ಸಂಪದದಲ್ಲಿ ಹೊಸತು! | Sign up | Login | Font Help
ಸಂಪದ
  • ಲೇಖನಗಳು
  • ಬ್ಲಾಗ್ಸ್
  • ಸಂದರ್ಶನ
  • ಚರ್ಚೆ
  • ಚಿತ್ರಪುಟಗಳು
  • ಪುಸ್ತಕಗಳು
  • ಆರ್ಕೈವ್
  • ಸಂಪರ್ಕಿಸಿ
  • ಸಂಪದ ಫೌಂಡೇಶನ್
  • Font Help

'ಸಂಪದ' ಟಿ-ಶರ್ಟ್

ಸಂಪದ

ಹೊಸ ವರ್ಷದ ಶುಭಾಶಯ

December 29, 2006 - 11:32am — hisushrutha

NewYearGreeting2007

"ಏಯ್... ಎರಡ್ಸಾವ್ರದ ಆರು ಹೋಗುತ್ತಿದೆ.. ಟಾಟಾ ಮಾಡು ಬಾರೇ..."
"ಎಲ್ಲೇ?"
"ಅದೇ.... ಅಲ್ಲಿ....!"
"ಓಹ್... ಹೊರಟೇಬಿಡ್ತಾ? ನಿನ್ನೆ ಮೊನ್ನೆ ಬಂದಂಗಿತ್ತಲ್ಲೇ.."
"ಬಂದಿದ್ದೂ ಆಯ್ತು ಹೊರಟಿದ್ದೂ ಆಯ್ತು; ಬೇಗಬೇಗ ಟಾಟಾ ಮಾಡೇ..."

* * *

ಧಾನ್ಯ ದಾಸ್ತಾನಿನ ಗೋಡೌನಿನಲ್ಲಿ ಬಂದಿಯಾಗಿದ್ದ ಹೆಗ್ಗಣವೊಂದು ಗೋಡೆಯಲ್ಲಿ ದೊಡ್ಡದೊಂದು ಕನ್ನ ಕೊರೆಯುತ್ತಿದೆ.. ಬೇಗ ಬೇಗ ಕೊರೆ ದೊಡ್ಡಿಲಿಯೇ: ಹೊಸ ವರ್ಷ ಬರುತ್ತಿದೆ...

ಎರಡು ಬಾರಿ ಕೆಮ್ಮಿ, ಗಂಟಲನ್ನು ಶ್ರುತಿಗೊಳಿಸಿ, ಹಾಡಲು ಕುಳಿತಿದ್ದಾನೆ ಗಾಯಕ.. ಪಲ್ಲವಿ ಮುಗಿದು, ಅನುಪಲ್ಲವಿ ಮುಗಿದು, ಇದು ಎಷ್ಟನೇ ಚರಣ..? ಬೇಗ ಬೇಗ ಹಾಡು ಗೆಳೆಯಾ: ಹೊಸ ವರ್ಷ ಬರುತ್ತಿದೆ...

ಮಗುವನ್ನು ಕಾಲ ಮೇಲೆ ಹಾಕಿಕೊಂಡು, 'ಉಶ್‍ಶ್‍ಶ್‍ಶ್ಶ್...' ಎನ್ನುತ್ತಾ ಕುಳಿತಿದ್ದಾಳೆ ತಾಯಿ; ಉಚ್ಚೆಯನ್ನೇ ಮಾಡುತ್ತಿಲ್ಲ ಪಾಪು! ಬೇಗ ಬೇಗ ಉಚ್ಚೆ ಮಾಡು ಮಗೂ: ಹೊಸ ವರ್ಷ ಬರುತ್ತಿದೆ...

ದನದ ಕೆಚ್ಚಲಿಗೆ ನೀರು ಸೋಕಿ, ಮೊಲೆಗಳನ್ನು ತೊಳೆದು, ದೊಡ್ಡ ಕೌಳಿಗೆಯನ್ನಿಟ್ಟುಕೊಂಡು ಕುಳಿತಿದ್ದಾನೆ ಅಪ್ಪ.. ಸೊರೆಯುತ್ತಲೇ ಇಲ್ಲ ದನ! ಬೇಗ ಬೇಗ ಹಾಲು ಕೊಡು ದನವೇ: ಹೊಸ ವರ್ಷ ಬರುತ್ತಿದೆ...

ನ್ಯಾಲೆಯ ಮೇಲೆ ಬಟ್ಟೆಗಳನ್ನು ನೇತುಹಾಕಿ, ಒಣಗುವುದನ್ನೇ ಕಾಯುತ್ತಾ ಕುಳಿತಿದ್ದಾನೆ ರೂಂಮೇಟ್.. ಅಂಡರ್ ವೇರ್ ಒಣಗುವುದಂತೂ ಯಾವಾಗಲೂ ಲೇಟ್! ಬೇಗ ಒಣಗು ಚಡ್ಡಿಯೇ: ಹೊಸ ವರ್ಷ ಬರುತ್ತಿದೆ...

ಶಾಪಿಂಗಿಗೆ ಹೋದ ಗೆಳೆಯ ಸ್ವೀಟು, ಕೇಕು, ಪಟಾಕಿ.. ಎಲ್ಲಾ ತಂದಿದ್ದಾನೆ. ಆದರೆ ಹೊಸ ಕ್ಯಾಲೆಂಡರು ತರುವುದನ್ನೇ ಮರೆತುಬಿಟ್ಟಿದ್ದಾನೆ! ಮತ್ತೆ ಓಡಿಸಿಯಾಗಿದೆ ಪೇಟೆಯೆಡೆಗೆ. ಬೇಗ ಬಾ ಗೆಳೆಯಾ: ಹೊಸ ವರ್ಷ ಬರುತ್ತಿದೆ...

ಭಟ್ಟರು ಗಂಧ ತೇಯ್ದು, ದೇವರನ್ನು ತೊಳೆದು, ಹೂವೇರಿಸಿ, ಕುಂಕುಮ-ಅರಿಶಿನ ಹಚ್ಚಿ, ಊದುಬತ್ತಿ ಬೆಳಗಿ, ಕಾಯಿ ಓಡೆದು, ನೈವೇದ್ಯ ಮಾಡಿ.... ಅಯ್ಯೋ, ಅವೆಲ್ಲಾ ಇರಲಿ ಭಟ್ರೇ, ಬೇಗ ಮಂಗಳಾರತಿ ಮಾಡಿ: ಹೊಸ ವರ್ಷ ಬರುತ್ತಿದೆ...

*

* *

ಅಗೋ.... ಹೊಸ ವರ್ಷ ಬಂದೇಬಿಟ್ಟಿತು..! ಕೊರೆದೂ ಕೊರೆದು ಕೊನೆಗೂ ಗೋಡೆಯಲ್ಲೊಂದು ಸಣ್ಣ ಕಿಂಡಿಯನ್ನು ಮಾಡಿಯೇಬಿಟ್ಟಿದೆ ಹೆಗ್ಗಣ. ಆ ಸಣ್ಣ ಕಿಂಡಿಯಿಂದಲೇ ತೂರಿ ಬರುತ್ತಿದೆ ಹೊಸ ವರ್ಷದ ಆಶಾಕಿರಣ; ಹೊಸ ಬೆಳಕು. ಮಗು ಹಾರಿಸಿದ ಉಚ್ಚೆ ಇಡೀ ಭುವಿಯನ್ನೇ ಒದ್ದೆ ಮಾಡಿದೆ. ಕೌಳಿಗೆ ತುಂಬಿದರೂ ಮುಗಿದಿಲ್ಲ ದನದ ಕೆಚ್ಚಲಿನ ಹಾಲು. ಅಪ್ಪ ಕೂಗುತ್ತಿದ್ದಾನೆ: 'ಏಯ್, ಇನ್ನೊಂದು ಗಿಂಡಿ ತಗಂಬಾರೇ..' ಅಮ್ಮ ಅಡುಗೆ ಮನೆಯಿಂದಲೇ ಉತ್ತರಿಸುತ್ತಿದ್ದಾಳೆ: 'ಸಾಕು ನಮಗೆ; ಉಳಿದಿದ್ದನ್ನು ಕರುವಿಗೆ ಬಿಡಿ.' ಒಣಗಿದ ಚಡ್ಡಿಯ ಮೇಲೆ ಹೊಸ ಪ್ಯಾಂಟೇರಿಸುತ್ತಿದ್ದಾನೆ ರೂಂಮೇಟ್. ಗೆಳೆಯನಂತೂ ಓಡೋಡಿ ಬರುತ್ತಿದ್ದಾನೆ. ಅವನ ಕೈಯಲ್ಲಿ ಪೂರ್ತಿ ಮುನ್ನೂರಾ ಅರವತ್ತೈದು ದಿನಗಳುಳ್ಳ ಕ್ಯಾಲೆಂಡರಿದೆ. ದೇವರಿಗೇ ಆಶ್ಚರ್ಯವಾಗುವಷ್ಟು ದಕ್ಷಿಣೆ ಬಿದ್ದಿದೆ ಭಟ್ಟರ ಮಂಗಳಾರತಿ ಹರಿವಾಣದಲ್ಲಿ.

ಎಲ್ಲರಿಗೂ ಖುಷಿ; ಎಲ್ಲರಿಗೂ ಸಂಭ್ರಮ; ಎಲ್ಲರಿಗೂ ಸಡಗರ.. ಏಕೆಂದರೆ, ಹೊಸ ವರ್ಷ ಬಂದಿದೆ! ಈ ಮಧ್ಯೆ, ಹಾಡುತ್ತಿರುವವನನ್ನು ಎಲ್ಲರೂ ಮರೆತೇ ಬಿಟ್ಟಿದ್ದಾರೆ. ಆತ ಹಾಡುವುದನ್ನು ಒಂದು ಕ್ಷಣ ನಿಲ್ಲಿಸಿಬಿಟ್ಟಿದ್ದಾನೆ. ತಕ್ಷಣ ಎಲ್ಲರಿಗೂ ಅರಿವಾಗಿದೆ. ಎಲ್ಲಾ ಅವನ ಬಳಿ ಹೋಗಿ ಹೇಳುತ್ತಿದ್ದಾರೆ:

"ಹಾಡು ಗೆಳೆಯಾ, ಮುಂದುವರೆಸು. ಹಾಡು ಹಳೆಯದಾದರೇನು, ಭಾವ ಹೊಸತಿದ್ದರೆ ಸಾಕು.."

ಹೊಸ ವರ್ಷದ ಹೊಸ ಕ್ಯಾಲೆಂಡರು ನಿಮ್ಮ ಬದುಕಿನ ಹಾಡಿಗೆ - ಹಾದಿಗೆ ಹೊಸ ಭಾವ ಬೆರೆಸಲಿ ಎಂದು ಹಾರೈಸುತ್ತೇನೆ.

ನೂತನ ವರ್ಷದ ಶುಭಾಶಯಗಳು.

~.~
  • Login or register to post comments
  • 279 hits
  • ಈ ಪುಟವನ್ನು ಇ-ಮೇಯ್ಲ್ ಮಾಡಿ
  • Delicious
  • Google
  • Yahoo
  • ನಿರ್ವಾಹಕರ ಗಮನಕ್ಕೆ ತನ್ನಿ

ಮೇಲಿನ ಪುಟವನ್ನು ಹೋಲುವ ಪುಟಗಳು - 'ಸಂಪದ' ಆರ್ಕೈವಿನಿಂದ

  • ಹೊಸ ವರ್ಷದ ಶುಭಾಶಯ
  • ಹುಡುಕಾಟ
  • ಚುಟುಕುಗಳು
  • ಸಂಕ್ರಾಂತಿಗೊಂದಿಷ್ಟು ಎಳ್ಳು-ಬೆಲ್ಲ...
  • ಸಂಕ್ರಾಂತಿಗೊಂದಿಷ್ಟು ಎಳ್ಳು-ಬೆಲ್ಲ...
Syndicate content

ಲೇಖಕರು

hisushrutha's picture

ಪರಿಚಯ

ನಾನು ಸುಶ್ರುತ. ಹುಟ್ಟಿದ್ದು ಬೆಳೆದಿದ್ದು ಎಲ್ಲ ಶಿವಮೊಗ್ಗ ಜಿಲ್ಲೆಯ ಸೊರಬ ತಾಲೂಕಿನ ಬಿ.ದೊಡ್ಡೇರಿ ಎಂಬ ಪುಟ್ಟ ಹಳ್ಳಿಯಲ್ಲಿ. ಸಧ್ಯಕ್ಕೆ ರಾಜಧಾನಿಯಲ್ಲಿ ಉದ್ಯೋಗಿ. ಒಳ್ಳೆಯ ಕನ್ನಡ ಪತ್ರಿಕೆಗಳು, ಕಥೆ, ಕಾದಂಬರಿಗಳನ್ನು ತುಂಬಾ ಪ್ರೀತಿಯಿಂದ ಓದುತ್ತೇನೆ. ಹಾಗೆ ಓದಿದ ಫಲವಾಗಿ ಈಗೀಗ ಅಷ್ಟಿಷ್ಟು ಬರೆಯುತ್ತಿದ್ದೇನೆ ಕೂಡ. ನನ್ನ ಬಗ್ಗೆ ಹೆಚ್ಚು ಇಲ್ಲಿದೆ: http://hisushrutha.googlepages.com/

ಸದಸ್ಯರ ಪೂರ್ಣ ಪ್ರೊಫೈಲ್ ವೀಕ್ಷಿಸಿ

ಸಂಪದ ವಿಶೇಷ

'ಸಂಪದ' ಟಿ-ಶರ್ಟ್

ವಾಟರ್ ಪೋರ್ಟಲ್: ದಿನದ ಚಿತ್ರ

ಸಾಂಗರ್, ರಾಜಸ್ಥಾನ

(ಫೋಟೋ: ಸಿ ಎಸ್ ಶಾರದಾ ಪ್ರಸಾದ್)

ವಾರದ ಫೀಚರ್
ಜೀವನದಿ ಕಾವೇರಿ

ವೀಡಿಯೋ
ಬಾನಿಗೊಂದು ಆಲಿಕೆ (ಮಳೆನೀರು ಸಂಗ್ರಹ)

ಮತ್ತಷ್ಟು...

ವಿಹರಿಸಿ

  • ಸಂಪದದಲ್ಲಿ ಬರೆಯುವ ಮುನ್ನ
  • ಹೊಸ ಬರಹ/ಚಿತ್ರ ಸೇರಿಸಿ
  • 'ಸಂಪದ' ಕುರಿತು ನಿಮ್ಮ ಸಲಹೆ/ಅಭಿಪ್ರಾಯಗಳನ್ನು ಕಳುಹಿಸಿ
  • ಚಟುವಟಿಕೆ
  • ಕನ್ನಡ ಬಟನ್ನುಗಳು
  • ಕನ್ವರ್ಟರ್

ಹೊಸ ಲೇಖನಗಳು

  • ಕನ್ನಡಿಗ ಅರವಿಂದ ಅಡಿಗಗೆ ಬೂಕರ್ ಗರಿ
  • ಕಾರಂತರ ಜೀವಂತ ಪಾತ್ರಗಳು ೧೩ (೨)
  • ಕಲಾಂ ಸರ್.. ಇಂದು ‘ನಿಮಗೆ ಹಜಾರ್ ಸಲಾಂ..ಲಾಖ್ ಮುಬಾರಕ್ ’.
  • LTTE ಭಯೋತ್ಪಾದಕ ಸಂಘಟನೆಯಲ್ಲವೇ?
  • ಚಂದ್ರಮೌಳೇಶ್ವರ ದೇವಾಲಯ - ಹುಬ್ಬಳ್ಳಿ
  • ಗು೦ಡ ಮತ್ತು ಕತ್ತೆ!!!!!
  • ಕಾರಂತರ ಜೀವಂತ ಪಾತ್ರಗಳು ೧೩ (೧)

ಇತ್ತೀಚಿನ ಪ್ರತಿಕ್ರಿಯೆಗಳು

  • venkatesh
    ಉ: ಕಲಾಂ ಸರ್.. ಇಂದು ‘ನಿಮಗೆ ಹಜಾರ್ ಸಲಾಂ..ಲಾಖ್ ಮುಬಾರಕ್ ’.
    October 16, 2008 - 5:53am
  • ASHOKKUMAR
    ಉ: " ಮನಸ್ಸುಗಳ ಏಕತೆ " -ಕಲಾಂ ಮೇಷ್ಟ್ರು-ಲೇಖಕರು : ಪ್ರೊ. ಎಚ್. ಆರ್. ರಾಮಕೃಷ್ಣರಾವ್,
    October 16, 2008 - 5:06am
  • venkatesh
    ಉ: ಕಲಾಂ ಸರ್.. ಇಂದು ‘ನಿಮಗೆ ಹಜಾರ್ ಸಲಾಂ..ಲಾಖ್ ಮುಬಾರಕ್ ’.
    October 16, 2008 - 5:03am
  • createam
    ಉ: "ಉಪ್ಪು ತಿಂದ ಮನೆಗೆ ಎರಡು ಬಗೆಯುವ ಎಲಾ ಕುನ್ನಿಗಳೆ!"
    October 16, 2008 - 4:56am
  • imunde
    ಉ: ಕನ್ನಡಿಗರು ಕೆಲ್ಸ ಹುಡುಕೊಂಡು ಏನು ಚಂದ್ರ ಲೋಕಕ್ಕೆ ಹೋಗಬೇಕಾ ??
    October 16, 2008 - 4:55am
  • venkatesh
    ಉ: ಕಲಾಂ ಸರ್.. ಇಂದು ‘ನಿಮಗೆ ಹಜಾರ್ ಸಲಾಂ..ಲಾಖ್ ಮುಬಾರಕ್ ’.
    October 16, 2008 - 4:50am
  • createam
    ಉ: ಕೈ ಕೊಟ್ಟ ಜೆಟ್ ಏರ್
    October 16, 2008 - 4:49am
  • hamsanandi
    ಉ: "ಉಪ್ಪು ತಿಂದ ಮನೆಗೆ ಎರಡು ಬಗೆಯುವ ಎಲಾ ಕುನ್ನಿಗಳೆ!"
    October 16, 2008 - 3:33am
  • srinivasps
    ಉ: ಕನ್ನಡಿಗರು ಕೆಲ್ಸ ಹುಡುಕೊಂಡು ಏನು ಚಂದ್ರ ಲೋಕಕ್ಕೆ ಹೋಗಬೇಕಾ ??
    October 16, 2008 - 12:12am
  • srinivasps
    ಉ: ಕನ್ನಡಿಗರು ಕೆಲ್ಸ ಹುಡುಕೊಂಡು ಏನು ಚಂದ್ರ ಲೋಕಕ್ಕೆ ಹೋಗಬೇಕಾ ??
    October 16, 2008 - 12:06am
ಇನ್ನಷ್ಟು
ಈಗಿನಂತೆ 2 ಸದಸ್ಯರು ಮತ್ತು 64 ಅತಿಥಿಗಳು ಆನ್ಲೈನ್ ಇರುವರು.


ಪ್ರಶ್ನೆಮಾಡುವುದನ್ನು ನಿಲ್ಲಿಸದಿರುವುದು ಅತ್ಯಂತ ಮುಖ್ಯ.

— ಅಲ್‌ಬರ್ಟ್ ಐನ್‌ಸ್ಟೀನ್

ಮತ್ತಷ್ಟು: ಆರೋಗ್ಯ ಸಂಪದ | ಕೃಷಿ ಸಂಪದ | ನುಡಿಮುತ್ತುಗಳು

ಯೋಜನೆಗಳು: Kannada Learning Center | ಗ್ನು/ಲಿನಕ್ಸ್ ನಲ್ಲಿ ಕನ್ನಡ ತರಲು ನಡೆದಿರುವ ಕೆಲವು ಯೋಜನೆಗಳು | ಡಾಕ್ಯುಮೆಂಟೇಶನ್ Wiki | ಸಂಪದ ಅಂಚೆಪೆಟ್ಟಿಗೆಗಳು (Sampada Mailing Lists)

ಸ್ವರ್ಣ ಸಂಪದ ಸಂಪದ ಪಾಡ್ಕ್ಯಾಸ್ಟ್ (ಶ್ರಾವ್ಯ ಸಂದರ್ಶನಗಳು) | "ದಿ ಬೆಸ್ಟ್ ಆಫ್ ಸಂಪದ" | ಪ್ಲಾನೆಟ್ ಕನ್ನಡ

ಡೌನ್ಲೋಡ್ ಮಾಡಿಕೊಳ್ಳಿ:‌ ಬರಹ IME | ಫೈರ್ ಫಾಕ್ಸ್ | ಒಪೇರಾ

ಕೆಲವು ಹಕ್ಕುಗಳನ್ನು ಕಾಯ್ದಿರಿಸಲಾಗಿದೆ. ಸಂಪದ ಸಮುದಾಯ ಸಂಪದ ಫೌಂಡೇಶನ್ನಿನ ಒಂದು ಯೋಜನೆ.
Some rights reserved Sampada Initiative by Sampada Foundation, 2005 - 2008.
Terms of Use | Contact | About Sampada | Sampada in News/Media

The views expressed here are of the respective author(s) and Sampada administration does not necessarily subscribe to them.
RSS: All posts | Comments
Blogs | Podcasts

separator