ಒ೦ದೇ ಜನ್ಮದಿ ಬಹು ಜನ್ಮ೦ಗಳ
ಚೆ೦ದವಗಾಣಿಸುವಮಳ ಕಲೆ
ಮ೦ದಿಗೆ ದೇವರ ವರವಲೆ ಅದುವೇ
ಮು೦ದಿನ ಬಿಡುಹುಕು ಹಾನಿಯಲೆ.

— ಪು ತಿ ನ

ಕೃಷಿ ಸಂಪದ: ಫೆಬ್ರವರಿ ಸಂಚಿಕೆ

Krushi Sampada 5th Edition

ಚಿತ್ತಚೋರ

ಆರದ ದೀಪ

ಎಷ್ಟೋ ವರ್ಷಗಳ ಹಿಂದಿನ ಮಾತು.

ಅವತ್ತು ಮೇಜಿನ ಮೇಲಿಟ್ಟಿದ್ದ ಅವನ ಡೈರಿ ತೆಗೆದು ನೋಡುತ್ತಿದ್ದೆ.

ತೆಗೆದ ತಕ್ಷಣ ಯಾವುದೋ ಸಡುವಿನ ಪುಟದಲ್ಲಿ ಕಂಡದ್ದು ಒಂದು ಕವಿತೆ.

ಪದ್ಯದ ಹೆಸರಲ್ಲೇ ಒಂದು ಹುಡುಗಿ ಕಂಡಳು! ಆಸಕ್ತಿಯಿಂದ ಓದತೊಡಗಿದೆನೆಂಬ ನೆನಪು.  ಮುಂದೆ ಓದಿ »

ಅವನಿಲ್ಲ

ಅವನಿಲ್ಲದೇ ಎಂಟು ವರ್ಷ ಕಳೆದು ಹೋಯಿತು. ಎಂಟು ವರ್ಷ ಹೇಗೆ ಕಳೆಯಿತೆಂದು ತಿಳಿಯಲೇ ಇಲ್ಲ ಎಂದು ಸುಳ್ಳು ಹೇಳಲಾರೆ. ಅವನನ್ನು ಈ ಎಂಟು ವರ್ಷಗಳಲ್ಲಿ ಎಷ್ಟು ಬಾರಿ ನೆನೆದಿರಬಹುದು ಎಂಬ ಲೆಕ್ಕವನ್ನೂ ನಾನು ಇಡಲಾರೆ. ಹಾಗೇ, ನಾನು ಎಂಟು ವರ್ಷ ಹಿಂದೆ, ಇದೇ ದಿನ, ಮುಂಜಾನೆ ಬಂದ ಆ ಘೋರ ದೂರವಾಣಿ ಕರೆಯನ್ನೂ ಎಂದೆಂದಿಗೂ ಮರೆಯಲಾರೆ.

ಅವನು ಇದ್ದಿದ್ದು ಒಂದು ಚಿಕ್ಕ ಊರಿನಲ್ಲಿ. ಚಿಕ್ಕ ಊರೆಂದರೆ, ಸಣ್ಣ ಹಳ್ಳಿಯೂ ಅಲ್ಲ, ಭಾರೀ ನಗರವೂ ಅಲ್ಲ - ಆ ರೀತಿಯ ನಡುವಿನ ಮಟ್ಟದ ಒಂದು ಪಟ್ಟಣ. ಅಲ್ಲಿಗೊಂದು ಒಳ್ಳೇ ಶಾಲೆ. ಆ ಊರಿಗೆ ಬಂದಾಗ ಅವನು ಮೂರನೆಯದೋ-ನಾಕನೆಯದೋ ತರಗತಿಯರಲ್ಲಿ ಇದ್ದಿರಬೇಕು. ಶಾಲೆಯ ಎಲ್ಲ ಕಲಿಸುವವರಿಗೂ ಅಚ್ಚುಮೆಚ್ಚಾಗಲು ಅವನಿಗೆ ಹೆಚ್ಚೇನೂ ವೇಳೆ ಬೇಕಾಗಲಿಲ್ಲ. ತನ್ನ ಹೆಸರಿಗೆ ತಕ್ಕಂತೆ, ಎಲ್ಲರ ಮನಸ್ಸನ್ನೂ ಕದ್ದುಬಿಟ್ಟ ಅವನು. ಯಾವ ಪ್ರಬಂಧ ಸ್ಪರ್ಧೆಯಾಗಲಿ, ಚರ್ಚಾಕೂಟವಾಗಲಿ, ಅವನಿಗೆ ಬಹುಮಾನ ಅನ್ನುವುದು ಕಟ್ಟಿಟ್ಟ ಬುತ್ತಿಯೇ. ಪರೀಕ್ಷೆಗಳಲ್ಲಿ, ಬರೇ ಶಾಲೆಗೇಕೆ, ಜಿಲ್ಲೆಗೇ ಮೊದಲಿದ್ದವನು ಅವನು.

ಅವನು ನನಗಿಂತ ಎಂಟು ವರ್ಷ ದೊಡ್ಡವನು. ಚಿಕ್ಕ ವಯಸ್ಸಿಗೇ ಬಹಳ ವಿಷಯಗಳನ್ನು ಅರಿತಿದ್ದ ಅವನು, ಅದೇ ರೀತಿ ನಾನೂ ಆಗಬೇಕೆಂಬ ಬಯಕೆಯನ್ನು ನನಗೆ ಗೊತ್ತೊಲ್ಲದೇ ಮೂಡಿಸಿದ್ದ. ಲೈಬ್ರರಿಗೆ ತಾನು ಹೋಗುವಾಗ ನನ್ನನ್ನೂ ಕರೆದೊಯ್ದು, ನನ್ನ ಮುಂದೆ ಪುಸ್ತಕಗಳನ್ನು ಹಾಕಿ ಓದಲು ಹೇಳುತ್ತಿದ್ದ. ನನಗೆ ಓದುವ ಹುಚ್ಚು ಹತ್ತಿಸಿದ್ದೇ ಅವನು ಅನ್ನೋದು ನನ್ನ ನೆನಪು. ಅವನ ಜೊತೆ ನಾನು ಹೋಗುತ್ತಿದ್ದರೆ, ನನಗೆ ಎಲ್ಲರೂ ನನ್ನನ್ನೇ ನೋಡ್ತಾ ಇದ್ದಾರೆ, ಅನ್ನೋ ಅನಿಸಿಕೆ. ನಾನು ಆ ಶಾಲೆಯೆ ಸೇರಿದ ವರ್ಷ ಅವನು ಆ ಶಾಲೆಯಿಂದ ಹೊರಬಿದ್ದ. ಅದೂ ಎಸ್.ಎಸ್.ಎಲ್.ಸಿ.ಯಲ್ಲಿ ರಾಜ್ಯಕ್ಕೇ ಮೂರನೇ ಸ್ಥಾನ ಪಡೆದು. ಹಾಗಾಗಿ, ನಾನು, ಅವನು ಒಂದು ಶಾಲೆಯಲ್ಲಿ ಯಾವತ್ತೂ ಹೋಗಿದ್ದೇ ಇಲ್ಲ. ಹಾಗಿದ್ದ್ರೂ, ಎಷ್ಟೋ ಜನ ಕಲಿಸುವವರು ಅವನ ಬಗ್ಗೆ ನನ್ನಲ್ಲಿ ವಿಚಾರಿಸಿಕೊಳ್ಳುವವರೇ. ಶಾಲೆಯಲ್ಲಿ ನನಗೆ ಅಂತ ಒಂದು ವ್ಯಕ್ತಿತ್ವ, ಬರುವ ವೇಳೆಗೆ, ಅವನು ಮೊದಲ, ಎರಡನೆ ಪ್ರಿಯೂನಿವರ್ಸಿಟಿ ಪರೀಕ್ಷೆಗಳೆರಡರಲ್ಲೂ ರಾಜ್ಯಕ್ಕೇ ಹತ್ತರೊಳಗೇ ಬಂದು ಹೆತ್ತವರಿಗೆ ಹೆಮ್ಮೆ ತಂದ. ಎಲ್ಲ ಪತ್ರಿಕೆಗಳಲ್ಲೂ ಅವನ ಚಿತ್ರ. ಆದರೂ, ಹಮ್ಮು -ಬಿಮ್ಮಿಲ್ಲದ ಸ್ವಭಾವ ಅವನದು. ತನಗೇನು ಗೊತ್ತು ಅನ್ನುವುದನ್ನು ವಾಚ್ಯವಾಗಿ ತೋರಿಸಿಕೊಳ್ಳದೆಯೇ, ಅದರ ಅನುಭವ ಮಾತ್ರ ಮಾಡಿಸುವ ಅವನ ಗುಣ ಹಲವರಲ್ಲಿ ಕಾಣಸಿಗದು.  ಮುಂದೆ ಓದಿ »

Syndicate content