ಸಂಪದದಲ್ಲಿ ಹೊಸತು! | Sign up | Login | Font Help
ಸಂಪದ
  • ಲೇಖನಗಳು
  • ಬ್ಲಾಗ್ಸ್
  • ಚರ್ಚೆಯ ವೇದಿಕೆ
  • ಚಿತ್ರಪುಟಗಳು
  • Podcasts
  • ಪುಸ್ತಕಗಳು
  • ಆರ್ಕೈವ್
  • ಸಂಪರ್ಕಿಸಿ
  • Support Sampada
  • ಅಂಚೆ ಪೆಟ್ಟಿಗೆ
  • Font Help

ಹೊಸತು: ಹರಿದಾಸ ಸಂಪದ ಸಂಪುಟ

ಸಂಪದ

ಭರ್ಚಿ ನಾಲಾ ಜಲಪಾತಕ್ಕೆ ಚಾರಣ

October 17, 2006 - 5:33pm — rajeshnaik111

ಧಾರವಾಡದಿಂದ ಗಂಗಾಧರ್ ಕಲ್ಲೂರ್ ಫೋನ್ ಮಾಡಿ 'ಸರ, ಹೊಸ ಫಾಲ್ಸ್ ಕಂಡ್-ಹುಡ್ಕೀನಿ, ಈ ಸಂಡೆ ಹೊಂಟೀವಿ, ಬರ್ತಿರಿ?' ಎಂದಾಗ, 'ನಡೀರಿ ಮತ್ತೆ' ಎಂದೆ. ಕಲ್ಲೂರ್-ರೊಂದಿಗೆ ದೂರವಾಣಿಯಲ್ಲಿ ೪ ತಿಂಗಳಿಂದ ಮಾತುಕತೆ ನಡೆದಿದ್ದರೂ ಭೇಟಿಯಾಗಿರಲಿಲ್ಲ. ಈ ಕಲ್ಲೂರ್, ಕೊರಳಿಗೊಂದು 'ಕಂಪಾಸ್' ಮತ್ತು ಬೆನ್ನಿಗೊಂದು 'ಬ್ಯಾಕ್-ಪ್ಯಾಕ್' ಏರಿಸಿಕೊಂಡು ಹೊರಟರೆಂದರೆ, ನಡೆದದ್ದೆ ದಾರಿ. ದಾಂಡೇಲಿ ಸಮೀಪ, ಬೆಳಗಾವಿ ಜಿಲ್ಲೆಯ ಗಡಿಗೆ ತಾಗಿಕೊಂಡೇ ಹರಿಯುವ ಹಳ್ಳ 'ಭರ್ಚಿ ನಾಲಾ'. ಈ ಹಳ್ಳಗುಂಟ ಬೇಸಗೆಯಲ್ಲಿ ಚಾರಣ ಮಾಡಿದ್ದ ಕಲ್ಲೂರ್, ಈ ಜಲಪಾತವನ್ನು ಕಂಡುಹುಡುಕಿದ್ದರು.

ಕಳೆದ ಆದಿತ್ಯವಾರ, ಅಕ್ಟೋಬರ್ ೧೫ರಂದು ಬೆಳಗ್ಗೆ ೯ ಜನರ ನಮ್ಮ ತಂಡ (ವಿವೇಕ್ ಯೇರಿ, ಡಾಕ್ಟರ್ ಗುತ್ತಲ್, ಕಲ್ಲೂರ್, ಡಾಕ್ಟರ್ ಕುಲಕರ್ಣಿ, ಕುಮಾರ್, ವಿನಯ್, ನಾನು ಮತ್ತು ಮಕ್ಕಳಾದ ಓಂಕಾರ್ ಹಾಗೂ ಮಿಂಚು) ಮುಂಜಾನೆ ೬ಕ್ಕೆ ಧಾರವಾಡದಿಂದ ಹೊರಟು ಸುಮಾರು ೯ಕ್ಕೆ ಲೊಂಡಾ ಸಮೀಪದ ಕುಂಭಾರ್ಡಾದಿಂದ ೩ ಕಿ.ಮಿ. ದೂರ ಒಂದು ಬೆಟ್ಟದ ಮೇಲಿರುವ 'ಹಂಡಿ ಭಡಂಗನಾಥ' ಮಂದಿರಕ್ಕೆ ಬಂದೆವು. ಇಲ್ಲಿಂದ ೯.೪೦ಕ್ಕೆ ಚಾರಣ ಆರಂಭ. ಬೆಳಗಾವಿ ಜಿಲ್ಲೆಯಿಂದ ಆರಂಭವಾಗುವ ಚಾರಣ ೩ ತಾಸುಗಳ ಕಠಿಣ ಚಾರಣದ ಬಳಿಕ ಉತ್ತರ ಕನ್ನಡ ಜಿಲ್ಲೆಯಲ್ಲಿ ಕೊನೆಗೊಳ್ಳುವುದು. ಸುಮಾರು ೪೦ ನಿಮಿಷಗಳ ಚಾರಣದ ಬಳಿಕ ಎದುರಾಗುವುದೊಂದು ಇಳಿಜಾರು. ಸುಮಾರು ೧೦-೧೨ ಅಡಿ ಎತ್ತರಕ್ಕೆ ಬೆಳೆದಿರುವ ಸಸ್ಯರಾಶಿಯ ನಡುವೆ, ಎದ್ದು ಬಿದ್ದು, ದಾರಿ ಮಾಡಿಕೊಂಡು ಅರ್ಧ ಗಂಟೆಯ ಕಾಲ ಕಡಿದಾದ ಇಳಿಜಾರಿನ ಚಾರಣದ ವಿಶಿಷ್ಟ ಅನುಭವ. ನಂತರ ಕಾಡಿನ ದಾರಿಯಲ್ಲಿ ಮತ್ತೆ ಚಾರಣ. ಕಲ್ಲೂರ್ ಮುಂದೆ, ನಾವು ಅವರ ಹಿಂದೆ. ಕಲ್ಲೂರ್-ರವರ 'ಸೆನ್ಸ್ ಆಫ್ ಫಾರೆಸ್ಟ್' ಅದ್ಭುತ. ಅವರೊಂದಿಗೆ ಮಾತುಕತೆಗಿಳಿದರೆ ತಿಳಿದುಕೊಳ್ಳುವ ವಿಚಾರಗಳು ಹಲವಾರು.

ಜನವರಿಯಲ್ಲಿ ಅಮೇದಿಕಲ್ಲು ಚಾರಣದ ಬಳಿಕ, ಇಷ್ಟು ಕಠಿಣ ಚಾರಣ ಮಾಡಿರಲಿಲ್ಲ. ಕಾಲುಗಳು ಸೋತು ಇನ್ನೇನು ಮುಂದೆ ನಡೆಯಲಾಗದು ಎನ್ನುವಷ್ಟರಲ್ಲಿ ಬಂದೇ ಬಿಟ್ಟಿತು 'ಭರ್ಚಿ ನಾಲಾ ಜಲಪಾತ'. ಸುಮಾರು ೪೫ ಅಡಿಗಳಷ್ಟು ಎತ್ತರವಿದ್ದು, ಎರಡು ಕವಲುಗಳಾಗಿ ಧುಮುಕುವ ಜಲಪಾತದ ಮುಂದೆ ಇರುವ ವಿಶಾಲವಾದ ಜಾಗದಲ್ಲಿ ಮನಸಾರೆ ಜಲಕ್ರೀಡೆಯಾಡಿದರು ಎಲ್ಲರು. ಇದೊಂದು ಫಂಟಾಸ್ಟಿಕ್ ಪ್ಲೇಸ್. ಜನರ, ಸಾಕು ಜಾನುವಾರುಗಳ ಸುಳಿವು, ಕುರುಹು ಇಲ್ಲದ ಎಕ್-ದಂ ಶಾಂತ ಸ್ಥಳ. ಇದು ಭರ್ಚಿ ನಾಲಾ ಜಲಪಾತದ ಎರಡನೇ ಹಂತ. ಮೊದಲನೇ ಹಂತ ಸ್ವಲ್ಪ ಮೇಲ್ಗಡೆ ಇದ್ದು ಸುಮಾರು ೩೦ ಆಡಿ ಎತ್ತರವಿದೆ. ನಂತರದ ಎರಡು ಹಂತಗಳು ಇನ್ನೂ ಸ್ವಲ್ಪ ಮುಂದಿದ್ದು, ಅವು ಕೇವಲ ೧೦-೨೦ ಅಡಿಗಳಷ್ಟು ಎತ್ತರವಿದ್ದಿದ್ದರಿಂದ ನಾವು ಅಲ್ಲಿಗೆ ತೆರಳಲಿಲ್ಲ.

ನಂತರ ಹಿಂತಿರುಗುವಾಗ ನನಗೆ 'ಕ್ರಾಂಪ್ಸ್' ಬಂದು ಬಹಳ ತೊಂದರೆಯಾಯಿತು. ಆದರೂ ಹೇಗಾದರೂ ಮಾಡಿ, ಉಳಿದವರ ಸಹಾಯದಿಂದ, ಅಲ್ಲಲ್ಲಿ ವಿಶ್ರಾಂತಿ ಪಡೆಯುತ್ತಾ, ಕುಮಾರ್ ಆಗಾಗ 'ಇನ್ಸ್ಟಂಟ್ ಎನರ್ಜಿರಿ' ಅನ್ನುತ್ತಾ ನೀಡುತ್ತಿದ್ದ ಬೆಲ್ಲ ತಿನ್ನುತ್ತಾ, ನಿಧಾನವಾಗಿ ಕಾಲೆಳೆದುಕೊಳ್ಳುತ್ತಾ ಮತ್ತೆ 'ಹಂಡಿ ಭಡಂಗನಾಥ' ಮಂದಿರಕ್ಕೆ ಬಂದಾಗ ಸಂಜೆ ೬:೦೦ ಆಗಿತ್ತು. ನನ್ನಿಂದಾಗಿ ಸುಮಾರು ೬೦ ನಿಮಿಷ ವಿಳಂಬವಾಯಿತು. ಯಾವಾಗಲೂ ಬರದ 'ಕ್ರ್ಯಾಂಪ್ಸ್' ಅಂದೇ ಬರಬೇಕಿತ್ತೆ? ಆದರೂ ಎಲ್ಲರೂ ಬಹಳ 'ಸ್ಪೋರ್ಟಿವ್' ಆಗಿ ವರ್ತಿಸಿ ನನಗೆ ಮುಜುಗರ ಉಂಟಾಗದಂತೆ ನೋಡಿಕೊಂಡರು. ಕುಂಭಾರ್ಡಾ ಗ್ರಾಮದಲ್ಲಿ ಸವಿಯಾದ ಚಹಾ ಹಾಗೂ ಮಂಡಕ್ಕಿ ಸವಿದು, ೯:೩೦ಕ್ಕೆ ಲ್ಯಾಂಡೆಡ್ ಇನ್ ಧಾರವಾಡ್.

  • ಪ್ರವಾಸ ಕಥನ
~.~
  • Login or register to post comments
  • 847 hits
  • ಈ ಪುಟವನ್ನು ಇ-ಮೇಯ್ಲ್ ಮಾಡಿ
  • Delicious
  • Google
  • Yahoo

ಮೇಲಿನ ಪುಟವನ್ನು ಹೋಲುವ ಪುಟಗಳು - 'ಸಂಪದ' ಆರ್ಕೈವಿನಿಂದ

  • ಭರ್ಚಿ ನಾಲಾ ಜಲಪಾತಕ್ಕೆ ಚಾರಣ
  • ಭರ್ಚಿ ನಾಲಾ ಜಲಪಾತಕ್ಕೆ ಚಾರಣ
  • ಭರ್ಚಿ ನಾಲಾ ಜಲಪಾತಕ್ಕೆ ಚಾರಣ
  • ಭರ್ಚಿ ನಾಲಾ ಜಲಪಾತಕ್ಕೆ ಚಾರಣ
  • ಭರ್ಚಿ ನಾಲಾ ಜಲಪಾತಕ್ಕೆ ಚಾರಣ
Syndicate content

ಲೇಖಕರು

rajeshnaik111's picture

ಪರಿಚಯ

ಕನ್ನಡಿಗರೆಲ್ಲರಿಗೂ ನಮಸ್ಕಾರ. ನಾನು ರಾಜೇಶ್ ನಾಯ್ಕ. ಉಡುಪಿ ನಿವಾಸಿ. ಮಂಗಳೂರಿನಲ್ಲಿ ಜಾಹೀರಾತು ಸಂಸ್ಥೆಯೊಂದರಲ್ಲಿ ಉದ್ಯೋಗ. ಕನ್ನಡ ನಾಡು ಸುತ್ತುವ ಹಂಬಲ. ಹವ್ಯಾಸಿ ಚಾರಣಿಗ.

ಸದಸ್ಯರ ಪೂರ್ಣ ಪ್ರೊಫೈಲ್ ವೀಕ್ಷಿಸಿ

ವಾಟರ್ ಪೋರ್ಟಲ್: ದಿನದ ಚಿತ್ರ

ವಿದ್ಯುತ್ ಉಚಿತ, ಆದರೆ ನೀರಿಲ್ಲ!

(ಚಿತ್ರ: ಹರಿ ಪ್ರಸಾದ್ ನಾಡಿಗ್.)

ವಾರದ ಲೇಖನ
ವಿದ್ಯುತ್ ಉಚಿತ... ಷಾಕ್ ಖಚಿತ...!

ವಾರದ ವೀಡಿಯೋ
ಬಾನಿಗೊಂದು ಆಲಿಕೆ (ಮಳೆನೀರು ಸಂಗ್ರಹ)

ವಿಹರಿಸಿ

  • ಸಂಪದದಲ್ಲಿ ಬರೆಯುವ ಮುನ್ನ
  • ಹೊಸ ಬರಹ/ಚಿತ್ರ ಸೇರಿಸಿ
  • 'ಸಂಪದ' ಕುರಿತು ನಿಮ್ಮ ಸಲಹೆ/ಅಭಿಪ್ರಾಯಗಳನ್ನು ಕಳುಹಿಸಿ
  • Mailing Lists
  • ಚಟುವಟಿಕೆ
  • ಕನ್ನಡ ಬಟನ್ನುಗಳು
  • ಕನ್ವರ್ಟರ್

ಹೊಸ ಲೇಖನಗಳು

  • ಪರಿಧಿಯಿಂದ ಹೊರಗೆ ಹೋದ ವ್ಯಾಸ
  • ನೂರು ವರ್ಷ ಕವನಗಳನ್ನು ಬ್ಯಾನ್ ಮಾಡ
  • ಬನ್ನಿ..ಇಂದು ಕೆಲಗೇರಿ ಕೆರೆಯ ಶ್ರಾದ್ಧ, ಶ್ರದ್ಧೆಯಿಂದ ಮಾಡೋಣ!
  • ’ಎಂ.ಪಿ.ಶಂಕರ್’, ಒಬ್ಬ ಅದ್ವಿತೀಯ ಕಲಾಕಾರ ; ಕನ್ನಡ ಚಿತ್ರರಂಗದ, ನಿರ್ಮಾಪಕ, ನಿರ್ದೇಶಕ, ವಿತರಕ, ಹಾಗೂ ಅಭಿನಯಕಾರ, ಶಿವೈಕ್ಯರಾದರು !
  • ಚಾ(ವ)ಡಿ ಪಟ್ಟಾಂಗ
  • ‘ತಂಪು’ಪಾನೀಯ ಕಂಪನಿಯ ಒಡಲು ‘ಉರಿಸು’ವ ಬಗೆ!
  • ಕನ್ನಡಿಯೊಳಗಿನ ಗಂಟು

ಇತ್ತೀಚಿನ ಪ್ರತಿಕ್ರಿಯೆಗಳು

  • hpn
    ಉ: ಪರಿಧಿಯಿಂದ ಹೊರಗೆ ಹೋದ ವ್ಯಾಸ
    July 25, 2008 - 1:10am
  • uniquesupri
    ಉ: ಸೇತುವೆ ಇತ್ತಂತೆ ರಾಮನೇ ಒಡದನಂತೆ....!
    July 25, 2008 - 12:27am
  • srinivasps
    ಉ: ಸೇತುವೆ ಇತ್ತಂತೆ ರಾಮನೇ ಒಡದನಂತೆ....!
    July 25, 2008 - 12:23am
  • uniquesupri
    ಉ: ಸೇತುವೆ ಇತ್ತಂತೆ ರಾಮನೇ ಒಡದನಂತೆ....!
    July 25, 2008 - 12:17am
  • srinivasps
    ಉ: ವಿಶ್ವಾಸ ಮತ ಮತ್ತು ವಿಶ್ವಾಸಘಾತ
    July 25, 2008 - 12:10am
  • srinivasps
    ಉ: ಸೇತುವೆ ಇತ್ತಂತೆ ರಾಮನೇ ಒಡದನಂತೆ....!
    July 25, 2008 - 12:08am
  • uniquesupri
    ಉ: ವಿಶ್ವಾಸ ಮತ ಮತ್ತು ವಿಶ್ವಾಸಘಾತ
    July 25, 2008 - 12:06am
  • uniquesupri
    ಉ: ಸೇತುವೆ ಇತ್ತಂತೆ ರಾಮನೇ ಒಡದನಂತೆ....!
    July 25, 2008 - 12:01am
  • srinivasps
    ಉ: ವಿಶ್ವಾಸ ಮತ ಮತ್ತು ವಿಶ್ವಾಸಘಾತ
    July 25, 2008 - 12:00am
  • srinivasps
    ಉ: ಸೇತುವೆ ಇತ್ತಂತೆ ರಾಮನೇ ಒಡದನಂತೆ....!
    July 24, 2008 - 11:57pm
ಇನ್ನಷ್ಟು
ಈಗಿನಂತೆ ೧ ಸದಸ್ಯ/ಸದಸ್ಯೆ ಮತ್ತು 40 ಅತಿಥಿಗಳು ಆನ್ಲೈನ್ ಇರುವರು.


ಪ್ರತ್ಯಕ್ಷವಿಲ್ಲದಾ ಸ್ವಾಮಿಯಂ ನೆನೆನೆನೆದು |
ಸತ್ಯಭಕ್ತಿಯ ಸೇವೆಗೆಯ್ದವಂ ಭರತಂ ||
ನಿತ್ಯಜೀವನದಿ ನೀನಾ ನಯವನನುಸರಿಸೊ |
ಸತ್ವದಾಶೆಯ ನೀಗಿ -- ಮಂಕುತಿಮ್ಮ ||

— ಡಿ ವಿ ಜಿ

ಮತ್ತಷ್ಟು: ಆರೋಗ್ಯ ಸಂಪದ | ಕೃಷಿ ಸಂಪದ | ನುಡಿಮುತ್ತುಗಳು

ಯೋಜನೆಗಳು: Kannada Learning Center | ಗ್ನು/ಲಿನಕ್ಸ್ ನಲ್ಲಿ ಕನ್ನಡ ತರಲು ನಡೆದಿರುವ ಕೆಲವು ಯೋಜನೆಗಳು | ಡಾಕ್ಯುಮೆಂಟೇಶನ್ Wiki | ಸಂಪದ ಅಂಚೆಪೆಟ್ಟಿಗೆಗಳು (Sampada Mailing Lists)

ಸ್ವರ್ಣ ಸಂಪದ ಸಂಪದ ಪಾಡ್ಕ್ಯಾಸ್ಟ್ (ಶ್ರಾವ್ಯ ಸಂದರ್ಶನಗಳು) | "ದಿ ಬೆಸ್ಟ್ ಆಫ್ ಸಂಪದ" | ಪ್ಲಾನೆಟ್ ಕನ್ನಡ

ಡೌನ್ಲೋಡ್ ಮಾಡಿಕೊಳ್ಳಿ:‌ ಬರಹ IME | ಫೈರ್ ಫಾಕ್ಸ್ | ಒಪೇರಾ

ಕೆಲವು ಹಕ್ಕುಗಳನ್ನು ಕಾಯ್ದಿರಿಸಲಾಗಿದೆ. ಸಂಪದ ಸಮುದಾಯ ಸಂಪದ ಫೌಂಡೇಶನ್ನಿನ ಒಂದು ಯೋಜನೆ.
Some rights reserved Sampada Initiative by Sampada Foundation, 2005 - 2008.
Terms of Use | Contact | About Sampada | Sampada in News/Media

The views expressed here are of the respective author(s) and Sampada administration does not necessarily subscribe to them.
RSS: All posts | Comments
Blogs | Podcasts

separator