ಸಂಪದದಲ್ಲಿ ಹೊಸತು! | Sign up | Login | Font Help
ಸಂಪದ
  • ಲೇಖನಗಳು
  • ಬ್ಲಾಗ್ಸ್
  • ಚರ್ಚೆಯ ವೇದಿಕೆ
  • ಚಿತ್ರಪುಟಗಳು
  • Podcasts
  • ಪುಸ್ತಕಗಳು
  • ಆರ್ಕೈವ್
  • ಸಂಪರ್ಕಿಸಿ
  • Sampada Foundation
  • ಅಂಚೆ ಪೆಟ್ಟಿಗೆ
  • Font Help

ನಿರೀಕ್ಷಿಸಿ: ಡಾ. ಉಲ್ಲಾಸ್ ಕಾರಂತರೊಂದಿಗಿನ ಮಾತುಕತೆ, ಸಂದರ್ಶನ

ಸಂಪದ

ದಸರ

ನವರಾತ್ರಿಯ ಹತ್ತನೇ ದಿನ

October 21, 2007 - 3:05am — hamsanandi

ಇಂದು ನವರಾತ್ರಿಯ ಹತ್ತನೇ, ಹಾಗೂ ಕಡೆಯ ದಿವಸ. ವಿಜಯ ದಶಮಿ. ರಾಮ ರಾವಣನನ್ನು ಕೊಂದು, ವಿಜಯ ಪಡೆದ ದಿನವೆಂದೂ, ದೇವಿ ಚಾಮುಂಡೇಶ್ವರಿ ಮಹಿಷಾಸುರನನ್ನು ಸಂಹರಿಸಿದ ದಿನವೆಂದೂ ನಾವು ಈ ದಿನವನ್ನು ಆಚರಿಸುತ್ತೇವೆ.  ಮುಂದೆ ಓದಿ »

  • ಒಡೆಯರು
  • ಕನ್ನಡ
  • ಜ್ಞಾನವಾಹಿನಿ
  • ದಸರ
  • ಮೈಸೂರು
  • ಸಂಗೀತ
~.~
  • hamsanandi ರವರ ಬ್ಲಾಗ್
  • 3 ಪ್ರತಿಕ್ರಿಯೆಗಳು
  • 744 hits
  • ಈ ಪುಟವನ್ನು ಇ-ಮೇಯ್ಲ್ ಮಾಡಿ
  • Delicious
  • Google
  • Yahoo

ನವರಾತ್ರಿಯ ಎಂಟನೇ ದಿನ

October 19, 2007 - 10:04pm — hamsanandi

ಇಂದು ನವರಾತ್ರಿಯ ಎಂಟನೇ ದಿನ. ದುರ್ಗಾಷ್ಟಮಿ. ಬಂಗಾಳದಲ್ಲಿ ಇಂದು ದುರ್ಗಾ ಪೂಜೆಯ ಸಂಭ್ರಮವೋ ಸಂಭ್ರಮ. ಅಂದಹಾಗೆ, ಸಂಗೀತ ಪ್ರಪಂಚಕ್ಕೆ ಬಂದಾಗ, ಮೂರು ರಾಜ್ಯಗಳ ಹೆಸರುಗಳು ರಾಗಗಳಲ್ಲಿ ಹೆಚ್ಚಾಗಿ ಕಾಣಿಸಿಕೊಳ್ಳುತ್ತವೆ. ಅವು ಕರ್ನಾಟಕ, ಬಂಗಾಳ, ಮತ್ತು ಗುಜರಾತ್. ಇವುಗಳ ಬಗ್ಗೆ ಮತ್ತೊಮ್ಮೆ ಯಾವಾಗಲಾದರೂ ಬರೆಯುವೆ.  ಮುಂದೆ ಓದಿ »

  • ಜ್ಞಾನವಾಹಿನಿ
  • ತಂಜಾವೂರು
  • ದಸರ
  • ಮೈಸೂರು
  • ಶ್ರೀಪಾದರಾಯರು
  • ಸಂಗೀತ
~.~
  • hamsanandi ರವರ ಬ್ಲಾಗ್
  • Login or register to post comments
  • 500 hits
  • ಈ ಪುಟವನ್ನು ಇ-ಮೇಯ್ಲ್ ಮಾಡಿ
  • Delicious
  • Google
  • Yahoo

ನವರಾತ್ರಿಯ ಏಳನೇ ದಿನ

October 18, 2007 - 10:48pm — hamsanandi

ಇವತ್ತು ನವರಾತ್ರಿಯ ಏಳನೇ ದಿನ. ಈ ದಿನ ತಲಕಾವೇರಿಯಲ್ಲಿ ತೀರ್ಥೋದ್ಭವವಾಗುವ ತುಲಾ ಸಂಕ್ರಮಣವೂ ಹೌದು. ನೃಪತುಂಗನ ಕಾಲದಿಂದಲೂ, ಕನ್ನಡನಾಡು ಕಾವೇರಿಯಿಂದ ಗೋದಾವರಿಯವರೆಗೆ ಎಂಬ ಹೇಳಿಕೆ ಇದೆ. ಕಾವೇರಿ ಕನ್ನಡಿಗರಿಗೆ, ಅದರಲ್ಲೂ ದಕ್ಷಿಣ ಕರ್ನಾಟಕದ ಭಾಗದವರಿಗೆ ಜೀವನದಿ ಎಂಬುದರಲ್ಲಿ ಎರಡುಮಾತಿಲ್ಲ. ಕಾವೇರಿ ಮತ್ತೆ ಅದಕ್ಕೆ ಸೇರಿಕೊಳ್ಳುವ ನದಿಗಳಾದ ಹೇಮಾವತಿ, ಲಕ್ಷ್ಮಣತೀರ್ಥ, ಶಿಂಷಾ, ಅರ್ಕಾವತಿ, ಕಣ್ವಾ, ಹಾರಂಗಿ ಮೊದಲಾದುವು ಮೈಸೂರು,ಹಾಸನ,ಕೊಡಗು, ಮಂಡ್ಯ, ತುಮಕೂರು, ಚಿಕ್ಕಮಗಳೂರು,ಬೆಂಗಳೂರು ಮತ್ತು ಚಾಮರಾಜನಗರ ಜಿಲ್ಲೆಗಳ ಬಹುಪಾಲು ಭೂಮಿಗೆ ನೀರುಣಿಸುತ್ತವೆ. ಇಂತಹ ಮಹಾತಾಯಿ ಕಾವೇರಿಗೆ ಇಂದು ಮೊದಲು ನಮಿಸೋಣ.

ಇವತ್ತು ಈ ಮೊದಲ ಆರು ದಿನಕ್ಕಿಂತ ಸ್ವಲ್ಪ ಬೇರೆ. ಬೇರೆ ಸಂಗೀತಗಾರರು ಹಾಡಿದ, ದೇವಿಯ ಬಗ್ಗೆಯ ರಚನೆಯ ಕೊಂಡಿಗಳನ್ನು ಕೊಡುವ ಬದಲು ಇವತ್ತು ಒಂದು ಬದಲಾವಣೆ ಮಾಡಿದ್ದೇನೆ. ಕನ್ನಡದ ಮೂರು ಕವಿಗಳು ಸರಸ್ವತಿಯ ಬಗ್ಗೆ ಮಾಡಿರುವ ಸ್ತುತಿಯನ್ನು, ಹವ್ಯಾಸಿ ಸಂಗೀತಾಭ್ಯಾಸಿಯೊಬ್ಬರ ಕಂಠದಲ್ಲಿ ಕೇಳಿಸುವೆ. ಇದಕ್ಕೆ ಕಾರಣ, ಕನ್ನಡಕ್ಕೂ-ಕಾವೇರಿಗೂ ಇರುವ ಬಿಡಿಸದ ನಂಟು. ಹಾಗಾಗಿ, ಕಾವೇರಿ ಸಂಕ್ರಮಣದ ದಿನ ಒಂದಲ್ಲ, ಮೂರು ಕನ್ನಡ ರಚನೆಗಳು ಇವತ್ತು ಇಲ್ಲಿ ಕೇಳಿ ಬರುತ್ತಿವೆ. ಇವಕ್ಕೆ ಹಿನ್ನಲೆ ವಾದ್ಯಗಳ ಅಲಂಕಾರವಿಲ್ಲ. ಆದರೂ ಪರವಾಗಿಲ್ಲ, ಎನ್ನುವ ಭಾವನೆ ನನ್ನದು.

ಮೊದಲಿಗೆ ಕನ್ನಡದ ಮೊದಲ ಕಾವ್ಯ ಕವಿರಾಜ ಮಾರ್ಗದಿಂದ ಆಯ್ದ ಸರಸ್ವತೀ ಸ್ತುತಿಯಾದ ಒಂದು ಕಂದಪದ್ಯ:

ಶ್ರೀ ವಿಶದವರ್ಣೆ ಮಧುರಾ

ರಾವೋಚಿತೆ ಚತುರ ರುಚಿರ ಪದರಚನೆ ಚಿರಂ

ದೇವಿ ಸರಸ್ವತಿ ಹಂಸೀ

ಭಾವದಿ ಕೂರ್ತು ನೆಲೆಗೊಳ್ಗೆ ಮನ್ಮಾನಸದೊಳ್  ಮುಂದೆ ಓದಿ »

  • ಕನ್ನಡ
  • ಕಾವೇರಿ
  • ಜ್ಞಾನವಾಹಿನಿ
  • ದಸರ
  • ಮೈಸೂರು
  • ಸಂಗೀತ
~.~
  • hamsanandi ರವರ ಬ್ಲಾಗ್
  • 4 ಪ್ರತಿಕ್ರಿಯೆಗಳು
  • 706 hits
  • ಈ ಪುಟವನ್ನು ಇ-ಮೇಯ್ಲ್ ಮಾಡಿ
  • Delicious
  • Google
  • Yahoo

ನವರಾತ್ರಿಯ ಆರನೇ ದಿನ

October 18, 2007 - 3:07am — hamsanandi

ಈ ದಿವಸ ನವರಾತ್ರಿಯ ಆರನೇ ದಿನ. ಹತ್ತುದಿನಗಳ ಹಬ್ಬದಲ್ಲಿ, ಅರ್ಧಭಾಗ ಕಳೆದಿದೆ. ಕೆಲವರು ಸರಸ್ವತೀ ಪೂಜೆಯನ್ನು

ನವರಾತ್ರಿಯ ಒಂಬತ್ತನೇ ದಿನ ಬರುವ ಮಹಾನವಮಿಯಂದು ಮಾಡಿದರೆ, ಮತ್ತೆ ಕೆಲವರು, ನವರಾತ್ರಿಯಲ್ಲಿ ಎಂದು ಚಂದ್ರ

ಮೂಲಾ ನಕ್ಷತ್ರದ ಬಳಿ ಇರುತ್ತಾನೋ, ಆ ದಿನ ಮಾಡುತ್ತಾರೆ. ಇದು ಸಾಧಾರಣವಾಗಿ, ನವರಾತ್ರಿಯ ಆರನೇ ಅಥವಾ

ಏಳನೆಯ ದಿನ ಬರುತ್ತದೆ.

 ಮುಂದೆ ಓದಿ »

  • ಜ್ಞಾನವಾಹಿನಿ
  • ದಸರ
  • ಮೈಸೂರು
  • ವರ್ಣ
  • ಸಂಗೀತ
~.~
  • hamsanandi ರವರ ಬ್ಲಾಗ್
  • Login or register to post comments
  • 544 hits
  • ಈ ಪುಟವನ್ನು ಇ-ಮೇಯ್ಲ್ ಮಾಡಿ
  • Delicious
  • Google
  • Yahoo

ನವರಾತ್ರಿಯ ಐದನೆಯ ದಿನ

October 17, 2007 - 2:41am — hamsanandi

ಇವತ್ತು ನವರಾತ್ರಿಯ ಐದನೆಯ ದಿನ. ಇಂದು ಸಂಜೆ ತಿರುವನಂತಪುರದ ಪದ್ಮನಾಭಸ್ವಾಮಿ ದೇವಾಲಯದ ಪಕ್ಕದಲ್ಲಿರುವ ನವರಾತ್ರಿ ಮಂಡಪದಲ್ಲಿ ಪ್ರಮುಖವಾಗಿ ವಿಸ್ತರಿಸುವುದು ಭೈರವಿ ರಾಗ. ಮತ್ತೆ ಅದರಲ್ಲಿ, ಸ್ವಾತಿ ತಿರುನಾಳ್ ಮಹಾರಾಜರ ಜನನೀ ಮಾಮವ ಮೇಯೆ ಎಂಬ ಕೃತಿಯನ್ನು ಹಾಡಲಾಗುತ್ತೆ. ಈ ರಚನೆಯನ್ನು ನೀವು ಮ್ಯೂಸಿಕ್ ಇಂಡಿಯಾ ತಾಣದಲ್ಲಿ, ಬಾಂಬೇ ಸಹೋದರಿಯರ ಧ್ವನಿಯಲ್ಲಿ, ಇಲ್ಲಿ ಕ್ಲಿಕ್ಕಿಸಿ ಕೇಳಬಹುದು.

ಭೈರವಿ ರಾಗ ಕರ್ನಾಟಕ ಸಂಗೀತಕ್ಕೆ ಸೀಮಿತವಾದ ರಾಗ - ಇದಕ್ಕೆ ಹತ್ತಿರವಾದ ರಾಗ, ಹಿಂದೂಸ್ಗಾನಿ ಸಂಗೀತದಲ್ಲಾಗಲಿ, ಅಥವಾ ಪ್ರಪಂಚದ ಬೇರೆ ಯಾವುದೇ ಸಂಗೀತದಲ್ಲೂ ಇದನ್ನು ಹೋಲುವ ರಾಗವಿಲ್ಲ. ನೀವು ತರಾಸು ಅವರ ಹಂಸಗೀತೆಯನ್ನು ಓದಿದ್ದರೆ, ಅದರ ಮೇಲೆ ಆಧಾರಿತವಾದ ಚಲನಚಿತ್ರವನ್ನು ನೋಡಿದ್ದರೆ, ಅದರಲ್ಲಿ ಬರುವ ಭೈರವಿ ವೆಂಕಟಸುಬ್ಬಯ್ಯನ ಪಾತ್ರ ನಿಮಗೆ ತಿಳಿದೇ ಇರುತ್ತೆ. ಇಲ್ಲಿ ಒಂದು ವಿಷಯವನ್ನು ಹೇಳಿಬಿಡುತ್ತೇನೆ. ಈ ಭೈರವಿ ವೆಂಕಟಸುಬ್ಬಯ್ಯ ತರಾಸು ಅವರ್ ಕಲ್ಪನೆಯ ಪಾತ್ರವೇ ಹೊರತು ಚಾರಿತ್ರಿಕ ವ್ಯಕ್ತಿಯಲ್ಲ.  ಮುಂದೆ ಓದಿ »

  • ಜ್ಞಾನವಾಗಿನಿ
  • ದಸರ
  • ದೀಕ್ಷಿತರು
  • ಸಂಗೀತ
  • ಸಂಧ್ಯಾರಾಗ
~.~
  • hamsanandi ರವರ ಬ್ಲಾಗ್
  • ೧ ಪ್ರತಿಕ್ರಿಯೆ
  • 627 hits
  • ಈ ಪುಟವನ್ನು ಇ-ಮೇಯ್ಲ್ ಮಾಡಿ
  • Delicious
  • Google
  • Yahoo
12ಮುಂದಿನ ›ಕೊನೆಯ »
Syndicate content

ವಾಟರ್ ಪೋರ್ಟಲ್: ದಿನದ ಚಿತ್ರ

ಪರಿಶುದ್ಧ ಜಲ

(ಚಿತ್ರ: ವಸಂತ ಕಜೆ)

ವಾರದ ಲೇಖನ
ನಮ್ಮ ಕೊಳವೆ ಬಾವಿಯ ಮರುಪೂರಣ - ವಸಂತ ಕಜೆ

ವಾರದ ವೀಡಿಯೋ
ಬಾನಿಗೊಂದು ಆಲಿಕೆ (ಮಳೆನೀರು ಸಂಗ್ರಹ)

ಮತ್ತಷ್ಟು...

ವಿಹರಿಸಿ

  • ಸಂಪದದಲ್ಲಿ ಬರೆಯುವ ಮುನ್ನ
  • ಹೊಸ ಬರಹ/ಚಿತ್ರ ಸೇರಿಸಿ
  • 'ಸಂಪದ' ಕುರಿತು ನಿಮ್ಮ ಸಲಹೆ/ಅಭಿಪ್ರಾಯಗಳನ್ನು ಕಳುಹಿಸಿ
  • ಚಟುವಟಿಕೆ
  • ಕನ್ನಡ ಬಟನ್ನುಗಳು
  • ಕನ್ವರ್ಟರ್

ಇತ್ತೀಚಿನ ಪ್ರತಿಕ್ರಿಯೆಗಳು

  • hpn
    ಉ: 'ಕಾಶ್ಮೀರದ ಬೆಂಕಿ:ಎಚ್ಚರವಿರಲಿ!' ಲೇಖನಕ್ಕೆ ಬಂದ ಪ್ರತಿಕ್ರಿಯೆಗಳಿಗೆ ಪ್ರತಿಸ್ಪಂದನ
    August 22, 2008 - 1:04am
  • omshivaprakash
    ಉ: ಲಿನಕ್ಸಾಯಣ ೧೫ - ಲಿನಕ್ಸ್ ಬೂಟಿಂಗ್ - ಭಾಗ ೧
    August 22, 2008 - 12:41am
  • manjunath s reddy
    ಉ: 'ಕಾಶ್ಮೀರದ ಬೆಂಕಿ:ಎಚ್ಚರವಿರಲಿ!' ಲೇಖನಕ್ಕೆ ಬಂದ ಪ್ರತಿಕ್ರಿಯೆಗಳಿಗೆ ಪ್ರತಿಸ್ಪಂದನ
    August 22, 2008 - 12:20am
  • ಸಂಗನಗೌಡ
    ಉ: ಕನ್ನಡ ಬರ್ದೋನು ಕೋಡಂಗಿ
    August 22, 2008 - 12:06am
  • bhargava_nudi
    ಉ: ಮತ್ತೆ ಮಳೆ ಹುಯ್ಯುತಿದೆ
    August 22, 2008 - 12:02am
  • hamsanandi
    ಉ: ವರದಿಗಾರರಿಗೆ ಬುದ್ಧಿ ಬರುವುದು ಯಾವಾಗ?
    August 21, 2008 - 11:57pm
  • Sunil Jayaprakash
    ಉ: ಕನ್ನಡ ಬರ್ದೋನು ಕೋಡಂಗಿ
    August 21, 2008 - 11:44pm
  • ಸಂಗನಗೌಡ
    ಉ: ಹೌದು........ಈ ಬರೆಯೋ ಅಭ್ಯಾಸ ನಿಮಗೆ.........?
    August 21, 2008 - 11:15pm
  • ಸಂಗನಗೌಡ
    ಉ: ನೋಡಿ ಕಂಡದ್ದು
    August 21, 2008 - 11:11pm
  • hamsanandi
    ಉ: ಕನ್ನಡ ಬರ್ದೋನು ಕೋಡಂಗಿ
    August 21, 2008 - 11:07pm
ಇನ್ನಷ್ಟು


ಕೇಡಿಗನ ಭಕ್ತಿ ನಿಜವೆಂದು ನಂಬದಿರು| ಮಠದೊಳಗಣ ಬೆಕ್ಕು ಸಾತ್ವಿಕ ಜೀವನ ನಡೆಸಿದರೂ ಇಲಿಯ ಕಂಡರೆ ಪುಟನೆಗೆದು ಓಡುತ್ತದೆ

— ದೇವರ ದಾಸಿಮಯ್ಯ

ಮತ್ತಷ್ಟು: ಆರೋಗ್ಯ ಸಂಪದ | ಕೃಷಿ ಸಂಪದ | ನುಡಿಮುತ್ತುಗಳು

ಯೋಜನೆಗಳು: Kannada Learning Center | ಗ್ನು/ಲಿನಕ್ಸ್ ನಲ್ಲಿ ಕನ್ನಡ ತರಲು ನಡೆದಿರುವ ಕೆಲವು ಯೋಜನೆಗಳು | ಡಾಕ್ಯುಮೆಂಟೇಶನ್ Wiki | ಸಂಪದ ಅಂಚೆಪೆಟ್ಟಿಗೆಗಳು (Sampada Mailing Lists)

ಸ್ವರ್ಣ ಸಂಪದ ಸಂಪದ ಪಾಡ್ಕ್ಯಾಸ್ಟ್ (ಶ್ರಾವ್ಯ ಸಂದರ್ಶನಗಳು) | "ದಿ ಬೆಸ್ಟ್ ಆಫ್ ಸಂಪದ" | ಪ್ಲಾನೆಟ್ ಕನ್ನಡ

ಡೌನ್ಲೋಡ್ ಮಾಡಿಕೊಳ್ಳಿ:‌ ಬರಹ IME | ಫೈರ್ ಫಾಕ್ಸ್ | ಒಪೇರಾ

ಕೆಲವು ಹಕ್ಕುಗಳನ್ನು ಕಾಯ್ದಿರಿಸಲಾಗಿದೆ. ಸಂಪದ ಸಮುದಾಯ ಸಂಪದ ಫೌಂಡೇಶನ್ನಿನ ಒಂದು ಯೋಜನೆ.
Some rights reserved Sampada Initiative by Sampada Foundation, 2005 - 2008.
Terms of Use | Contact | About Sampada | Sampada in News/Media

The views expressed here are of the respective author(s) and Sampada administration does not necessarily subscribe to them.
RSS: All posts | Comments
Blogs | Podcasts

separator