26
May
2013

What's new on Sampada?  ಉತ್ತಮ ಬರಹಗಾರರಿಗೆ ಸಂಪದ ಪ್ರಶಸ್ತಿ. ಹೆಚ್ಚಿನ ಮಾಹಿತಿಗೆ ಇಲ್ಲಿ ಕ್ಲಿಕ್ ಮಾಡಿ.

ಕತೆಯೇ ಇರಬಹುದು..

ಮಗುಗಳ ಮಾಣಿಕ್ಯ

June 8, 2007 - 10:20am
sindhu

ಮಳೆ ಬರುವ ಮೊದಲು ಹೋಗಿ ಮನೆ ಸೇರಿಬಿಡಬೇಕು ಎಂಬ ಧಾವಂತದಲ್ಲಿ ಕ್ಯಾಬ್ ಇಳಿದವಳು ಓಡುತ್ತ ಬಂದೆ. ಮುಖ್ಯರಸ್ತೆಯಿಂದ ನಮ್ಮನೆಗೆ ಹೋಗುವಾಗ ಒಂದು ದೊಡ್ಡ ಏರು(ಅಥ್ವಾ ಹಳ್ಳ) ಇಳಿಯಬೇಕು. ನಮ್ಮ ಮನೆಯಿರುವ ಬಡಾವಣೆ ಬೆಂಗಳೂರಿನ ಎತ್ತರದ ಗುಡ್ಡದ ಸರಹದ್ದು. ಹಾಗಾಗಿ ದಿನಾ ಆರೂವರೆಗೆ ಮನೆಗೆ ನಡೆದುಹೋಗುವಾಗ ಅಲ್ಲಿ ಪಶ್ಚಿಮದಂಚಲ್ಲಿ ಅಡಗುತ್ತಿರುವ ಕುಂಚಕೋವಿದ ಬೆಳಕಿನ ಶೂರ ಸೂರ್ಯ ಮಾಮಾ ಟಾಟಾ ಮಾಡುತ್ತಿರುತ್ತಾನೆ. ಅವನು ಆಗಷ್ಟೇ ನೀಡಿ ಹೋದ ಬೆಚ್ಚನೆ ಅಪ್ಪುಗೆಯಿಂದ ಬಾನ್ದೇವಿಯ ಪಡುವಣ ಕೆನ್ನೆ ಕೆಂಪಗೆ ಮಿರಮಿರನೆ ಮಿನುಗುತ್ತಿರುತ್ತದೆ. ದಾರಿಬದಿಯಲ್ಲಿ ಕುಳಿತಿರುವ ಹೂವಾಡಗಿತ್ತಿಯ ಬುಟ್ಟಿಯ ತುಂಬ ಆಗಷ್ಟೇ ಬಿರಿಯುತ್ತಿರುವ ಮೊಗ್ಗಿನ ಘಮ. ಸಂಜೆ ಟ್ಯೂಶನ್ನಿಗೂ ಖುಶಿಯಲ್ಲಿ ಸೈಕಲ್ ರೇಸ್ ಮಾಡಿ ಹೋಗುವ ಪುಟ್ಟ ಹುಡುಗರು. Read more about ಮಗುಗಳ ಮಾಣಿಕ್ಯ

‍ನಿಮಗೆ ಈ ಬರಹ ಇಷ್ಟವಾಯಿತೇ? ತಿಳಿಸಿ: 
No votes yet
To prevent automated spam submissions leave this field empty.
ಬ್ಲಾಗ್ ವರ್ಗಗಳು: 

ಹುಡುಗಿಯರು ಯಾಕೆ ಹೀಗೆ?

March 3, 2009 - 11:43pm
ಹೇಮ ಪವಾರ್
"ಅಲ್ಲವೇ ನೋಡಿದ್ರೇನೆ ಗೊತ್ತಾಗುತ್ತೆ ಜೊಲ್ಲು ಅಂತ ಅದು ಹೇಗೆ ಮಾತಾಡ್ತೀಯಾ ಅವನ ಜೊತೆ ? ಅದೇನು ಅಷ್ಟೊಂದು ಹಲ್ಲು ಗಿಂಜತಾನೆ? irritate ಆಗಲ್ವಾ ನಿಂಗೆ?" ಅಂದೆ. “ಯಾಕಾಗಬೇಕು? ” ತಣ್ಣಗೆ ಅಂದಳವಳು. “He is a flirt !!” ತುಸು ಜೋರಾಗೇ ಅಂದೇ ನಾನು. “ಛೇ! ನಿನಗೆ ಗೊತ್ತಿಲ್ವೇ ಅವ್ನು ಫ್ಲರ್ಟ್ ಅಲ್ಲ. ಅವ್ನಿಗೆ ಹುಡುಗಿಯರ ಶೋಕಿ ಇದೆ ಅಷ್ಟೇ. ಫ್ಲರ್ಟ್ ಮಾಡೋ ಕ್ವಾಲಿಟೀಸ್ ಇಲ್ಲ!!!”
‍ನಿಮಗೆ ಈ ಬರಹ ಇಷ್ಟವಾಯಿತೇ? ತಿಳಿಸಿ: 
No votes yet
To prevent automated spam submissions leave this field empty.
ಬ್ಲಾಗ್ ವರ್ಗಗಳು: 

ಸ್ವ-ಗತ

March 18, 2009 - 10:44pm
ಹೇಮ ಪವಾರ್
ನಿನಗೆ ನಿಜವಾಗಿ ತಿಳಿಯಲಿಲ್ವ? ನಾಟಕ ಮಾಡುತ್ತಿದ್ದ? ಅಷ್ಟೊಂದು ಚಡಪಡಿಸಿ ಹೋಗ್ತಿದ್ದೆ ನಿನಗೋಸ್ಕರ. ತಮಾಷೆ ನಿನಗೆ. ಊರವರಿಗೆಲ್ಲ ತಿಳಿಯೋದು ನಿನಗೆ ಮಾತ್ರ ಗೊತ್ತಾಗಲಿಲ್ಲ ಕಡೇವರ್ಗೂ. ನೀನು ಎರಡು ಮೂರು ದಿನ ಕಾಣಲಿಲ್ಲವೆಂದ್ರೆ, ನಿನ್ನೊಂದಿಗೆ ಜಗಳವಾಡಿ ಅಳುಮುಖ ಮಾಡ್ಕೊಂಡು ಮೊಂಡು ಹಿಡೀತಿದ್ನಲ್ಲ? ಅದೆಷ್ಟು ತಾಳ್ಮೆಯಿಂದ ಸಮಾಧಾನ ಮಾಡ್ತಿದ್ದೆ.
‍ನಿಮಗೆ ಈ ಬರಹ ಇಷ್ಟವಾಯಿತೇ? ತಿಳಿಸಿ: 
No votes yet
To prevent automated spam submissions leave this field empty.
ಬ್ಲಾಗ್ ವರ್ಗಗಳು: 
Subscribe to ಕತೆಯೇ ಇರಬಹುದು..