ಸಂಪದದಲ್ಲಿ ಹೊಸತು! | Sign up | Login | Font Help
ಸಂಪದ
  • ಲೇಖನಗಳು
  • ಬ್ಲಾಗ್ಸ್
  • ಚರ್ಚೆಯ ವೇದಿಕೆ
  • ಚಿತ್ರಪುಟಗಳು
  • Podcasts
  • ಪುಸ್ತಕಗಳು
  • ಆರ್ಕೈವ್
  • ಸಂಪರ್ಕಿಸಿ
  • Support Sampada
  • ಅಂಚೆ ಪೆಟ್ಟಿಗೆ
  • Font Help

ಹೊಸತು: ಹರಿದಾಸ ಸಂಪದ ಸಂಪುಟ

ಸಂಪದ

ನವರಸದ ನಗೆ - ಬೀಭತ್ಸ, ರೌದ್ರ

September 20, 2006 - 11:52am — benaka

ನವರಸದ ನಗೆ - ಬೀಭತ್ಸ, ರೌದ್ರ

ಬೀಭತ್ಸ - ೧
-----------
ಬಚ್ಚಲ ರೊಚ್ಚದು ಹನಿದು ಸೋರಿ
ಮೈಯೆಲ್ಲ ಜಿನುಗಿ ರಕ್ತವೊಸರಿ
ಕೀವು ಬಳಿದಂತೆ ಅಂಟು-ಜಿಗುಟು
ಬೆವೆತ ಮೈ ಬೆರೆತ ಕಮಟು
ಗಬ್ಬು ವಾಸನೆ, ಮೈಯೆಲ್ಲ ಒದ್ದೆ
ಬರುತಲಿದೆ ಸಹಿಸಲಾಗದ ನಿದ್ದೆ
ನಾನಲ್ಲ ಯೋಧ! ಇದಾವ ರಣರಂಗ!
ಅರೆರೆ! ಇದು ನನ್ನದೇ ಪಲ್ಲಂಗ!
ಹಾಸಿಗೆಯೆಲ್ಲ ಹೇಸಿಗೆ ದುರ್ಗಂಧ!
ಗಬ್ಬೆಬ್ಬಿಸಿ ನಗುತಲಿದ್ದವನು ಕಂದ!

ರೌದ್ರ - ೧
----------
ಬಗಿವೆ ಹೂತು ಮಣ್ಣೆರಚಿ ಮತ್ತೆ
ನೀರೆರಚಿ ಪಕ್ಕೆಗಳ ಬಡಿದು ಕೆತ್ತಿ
ಕಾದು ಕಾರ್ಮುಗಿಲ ಕರೆಮಳೆಗೆ
ಕೆಸರೆತ್ತಿ ಎರಚಿ ಸಗಣಿ ಕರಿಯಿಳೆಗೆ
ಕುಡಿಯ ಕಾಯ್ವೆನರಿಯ ಬಡಿದು
ಸುಳಿಯ ಕಂಬವ ಸೀಳಿ ಕಡಿದು
ನರಹರಿಯಂತೆ ಹರಿಹರಿದು ನರವ
ಮಾಲೆ ಕಟ್ಟುವೆ ಹಿಂಡಿ ರಸವ
ಕಡಿದು ತೋಳ್ಗಳ ರಸದೂಟ ಬಡಿಸಿ
ಹಣ್ಣುಗಾಯಿಯ ಮಾಡಿ ಚಪ್ಪರಿಸಿ
ಚಪ್ಪರಕಿಕ್ಕುವೆನು ಎಳೆಗೊನೆಯ
ಬಿಡುವೆನೇನಿನ್ನು ಬಾಳೆಯ ಗೊನೆಯ!

ನಿಮ್ಮವ
ಬೆನಕ

  • ಕಾವ್ಯ ಮತ್ತು ಕವನ
~.~
  • Login or register to post comments
  • 561 hits
  • ಈ ಪುಟವನ್ನು ಇ-ಮೇಯ್ಲ್ ಮಾಡಿ
  • Delicious
  • Google
  • Yahoo

ಮೇಲಿನ ಪುಟವನ್ನು ಹೋಲುವ ಪುಟಗಳು - 'ಸಂಪದ' ಆರ್ಕೈವಿನಿಂದ

  • ನವರಸದ ನಗೆ - ಶೃಂಗಾರ
  • ಮುದ್ದೆ-ನಿದ್ದೆ
  • ನವರಸದ ನಗೆ - ಅದ್ಭುತ
  • ನವರಸದ ನಗೆ: ಕರುಣ
  • ನನ್ನ ಜಪಾನ್ ಪ್ರವಾಸ
Syndicate content

ಲೇಖಕರು

benaka's picture

ಪರಿಚಯ

ಹೊಯ್ಸಳರ ವೈಭವದಿ ಮೆರೆದು
ಪರಕೀಯರ ದಾಳಿಗೆ ಕೈಮುರಿದು
ದಂತವ ಎಡದ ಕೈಯಲಿ ಹಿಡಿದು
ನವಭಾರತವ ಕನ್ನಡದಿ ಬರೆಯೆ ಕಾದಿಹ ಬೆನಕ ಮೈಮುರಿದು

ಸದಸ್ಯರ ಪೂರ್ಣ ಪ್ರೊಫೈಲ್ ವೀಕ್ಷಿಸಿ

ವಾಟರ್ ಪೋರ್ಟಲ್: ದಿನದ ಚಿತ್ರ

ರಾಜಸ್ಥಾನದಲ್ಲಿ ಕೆರೆಯೊಂದರ ನವನಿರ್ಮಾಣ

(ಫೋಟೋ : Farhad Contractor)

ವಾರದ ಲೇಖನ
ನಿಟ್ಟೆಯಲ್ಲಿ ನೀರಿಂಗಿಸಿ ನೀರಿನ ಬರಕ್ಕೆ ವಿದಾಯ

ವಾರದ ವೀಡಿಯೋ
ಬಾನಿಗೊಂದು ಆಲಿಕೆ (ಮಳೆನೀರು ಸಂಗ್ರಹ)

ವಿಹರಿಸಿ

  • ಹೊಸ ಬರಹ/ಚಿತ್ರ ಸೇರಿಸಿ
  • 'ಸಂಪದ' ಕುರಿತು ನಿಮ್ಮ ಸಲಹೆ/ಅಭಿಪ್ರಾಯಗಳನ್ನು ಕಳುಹಿಸಿ
  • Mailing Lists
  • ಚಟುವಟಿಕೆ
  • ಕನ್ನಡ ಬಟನ್ನುಗಳು
  • ಕನ್ವರ್ಟರ್

ಹೊಸ ಲೇಖನಗಳು

  • ಟೆನಿಸ್ ಲೋಕದ ರಾಜನಿಗೆ ಕಿರೀಟದಾರಣೆ
  • ಶಾಸಕರ ರಾಜೀನಾಮೆ ರಾಜಕೀಯ
  • ಧಾರವಾಡಕ ಕಾಡುಕೋಣ ಓಡಿಬಂದಿತ್ತ..!
  • ಗಿರಿಜನರ ನಾಡು ಕೋರಾಪುಟ್
  • ಹೀಗೇ ಎಂದು ಬರಿ
  • ನಾವೂ ಓಪನ್ ಆಫೀಸ್ ಉಪಯೋಗಿಸೋಣ. ನೀವೇನಂತೀರಾ?
  • ಇಹದ ಬದುಕಿನ ಪಯಣ ಮುಗಿಸಿದ ಜಿಟಿಎನ್

ಇತ್ತೀಚಿನ ಪ್ರತಿಕ್ರಿಯೆಗಳು

  • aniljoshi
    ಉ: ಗಂಡ-ಹೆಂಡಿರು ಮತ್ತು ಪುರಂದರ ದಾಸರು
    July 7, 2008 - 2:33am
  • aniljoshi
    ಉ: ಜಗನ್ನಾಥನ ತಬ್ಬಲಿ ಮಕ್ಕಳು
    July 7, 2008 - 2:22am
  • aniljoshi
    ಉ: ವೈದ್ಯನಾರಾಯಣಕಥೆ
    July 7, 2008 - 12:50am
  • ರೇಖಾ
    ಉ: ರಾಗಿ ಮುದ್ದೆ ಮಿಶಿನ್! (Finger Millet machine)
    July 6, 2008 - 11:43pm
  • ರೇಖಾ
    ಉ: ಅಡುಗೆ, ಕುಟುಂಬ ಲೇಖ"ಕಿ"ಯರಿಗೆ ತೆಳು ವಿಷಯಗಳಾದರೆ, ರಾಜಕೀಯ, ತಂತ್ರಜ್ಞಾನ ಲೇಖ"ಕ"ರಿಗೆ ತೆಳು ವಿಷಯಗಳೇ?
    July 6, 2008 - 11:26pm
  • ರೇಖಾ
    ಉ: ಲವ್ ಅಟ್ ಫಸ್ಟ್ ಸೈಟ್ ?
    July 6, 2008 - 11:21pm
  • Sunil Jayaprakash
    ಉ: ವೈದ್ಯನಾರಾಯಣಕಥೆ
    July 6, 2008 - 11:16pm
  • Sunil Jayaprakash
    ಉ: ವೈದ್ಯನಾರಾಯಣಕಥೆ
    July 6, 2008 - 11:13pm
  • ರೇಖಾ
    ಉ: ಬ್ರಹ್ಮ ಕಮಲ.
    July 6, 2008 - 11:12pm
  • ರೇಖಾ
    ಉ: ಕಣ್ಣು ನೋಡೇ ಗೌರಿ
    July 6, 2008 - 11:07pm
ಇನ್ನಷ್ಟು
ಈಗಿನಂತೆ 2 ಸದಸ್ಯರು ಮತ್ತು 10 ಅತಿಥಿಗಳು ಆನ್ಲೈನ್ ಇರುವರು.


ನುಡಿಯೊಳು ಹೊಳೆವುದು ನಾಡಿನ ನಡವಳಿ.
ನುಡಿಯೊಳು ಕ೦ಪಿಡುವುದು ಬದುಕು
ನುಡಿಯಿರದವನಿಗೆ ಇಲ್ಲವು ನಾಡೂ
ನುಡಿಯಲಿ ಸಲ್ಲನದಾವುದಕೂ.

— ಪು ತಿ ನ

ಮತ್ತಷ್ಟು: ಆರೋಗ್ಯ ಸಂಪದ | ಕೃಷಿ ಸಂಪದ | ನುಡಿಮುತ್ತುಗಳು

ಯೋಜನೆಗಳು: Kannada Learning Center | ಗ್ನು/ಲಿನಕ್ಸ್ ನಲ್ಲಿ ಕನ್ನಡ ತರಲು ನಡೆದಿರುವ ಕೆಲವು ಯೋಜನೆಗಳು | ಡಾಕ್ಯುಮೆಂಟೇಶನ್ Wiki | ಸಂಪದ ಅಂಚೆಪೆಟ್ಟಿಗೆಗಳು (Sampada Mailing Lists)

ಸ್ವರ್ಣ ಸಂಪದ ಸಂಪದ ಪಾಡ್ಕ್ಯಾಸ್ಟ್ (ಶ್ರಾವ್ಯ ಸಂದರ್ಶನಗಳು) | "ದಿ ಬೆಸ್ಟ್ ಆಫ್ ಸಂಪದ" | ಪ್ಲಾನೆಟ್ ಕನ್ನಡ

ಡೌನ್ಲೋಡ್ ಮಾಡಿಕೊಳ್ಳಿ:‌ ಬರಹ IME | ಫೈರ್ ಫಾಕ್ಸ್ | ಒಪೇರಾ

ಕೆಲವು ಹಕ್ಕುಗಳನ್ನು ಕಾಯ್ದಿರಿಸಲಾಗಿದೆ. ಸಂಪದ ಸಮುದಾಯ ಸಂಪದ ಫೌಂಡೇಶನ್ನಿನ ಒಂದು ಯೋಜನೆ.
Some rights reserved Sampada Initiative by Sampada Foundation, 2005 - 2008.
Terms of Use | Contact | About Sampada | Sampada in News/Media

The views expressed here are of the respective author(s) and Sampada administration does not necessarily subscribe to them.
RSS: All posts | Comments
Blogs | Podcasts

separator