ಸಾರ್ತ್ರ್
ಸಾರ್ತ್ರ್ ನ ’ಪದಚರಿತ’ - ಓದಿನ ಗೀಳು , ಬರಹದ ಗೋಳು .
May 7, 2008 - 7:03pm — shreekant.mishrikoti( ಇಲ್ಲಿ ಬರೆದದ್ದೆಲ್ಲವೂ ನಾನು ಬರೆದಿದ್ದಲ್ಲ ; ನಾನು ಆಯ್ದ ವಾಕ್ಯಗಳೇ ಬಹಳ - ಶ್ರೀಕಾಂತ ಮಿಶ್ರೀಕೋಟಿ)
ಪ್ರಸಿದ್ಧ ತತ್ವಶಾಸ್ತ್ರಜ್ಞ , ಚಿಂತಕ, ಕಾದಂಬರಿಕಾರನ ಪ್ರಸಿದ್ಧ ಕೃತಿ ’ಲೆಮೊ’ ದ ಅನುವಾದವೇ ’ಪದಚರಿತ’ .
ಇದು ಅವನ ಬಾಲ್ಯದ ’ಆತ್ಮಚರಿತ್ರೆ’ ; ಅವನನ್ನು ಕಾಡಿದ ಬರೆದಿಟ್ಟ ಶಬ್ದಗಳ ಜತೆ ನಡೆಸಿದ ಒಂದು ಸುದೀರ್ಘ ಪ್ರಣಯ ಪ್ರಸಂಗ.
ಈ ಪುಸ್ತಕ ಜೀವನಾನುಭವದ ಸಂದರ್ಭದಲ್ಲಿ ಪುಸ್ತಕಗಳ ಮತ್ತು ಭಾಷೆಯ ಉಪಯುಕ್ತತೆ ಮತ್ತು ಉಪಯೋಗದ ಬಗ್ಗೆ ನಡೆಸಿರುವ ವಿಶಿಷ್ಟ ಸಂಶೋಧನೆ ಮತ್ತು ಮೌಲ್ಯಮಾಪನ. ಇದನ್ನು ಅನುವಾದ ಮಾಡಿದವರು ರಾಜಕಾರಣಿ ಕೆ. ಎಚ್. ಶ್ರೀನಿವಾಸರು . ಸುಮಾರು ಮೂರ್ನಾಲ್ಕು ವರ್ಷ ತಮ್ಮ ರಾಜಕಾರಣದ ನಡುವೆ ಶ್ರಮಿಸಿದ್ದಾರೆ .
ಪುಸ್ತಕವನ್ನು ಮೂಲದಲ್ಲಿ ಅರ್ಥ ಮಾಡಿಕೊಳ್ಳುವದೇ ಕಷ್ಟ ; ಪುಸ್ತಕ ಅಂತಹದು ; ಅಂಥದ್ದನ್ನು ಕನ್ನಡಕ್ಕೆ ಬಹಳ ಶ್ರಮಪಟ್ಟು ತಂದಿದ್ದಾರೆ .
ಸಾರ್ತ್ರ್ ತನ್ನ ಐವತೊಂಭತ್ತನೇ ವಯಸ್ಸಿನಲ್ಲಿ ಪುನರ್ ಗ್ರಹಿಸಿದ ಬಾಲ್ಯದ ಕತೆ ಇದು .
ಅವನು ಚಿಕ್ಕಂದಿನಲ್ಲಿದ್ದಾಗ ಅವನಿಗೆ ಜಾಣತನ , ಲೇಖಕತನ , ಒಳ್ಳೆಯತನವನ್ನು ಹೊರಿಸಲಾಯಿತು . ಅದರ ವಿವರಗಳು , ಓದು , ಬರಹದ ಗೀಳು , ಗೋಳು ಇಲ್ಲಿದೆ .
ಇಲ್ಲಿನ ವಾಕ್ಯಗಳನ್ನು ಅವಸರದಲ್ಲಿ ಓದಿ ತಿಳಿಯಲಾಗುವದಿಲ್ಲ . ಇಲ್ಲಿನ ವಾಕ್ಯಗಳ ರೀತಿಯೇ ಅದ್ಭುತ. ಕೊನೇಪಕ್ಷ ಅದಕ್ಕಾದರೂ ಇನ್ನೊಮ್ಮೆ ಮತ್ತೊಮ್ಮೆ ಓದಬೇಕೆನಿಸುತ್ತದೆ. ಮುಂದೆ ಓದಿ »

- shreekant.mishrikoti ರವರ ಬ್ಲಾಗ್
- Login or register to post comments
- 116 hits
- Email this blog




RSS: