ಕೊನೆಗೂ ಬಂತು ಆ ದಿನ...
October 1, 2010 - 2:29pm
ಕೊನೆಗೂ ಬಂತು ಆ ದಿನ. ಆಂಗ್ಲ ಭಾಷೆಯಲ್ಲಿ D-Day. ತಮಗೆ ನಿರಾಸೆಯಾಗದಿರಲಿ ಎಂದು ಎರಡೂ ಕಡೆಯವರು ಆಶಿಸಿದ, ಬೇಡಿಕೊಂಡ, ಹರಕೆ ಹೊತ್ತು ಕೊಂಡ ದಿನ. ನೂರಾರು ವರ್ಷಗಳ ವಿವಾದಕ್ಕೆ, ವಿಶಾಲವಾದ ಭೂಮಿಯ ಜೊತೆ ನಮ್ಮೆಲ್ಲರನ್ನೂ ಸೃಷ್ಟಿಸಿದ, ಮನುಷ್ಯರಂತೆ ಬದುಕು ಎಂದು ತಾಕೀತಿನೊಂದಿಗೆ ಕಳಿಸಿದ, ಎಲ್ಲರೂ ಆರಾಧಿಸುವ ಪರಮಾತ್ಮನಿಗೆ ಮಂದಿರವೋ ಮಸೀದಿಯೋ ಎನ್ನುವ ತಕಾರಾರಿಗೆ ಸಿಕ್ಕಿತು ಮುಕ್ತಿ. ಅದೂ ಸಂಕೀರ್ಣಮಯ ಮುಕ್ತಿ. ಸಂಕೀರ್ಣ ಸಮಸ್ಯೆಗೊಂದು ಅಷ್ಟೇ ಸಂಕೀರ್ಣವಾದ ಪರಿಹಾರ. ಅಯೋಧ್ಯೆ, ದೇಶದ ಜನರನ್ನು ಬೇರ್ಪಡಿಸಿದ್ದು ಮಾತ್ರವಲ್ಲ ದೇಶವಾಸಿಗಳ ಸಮಯ, ಶ್ರಮ, ಸಂಪತ್ತು ಈ ವಿವಾದದ ಹಿಂದೆ ಹೂಡಿ, ಕಚ್ಚಾಡಿ, ಬಡಿದಾಡಿ “ವಸುಧೈವ ಕುಟುಂಬಕಮ್” ಎಂಬುದು ಪುಸ್ತಕದ ಬದನೇಕಾಯಿ ಮಾತ್ರ ಎಂದು ಜಗತ್ತಿಗೆ ಸಾರಿದ ಸಮಸ್ಯೆ. Read more about ಕೊನೆಗೂ ಬಂತು ಆ ದಿನ...
field_vote:
ಲೇಖನ ವರ್ಗ (Category):




