ಉಡುಪಿ ಕೃಷ್ಣ
ತಿರುಪತಿ ತಿಮ್ಮನೂ, ಉಡುಪಿಯ ಹೋಟೆಲೂ...
May 21, 2008 - 4:45am — hamsanandiಪ್ರಪಂಚದ ಎಲ್ಲಿಂದ ಎಲ್ಲಿಗೆ ಹೋದರೂ, ಅಲ್ಲೊಬ್ಬ ಕಾಕಾ ಟೀ ಅಂಗಡಿ ಇಟ್ಟುಕೊಂಡಿರುತ್ತಾನೆ ಅನ್ನೋದೊಂದು ಹಳೇ ನಗೆಚಟಾಕಿ. ಅರವತ್ತೊಂಬತ್ತರಲ್ಲಿ, ನೀಲ್ ಆರ್ಮ್ ಸ್ಟ್ರಾಂಗ್ ಚಂದ್ರನಮೇಲೆ ಇಳಿದಾಗ ಅಲ್ಲಿಯೂ ಒಬ್ಬ ಪ್ರತ್ಯಕ್ಷ ಆಗಿದ್ದನಂತೆ ಟೀ ಹಿಡ್ಕೊಂಡು ಎನ್ನೋ ಮಟ್ಟಿಗೆ ಇದು ಪ್ರಖ್ಯಾತ. ಇದರ ಹಿಂದೇ ಬರೋದು ಉಡುಪಿ ಹೋಟೆಲ್ ಗಳ ಸಮಾಚಾರ. ಆಡು ಮುಟ್ಟದ ಸೊಪ್ಪಿಲ್ಲ, ಅನ್ನೋ ಹಾಗೆ ಉಡುಪಿ ಹೋಟೆಲ್ ಗಳಿಲ್ಲದ ಊರೇ ಇಲ್ಲ. ಮೊದಮೊದಲು ಹೋಟೆಲ್ ನಡೆಸುವ ಆಸೆ, ಅಥವಾ ಯೋಚನೆ ಉಡುಪಿಯವರಿಗೇ ಏಕೆ ಬಂತು? ಅದನ್ನು ಯಾರಾದ್ರೂ ಉಡುಪಿ ಕಡೇವ್ರೇ ಹೇಳಬೇಕು. ಅಥವಾ ತಿಂಡಿಪೋತ ಅನ್ನೋ ಹೆಸರು ಗಳಿಸಿರೋ ಕೃಷ್ಣ ಇರೋ ಊರ್ನೋರಾದ್ರಿಂದ ಹೀಗೇನಾದ್ರೂ ಆಯ್ತಾ? ನನಗೆ ಗೊತ್ತಿಲ್ಲ. ಅಂತೂ, ಭಾರತದ ಸುಮಾರು ಹಲವು ರಾಜ್ಯಗಳಲ್ಲಿ,ಅದ್ರಲ್ಲೂ, ಮಹಾರಾಷ್ಟ್ರ, ತಮಿಳುನಾಡುಗಳಲ್ಲಿ ವಿಶೇಷವಾಗಿಯೇ ಉಡುಪಿ ಹೋಟೆಲ್ಗಳನ್ನು ಕಾಣಬಹುದು.
ಈ ಉಡುಪಿ ಹೋಟೆಲ್ ಅನ್ನೋದು ತಮಿಳ್ನಾಡಿನಲ್ಲಿ ಹೇಗೆ ಹಾಸುಹೊಕ್ಕಾಗಿದೆ ಅಂದರೆ, ಅದಕ್ಕೆ ಸಸ್ಯಾಹಾರಿ ಅಂತ ಬೇರೆಯೇ ಅರ್ಥ ಬಂದುಬಿಟ್ಟಿದೆ. ವೆಜಿಟೇರಿಯನ್ ಅಂತ ಹೇಳೋಬದಲು ಅವರು ಉಡುಪಿ ಅಂತಷ್ಟೇ ಹೇಳುತ್ತಾರೆ. ಸರವಣ ಭವನ್ (ಉಡುಪಿ) ಅನ್ನೋ ಬೋರ್ಡ್ ನಿಮಗೆ ಕಂಡ್ರೆ, ಅದು ನಡೆಸ್ತಾಇರೋದು ಉಡುಪಿಯವರಲ್ಲದೇ, ಆಂಧ್ರದವರೇ ಆಗಿದ್ದರೂ, ಅಥವಾ ಅಸ್ಸಾಮ್ ನವರೇ ಆಗಿದ್ರೂ, ಅದಕ್ಕೆ ವೆಜಿಟೇರಿಯನ್ ಅನ್ನೋದೇ ಅರ್ಥ. ಮುಂದೆ ಓದಿ »





RSS: