು ಮ್ಯಾಚು! ಸುಮಾರು ಒಂಬತ್ತು ಘಂಟೆಗೆವರೆಗೂ ಕಿರಿಕೆಟ್ಟಾಡಿ ಕೊನೆಗೆ ಲೈಟಾಗೊಂದು ನಾಸ್ಟಾ ಮಾಡಿ ಅಪ್ಪ ಮನೇಲಿ ಇದ್ದಿದ್ದೂ ಹೌದಾದ್ರೆ ಗಡದ್ದಾಗಿ ಸ್ನಾನ ಮಾಡಿ ಅಪ್ಪನ ಎದುರಿಗೆ ಸಂಧ್ಯಾವಂದನೆ ಮಾಡೋ ನಾಟಕವಾಡಿ, ಗಾಯಿತ್ರಿ ಮಂತ್ರ ಹೇಳೋ ಕಾಲದಲ್ಲಿ ಯಾರ್ಯಾರದ್ದೋ ಹೆಸರು ಹೇಳಿ ಅಮ್ಮನ ಹತ್ರಾ ಬೈಸಿಕೊಂಡು ಕೊನೆಗೆ ಗುಡ್ಡ ಹತ್ತಿದ್ವೀ ಅಂದ್ರೆ ಶುರು ನೋಡಿ ನಮ್ಮ ದಿನಚರಿ! ಮುಂದೆ ಓದಿ »

- vinayaka ರವರ ಬ್ಲಾಗ್
- Login or register to post comments
- 207 hits
- Email this blog




RSS: