ಚಾಲುಕ್ಯ
ವಾತಾಪಿ ಗಣಪತಿಂ ಭಜೇಹಂ
September 15, 2007 - 4:32am — hamsanandiಈ ಶನಿವಾರ ಭಾದ್ರಪದ ಶುಕ್ಲ ಚೌತಿ. ಗಣೇಶನನ್ನು ತೊಡಕುಗಳನ್ನು ಕಳೆಯುವವನೆಂದು ನಾವೆಲ್ಲ ಪೂಜಿಸುತ್ತೇವೆ. ನಮ್ಮ ಹಿಂದಿನ ಹರಿದಾಸರು, ಮತ್ತೆ ಹಲವು ಕವಿಗಳನ್ನು ಬಗೆಬಗೆಯಾಗಿ ಹೊಗಳಿರುವವರೇ. ಕನಕದಾಸರ ಹಾಡೊಂದು, ಎಲ್ಲರ ಮನದಲ್ಲಿ ನೆಲೆಯಾಗಿ ನಿಲ್ಲುವಂತೆ ವಿದ್ಯಾಭೂಷಣರು ಹಾಡಿರುವುದು ನಮಗೆಲ್ಲ ತಿಳಿದಿರುವುದೇ - ನಮ್ಮಮ್ಮ ಶಾರದೆ ಉಮಾಮಹೇಶ್ವರಿ ನಿಮ್ಮೊಳಗಿಹನ್ಯಾರಮ್ಮ ಅನ್ನುವ ಈ ಹಾಡು ಹಂಸಧ್ವನಿ ರಾಗದಲ್ಲಿದೆ. ಅದೇ ಹಂಸದ್ವನಿ ರಾಗದಲ್ಲಿ ಮತ್ತೊಂದು ಪ್ರಖ್ಯಾತ ರಚನೆ ಇದೆ - ಅದು ಮುತ್ತುಸ್ವಾಮಿ ದೀಕ್ಷಿತರ ವಾತಾಪಿಗಣಪತಿಂ ಭಜೇಹಂ ಅನ್ನುವ ಕೃತಿ. ಸುಮಾರು ಒಂದು ನಾಲ್ಕಾರು ಸಂಗೀತ ಕಚೇರಿಗಳಿಗಾದರೂ ನೀವು ಹೋಗಿದ್ದರೆ, ನಿಮಗೆ ಈ ರಚನೆ ತಿಳಿದೇ ಇರಬೇಕು ಎನ್ನುವಷ್ಟು ಪ್ರಖ್ಯಾತವಾದ ರಚನೆ ಇದು.
ಮುತ್ತುಸ್ವಾಮಿ ದೀಕ್ಷಿತರು ಕರ್ನಾಟಕಸಂಗೀತದ ತ್ರಿಮೂರ್ತಿಗಳಲ್ಲೊಬ್ಬರು. ಇವರು ಸುಮಾರು ನಾನೂರು ರಚನೆಗಳನ್ನು ರಚಿಸಿದ್ದಾರೆ. ಅದರಲ್ಲಿ ೩-೪ ಮಾತ್ರ ತೆಲುಗು/ಮಣಿಪ್ರವಾಳದಲ್ಲಿದ್ದು ಉಳಿದದ್ದೆಲ್ಲ ಸಂಸ್ಕೃತದಲ್ಲಿವೆ. ಬಹಳ ಸರಳವಲ್ಲದಿದ್ದರೂ, ಇವರ ರಚನೆಗಳು ಸಂಗೀತರಸದಿಂದ ತುಂಬಿವೆ. ತಂಜಾವೂರಿನ ಬಳಿಯ ತಿರುವಾರೂರಿನಲ್ಲಿ ಜನಿಸಿದ ಇವರು ದೇಶದ ಹಲವೆಡೆಗಳಿಗೆ ಯಾತ್ರಿಕರಾಗಿ ಹೋಗಿ, ಅಲ್ಲಿನ ದೇವಾಲಯಗಳ ದೇವಾನುದೇವತೆಗಳ ಬಗ್ಗೆ ತಮ್ಮ ಕೃತಿಗಳನ್ನು ರಚಿಸಿದ್ದಾರೆ.

ಕಾಂಚೀಪುರದ ರಾಜಸಿಂಹೇಶ್ವರ, ಪಟ್ಟದಕಲ್ಲಿನ ವಿರೂಪಾಕ್ಷ ಮತ್ತು ಎಲ್ಲೋರದ ಕೈಲಾಸ
June 2, 2007 - 12:15am — hamsanandiಈ ಮೂರು ದೇವಾಲಯಗಳನ್ನು ಒಟ್ಟಿಗೆ ಹೇಳಿದ ಕಾರಣವೇನು ಎನ್ನುವಿರಾ? ಕಾಂಚಿಯ ಪಲ್ಲವರು, ಪಟ್ಟದಕಲ್ಲಿನ ಚಾಲುಕ್ಯರು, ಮತ್ತು ಎಲ್ಲೋರದ ರಾಷ್ಟ್ರಕೂಟರು ಪರಸ್ಪರ ಬದ್ಧವೈರಿಗಳಲ್ಲವೇ? ಹಾಗಾದರೆ ಈ ಮೂವರ ನಡುವಿನ ತಂತು ಏನು? ಮುಂದೆ ಓದಿ »






RSS: