ಮುಕುರಂ ಕೈಯೊಳಿರಲ್ಕೆ ನೀರ ನೆಳಲೇಕೈ ಕಾಮಧೇನಿರ್ದುಮೂ |
ಟಕೆ ಗೊಡ್ಡಾಕಳನಾಳ್ವರೇ ಗುಣಯುತರ್ ಪಾಲುಂಡು ಮೇಲುಂಬರೇ ||
ಶುಕನೋದಿಂಗುರೆ ಚೆಲ್ವೆ ಕಾಕರವ ರಂಭಾನೃತ್ಯಕಂ ಡೊಂಬರೇ |
ಸಖರಿಂದುನ್ನತ ವಸ್ತುವೇ ಹರ ಹರಾ ಶ್ರೀ ಚೆನ್ನಸೋಮೇಶ್ವರಾ ||

ಮುಕುರ - ಕನ್ನಡಿ, ಕಾಮಧೇನು - ಕೇಳಿದುದನ್ನು ಕೊಡುವ ದೇವಲೋಕದ ಆಕಳು, ಕಾಕರವ - ಕಾಗೆಯ ಕೂಗು.

— ೧೨ನೇ ಶತಮಾತದಲ್ಲಿದ್ದ ಪಾಲ್ಕುರಿಕೆ ಸೋಮ(*) ಎಂಬ ಕವಿ.

ಕೃಷಿ ಸಂಪದ: ಫೆಬ್ರವರಿ ಸಂಚಿಕೆ

Krushi Sampada 5th Edition

ಸ್ವಗತ

ಚದುರಿದ ಚಿತ್ರಗಳು

ಚದುರಿದ ಚಿತ್ರಗಳು, ಹಲವೊಮ್ಮೆ ಧುತ್ತೆಂದು ಕಣ್ಮುಂದೆ ಬರುವ ಹಲವಾರು ಪಾತ್ರಗಳು, ಮನದಾಳದ ಮಧುರ ನೆನಪುಗಳ ಸುಳಿಗಳು, ಕಾಡುವ ಸುಂದರ ಕಣ್ಣುಗಳು, ಜೀವನದ ಹಲವಾರು ಮೆಟ್ಟಿಲುಗಳು, ಏಳುಬೀಳುಗಳು, ಹೋರಾಟಗಳು, ನೋವುಗಳು, ಕಾಣದ ಕೈಗಳು ತಂದ ಸಾಂತ್ವನಗಳು, ಎದೆಯೊಳಗೆಲ್ಲೋ ಸಣ್ಣಗೆ ಉರಿಯುತ್ತಲೇ ಇರುವ ಅತೃಪ್ತಿಯ ಬೆಂಕಿಯ ಕಾವು, ಅಸಮಾಧಾನದ ಹೊಗೆ.  ಅದೆಷ್ಟು ಚಿತ್ರಗಳು, ಚಿತ್ತದಲಿ ಸುತ್ತು ಹೊಡೆಯುವ "ಜಯಂಟ್ ವ್ಹೀಲ್"ಗಳು!
 ಮುಂದೆ ಓದಿ »

ನವೆಂಬರ್ ೧೮

 

"ನಿತ್ಯ ಹುಟ್ಟಿ ಮುಳುಗುವ ರವಿ"

ಹುಟ್ಟುಹಬ್ಬ ನನಗೆಂದೂ ಯಾವ ಕಾರಣಕ್ಕೂ ವಿಶೇಷ ಎನಿಸಿದ್ದಿಲ್ಲ. ಒಂದೊಮ್ಮೆ ಮತ್ತೊಂದು ವರುಷ ಕಳೆದುಹೋಯಿತಲ್ಲ ಎಂಬ ಬೇಸರ ಮೂಡಿಸುತ್ತಿದ್ದುದಂತೂ ನಿಜ. ಆದರೆ ಅದೂ ಹೆಚ್ಚು ಹೊತ್ತು ಮನಸ್ಸಿನಲ್ಲುಳಿಯುತ್ತಿರಲಿಲ್ಲ. ಹುಟ್ಟುಹಬ್ಬದ ಕೇಕ್, ಕೇಕ್ ಕಟ್ ಮಾಡುವ ಸಂದರ್ಭದಲ್ಲಿ ನೆರೆಯುವ ಜನ, ಆ ನಂತರದ ಘಳಿಗೆ, ನೆರೆದವರಿಂದ ಸಿಗಬಹುದಾದ ಉಡುಗೊರೆ - ಇವು ಯಾವೂ ನನಗೆಂದೂ ಆಸಕ್ತಿ ಹುಟ್ಟಿಸಿದ್ದಿಲ್ಲ. ಕಾಲೇಜಿನ ಕ್ಲಾಸ್ ರೂಮಿನಲ್ಲಿ ಯಾರದ್ದಾದರೂ 'ಬರ್ತ್ ಡೇ'ಗೆಂದು ಕ್ಲಾಸ್ ಮುಗಿಯುತ್ತಲೇ ಕೇಕ್ ಕಟ್ ಮಾಡಿಸಿದ ಸಮೂಹ ಕೇಕೆ ಹಾಕುತ್ತಿದ್ದರೆ ನನ್ನ ಮನಸ್ಸು ನನ್ನನ್ನು ಅದೆಲ್ಲದರಿಂದ ದೂರ ಓಡುವಂತೆ ಮಾಡುತ್ತಿತ್ತು. ಅದೇ ಆ 'ಬರ್ತ್ ಡೇ ಬೇಬಿ'ಯಿಂದ 'ಟ್ರೀಟ್' ಸಿಕ್ಕ ನಂತರ ಬರ್ತ್ ಡೇ ಯಾರದ್ದು ಎಂಬುದೂ ನೆನಪಿರದಂತೆ ಇರುತ್ತಿದ್ದ ದೃಶ್ಯ ಕೇಕ್ ಕಟ್ ಮಾಡಿಸಿದವರ ವಿಶ್ವಾಸ ಎಷ್ಟಿರಬಹುದು ಎಂಬುದರ ಬಗ್ಗೆ ಅಪಾರ ಆಲೋಚನೆಗಳು ಸುಳಿದು ಹೋಗುವಂತೆ ಮಾಡುತ್ತಿತ್ತು.

ಹುಟ್ಟುಹಬ್ಬ ಆಚರಣೆ ಅವರವರ ಭಾವನೆಗಳಿಗೆ, ಆದರ್ಶಗಳಿಗೆ, ಆಲೋಚನೆಯ ರೀತಿಗೆ ಬಿಟ್ಟದ್ದು ಎಂದು ನನಗನಿಸುತ್ತದೆ. ತಮಗೆ ನೆಮ್ಮದಿ ಸಿಗುವ, ತಮಗೆ ಸಂತೋಷ ಉಂಟುಮಾಡುವ ಯಾವುದೇ ಆಚರಣೆ ಅಂದಿನ 'ಹಬ್ಬ'ವಾಗಬಹುದು ಎಂದು ನನ್ನ ಅನಿಸಿಕೆ. ಅದು ತನಗಿಷ್ಟವಾದ ಕೆಲಸದಲ್ಲಿ ತೊಡಗಿಕೊಳ್ಳುವುದಿರಬಹುದು, ತನಗೆ ಇಷ್ಟವಾದೆಡೆ ಕುಳಿತು ಸಮಯ ಕಳೆಯುವುದಿರಬಹುದು. ಯಾವ ಆಚರಣೆಯನ್ನೂ ಕೀಳಾಗಿ ನೋಡಬೇಕಿಲ್ಲ, ಯಾವ ಆಚರಣೆಯನ್ನೂ ಆಡಂಬರದಿಂದ ಕಾಣಬೇಕಿಲ್ಲ. ಕೊನೆಗೆ ಆ 'ಹಬ್ಬ' ನಡೆಸಿದ ರೀತಿಗೊಂದು ನಾವು ಅರಿಯದ ಕಾರಣವೇ ಇದ್ದಿರುತ್ತದೆ. ಒಂದೊಮ್ಮೆ ಅರಿತರೂ ಅರಿಯದಂತಿರುತ್ತೇವೆ. ಅವರವರ ಇಷ್ಟದಂತೆ ಇರಬಹುದು ಆಚರಣೆ. ಅವರವರ ಸ್ವಂತದ ವಿಚಾರ.  ಮುಂದೆ ಓದಿ »

Syndicate content