![]()
ಕೃಷಿಯಲ್ಲಿ ತೊಡಗಿಸಿಕೊಂಡವರಿಗೆ ತಿಳಿದಷ್ಟು ನೀರಿನ ಬೆಲೆ ಬಹುಶಃ ಬೇರೆ ಯಾರಿಗೂ ತಿಳಿದಿರಲಿಕ್ಕಿಲ್ಲ. ಮಳೆಯಾಗಿ ಬಿದ್ದ ನೀರನ್ನು ಹರೆದು ಪೋಲಾಗಲು ಬಿಡದೆ ಅದನ್ನು ಬಳಸಿಕೊಂಡು ನೀರಿನ ಸದುಪಯೋಗಪಡೆಯುವುದು ಕಜೆಯವರು ನೆನಪಿಸುವಂತೆ "ನೀರ ನಿಶ್ಚಿಂತೆ". ಅಡಿಕೆ ಪತ್ರಿಕೆಯಲ್ಲಿ ಸಹಾಯ ಸಂಪಾದಕರಾಗಿ ಕೆಲಸ ಮಾಡುತ್ತಿರುವ ನಾ. ಕಾರಂತರು ಪುತ್ತೂರಿನ ಬಳಿ ಬಾವಿಗೆ ಮರುಪೂರಣ ಮಾಡಿದ್ದರ ದೃಷ್ಟಾಂತವೊಂದನ್ನು ನಮ್ಮೊಂದಿಗೆ ವಾಟರ್ ಪೋರ್ಟಲ್ಲಿನಲ್ಲಿ ಹಂಚಿಕೊಂಡಿದ್ದಾರೆ. ಓದಿ:
ಕಡು ಬೇಸಿಗೆ. ಸುತ್ತೆಲ್ಲಾ ಭಣಭಣ. ನಲ್ಲಿಯಲ್ಲಿ ಅರ್ಧ ಗಂಟೆ ನೀರು ಬಂದರೆ ಹೆಚ್ಚು. ಇಂತಹ ಪರಿಸ್ಥಿತಿಯಲ್ಲೂ ಪುತ್ತೂರಿನ ಆದರ್ಶ ಆಸ್ಪತ್ರೆ ಬಳಿಯ ರಾಜರತ್ನಂ ಅವರ ಬಾವಿಯಲ್ಲಿ ಹತ್ತಡಿ ನೀರಿಗೆ ತೊಂದರೆಯಿಲ್ಲ. ಚಾವಣಿ ನೀರನ್ನು ಬಾವಿಗೆ ಮರುಪೂರಣ ಮಾಡಿದ್ದರ ಫಲ.
ಇವರದು ಹಳೆ ಬಾವಿ. ಮೃದು ಮಣ್ಣು. ಒರತೆ ಕಡಿಮೆ. ಕೆಲವೊದು ಸಲ ಫೆಬ್ರವರಿ-ಮಾರ್ಚ್ ತಿಂಗಳಲ್ಲಿ ಮಳೆ ಬಂದಾಗ ಮೇ ಕೊನೆ ವರೆಗೂ ಕುಡಿಯುವ ನೀರಿಗೆ ತೊಂದರೆಯಾಗುತ್ತಿರಲಿಲ್ಲ. ಸುಮಾರು ಎಂಭತ್ತರ ಹೊತ್ತಿಗೆ ಬಾವಿ ಒಮ್ಮೆ ಬತ್ತಿತ್ತು. ಆಗ ದೂರದಿಂದ ನೀರನ್ನು ತಂದ ಸಾಹಸ ರಾಜರತ್ನಂ ಅವರಿಗೆ ನೆನಪಿದೆ. ಆಮೇಲಿನ ದಿವಸಗಳಲ್ಲಿ ಮನೆಬಳಕೆಗೆ ಬಳಸಲು ತೊಂದರೆಯಾಗುತ್ತಿರಲಿಲ್ಲ.
೨೦೦೦ ಸುಮಾರಿಗೆ ಮೇ-ಜೂನ್‌ನಲ್ಲಿ ಬಾವಿ ಪೂರ್ತಿ ಬತ್ತಿತ್ತು. ಕುಡಿನೀರಿಗೂ ತತ್ವಾರ. ನೀರಿನಾಪತ್ತಿನಲ್ಲಿ ನೀರೊದಗಿಸುತ್ತಿದ್ದ ವೆಲಾರಿಯನ್ ಡಿಸೋಜ ಅವರ ಬಾವಿಯಲ್ಲೂ ನೀರು ತಳಕಾಣುತ್ತಿತ್ತು. ಆಗ ನೆರವಿಗೆ ಬಂದವರು ಆದರ್ಶ ಆಸ್ಪತ್ರೆಯ ಡಾ.ಪ್ರಸಾದ ಭಂಡಾರಿ. ತಮ್ಮ ಆಸ್ಪತ್ರೆಯ ಕೊಳವೆ ಬಾವಿಯಿಂದ ನೀರು ಬಳಸಲು ಅವಕಾಶ. ಆಸ್ಪತ್ರೆಗೂ ಮನೆಗೂ ಸುಮಾರು ಒಂದು ಫಲಾಂಗ್ ದೂರ. ಇಷ್ಟು ದೂರ ಪೈಪ್ ತರುವುದೆಂದರೆ ದುಬಾರಿ. ಸುಮಾರು ಅರ್ಧ ದೂರದ ತನಕ ಪೈಪಲ್ಲಿ ನೀರು ತಂದು, ಅಲ್ಲಿಂದ ಮನೆಮಂದಿ ಎಲ್ಲರಿಂದಲೂ ಕರಸೇವೆ! ಪಾತ್ರೆಪಗಡಿಗಳಲ್ಲಿ ಸಂಗ್ರಹ.
ಲೇಖನದ ಉಳಿದ ಭಾಗ »
.
("ಕನ್ನಡದಲ್ಲಿ ವಾಟರ್ ಪೋರ್ಟಲ್" ಯೋಜನೆ ಸಂಪದ ಫೌಂಡೇಶನ್ನಿನ ಸಹಯೋಗದಿಂದ ಮೂಡಿ ಬರುತ್ತಿದೆ.)

- Login or register to post comments
- 457 hits
ಈ ಪುಟವನ್ನು ಇ-ಮೇಯ್ಲ್ ಮಾಡಿ
Printer-friendly version- ನಿರ್ವಾಹಕರ ಗಮನಕ್ಕೆ ತನ್ನಿ
ಮೇಲಿನ ಪುಟವನ್ನು ಹೋಲುವ ಪುಟಗಳು - 'ಸಂಪದ' ಆರ್ಕೈವಿನಿಂದ
ಲೇಖಕರು
ಪೂರ್ಣ ಹೆಸರು
ಹರಿ ಪ್ರಸಾದ್ ನಾಡಿಗ್
ಪರಿಚಯ
ಹುಟ್ಟಿದ್ದು ದಾವಣಗೆರೆಯಲ್ಲಿ, ಬೆಳೆದಿದ್ದು ಚಿತ್ರದುರ್ಗ, ಮೈಸೂರು ಹಾಗೂ ಶಿವಮೊಗ್ಗದಲ್ಲಿ.
ವಿಕಿಪೀಡಿಯದ ಹುಚ್ಚು ಹಿಡಿದಾಗ ಕನ್ನಡ ವಿಕಿಪೀಡಿಯದ ಹುಚ್ಚು ಹಿಡಿಸಿಕೊಂಡು ಪ್ರಾರಂಭ ಹಂತದಿಂದ ಹೊರಡಿಸಿ ಸುಮಾರು ವರ್ಷ ಅದರಲ್ಲಿ ಬರೆಯುತ್ತಿದ್ದೆ, ಅದನ್ನು ನೋಡಿಕೊಳ್ಳುತ್ತಿದ್ದೆ. ಹೀಗೇ ಒಮ್ಮೆ ೨೦೦೫ರಲ್ಲಿ ಸಂಪದ ಪ್ರಾರಂಭಸಿದ್ದು. ತದನಂತರ ಸಂಪದಿಗರ ಒಡನಾಟ ಖುಷಿ ಕೊಟ್ಟಿದೆ.
ನನ್ನ ಇಷ್ಟದ ವಿಷಯಗಳು ಹಾಗು ಪ್ರಸ್ತುತ ಯೋಜನೆಗಳ ಬಗ್ಗೆ ಅಲ್ಲೊಂದಿಷ್ಟು ಇಲ್ಲೊಂದಿಷ್ಟು ಬರೆಯುತ್ತಿರುತ್ತೇನೆ. ಭೇಟಿ ಕೊಡಿ: ನನ್ನ ಅಂತರ್ಜಾಲ ಪುಟ, ಸಂಪದದಲ್ಲಿ ನನ್ನ ಬ್ಲಾಗ್: ಪರಿವೇಶಣ ಹಾಗು ಇಂಗ್ಲಿಷಿನಲ್ಲಿ ಬರೆಯುವ ಬ್ಲಾಗ್.
ನನ್ನ ಬಗ್ಗೆ, ನನ್ನ ವೃತ್ತಿಯ ಬಗ್ಗೆ ಹೆಚ್ಚಿನ ಮಾಹಿತಿ ಇಲ್ಲಿದೆ.



RSS:
ಉ: ಮರುಪೂರಣ - ಹೀಗೊಂದು Case Study
ಆಗಾಗ(ಬೇಸಗೆಯಲ್ಲೂ) ಮಳೆ ಸುರಿದರೆ ಜಲಮರುಪೂರಣ ಯಶಸ್ಸು ಕಾಣುವ ಸಾಧ್ಯತೆ ಬಹಳ ಹೆಚ್ಚು.
*ಅಶೋಕ್