ಸಂಪದದಲ್ಲಿ ಹೊಸತು! | Sign up | Login | Font Help
ಸಂಪದ
  • ಲೇಖನಗಳು
  • ಬ್ಲಾಗ್ಸ್
  • ಚರ್ಚೆಯ ವೇದಿಕೆ
  • ಚಿತ್ರಪುಟಗಳು
  • Podcasts
  • ಪುಸ್ತಕಗಳು
  • ಆರ್ಕೈವ್
  • ಸಂಪರ್ಕಿಸಿ
  • Support Sampada
  • ಅಂಚೆ ಪೆಟ್ಟಿಗೆ
  • Font Help

ಹೊಸತು: ಹರಿದಾಸ ಸಂಪದ ಸಂಪುಟ

ಸಂಪದ

ತೆಂಕಣ ಗಾಳಿಯಾಟ !

April 5, 2006 - 8:54am — venkatesh

ತೆಂಕಣ ಗಾಳಿಯಾಟ !

-ಶ್ರೀ. ಪಂಜೆ ಮಂಗೇಶರಾಯರು.
ಗಿಡಗಿಡದಿಂ -ಚೆಲುಗೊಂಚಲು ಮಿಂಚಲು-
ಮಿಡಿಯನು ಹಣ್ಣನು, ಉದುರಿಸಿ ಕೆದರಿಸಿ,
ಎಡದಲಿ ಬಲದಲಿ ಕೆಲದಲಿ ನೆಲದಲಿ,
ಪಡುವಣ ಮೋಡವ ಬೆಟ್ಟಕ್ಕೆ ಗಟ್ಟಕೆ
ಹೊಡೆದಟ್ಟುತ, ಕೋಲ್ ಮಿಂಚನು ಮಿರುಗಿಸಿ,

ಗುಡುಗನು ಗುಡುಗಿಸಿ, ನೆಲವನು ನಡುಗಿಸಿ,
ಸಿಡಿಲನು ತಾಳೆಗೆ ಬಾಳೆಗೆ ಎರಗಿಸಿ,
ಜಡಿಮಳೆ ಸುರಿವೋಲ್, ಬಿರುಮಳೆ ಬರುವೋಲ್,
ಕುಡಿ ನೀರನು ಒಣಗಿದ ನೆಲಕೆರೆವೋಲ್,
ಬಂತೈ ಬೀಸುತ ! ಬೀಸುತ ಬಂತೈ !
ತೆಂಕಣ ಗಾಳಿಯು ಕೊಂಕಣ ಸೀಮೆಗೆ
ಬಂತೈ ! ಬಂತೈ ! ಬಂತೈ !
ಆರು ಪದ್ಯಗಳಲ್ಲಿ ಹಿಡಿದಿಟ್ಟ,'ತೆಂಕಣ ಗಾಳಿಯ ಆರ್ಭಟ' ವನ್ನು ನಾವು ಅನುಭವಿಸುತ್ತಿದ್ದೇವೋ, ಎನ್ನುವಂತೆ 'ಹ್ರುದಯಂಗಮವಾಗಿ' ನಿವೇದಿಸಿದ್ದಾರೆ !

ಇಲ್ಲಿ,ನಾನು ಕೊನೆಯ ಪದ್ಯವನ್ನು ಮಾತ್ರ,ಕೊಟ್ಟಿದ್ದೇನೆ.
ವೆಂ.

  • ಕಾವ್ಯ ಮತ್ತು ಕವನ
~.~
  • Login or register to post comments
  • 626 hits
  • ಈ ಪುಟವನ್ನು ಇ-ಮೇಯ್ಲ್ ಮಾಡಿ
  • Delicious
  • Google
  • Yahoo

ಪ್ರತಿಕ್ರಿಯೆಗಳು

ಕಾಮೆಂಟ್ ನೋಟ ಆಯ್ಕೆಗಳು

Select your preferred way to display the comments and click "Save settings" to activate your changes.
June 30, 2006 - 9:19pm — gvmt

ಇಡಿಯ ಕವನ ಕೊಡಲಾದೀತೆ?

gvmt's picture

ಇದನ್ನು ಬಹಳ ದಿನಗಳಿಂದ ಹುಡುಕುತ್ತಿದ್ದೆ, ಕೊನೆಯ ಪದ್ಯ ಕೊಟ್ಟು ಉಪಕರಿಸಿದ್ದೀರಿ; ಉಳಿದವನ್ನೂ ಸೇರಿಸಿದರೆ ಆರ್ಕೈವಿನಲ್ಲಿ ಶಾಶ್ವತವಾಗಿ ಎಲ್ಲರಿಗೂ ಕೈಗೆಟಕುವಂತೆ ಇರುತ್ತೆ.

ವೆಂ.

  • Login or register to post comments
  • link
  • ಈ ಪುಟವನ್ನು ಇ-ಮೇಯ್ಲ್ ಮಾಡಿ
July 1, 2006 - 2:39pm — venkatesh

ತೆಂಕಣ ಗಾಳಿಯಾಟ- ಪಂಜೆ ಮಂಗೇಶರಾಯರು.

venkatesh's picture

ಜೀ.ವಿ. ಎಮ್ .ಟಿ ಯವರಿಗೆ,

ನಮಸ್ಕಾರ.

ಪ್ರಾರಂಭದಿಂದ :

ಬರಲಿದೆ ! ಅಹಹಾ ! ದೂರದಿ ಬರಲಿದೆ-
ಬುಸುಬುಸುಗುಟ್ಟುವ ಪಾತಾಳದ ಹಾವೋ ?
ಹಸಿವಿನ ಭೂತವು ಕೊಯುವ ಕೂವೋ ?
ಹೊಸತಿದು ಕಾಲನ ಕೋಣನ- ಓವೋ !
ಉಸಿರಿನ ಸುಯ್ಯೋ ? - ಸೂಸೂ ಕರಿಸುತ,
ಬರುವುದು ಬರಬರ ಭರದಲಿ ಬರುವುದು -

ಬೊಬ್ಬೆಯ ಹಬ್ಬಿಸಿ, ಒಂದೇ ಬಾರಿಗೆ
ಉಬ್ಬರ ಎಬ್ಬಿಸಿ ಕಡಲಿನ ನೀರಿಗೆ,
ಬೊಬ್ಬುಳಿ ತೆರೆಯನು ದಡಕ್ಕೆ ಹೊಮ್ಮಿಸಿ,
ಅಬ್ಬರದಲಿ ಭೋರ್ ಭೋರೆನೆ ಗುಮ್ಮಿಸಿ,
ಬರುತದೆ ! ಮೈತೋರದೆ ಬರುತದೆ ಅದೆ-

ನಡು ಮುರಿಯುತ ನಗ ನಾವೆಗೆ, ಕೂವೆಗೆ
ಉಡಿಸಿದ ಹಾಯಿಯ ಹರಿಯುತ ಬಿರಿಯುತ,
ಹಡಗನು ಕೀಲಿಸಿ, ತುಮುರನು ತೇಲಿಸಿ,
ದಡದಲಿ ಝಾಡಿಸಿ, ದೋಣಿಯನಾಡಿಸಿ,
ಇದೆ! ಇದೆ! ಬರುತಿದೆ! ಇದೆ! ಇದೆ! ಬರುತಿದೆ-

ಹಕ್ಕಿಯ ಕಣ್ಣಿಗೆ ಧೂಳಿನ ಕಾಡಿಗೆ
ಇಕ್ಕುತ, ಹೊಲದೆತ್ತಿಗೆ ದನ ಕಾಡಿಗೆ
ಫಕ್ಕನೆ ಹಟ್ಟಿಗೆಅಟ್ಟಿಸಿ, ಕಾಡಿಗೆ
ಸಿಕ್ಕಿದ ಕಿಚ್ಚನು ಊದಲು ಹಾರುತ,
ಬರುತಿದೆ! ಇದೆ! ಇದೆ! ಇದೆ! ಇದೆ! ಬರುತಿದೆ-

ಸಡಿಲಿಸಿ ಮಡದಿಯರುಡಿಯನು ಮುಡಿಯನು,
ಬಡ ಮುದುಕರ ಕೊಡೆಗರಿ ಹರಿದಾಡಿಸಿ,
ಹುಡುಗರ ತಲೆ ತಲೆ ಟೊಪ್ಪಿಯ ಆಟವ
ದಡಬಡನಾಡಿಸಿ, ಮನೆ ಮನೆ ತೋಟವ
ಆಡಿಮೇಲಾಗಿಸಿ, ತೆಂಗನು ಲಾಗಿಸಿ,
ಅಡಕೆಯ ಬಾಗಿಸಿ ಪನೆ ಇಬ್ಬಾಗಿಸಿ,
ಬುಡದೂಟಾಡಿಸಿ, ತಲೆ ತಾಟಾಡಿಸಿ ,
ಗುಡಿಸಲ ಮಾಡನು ಹುಲು ಹುಲು ಮಾಡಿಸಿ,
ಬಂತೈ! ಬಂತೈ! ಇದೆ! ಇದೆ! ಬಂತೈ-

ಗಿಡಗಿಡದಿಂ......
ಬಂತೈ ಬಂತೈ.....

ಇದನ್ನು ನನ್ನ ಮೇಲಿನ ಪದ್ಯದ ಜೊತೆಗೆ ಸೇರಿಸಿಕೊಳ್ಳಬಹುದು !

  • Login or register to post comments
  • link
  • ಈ ಪುಟವನ್ನು ಇ-ಮೇಯ್ಲ್ ಮಾಡಿ
July 1, 2006 - 11:11pm — gvmt

ಧನ್ಯೋಸ್ಮಿ

gvmt's picture

ತುಂಬಾ ಥ್ಯಾಂಕ್ಸು

ವೆಂ.

  • Login or register to post comments
  • link
  • ಈ ಪುಟವನ್ನು ಇ-ಮೇಯ್ಲ್ ಮಾಡಿ

ಮೇಲಿನ ಪುಟವನ್ನು ಹೋಲುವ ಪುಟಗಳು - 'ಸಂಪದ' ಆರ್ಕೈವಿನಿಂದ

  • ದ್ರಾವಿಡ ವಿಜಯ :)
  • ಕನ್ನಡಕ್ಕೆ ದಿಕ್ಕಿಲ್ಲವೆ?!!
  • ’ದ್ರಾವಿಡ’ ಶಬ್ದದ ಬದಲು ’ತೆನ್ನುಡಿ’ ಎನ್ನುವ ಶಬ್ದ
  • ಪದಗಳು ......ಮರೆಯಾಗುವ ಮುನ್ನ!
  • ಚಾಗದ ಭೋಗದ....
Syndicate content

ಲೇಖಕರು

venkatesh's picture
ಸದಸ್ಯರ ಪೂರ್ಣ ಪ್ರೊಫೈಲ್ ವೀಕ್ಷಿಸಿ

ವಾಟರ್ ಪೋರ್ಟಲ್: ದಿನದ ಚಿತ್ರ

ವಿದ್ಯುತ್ ಉಚಿತ, ಆದರೆ ನೀರಿಲ್ಲ!

(ಚಿತ್ರ: ಹರಿ ಪ್ರಸಾದ್ ನಾಡಿಗ್.)

ವಾರದ ಲೇಖನ
ವಿದ್ಯುತ್ ಉಚಿತ... ಷಾಕ್ ಖಚಿತ...!

ವಾರದ ವೀಡಿಯೋ
ಬಾನಿಗೊಂದು ಆಲಿಕೆ (ಮಳೆನೀರು ಸಂಗ್ರಹ)

ವಿಹರಿಸಿ

  • ಸಂಪದದಲ್ಲಿ ಬರೆಯುವ ಮುನ್ನ
  • ಹೊಸ ಬರಹ/ಚಿತ್ರ ಸೇರಿಸಿ
  • 'ಸಂಪದ' ಕುರಿತು ನಿಮ್ಮ ಸಲಹೆ/ಅಭಿಪ್ರಾಯಗಳನ್ನು ಕಳುಹಿಸಿ
  • Mailing Lists
  • ಚಟುವಟಿಕೆ
  • ಕನ್ನಡ ಬಟನ್ನುಗಳು
  • ಕನ್ವರ್ಟರ್

ಹೊಸ ಲೇಖನಗಳು

  • ’ಸ್ಪೇಸ್ ಮೌಂಟೆನ್”, ’ಡಿಸ್ನಿ ಲ್ಯಾಂಡ್” ನ ಮತ್ತೊಂದು ರೋಮಾಂಚಕ ತಾಣ ; ’ರೋಲರ್ ಕೋಸ್ಟರ್,’ ನಲ್ಲಿ ರಮಿಸುವುದೇ ಇಲ್ಲಿನ ವಿಶೇಷತೆ !
  • ಪರಿಧಿಯಿಂದ ಹೊರಗೆ ಹೋದ ವ್ಯಾಸ
  • ನೂರು ವರ್ಷ ಕವನಗಳನ್ನು ಬ್ಯಾನ್ ಮಾಡ
  • ಬನ್ನಿ..ಇಂದು ಕೆಲಗೇರಿ ಕೆರೆಯ ಶ್ರಾದ್ಧ, ಶ್ರದ್ಧೆಯಿಂದ ಮಾಡೋಣ!
  • ’ಎಂ.ಪಿ.ಶಂಕರ್’, ಒಬ್ಬ ಅದ್ವಿತೀಯ ಕಲಾಕಾರ ; ಕನ್ನಡ ಚಿತ್ರರಂಗದ, ನಿರ್ಮಾಪಕ, ನಿರ್ದೇಶಕ, ವಿತರಕ, ಹಾಗೂ ಅಭಿನಯಕಾರ, ಶಿವೈಕ್ಯರಾದರು !
  • ಚಾ(ವ)ಡಿ ಪಟ್ಟಾಂಗ
  • ‘ತಂಪು’ಪಾನೀಯ ಕಂಪನಿಯ ಒಡಲು ‘ಉರಿಸು’ವ ಬಗೆ!

ಇತ್ತೀಚಿನ ಪ್ರತಿಕ್ರಿಯೆಗಳು

  • savithru
    ಉ: ಶರಣರ ಬದುಕನ್ನು ಮರಣದಲ್ಲಿ ನೋಡು
    July 25, 2008 - 10:25am
  • kannadakanda
    ಉ: 'ಕವಿರಾಜಮಾರ್ಗ'ದಿಂದ ನಾವು ಕಲಿಯಬೇಕಾದುದೇನು?
    July 25, 2008 - 9:48am
  • kannadakanda
    ಉ: ಮುಡುಕುತೊರೆ - ಒಂದು ಬರಹ
    July 25, 2008 - 9:41am
  • kannadakanda
    ಉ: Re: ಕರಾವಳಿ-ಹೞಗನ್ನಡ, ಬಡಗಣ-ನಡುಗನ್ನಡ, ಮೈಸೂರು-ಹೊಸಗನ್ನಡ
    July 25, 2008 - 9:33am
  • kannadakanda
    ಉ: ಕರಾವಳಿ-ಹೞಗನ್ನಡ, ಬಡಗಣ-ನಡುಗನ್ನಡ, ಮೈಸೂರು-ಹೊಸಗನ್ನಡ
    July 25, 2008 - 9:30am
  • kannadakanda
    ಉ: ಕನ್ನಡದಲ್ಲಿ 'ಶಾಲೆ' ಗೆ ಏನು ಹೇಳ್ತಾರೆ?
    July 25, 2008 - 9:18am
  • tarlesubba
    ಉ: ಕರಾವಳಿ-ಹೞಗನ್ನಡ, ಬಡಗಣ-ನಡುಗನ್ನಡ, ಮೈಸೂರು-ಹೊಸಗನ್ನಡ
    July 25, 2008 - 9:17am
  • srinivasps
    ಉ: ವಿಶ್ವಾಸ ಮತ ಮತ್ತು ವಿಶ್ವಾಸಘಾತ
    July 25, 2008 - 9:12am
  • tarlesubba
    ಉ: ಕನ್ನಡದಲ್ಲಿ 'ಶಾಲೆ' ಗೆ ಏನು ಹೇಳ್ತಾರೆ?
    July 25, 2008 - 9:11am
  • srinivasps
    ಉ: ವಿಶ್ವಾಸ ಮತ ಮತ್ತು ವಿಶ್ವಾಸಘಾತ
    July 25, 2008 - 9:10am
ಇನ್ನಷ್ಟು
ಈಗಿನಂತೆ 10 ಸದಸ್ಯರು ಮತ್ತು 43 ಅತಿಥಿಗಳು ಆನ್ಲೈನ್ ಇರುವರು.


ಎಲ್ಲಿ ಮಂಥನ ನಡೆಯುವುದೋ ಅಲ್ಲಿ ಉಚ್ಚ ಮಟ್ಟದ ಸತ್ಯ ಕೈಗೂಡದಿದ್ದರೂ ಕೆಳಮಟ್ಟದ ಸತ್ಯ ಕೈಗೆ ಹತ್ತುವುದೇ ಹೊರತು ಅಸತ್ಯ ಯಾವಾಗಲೂ ಕೈಗೆ ಬರದು.

— ವಿನೋಬಾ ಭಾವೆ

ಮತ್ತಷ್ಟು: ಆರೋಗ್ಯ ಸಂಪದ | ಕೃಷಿ ಸಂಪದ | ನುಡಿಮುತ್ತುಗಳು

ಯೋಜನೆಗಳು: Kannada Learning Center | ಗ್ನು/ಲಿನಕ್ಸ್ ನಲ್ಲಿ ಕನ್ನಡ ತರಲು ನಡೆದಿರುವ ಕೆಲವು ಯೋಜನೆಗಳು | ಡಾಕ್ಯುಮೆಂಟೇಶನ್ Wiki | ಸಂಪದ ಅಂಚೆಪೆಟ್ಟಿಗೆಗಳು (Sampada Mailing Lists)

ಸ್ವರ್ಣ ಸಂಪದ ಸಂಪದ ಪಾಡ್ಕ್ಯಾಸ್ಟ್ (ಶ್ರಾವ್ಯ ಸಂದರ್ಶನಗಳು) | "ದಿ ಬೆಸ್ಟ್ ಆಫ್ ಸಂಪದ" | ಪ್ಲಾನೆಟ್ ಕನ್ನಡ

ಡೌನ್ಲೋಡ್ ಮಾಡಿಕೊಳ್ಳಿ:‌ ಬರಹ IME | ಫೈರ್ ಫಾಕ್ಸ್ | ಒಪೇರಾ

ಕೆಲವು ಹಕ್ಕುಗಳನ್ನು ಕಾಯ್ದಿರಿಸಲಾಗಿದೆ. ಸಂಪದ ಸಮುದಾಯ ಸಂಪದ ಫೌಂಡೇಶನ್ನಿನ ಒಂದು ಯೋಜನೆ.
Some rights reserved Sampada Initiative by Sampada Foundation, 2005 - 2008.
Terms of Use | Contact | About Sampada | Sampada in News/Media

The views expressed here are of the respective author(s) and Sampada administration does not necessarily subscribe to them.
RSS: All posts | Comments
Blogs | Podcasts

separator