26
May
2013

What's new on Sampada?  ಉತ್ತಮ ಬರಹಗಾರರಿಗೆ ಸಂಪದ ಪ್ರಶಸ್ತಿ. ಹೆಚ್ಚಿನ ಮಾಹಿತಿಗೆ ಇಲ್ಲಿ ಕ್ಲಿಕ್ ಮಾಡಿ.

ಮಾರ್ನೋಮಿ

ಸಂಗೀತ ನವರಾತ್ರಿ - ಆಶ್ವಯುಜ ಶುದ್ಧ ನವಮಿ

October 7, 2008 - 9:33pm
hamsanandi

ನಾನು ಚಿಕ್ಕವನಿದ್ದಾಗ ನಮ್ಮೂರಲ್ಲಿ ನಮ್ಮನೇ ಹತ್ರ ಒಂದು ಮಂಟಪ ಇತ್ತು. ಅದನ್ನ ಕಟ್ಟಿಸಿದವರ್ಯಾರು ಅಂತ ಗೊತ್ತಿಲ್ಲ. ಅಂತೂ ದೇವ್ಸ್ಥಾನದ ಅಕ್ಕ ಪಕ್ಕ ಕೆಲವ್ಕಡೆ ಇರತ್ತಲ್ಲ ಆ ತರಹ ಮೂರು ಗೋಪುರದ ಮಂಟಪ. ಅಲ್ಯಾವ್ದೂ ದೇವಸ್ಥಾನ ಇಲ್ದಿದ್ರೂ,ಅಲ್ಲಿ ಆ ಮಂಟಪ ಯಾಕೆ ಕಟ್ಟಿದ್ರೋ? ಅಥವಾ ಮನೆ ಮಠ ಇಲ್ಲದೇ ಇರೋವ್ರಿಗೇ ಅಂತಲೇ ಯಾರಾದ್ರೂ ಪುಣ್ಯಾತ್ಮರು ಕಟ್ಟಿಸಿದ್ರೋ ಗೊತ್ತಿಲ್ಲ - ಅಂತೂ ಅಲ್ಲಿ ಪಾಪ ಭಿಕ್ಷೆ ಬೇಡಿ ಹೊಟ್ಟೆ ಹೊರೆದುಕೊಳ್ಳೋ ಎಷ್ಟೋ ಸಂಸಾರಗಳು ನೆಲೆ ನಿಂತಿದ್ರು.ಅವರಿಗೆ ವರ್ಷಕ್ಕೆ ಮುನ್ನೂರಅರವತ್ತೆರಡು ದಿನ ಆ ಮಂಟಪವೇ ಮನೆ. ಒಂದುವೇಳೆ ಮನೆಯಲ್ಲಿ ಏನೋ ಸಮಾರಂಭವೋ ಏನೋ ಆದಾಗ ಊಟ ತಿಂಡಿ ಮಿಕ್ಕರೆ ಅಲ್ಲಿಗೆ ಹೋಗಿ ಕರೆದು, ಮತ್ತೆ ಮಾಡಿದ ಅಡುಗೆಗೆ ಆಗೋ ದಂಡವನ್ನ ತಪ್ಪಿಸ್ತಿದ್ವಿ. ಒಂದೊಂದ್ಸಲ ಕಲಾಯ ಮಾಡೋ ಮನುಷ್ಯ ಬಂದರೂ ಅಲ್ಲೇ ಮಂಟಪದ ಪಕ್ಕದಲ್ಲೇ ಅವನ ಅಗ್ಗಿಷ್ಟಿಕೆ ಹೂಡ್ಕೋತಿದ್ದ. ಸುತ್ತ ಮುತ್ತಲಿನ ಮನೆಯವರೆಲ್ಲ ಅವರ ಕೊಡವೋ, ಕೊಳದಪ್ಪಲೆಯೋ, ಯಾವುದಕ್ಕಾದ್ರೂ ಕಲಾಯ ಮಾಡಿಸ್ಬೇಕಾಗಿದ್ರೆ ಅಲ್ಲಿಗೇ ತರ್ತಿದ್ರು. ಹಾಗೇನಾದ್ರೂ ಕೊಟ್ಟಾಗ, ನಾನೂ ಕಲಾಯದ ಮನುಷ್ಯ ತವರ ಕಾಸೋದು, ತಿದಿ ಒತ್ತೋದು ಇದೆಲ್ಲ ನೋಡ್ತಾ ಕೂತಿರ್ತಿದ್ದೆ. ಒಂದೊಂದು ಸಲ ಸಂಜೆ ಹೋಗಿ ಆ ಮಂಟಪದ ಹಿಂದಿನ ಬಯಲಲ್ಲಿ ಗೆಳೆಯರ ಜೊತೆ ಆಡ್ತಿದ್ದಿದ್ದೂ ಉಂಟು. Read more about ಸಂಗೀತ ನವರಾತ್ರಿ - ಆಶ್ವಯುಜ ಶುದ್ಧ ನವಮಿ

‍ನಿಮಗೆ ಈ ಬರಹ ಇಷ್ಟವಾಯಿತೇ? ತಿಳಿಸಿ: 
No votes yet
To prevent automated spam submissions leave this field empty.
Subscribe to ಮಾರ್ನೋಮಿ