ಹೊಗೆ-ಎಂಜಿನ್ ಪೋಪೊಪೆಡೆ,
ಹಿಟ್ಲರ್ ಪಡೆ ಹಾಕಿದರೂ ಮಟ್ಟ.
ಧೃತಿಗೆಡದೆ ಹೊಗೆಯುಗುಳುತಿದೆ
ಚರ್ಚಿಲನ ಚುಟ್ಟ.

— ಬಿಳಿಗಿರಿ

ಕೃಷಿ ಸಂಪದ: ಫೆಬ್ರವರಿ ಸಂಚಿಕೆ

Krushi Sampada 5th Edition

ಪಂಚರತ್ನ

ಸಂಗೀತ ನವರಾತ್ರಿ - ಆಶ್ವಯುಜ ಶುದ್ಧ ಬಿದಿಗೆ

ನೆನ್ನೆ ನವರಾತ್ರಿ ಆರಂಭವಾಯಿತು. ಹೆಣ್ಣುಮಕ್ಕಳಿರೋ ಮನೆಯಲ್ಲಿ ಗೊಂಬೆಗಳನ್ನ ಅಟ್ಟ, ಪೆಟ್ಟಿಗೆ - ಎಲ್ಲೆಲ್ಲಿ ಜೋಪಾನ ಮಾಡಿಟ್ಟಿದ್ರೋ, ಅಲ್ಲಿಂದ ತೆಗೆದು ಜೋಡಿಸೋ ಕೆಲಸ. ಬಹುಶ: ಗೊಂಬೆಗಳಿಗೂ ವರ್ಷ ಪೂರ್ತಿ ಒಳಗೇ ಕುಳಿತು ಜಡ್ಡುಗಟ್ಟಿರುತ್ತೋ ಏನೋ. ಆದಕ್ಕೆ ಹೊರಬಂದ ತಕ್ಷಣ ಗಾಳಿ ಕುಡಿದು ಕಳೆಕಳೆಯಾಗಿಬಿಡುತ್ತವೆ!

ನವರಾತ್ರಿ ಎಂದರೆ ಅಲ್ಲಲ್ಲಿ ಸಂಗೀತೋತ್ಸವಗಳು ನಡೆಯುವುದು ರೂಢಿ. ಅದೇ ಕಾರಣಕ್ಕೆ ಹೋದಬಾರಿಯಂತೆ ನಾನೂ ಸಂಗೀತದ ಬಗ್ಗೆಯೇ ಬರೆಯತೊಡಗಿದ್ದೇನೆ. ಇವತ್ತು ನನ್ನ ಮನಸ್ಸಿಗೆ ಬಂದ ಕೃತಿ ತ್ಯಾಗರಾಜರ ’ಗತಿ ನೀವನಿ’ ಎನ್ನುವ ತೋಡಿ ರಾಗದ ರಚನೆ.

ತ್ಯಾಗರಾಜರ ಘನರಾಗ ಪಂಚರತ್ನ ಕೃತಿಗಳು ಬಹಳ ಪ್ರಖ್ಯಾತ ರಚನೆಗಳು - ಅದರಲ್ಲೂ ಕೊನೆಯ ಪಂಚರತ್ನ ಕೃತಿಯಾದ ಎಂದರೋ ಮಹಾನುಭಾವುಲು ಎನ್ನುವುದಂತೂ ಸಂಗೀತವನ್ನು ಅಷ್ಟಾಗಿ ಕೇಳಿ ತಿಳಿಯದವರಿಗೂ ಗೊತ್ತಿರುವುದುಂಟು. ಆದರೆ, ಈ ಪಂಚರತ್ನ ಕೃತಿಗಳಲ್ಲದೇ, ಇನ್ನೂ ಕೆಲವು ಗುಂಪು-ರಚನೆಗಳನ್ನೂ ತ್ಯಾಗರಾಜರು ರಚಿಸಿದ್ದಾರೆ. ಆವುಗಳಲ್ಲಿ ಲಾಲ್ಗುಡಿ ಪಂಚರತ್ನ ಎಂಬ ಗುಂಪೂ ಒಂದು.  ಮುಂದೆ ಓದಿ »

Syndicate content