ಸಂಪದದಲ್ಲಿ ಹೊಸತು! | Sign up | Login | Font Help
ಸಂಪದ
  • ಲೇಖನಗಳು
  • ಬ್ಲಾಗ್ಸ್
  • ಚರ್ಚೆಯ ವೇದಿಕೆ
  • ಚಿತ್ರಪುಟಗಳು
  • Podcasts
  • ಪುಸ್ತಕಗಳು
  • ಆರ್ಕೈವ್
  • ಸಂಪರ್ಕಿಸಿ
  • Sampada Foundation
  • ಅಂಚೆ ಪೆಟ್ಟಿಗೆ
  • Font Help

'ಛಂದ' ಪುಸ್ತಕದ ಹೊಸ ಪುಸ್ತಕಕ್ಕೆ ನಿಮ್ಮದೇ ಮುಖಪುಟ!

ಸಂಪದ

ಸೋಮೇಶ್ವರ ಶತಕ ೨೧ - ೨೫

January 26, 2007 - 9:02am — Sunil Jayaprakash

ಸುಡು ಸೂಪಂ ಘೃತಮಿಲ್ಲದೂಟವ ಪರಾನ್ನಾಪೇಕ್ಷೆಯಾಜಿಹ್ವೆಯಂ |
ಸುಡು ದಾರಿದ್ರ್ಯದಿ ಬಾಳ್ಕೆಯಂ ಕಲಹ ಕೋಪಂ ಮಾಳ್ಪ ಸಂಗಾತಿಯಂ ||
ಸುಡೂ ತಾಂಬೂಲವಿಹೀನ ವಕ್ತ್ರವ ಪರಸ್ತ್ರೀ ನೋಡುವಾ ಕಣ್ಗಳಂ |
ನುಡಿದುಂ ತಪ್ಪುವ ರಾಜನಂ ಹರ ಹರಾ ಶ್ರೀ ಚೆನ್ನಸೋಮೇಶ್ವರಾ || ೨೧ ||

ಅವಿನೀತಂ ಮಗನೇ ಅಶೌಚಿ ಮುನಿಯೇ ಬೈವಾಕೆ ತಾಂ ಪತ್ನಿಯೇ |
ಸವಿಗೆಟ್ಟನ್ನವದೂಟವೇ ಕುಜನರೊಳ್ ಕೂಡಿರ್ಪವಂ ಮಾನ್ಯನೇ ||
ಬವರಕ್ಕಾಗದ ಬಂಟನೇ ಎಡರಿಗಂ ತಾನಾಗದಂ ನಂಟನೇ |
ಶಿವನಂ ಬಿಟ್ಟವ ಶಿಷ್ಯನೇ ಹರ ಹರಾ ಶ್ರೀ ಚೆನ್ನ ಸೋಮೇಶ್ವರಾ || ೨೨ ||

ಬವರ - ಯುದ್ಧ, ಎಡರು - ಕಷ್ಟಗಳು

ಕೊಲುವಾ ಕೂಟವು ನಷ್ಟಮಷ್ಟ ಕೆಲಸಂ ಕೈಲಾಗದಾರಂಭಮುಂ |
ಗೆಲವೇನಿಲ್ಲದ ಯುದ್ಧ ಪಾಳುನೆಲದೊಳ್ ಬೇಸಾಯ ನೀಚಾಶ್ರಯಂ ||
ಹಲವಾಲೋಚನೆ ಜೂಜು ಲಾಭ ಮನೆ ಮಾರಾಟಂ ರಸಾದ್ಯೌಷಧಂ |
ಫಲದ ಭ್ರಾಂತಿಯ ತೋರ್ಪುದೈ ಹರ ಹರಾ ಶ್ರೀ ಚೆನ್ನಸೋಮೇಶ್ವರಾ || ೨೩ ||

ತವೆ ಸಾಪತ್ನಿಯರಾಟ ಸಾಲ ಮಧುಪಾನಂ ಬೇಟದಾ ಜಾರಿಣೀ |
ನಿವಹಂ ಮಾಡುವ ಮಾಟಮಂತುಟಮಿತಂ ಮೃಷ್ಟಾನ್ನಮೆಂದೂಟ ದ್ಯೂ |
ತವನಾಡುತ್ತಿಹ ಪೋಟ ಸೂಳೆಯರೊಳೊಲ್ದಿರ್ಪಾಟಮಿಂತೆಲ್ಲ ಮುಂ |
ಸವಿಯಾಗಂತ್ಯದಿ ಕಷ್ಟವೈ ಹರ ಹರಾ ಶ್ರೀ ಚೆನ್ನ ಸೋಮೇಶ್ವರಾ || ೨೪ ||

ಬೇಟ - ಮೋಹ, ನಿವಹ - ಗುಂಪು, ಮಾಟ - ಕೆಲಸ, ಪೋಟ - ಪೋಲಿ.

ತೆರನಂ ಕಾಣದ ತಾಣದಲ್ಲಿ ಕಪಟಂಗಳ್ ಮಾಳ್ಪರಿರ್ಪಲ್ಲಿ ನಿ |
ಷ್ಠುರ ಭಾಷಾ ನೃಪನಲ್ಲಿ ನಿಂದೆ ಬರಿದೇ ಬರ್ಪಲ್ಲಿಯನ್ನೋದಕಂ ||
ಕಿರಿದಾದಲ್ಲಿ ರಿಪುವ್ರಜಂಗಳೆಡೆಯೊಳ್ ದುಸ್ಸಂಗ ದುರ್ಗೋಷ್ಠಿಯ |
ಲ್ಲಿರಸಲ್ಲಿರ್ದೊಡೆ ಹಾನಿಯೈ ಹರ ಹರಾ ಶ್ರೀ ಚೆನ್ನ ಸೋಮೇಶ್ವರಾ || ೨೫ ||

ರಿಪುವ್ರಜ - ಶತ್ರುಸಮೂಹ

ಇಲ್ಲಿಗೆ ಸೋಮೇಶ್ವರ ಶತಕದ ಕಾಲು ಭಾಗ ಮುಗಿಯಿತು. ಸೋಮೇಶ್ವರ ಶತಕದ ಮತ್ತಷ್ಟು ಪದ್ಯಗಳಿಗೆ ಕೆಳಗಿನ ಕೊಂಡಿಗಳನ್ನು ಕ್ಲಿಕ್ಕಿ.
ಸೋಮೇಶ್ವರ ಶತಕ ೦೧ - ೦೫
ಸೋಮೇಶ್ವರ ಶತಕ ೦೬ - ೧೦
ಸೋಮೇಶ್ವರ ಶತಕ ೧೧ - ೧೫
ಸೋಮೇಶ್ವರ ಶತಕ ೧೬ - ೨೦

  • ಕಾವ್ಯ ಮತ್ತು ಕವನ
~.~
  • Login or register to post comments
  • 368 hits
  • ಈ ಪುಟವನ್ನು ಇ-ಮೇಯ್ಲ್ ಮಾಡಿ
  • Delicious
  • Google
  • Yahoo
  • ನಿರ್ವಾಹಕರ ಗಮನಕ್ಕೆ ತನ್ನಿ

ಮೇಲಿನ ಪುಟವನ್ನು ಹೋಲುವ ಪುಟಗಳು - 'ಸಂಪದ' ಆರ್ಕೈವಿನಿಂದ

  • ಸೋಮೇಶ್ವರ ಶತಕ ೧೬ - ೨೦
  • ಸೋಮೇಶ್ವರ ಶತಕ ೧೧ - ೧೫
  • ಸೋಮೇಶ್ವರ ಶತಕ ೬ - ೧೦
  • ಸೋಮೇಶ್ವರ ಶತಕ ೧ ರಿಂದ ೫
  • ಸೋಮೇಶ್ವರ ಶತಕ - ೩
Syndicate content

ಲೇಖಕರು

Sunil Jayaprakash's picture

ಪೂರ್ಣ ಹೆಸರು
ನನ್ನಿ ಸುನಿಲ

ಪರಿಚಯ

ಸಹೃದಯಿ ಕನ್ನಡ ಗೆಳೆಯರಿಗೆ ನನ್ನ ನಮನಗಳು. "ನನ್ನಿ ಸುನಿಲ" ಎಂಬುದು ನನಗೂ ಇಷ್ಟವಾದ ಹೆಸರು. ಇರೋದು "ನಮ್ಮ ಬೆಂಗಳೂರಲ್ಲಿ". ಸೀಸಾ Eye-wink ಇಂಜಿನಿಯರ್ ಆಗಿ ಕೆಲಸ. ವಯೋಲೀನ್ ಕಲೆ ರೂಢಿಸಿಕೊಳ್ಳಬೇಕೆಂಬುದು ನನ್ನ ಒಂದು ಕಣಸು (ಧ್ಯೇಯ). ಇವುಗಳ ಮಧ್ಯೆ ಆಸೆಗಳು ಚಿಗುರೊಡೆಯುತ್ತಲೇ ಇರುತ್ತವೆ...

ಸದಸ್ಯರ ಪೂರ್ಣ ಪ್ರೊಫೈಲ್ ವೀಕ್ಷಿಸಿ

ಸಂಪದ ವಿಶೇಷ

ನವರಾತ್ರಿಯ ದಿನಗಳು (ಲೇಖಕರು: ಹಂಸಾನಂದಿ)
(ನವರಾತ್ರಿ ಪ್ರಯುಕ್ತ)
'ಸಂಪದ' ಟಿ-ಶರ್ಟ್

ವಾಟರ್ ಪೋರ್ಟಲ್: ದಿನದ ಚಿತ್ರ

ಬಿಪಾಸರ್, ರಾಜಸ್ಥಾನ

(ಫೋಟೋ: ಫರ್ಹದ್ ಕಾಂಟ್ರಾಕ್ಟರ್)

ವಾರದ ಫೀಚರ್
ಜೀವನದಿ ಕಾವೇರಿ

ವೀಡಿಯೋ
ಬಾನಿಗೊಂದು ಆಲಿಕೆ (ಮಳೆನೀರು ಸಂಗ್ರಹ)

ಮತ್ತಷ್ಟು...

ವಿಹರಿಸಿ

  • ಸಂಪದದಲ್ಲಿ ಬರೆಯುವ ಮುನ್ನ
  • ಹೊಸ ಬರಹ/ಚಿತ್ರ ಸೇರಿಸಿ
  • 'ಸಂಪದ' ಕುರಿತು ನಿಮ್ಮ ಸಲಹೆ/ಅಭಿಪ್ರಾಯಗಳನ್ನು ಕಳುಹಿಸಿ
  • ಚಟುವಟಿಕೆ
  • ಕನ್ನಡ ಬಟನ್ನುಗಳು
  • ಕನ್ವರ್ಟರ್

ಹೊಸ ಲೇಖನಗಳು

  • ಅಟ್ಲಾಂಟಾದಲ್ಲಿ ಗಾದೆ ಗೌರಜ್ಜಿ
  • ಲಿನಕ್ಸ್ ಗೆ ೧೭ ವರ್ಷದ ಹರೆಯ
  • ರಾಜ್ಯೋತ್ಸವ ಓಟ ೨೦೦೮
  • ಮುದ್ರಿಸಿದ್ದು ಅಳಿಸಿಹೋಗುವ ಕಾಗದ
  • ಮಲೆನಾಡಿನ ಹಾಸನ ಬೇಲೂರಿನ ನೆನಪುಗಳು
  • ಹೊಸ ಅಡುಗೆಗಳು (ಪುರುಷರಿಗೆ ಮಾತ್ರ)
  • ಮೈ ಮನಗಳ ಸುಳಿಯಲ್ಲಿ - ಒಂದು ಸಮೀಕ್ಷೆ

ಇತ್ತೀಚಿನ ಪ್ರತಿಕ್ರಿಯೆಗಳು

  • mahesha
    ಉ: ಕಡೇಹುಟ್ಟು
    October 7, 2008 - 1:51pm
  • mahesha
    ಉ: ಕಡೇಹುಟ್ಟು
    October 7, 2008 - 1:48pm
  • mahesha
    ಉ: ಕ್ರುಶ್ಣಾನೀ ಬ್ಯಾಗನೆ ಬಾರೋ
    October 7, 2008 - 1:45pm
  • mahesha
    ಉ: ಕ್ರುಶ್ಣಾನೀ ಬ್ಯಾಗನೆ ಬಾರೋ
    October 7, 2008 - 1:39pm
  • mahesha
    ಉ: ಕ್ರುಶ್ಣಾನೀ ಬ್ಯಾಗನೆ ಬಾರೋ
    October 7, 2008 - 1:35pm
  • mahesha
    ಉ: ಕಿರಿಮಗ, ಕೊನೆಮಗ ಇದಕ್ಕೆ ಸಂಸ್ಕ್ರುತದಲ್ಲಿ ಏನು?
    October 7, 2008 - 1:33pm
  • mahesha
    ಉ: ಕಿರಿಮಗ, ಕೊನೆಮಗ ಇದಕ್ಕೆ ಸಂಸ್ಕ್ರುತದಲ್ಲಿ ಏನು?
    October 7, 2008 - 1:32pm
  • ASHOKKUMAR
    ಉ: ನಮ್ಮ ಫೀಲ್ಡ್...ನಮ್ಮ ಕೆಲಸ..ನಮ್ಮ ದೇಶ ಭಾರತ
    October 7, 2008 - 12:57pm
  • harshab
    ಉ: ಹೊಸ ಅಡುಗೆಗಳು (ಪುರುಷರಿಗೆ ಮಾತ್ರ)
    October 7, 2008 - 12:52pm
  • Shivakumar.Revadi
    ಉ: ಇತ್ತೀಚಿನ ಕನ್ನಡ ಬ್ಲಾಗುಗಳು, ಕೋಮುವಾದ, ಆರ್ಥಿಕ ಅಭಿವೃದ್ಧಿ...
    October 7, 2008 - 12:44pm
ಇನ್ನಷ್ಟು
ಈಗಿನಂತೆ 7 ಸದಸ್ಯರು ಮತ್ತು 260 ಅತಿಥಿಗಳು ಆನ್ಲೈನ್ ಇರುವರು.


ಹೊಗೆ-ಎಂಜಿನ್ ಪೋಪೊಪೆಡೆ,
ಹಿಟ್ಲರ್ ಪಡೆ ಹಾಕಿದರೂ ಮಟ್ಟ.
ಧೃತಿಗೆಡದೆ ಹೊಗೆಯುಗುಳುತಿದೆ
ಚರ್ಚಿಲನ ಚುಟ್ಟ.

— ಬಿಳಿಗಿರಿ

ಮತ್ತಷ್ಟು: ಆರೋಗ್ಯ ಸಂಪದ | ಕೃಷಿ ಸಂಪದ | ನುಡಿಮುತ್ತುಗಳು

ಯೋಜನೆಗಳು: Kannada Learning Center | ಗ್ನು/ಲಿನಕ್ಸ್ ನಲ್ಲಿ ಕನ್ನಡ ತರಲು ನಡೆದಿರುವ ಕೆಲವು ಯೋಜನೆಗಳು | ಡಾಕ್ಯುಮೆಂಟೇಶನ್ Wiki | ಸಂಪದ ಅಂಚೆಪೆಟ್ಟಿಗೆಗಳು (Sampada Mailing Lists)

ಸ್ವರ್ಣ ಸಂಪದ ಸಂಪದ ಪಾಡ್ಕ್ಯಾಸ್ಟ್ (ಶ್ರಾವ್ಯ ಸಂದರ್ಶನಗಳು) | "ದಿ ಬೆಸ್ಟ್ ಆಫ್ ಸಂಪದ" | ಪ್ಲಾನೆಟ್ ಕನ್ನಡ

ಡೌನ್ಲೋಡ್ ಮಾಡಿಕೊಳ್ಳಿ:‌ ಬರಹ IME | ಫೈರ್ ಫಾಕ್ಸ್ | ಒಪೇರಾ

ಕೆಲವು ಹಕ್ಕುಗಳನ್ನು ಕಾಯ್ದಿರಿಸಲಾಗಿದೆ. ಸಂಪದ ಸಮುದಾಯ ಸಂಪದ ಫೌಂಡೇಶನ್ನಿನ ಒಂದು ಯೋಜನೆ.
Some rights reserved Sampada Initiative by Sampada Foundation, 2005 - 2008.
Terms of Use | Contact | About Sampada | Sampada in News/Media

The views expressed here are of the respective author(s) and Sampada administration does not necessarily subscribe to them.
RSS: All posts | Comments
Blogs | Podcasts

separator