26
May
2013

What's new on Sampada?  ಉತ್ತಮ ಬರಹಗಾರರಿಗೆ ಸಂಪದ ಪ್ರಶಸ್ತಿ. ಹೆಚ್ಚಿನ ಮಾಹಿತಿಗೆ ಇಲ್ಲಿ ಕ್ಲಿಕ್ ಮಾಡಿ.

ಮೂರ್ಛೆ ರೋಗ

ಬೆಳ್ಳಂಬೆಳಿಗ್ಗೆ ಅಪ್ಪಳಿಸಿದ ಆಘಾತ-೧

April 5, 2009 - 9:52am
Chamaraj
ಅದು ಮಾರ್ಚ್‌ ತಿಂಗಳ ಮೂರನೇ ವಾರದ ಕೊನೆ. ಎಂದಿನಂತೆ ನಸುಕಿನಲ್ಲಿ ಎದ್ದು ಕಂಪ್ಯೂಟರ್‌ ಮುಂದೆ ಪತ್ರಿಕೆಗಳ ಅಂತರ್ಜಾಲ ತಾಣಗಳನ್ನು ಹುಡುಕಿ ಓದುತ್ತ, ನೋಟ್ಸ್‌ ಮಾಡಿಕೊಳ್ಳುತ್ತಾ ಕೂತಿದ್ದೆ. ಸಮಯ ಆಗಲೇ ಆರೂ ಕಾಲು. ಇನ್ನೊಂದು ಹದಿನೈದು ನಿಮಿಷ ಸಮಯ. ಮಕ್ಕಳು ಏಳುತ್ತವೆ. ಅವರ ಮುಖ ತೊಳೆದು, ಒಂದಿಷ್ಟು ಹಾಲು ಕುಡಿಸಿಕೊಂಡು ವಾಕಿಂಗ್‌ ಹೋಗುವುದು ರೂಢಿ. ಮತ್ತೈದು ನಿಮಿಷದಲ್ಲಿ ಚಿಕ್ಕವಳು ಎದ್ದಳು. ರೇಖಾ ಅವಳನ್ನು ರೆಡಿ ಮಾಡುವಷ್ಟರಲ್ಲಿ ದೊಡ್ಡ ಮಗಳು ಗೌರಿ ಕೂಡ ಎದ್ದು ಕೂತಳು. ಹಾಗೇ ಬಿಟ್ಟರೆ ಹಾಸಿಗೆಯಲ್ಲೇ ಸೂಸೂ ಮಾಡುತ್ತಾಳೆಂದು ಅವಳನ್ನು ಎಬ್ಬಿಸಿದ ರೇಖಾ ಬಾತ್‌ರೂಮಿನ ಕಡೆ ನಡೆಸಿಕೊಂಡು ಬಂದಳು. ಏಕೋ ಗೌರಿ ನಡೆಯಲು ಹಠ ಮಾಡಿದಳು. ಅದು ಹಳೆಯ ಅಭ್ಯಾಸ. ಬಾತ್‌ರೂಮಿನ ನೆಲ ತಂಪಗಿರುತ್ತದೆ. ಎದ್ದ ಕೂಡಲೇ ಕಾಲು ನೆನೆಸಿಕೊಳ್ಳಲು ಆಕೆ ಇಷ್ಟಪಡುವುದಿಲ್ಲ.
‍ನಿಮಗೆ ಈ ಬರಹ ಇಷ್ಟವಾಯಿತೇ? ತಿಳಿಸಿ: 
No votes yet
To prevent automated spam submissions leave this field empty.

ಬೆಳ್ಳಂಬೆಳಿಗ್ಗೆ ಅಪ್ಪಳಿಸಿದ ಆಘಾತ-೨ (ಊರೆಲ್ಲ ನೆಂಟರು, ಕೇರಿಯೆಲ್ಲವೂ ಬಳಗ...)

May 20, 2009 - 11:48am
Chamaraj
(ಗೌರಿಗೆ ಮೊದಲ ಸಲ ಮೂರ್ಛೆರೋಗ ಬಂದಾಗಿನ ಆಘಾತಕ್ಕೆ ಸಹೃದಯಿ ಓದುಗರು, ಮಿತ್ರರು ದೊಡ್ಡ ಸಂಖ್ಯೆಯಲ್ಲಿ ಸ್ಪಂದಿಸಿದ್ದಾರೆ. ಅವರಿಗೆಲ್ಲ ನಾನು ಮತ್ತು ನನ್ನ ಕುಟುಂಬ ಋಣಿ.) ಸರ್ವಜ್ಞನ ವಚನವೊಂದು ಪದೆ ಪದೆ ನನಗೆ ನೆನಪಾಗುತ್ತಿರುತ್ತದೆ: ಊರೆಲ್ಲ ನೆಂಟರು, ಕೇರಿಯೆಲ್ಲವೂ ಬಳಗ ಧಾರುಣಿಯೇ ಕುಲದೈವವಾಗಿರಲು ಯಾರನ್ನು ಬಿಡಲಿ| ಸರ್ವಜ್ಞ
‍ನಿಮಗೆ ಈ ಬರಹ ಇಷ್ಟವಾಯಿತೇ? ತಿಳಿಸಿ: 
Average: 5 (3 votes)
To prevent automated spam submissions leave this field empty.
Subscribe to ಮೂರ್ಛೆ ರೋಗ