Sign up | Login
ಸಂಪದ
  • ಲೇಖನಗಳು
  • ಬ್ಲಾಗ್ಸ್
  • ಚರ್ಚೆಯ ವೇದಿಕೆ
  • ಚಿತ್ರಪುಟಗಳು
  • Podcasts
  • ಪುಸ್ತಕಗಳು
  • ಆರ್ಕೈವ್
  • ಸಂಪರ್ಕಿಸಿ
  • Support Sampada
  • ಅಂಚೆ ಪೆಟ್ಟಿಗೆ
  • Font Help

Internet Explorer ಬಳಸುತ್ತಿರುವ ಸಂಪದ ಓದುಗರ ಗಮನಕ್ಕೆ

ಸಂಪದ

ಪುಸ್ತಕ

ಸಾರ್ತ್ರ್‍ ನ ’ಪದಚರಿತ’ - ಓದಿನ ಗೀಳು , ಬರಹದ ಗೋಳು .

May 7, 2008 - 7:03pm — shreekant.mishrikoti

( ಇಲ್ಲಿ ಬರೆದದ್ದೆಲ್ಲವೂ ನಾನು ಬರೆದಿದ್ದಲ್ಲ ; ನಾನು ಆಯ್ದ ವಾಕ್ಯಗಳೇ ಬಹಳ - ಶ್ರೀಕಾಂತ ಮಿಶ್ರೀಕೋಟಿ)

ಪ್ರಸಿದ್ಧ ತತ್ವಶಾಸ್ತ್ರಜ್ಞ , ಚಿಂತಕ, ಕಾದಂಬರಿಕಾರನ ಪ್ರಸಿದ್ಧ ಕೃತಿ ’ಲೆಮೊ’ ದ ಅನುವಾದವೇ ’ಪದಚರಿತ’ .
ಇದು ಅವನ ಬಾಲ್ಯದ ’ಆತ್ಮಚರಿತ್ರೆ’ ; ಅವನನ್ನು ಕಾಡಿದ ಬರೆದಿಟ್ಟ ಶಬ್ದಗಳ ಜತೆ ನಡೆಸಿದ ಒಂದು ಸುದೀರ್ಘ ಪ್ರಣಯ ಪ್ರಸಂಗ.
ಈ ಪುಸ್ತಕ ಜೀವನಾನುಭವದ ಸಂದರ್ಭದಲ್ಲಿ ಪುಸ್ತಕಗಳ ಮತ್ತು ಭಾಷೆಯ ಉಪಯುಕ್ತತೆ ಮತ್ತು ಉಪಯೋಗದ ಬಗ್ಗೆ ನಡೆಸಿರುವ ವಿಶಿಷ್ಟ ಸಂಶೋಧನೆ ಮತ್ತು ಮೌಲ್ಯಮಾಪನ. ಇದನ್ನು ಅನುವಾದ ಮಾಡಿದವರು ರಾಜಕಾರಣಿ ಕೆ. ಎಚ್. ಶ್ರೀನಿವಾಸರು . ಸುಮಾರು ಮೂರ್ನಾಲ್ಕು ವರ್ಷ ತಮ್ಮ ರಾಜಕಾರಣದ ನಡುವೆ ಶ್ರಮಿಸಿದ್ದಾರೆ .

ಪುಸ್ತಕವನ್ನು ಮೂಲದಲ್ಲಿ ಅರ್ಥ ಮಾಡಿಕೊಳ್ಳುವದೇ ಕಷ್ಟ ; ಪುಸ್ತಕ ಅಂತಹದು ; ಅಂಥದ್ದನ್ನು ಕನ್ನಡಕ್ಕೆ ಬಹಳ ಶ್ರಮಪಟ್ಟು ತಂದಿದ್ದಾರೆ .
ಸಾರ್ತ್ರ್‍ ತನ್ನ ಐವತೊಂಭತ್ತನೇ ವಯಸ್ಸಿನಲ್ಲಿ ಪುನರ್ ಗ್ರಹಿಸಿದ ಬಾಲ್ಯದ ಕತೆ ಇದು .
ಅವನು ಚಿಕ್ಕಂದಿನಲ್ಲಿದ್ದಾಗ ಅವನಿಗೆ ಜಾಣತನ , ಲೇಖಕತನ , ಒಳ್ಳೆಯತನವನ್ನು ಹೊರಿಸಲಾಯಿತು . ಅದರ ವಿವರಗಳು , ಓದು , ಬರಹದ ಗೀಳು , ಗೋಳು ಇಲ್ಲಿದೆ .
ಇಲ್ಲಿನ ವಾಕ್ಯಗಳನ್ನು ಅವಸರದಲ್ಲಿ ಓದಿ ತಿಳಿಯಲಾಗುವದಿಲ್ಲ . ಇಲ್ಲಿನ ವಾಕ್ಯಗಳ ರೀತಿಯೇ ಅದ್ಭುತ. ಕೊನೇಪಕ್ಷ ಅದಕ್ಕಾದರೂ ಇನ್ನೊಮ್ಮೆ ಮತ್ತೊಮ್ಮೆ ಓದಬೇಕೆನಿಸುತ್ತದೆ.  ಮುಂದೆ ಓದಿ »

  • ಪುಸ್ತಕ
  • ಸಾರ್ತ್ರ್
Ornamental seperator
  • shreekant.mishrikoti ರವರ ಬ್ಲಾಗ್
  • Login or register to post comments
  • 116 hits
  • Email this blog
  • Delicious
  • Google
  • Yahoo

ಸ್ಟೈನ್ಬೆಕ್ಕನ 'ದಿ ಪರ್ಲ್'; ಒಂದು ಮುತ್ತಿನ ಕಥೆ

January 14, 2008 - 10:39am — aniljoshi

ಹೋದವಾರ ಜಾನ್ ಸ್ಟೈನ್ಬೆಕ್ ಬರೆದ ’ದಿ ಪರ್ಲ’ ಓದಿದೆ. ಸುಮಾರು ೧೧೦ ಪುಟಗಳ ಚಿಕ್ಕ ಪುಸ್ತಕ. ೧೯೪೫ರಲ್ಲಿ ಬರೆದದ್ದು. ಲೈಬ್ರರಿಯ ಸೆಕೆಂಡ್ ಹ್ಯಾಂಡ್ ಪುಸ್ತಕಗಳ ಮಾರಾಟದಲ್ಲಿ ೨೫ ಸೆಂಟಿಗೆ ಕೊಂಡ ಪುಸ್ತಕ. ಸರಳ ಕಥೆ, ಅದ್ಭುತ ಎನಿಸುವಂತಹ ನಿರೂಪಣೆ.

ದಿನನಿತ್ಯ ತನ್ನ ಸೊಂಟಕ್ಕೊಂದು ದೊಡ್ಡ ಕಲ್ಲನ್ನು ಕಟ್ಟಿಕೊಂಡು ಸಮುದ್ರದ ತಳಕ್ಕೆ ಇಳಿದು ಅಲ್ಲಿನ ಚಿಪ್ಪುಗಳಲ್ಲಿ ಮುತ್ತು ಹುಡುಕುವ ಕಾಯಕದ ಕೀನೊ ಕಥಾನಾಯಕ. ಯುವಾನ ಅವನ ಹೆಂಡತಿ ಹಾಗೂ ಅವರಿಗೊಬ್ಬ ಮಗ ಕೊಯೊಟಿಟೊ. ಒಂದಾನೊಂದು ದಿನ ಕೊಯೊಟಿಟೊನಿಗೆ ಚೇಳು ಕುಟುಕುತ್ತದೆ. ಕುಟುಕಿದ ಕ್ಷಣವೇ ಯುವಾನ ಚೇಳು ಕುಟುಕಿದ ಸ್ಥಳದಿಂದ ವಿಷವನ್ನು ಹೀರಿ ತೆಗೆಯುವ ಪ್ರಯತ್ನ ಮಾಡುತ್ತಾಳೆ. ಕೊನೆಗೆ ವೈದ್ಯನ ಹತ್ತಿರ ಹೋಗುವದೇ ಒಳ್ಳೆಯದು ಎಂದುಕೊಂಡು ಆ ಊರ ವೈದ್ಯನ ಮನೆಗೆ ಹೋಗುತ್ತಾರೆ. ಇವರ ಹತ್ತಿರ ಕೊಡಲು ಏನೂ ದುಡ್ಡಿಲ್ಲ ಎಂದು ತಿಳಿದುಕೊಂಡ ವೈದ್ಯ ಮನೆಯೊಳಗೇ ಕುಳಿತುಕೊಂಡು ತಾನು ಮನೆಯಲ್ಲಿಲ್ಲ ಎಂದು ಹೇಳಿಸುತ್ತಾನೆ.

ಇಂಥ ಪರಿಸ್ಥಿತಿಯಲ್ಲಿ ಹೇಗಾದರೂ ವೈದ್ಯ ತಮ್ಮ ಮಗನನ್ನು ನೋಡುವಂತಾಗಲಿ, ಆ ವೈದ್ಯನಿಗೆ ಕೊಡಲು ಒಂದು ಮುತ್ತಾದರೂ ಸಿಗಬಹುದೇನೋ ಎಂದುಕೊಂಡು ಅವತ್ತು ಮತ್ತೆ ಸಮುದ್ರಕ್ಕಿಳಿಯುತ್ತಾನೆ. ಅವನ ಅದೃಷ್ಟ, ಎಂದೂ ಕಂಡಿರದಂತಹ ಮುತ್ತೇ ಸಿಗುತ್ತದೆ ಅವತ್ತು. ಕೋಳಿ ಮೊಟ್ಟೆ ಗಾತ್ರದ ಮುತ್ತನ್ನು ನೋಡಿ ಕೀನೊ ಮತ್ತು ಯುವಾನಾಗೆ ಸ್ವರ್ಗವೇ ಸಿಕ್ಕಷ್ಟು ಖುಷಿ. ಈ ದೊಡ್ಡ ಮುತ್ತು ಸಿಕ್ಕ ಕಥೆ ಕ್ಷಣದಲ್ಲಿ ಊರ ತುಂಬೆಲ್ಲ ಹರಡಿ ಆ ಕ್ಷಣದಲ್ಲೆ ಕೀನೋಗೆ ಎಲ್ಲರಿಗೂ ಬೇಕಾದವನಾಗಿಬಿಡುತ್ತಾನೆ. ಹಿತಶತ್ರುಗಳೂ ಹುಟ್ಟಿಕೊಳ್ಳುತ್ತಾರೆ. ಚಿಕ್ಕ ಊರಿನಲ್ಲಿ ಇಂತಹ ವಿಷಯಗಳು ಹೇಗೆ ಹಲವರ ಮನಸ್ಸಿನಲ್ಲಿ ತಮ್ಮ ಸ್ವಾರ್ಥದ ವಿಚಾರಗಳನ್ನು ಪ್ರೇರಿಸುತ್ತವೆ ಎನ್ನುವದು ಬಹಳ ಸಮರ್ಥವಾಗಿ ಚಿತ್ರಿತವಾಗಿದೆ. ಆ ಊರ ಚರ್ಚಿನ ಪಾದ್ರಿಗೆ ಆಗಬೇಕಾದ ಚರ್ಚಿನ ರಿಪೇರಿಗಳ ನೆನಪಾಗುತ್ತದೆ. ಮನೆಯಲ್ಲಿದ್ದೂ ಹೊರಹೋಗಿದ್ದೇನೆ ಎಂದು ಹೇಳಿಸಿದ್ದ ವೈದ್ಯ ಇನ್ನೊಬ್ಬರ ಮುಂದೆ ಕೀನೋನ ಮಗನಿಗೆ ಕುಟುಕಿದ ಚೇಳಿನ ವಿಷಕ್ಕೆ ತಾನು ಮದ್ದು ಮಾಡುತ್ತಿರುವದಾಗಿ ಕೊಚ್ಚಿಕೊಳ್ಳುತ್ತಾನೆ. ಊರ ಬಟ್ಟೆ ಅಂಗಡಿ ಮಾಲೀಕರಿಗೆ ಕೀನೊ ಬಟ್ಟೆ ಕೊಳ್ಳುತ್ತಾನೆ ಎನ್ನುವ ಖುಷಿ. ಚರ್ಚಿನ ಬಾಗಿಲ ಬಳಿ ಕೂಡುವ ಭಿಕ್ಷುಕರಿಗಂತೂ ಒಮ್ಮಿಂದೊಮ್ಮೆಲೆ ಸಾಹುಕಾರನಾದ ಕೀನೊ ಒಳ್ಳೆ ಭಿಕ್ಷೆ ಹಾಕುತ್ತಾನೆ ಎನ್ನುವ ಭಾವನೆಯೇ ಖುಷಿಕೊಡುತ್ತದೆ. ಒಟ್ಟಿನಲ್ಲಿ ಕೀನೊ ಮತ್ತು ಅವನ ಮುತ್ತು ಆ ಮಲಗಿದಂತಹ ಊರಿನಲ್ಲಿ ಒಂದು ಸಂಚಲನವನ್ನೇ ಮಾಡುತ್ತದೆ.  ಮುಂದೆ ಓದಿ »

  • ಪುಸ್ತಕ
Ornamental seperator
  • aniljoshi ರವರ ಬ್ಲಾಗ್
  • Login or register to post comments
  • 241 hits
  • Email this blog
  • Delicious
  • Google
  • Yahoo

ಟಾಪ್ ಟೆನ್

January 10, 2008 - 12:04pm — hamsanandi

ಅವಧಿ (http://avadhi.wordpress.com) ಬ್ಲಾಗ್ ನಿರ್ವಾಹಕರು ಅವರ ಓದುಗರೆಲ್ಲರಿಗೆ ನಿಮ್ಮ ಟಾಪ್ ಟೆನ್ ಪುಸ್ತಕ ಪಟ್ಟಿ ಹೇಳಿ ಎಂದಿದ್ದರು ಕೆಲವು ದಿನಗಳ ಹಿಂದೆ. ಪಟ್ಟಿ ಹೇಳುವುದು ಕಷ್ಟವೇ ಆದರೂ, ಆಗ ನೆನಪಾದವನ್ನು ಅವರಿಗೆ ಬರೆದು ಕಳಿಸಿದ್ದೆ. ಅದನ್ನೆ ಇಲ್ಲಿ ಮತ್ತೆ ಬರೆದಿದ್ದೇನೆ.  ಮುಂದೆ ಓದಿ »

  • ಕನ್ನಡ
  • ಪುಸ್ತಕ
Ornamental seperator
  • hamsanandi ರವರ ಬ್ಲಾಗ್
  • 3 ಪ್ರತಿಕ್ರಿಯೆಗಳು
  • 291 hits
  • Email this blog
  • Delicious
  • Google
  • Yahoo

ಮೃತ್ಯುಂಜಯ

November 21, 2007 - 3:07pm — sankul

 ಮುಂದೆ ಓದಿ »

  • ಪುಸ್ತಕ
Ornamental seperator
  • sankul ರವರ ಬ್ಲಾಗ್
  • ೧ ಪ್ರತಿಕ್ರಿಯೆ
  • 240 hits
  • Email this blog
  • Delicious
  • Google
  • Yahoo

ಜೀವನವ್ಯಾಪಾರ - ನಾವು ಏಕೆ ಓದುತ್ತಿರಬೇಕು?

October 1, 2007 - 2:23pm — shreekant.mishrikoti

ವ್ಯಾಪಾರಿ ಇವತ್ತು ಆದ ವ್ಯಾಪಾರ - ಟರ್ನ್ ಓವರ್ ಎಷ್ಟೆಂದು ನೋಡುತ್ತಾನೆಯೇ ಹೊರತು ಲಾಭ-ಹಾನಿ ಲೆಕ್ಕಾಚಾರ ಮಾಡುವದಿಲ್ಲ ; ಇವತ್ತು ಬಂದ ಹಣವನ್ನು ಎನಿಸಿ ಅದೆಲ್ಲ ಲಾಭವೇ ಎಂಬಂತೆ ಸಂತೋಷಪಡುತ್ತಾನಂತೆ .

ಹೀಗೆ ಬಾಳನ್ನು ನೋಡುವ ದೃಷ್ಟಿ ಎರಡಿವೆ . ಒಂದು - ವಿಕ್ರಯದ ಮೊತ್ತ ನೋಡಿ ಸಂತಸಪಡುವ ದೃಷ್ಟಿ . ಆತ ಲಾಭವನ್ನು ಗಣಿಸುವದಿಲ್ಲ . ಅಂಗಡಿಯಲ್ಲಿ ಹಗಲೆಲ್ಲ ಗಿರಾಕಿ ತುಂಬಿರಬೇಕು , ವ್ಯಾಪಾರವಾಗಬೇಕು .
ಲೋಕದ ತತ್ವಜ್ನಾನಿಗಳು ಅಕೌಂಟಂಟರಂತೆ . ಎಲ್ಲವನ್ನು ಸಂಶಯದಿಂದ ನೋಡಿ , ವ್ಯವಹಾರಕ್ಕೆಲ್ಲ ಆಧಾರ ಕೇಳಿ ವ್ಯಾಪಾರದಲ್ಲಿ ಲಾಭವಿಲ್ಲೆಂದು ನಿರ್ವಿಕಾರವಾಗಿ ಹೇಳುವರು . ನಿಮ್ಮ ಆನಂದಕ್ಕೆ ಪ್ರಮಾಣ ಬೇಡುವರು . ಸವಕಳಿ ತೆಗೆಯುವರು , ದೋಷಗಳನ್ನು ಎತ್ತಿ ತೋರಿಸುವರು.  ಮುಂದೆ ಓದಿ »

  • ಜೀವನ
  • ಪುಸ್ತಕ
Ornamental seperator
  • shreekant.mishrikoti ರವರ ಬ್ಲಾಗ್
  • 9 ಪ್ರತಿಕ್ರಿಯೆಗಳು
  • 384 hits
  • Email this blog
  • Delicious
  • Google
  • Yahoo
123ಮುಂದಿನ ›ಕೊನೆಯ »
Syndicate content

ನೀರಿನ ಜಾಡು ಹಿಡಿದು

Sharada Prasad

ವಿಹರಿಸಿ

  • ಹೊಸ ಬರಹ ಸೇರಿಸಿ - Publish your write-up on Sampada
  • 'ಸಂಪದ' ಕುರಿತು ನಿಮ್ಮ ಸಲಹೆ/ಅಭಿಪ್ರಾಯಗಳನ್ನು ಕಳುಹಿಸಿ
  • Mailing Lists
  • ಚಟುವಟಿಕೆ
  • ಕನ್ನಡ ಬಟನ್ನುಗಳು
  • ಕನ್ವರ್ಟರ್

ಇತ್ತೀಚಿನ ಪ್ರತಿಕ್ರಿಯೆಗಳು

  • raghava
    ಉ: ಅಕ್ಷರೋದಿ ಸೂತ್ರ
    May 17, 2008 - 12:10am
  • uniquesupri
    ಉ: ಬ್ಲಾಗ್ ಮಂಡಲದಲ್ಲಿ ಸಿನಿಮಾ ದಿಗ್ಗಜರು
    May 16, 2008 - 11:37pm
  • uniquesupri
    ಉ: ಒಂದು affair
    May 16, 2008 - 10:47pm
  • karihaida
    ಉ: ವಿಂಡೋಸ್ ಒಳಗೇ ಲಿನಕ್ಸ್ ಹಾಕಿಕೊಳ್ಳಬಹುದು!
    May 16, 2008 - 7:51pm
  • ಸಂಗನಗೌಡ
    ಉ: ಕಲ್ಯಾಣ ಕ್ರಾಂತಿ ಎಂಬ ನೋವಿನ ಹಲ್ಲು!
    May 16, 2008 - 6:13pm
  • hpn
    ಉ: ಅಕ್ಷರೋದಿ ಸೂತ್ರ
    May 16, 2008 - 5:40pm
  • shreekant.mishrikoti
    ಉ: ’ಸಖೇದಾಶ್ಚರ್ಯ’ ಮತ್ತು ’ಸನೇಕ’
    May 16, 2008 - 4:50pm
  • vinayak.mdesai
    ಉ: ವಿಂಡೋಸ್ ಒಳಗೇ ಲಿನಕ್ಸ್ ಹಾಕಿಕೊಳ್ಳಬಹುದು!
    May 16, 2008 - 4:47pm
  • anivaasi
    ಉ: ಕಲಿತರೆ ಹೀಗೆ...
    May 16, 2008 - 3:36pm
  • vinayudupa
    ಉ: ಸಂಸ್ಕೃತರಹಿತ ಕನ್ನಡ ಕನ್ನಡದ ಜಾಲಿಗರಿಗೆ ಮಾತ್ರವೆ?
    May 16, 2008 - 3:32pm
ಇನ್ನಷ್ಟು

ಮ೦ಗಳವೆ೦ಬೆನು ಜಗಕಿದಕೆಲ್ಲಕು
ಹಿ೦ಗಲಿ ಭವ ತಾಪ೦ ದೋಷ೦
ತ೦ಗಲಿ ಮನ ಶಮದೊಳು ನಿರ್ವೈರ್ಯ೦
ಅ೦ಗವಿಸಲಿ ಸದ್ರಸತೋಷ೦.

— ಪು ತಿ ನ

Community: FAQ | ಕಾರ್ಯಕ್ರಮಗಳು | Podcasts | ನುಡಿಮುತ್ತುಗಳು | ಪುಸ್ತಕಗಳು |

Community Blogs: Collective Listing | ಆರೋಗ್ಯ ಸಂಪದ | ಕೃಷಿ - ಶ್ಯಾಮ್ ಕಶ್ಯಪ

Individual Blogs: U R Ananthamurthy | OLN Swamy | N A M Ismail | K V Narayan | Abdul Rashid (Blogambari)

Other associated projects: Kannada Learning Center | Kannada Localization Initiative | Development Wiki | Sampada Mailing Lists

ನಿಮಗಾಗಿ...

ಸಂಪದ ಪಾಡ್ಕ್ಯಾಸ್ಟ್ (ಶ್ರಾವ್ಯ ಸಂದರ್ಶನಗಳು) | "ದಿ ಬೆಸ್ಟ್ ಆಫ್ ಸಂಪದ" | ಪ್ಲಾನೆಟ್ ಕನ್ನಡ
ಡೌನ್ಲೋಡ್ ಮಾಡಿಕೊಳ್ಳಿ:‌ ಬರಹ IME | ಫೈರ್ ಫಾಕ್ಸ್ | ಒಪೇರಾ

Some Rights Reserved. Sampada Initiative by Sampada Foundation, 2005 - 2007.
Terms of Use | Contact | About Sampada | Sampada in News/Media | Core Team

The views expressed here are of the respective author(s) and Sampada administration does not necessarily subscribe to them.
RSS: All posts | Comments
Blogs | Podcasts

separator