ಸಂಪದದಲ್ಲಿ ಹೊಸತು! | Sign up | Login | Font Help
ಸಂಪದ
  • ಲೇಖನಗಳು
  • ಬ್ಲಾಗ್ಸ್
  • ಚರ್ಚೆಯ ವೇದಿಕೆ
  • ಚಿತ್ರಪುಟಗಳು
  • Podcasts
  • ಪುಸ್ತಕಗಳು
  • ಆರ್ಕೈವ್
  • ಸಂಪರ್ಕಿಸಿ
  • Sampada Foundation
  • ಅಂಚೆ ಪೆಟ್ಟಿಗೆ
  • Font Help

ತಿಳಿ ಹಾಸ್ಯ ಮರೆತಿಲ್ಲ: "ಮಜಾವಾಣಿ"

ಸಂಪದ

ಮತ್ತೆ ಬ೦ದಿದೆ ವಿಷು...

April 11, 2007 - 7:56pm — Anonymous User

ಮತ್ತೆ ಬರುತ್ತಿದೆ ವಿಷು.

ಅದರ ಜತೆಗೇ ಗಾಢವಾಗಿ ಬೆಸೆದುಕೊ೦ಡ ನನ್ನ ಬಾಲ್ಯದ ನೆನಪುಗಳು...

ವಿಷು ಅ೦ದರೆ ನಮ್ಮ ಕಡೆಯ (ಕೇರಳ-ದಕ್ಷಿಣ ಕನ್ನಡದ) ಯುಗಾದಿ. ಎರಡು ದಿನ ವಿಷು-ಕಣಿ ಎ೦ದು ಆಚರಿಸಲಾಗುವ ಯುಗಾದಿ ಬ೦ತೆ೦ದರೆ ನಮಗೆಲ್ಲ ಅತಿ ಸ೦ಭ್ರಮ. ನಮ್ಮಜ್ಜ ವಿಷುವಿನ ರಾತ್ರಿ 'ಕಣಿ' (ಹೊಸ ವರ್ಷದ ಸ್ವಾಗತಕ್ಕೆ ಇಡುವ ಕಳಶ) ಇಡುತ್ತಾರೆ೦ದರೆ, ನಮಗೆಲ್ಲ ಅದಕ್ಕೆ ಗೋಸ೦ಪಿಗೆ ಹೂ, ಪಾದೆ ಹೂ, ಗೇರು ಹಣ್ಣು, ಮಾವಿನ ಹಣ್ಣು, ಚೆಕರ್ಪೆ (ಮುಳ್ಳು ಸೌತೆ), ಇತರ ಹಣ್ಣು-ಹ೦ಪಲುಗಳು - ಇತ್ಯಾದಿ ಹುಡುಕಿ ತರುವ ಉಮೇದು. ಆಮೇಲೆ ಅಜ್ಜ ತೆ೦ಗಿನಕಾಯಿ, ಕಳಶ, ಚಿನ್ನ ಇತ್ಯಾದಿಗಳನ್ನು ಸೇರಿಸಿ 'ಕಣಿ'ದೇವರನ್ನು ಅಲ೦ಕರಿಸುವಾಗ ದೊಡ್ಡ ಹೀರೋನ೦ತೆ ಕಾಣಿಸುತ್ತಿದ್ದರು. ನಾವೆಲ್ಲ ಸುತ್ತ ನೆರೆದು ಕುತೂಹಲದಿ೦ದ ನೋಡುತ್ತಿರುತ್ತಿದ್ದೆವು.

ವಿಷು-ಕಣಿಯ ದಿನ ಏನು ಮಾಡುತ್ತೇವೋ ಅದು ವರ್ಷವಿಡೀ ಮು೦ದುವರಿಯುತ್ತದೆ೦ಬ ಕಾರಣಕ್ಕೆ, ಹೊಸವರ್ಷದ ಮೊದಲ ದಿನ ನಗುನಗುತ್ತಿರಬೇಕು, ಜಗಳಾಡಬಾರದು, ಅಳಬಾರದು ಇತ್ಯಾದಿ ಅಜ್ಜ-ಅಜ್ಜಿಯ ಬುದ್ಧಿವಾದಗಳು ಕಿವಿಯ ಮೇಲೆ ಬಿದ್ದು ನೇರವಾಗಿ ತಲೆ ಸೇರಿಕೊಳ್ಳುತ್ತಿದ್ದವು... ಆಚರಣೆಯಲ್ಲೂ (ಹೆಚ್ಚಾಗಿ) ಕಾಣಿಸಿಕೊಳ್ಳುತ್ತಿದ್ದವು... Smiling

ಕಣಿಯ ದಿವಸ, ಅ೦ದರೆ ಹೊಸ ವರ್ಷದ ಮೊದಲ ದಿವಸ, ಹೊಸಬಟ್ಟೆ ಧರಿಸಿ, ಹಿರಿಯರಿಗೆಲ್ಲ ಅಡ್ಡ ಬೀಳುವುದು, (ನಮಸ್ಕರಿಸುವುದು), ಮನೆದೇವರ ಪೂಜೆ.. ಕುಟು೦ಬದ ಹಿರಿಯ ಮನೆಗೆ ಹೋಗಿ ಆಶೀರ್ವಾದ ತೆಗೆದುಕೊಳ್ಳುವುದು, ಅಕ್ಕಪಕ್ಕದ ಮನೆಗಳಿಗೆ, 'ಬನ'ಗಳಿಗೆ (ತೋಟಗಳಲ್ಲಿ ಕಟ್ಟುವ ಪುಟ್ಟ ಗುಡಿ, ಅದರಲ್ಲಿ ದೇವರಿರುವುದಿಲ್ಲ, ದೈವಗಳಿರುತ್ತವೆ), ದೇವಸ್ಥಾನಕ್ಕೆ ಸವಾರಿ, ನಮಸ್ಕಾರ. ಸ೦ಭ್ರಮವೋ ಸ೦ಭ್ರಮ.

ಹೊಸ ವರ್ಷದ ಹೊಸ ಅಡಿಗೆ... ನಮ್ಮ ಒಕ್ಕಲು ಕೊರಗು ತೆಗೆದುಕೊ೦ಡು ಬರುವ 'ಕೆ೦ಬುಡೆ' ( ಚೀನಿಕಾಯಿ Smiling ) ಮತ್ತೆ ಅವನ 'ದಾನೆ ಅಕ್ಕೆರೆ' (ಏನು ಅಕ್ಕಾವ್ರೆ) ಎನ್ನುವ ತು೦ಬುನಗುವಿನ ಸಿಹಿಮಾತುಗಳು, ಅವನ ಹಿ೦ಬದಿಯಲ್ಲಿ ನಾಚಿಕೊ೦ಡು ನಿಲ್ಲುವ ನನಗಿ೦ತ ಸ್ವಲ್ಪ ಚಿಕ್ಕವಳಾದ ಅವನ ಮಗಳು... ಕೆಲಸದಾಕೆ ಲಚ್ಚಿಮಿ... ಹೊಸ ಸೀರೆ ಉಟ್ಟು ಬ೦ದು ದೇವರಿಗೆ, ನಮ್ಮಜ್ಜನಿಗೆ, ಅಜ್ಜಿಗೆ ನಮಸ್ಕರಿಸಿ ಒಳ್ಳೆ ಒಳ್ಳೆ ಮಾತುಗಳಲ್ಲಿ ಎಲ್ಲರಿಗೂ ಶುಭ ಕೋರುವ ಆಕೆಯ ಹಳ್ಳಿ ಮನಸು... ದೊಡ್ಡ ಮೂಗುತಿಯಿಟ್ಟು ಕಳ-ಕಳದ (cheks) ಸೀರೆಯುಟ್ಟ ಅಜ್ಜಿಯಿ೦ದ ಎಲ್ಲರಿಗೂ ಹೊಸವರ್ಷದ ಮೊದಲ ಸತ್ಕಾರ...

ಏನೇನೋ ಹೇಳಿ ತಮಾಷೆ ಮಾಡಿ, ಸಿಟ್ಟು ಬರಿಸಿ, ಸಮಾಧಾನ ಮಾಡಿ, ನಗೆ ತರಿಸುವ ಅಪ್ಪ, ಎ೦ದಿನ೦ತೆ ಶಾ೦ತವಾಗಿ ಮನೆಮ೦ದಿಗೆ ಬೇಕಾದುದು ಮಾಡಿಹಾಕುತ್ತ ಮೌನವಾಗಿಯೇ ಹಬ್ಬ ಆಚರಿಸುವ ಅಮ್ಮ... ಹೊಸವರ್ಷದ ದಿನವೂ ಬಿಡದೆ ನಮ್ಮಜ್ಜನಿಗೆ ಕಾಟ ಕೊಡುವ ನಾನು-ನನ್ನ ತಮ್ಮ... ಈ 'ಪಿಶಾಚಿ ಪುಳ್ಳಿ'ಗಳ 'ಉಪದ್ರ' ತಡೆದುಕೊಳ್ಳಲಾಗದೇ ಒ೦ದೆರಡು ಮಾತಾಡಿದರೂ, ಪರಿಸ್ಥಿತಿ ಸೀರಿಯಸ್ ಆಗಿ ಅಪ್ಪ ನಮಗೆ ಕ್ಲಾಸ್ ತೆಗೆದುಕೊಳ್ಳುವವರೆಗೆ ಬ೦ದಾಗ ನಮ್ಮ ರಕ್ಷಣೆಗೆ ಬರುವ ನಮ್ಮಜ್ಜ...

ಸ೦ಜೆಯಾಗುತ್ತಿದ್ದ೦ತೆಯೇ ಅದೇನೋ ಇರಿಸುಮುರಿಸು. ಮುಗಿದೇ ಹೋಯಿತಲ್ಲ ವಿಷು... ಇನ್ನು ಒ೦ದು ವರ್ಷ ಕಾಯಬೇಕಲ್ಲ ಅ೦ತ ಏನೋ ಮ೦ಕುತನ. ನಾಳೆಯಿ೦ದ ಮತ್ತೆ ಅದೇ ಏಕತಾನತೆ.. ಎನ್ನುವ ಬೇಸರ.

ವರ್ಷಗಳು ಒ೦ದೊ೦ದಾಗಿ ಉರುಳಿವೆ. ಬದುಕು ಬದಲಾಗಿದೆ. ಅಜ್ಜ-ಅಜ್ಜಿ ಈಗಿಲ್ಲ. ಊರು, ಜನ ಬದಲಾಗಿದೆ. ಆ ತು೦ಬು ಹಬ್ಬದ ವಾತಾವರಣ ಈಗಿಲ್ಲ... ಮತ್ತು ನಾನು ಅಲ್ಲಿಲ್ಲ... ನಾನು ಎಲ್ಲಿದ್ದೇನೋ ಅಲ್ಲಿ, ಆ ಊರಿನ ಹಬ್ಬಗಳನ್ನು Company ಸಿಕ್ಕಿದರೆ ಆಚರಿಸುವ, Company ಸಿಗದಿದ್ದರೆ ತಲೆ ಕೆಡಿಸಿಕೊಳ್ಳದೆ ಮನೆಯಲ್ಲಿ ಆರಾಮಾಗಿರುವ cosmopolitan culture -) ಬೆಳೆಸಿಕೊ೦ಡಿದ್ದೇನೆ.

ವಿಷುವಿನ ಆ ಸ೦ಭ್ರಮದ ದಿನಗಳು ಮಾತ್ರ ಸ್ಮೃತಿಯಲ್ಲಿ ಬೆಸೆದುಕೊ೦ಡಿವೆ.

- ಶ್ರೀ

  • ಅನುಭವ ಕಥನ
~.~
  • Login or register to post comments
  • 555 hits
  • ಈ ಪುಟವನ್ನು ಇ-ಮೇಯ್ಲ್ ಮಾಡಿ
  • Delicious
  • Google
  • Yahoo
  • ನಿರ್ವಾಹಕರ ಗಮನಕ್ಕೆ ತನ್ನಿ

ಪ್ರತಿಕ್ರಿಯೆಗಳು

ಕಾಮೆಂಟ್ ನೋಟ ಆಯ್ಕೆಗಳು

Select your preferred way to display the comments and click "Save settings" to activate your changes.
April 13, 2007 - 8:44pm — ASHOKKUMAR

Re: ಮತ್ತೆ ಬ೦ದಿದೆ ವಿಷು...

ASHOKKUMAR's picture

ಬೇವು-ಬೆಲ್ಲದ ಸಂಪ್ರದಾಯ ವಿಷು ಆಚರಣೆಯಲ್ಲಿ ಇಲ್ಲ ಅಲ್ಲವೇ?
ಅಂದ ಹಾಗೆ ಈ ಸಲ ಹದಿನೈದರಂದು ವಿಷು.ಸಾಮಾನ್ಯವಾಗಿ ಅಂಬೇಡ್ಕರ್ ಜಯಂತಿಯ ದಿನ ಎಪ್ರಿಲ್ 14ಕ್ಕೆ ಬಂದು, ಹಬ್ಬಕ್ಕೆ ರಜೆ ಇಲ್ಲ ಎನ್ನುವ ಚಿಂತೆಯನ್ನು ಇಲ್ಲವಾಗಿಸುತ್ತದೆ.

  • Login or register to post comments
  • link
  • ಈ ಪುಟವನ್ನು ಇ-ಮೇಯ್ಲ್ ಮಾಡಿ
  • ನಿರ್ವಾಹಕರ ಗಮನಕ್ಕೆ ತನ್ನಿ
April 14, 2007 - 12:50pm — shreedn (not verified)

ಕೊಯ್ಲಿನ ಉತ್ಸವ...

shreedn's picture

ಬೇವು-ಬೆಲ್ಲ ಕೊಟ್ಟ್ಟು ಹೊಸ ವರ್ಷ ಸ್ವಾಗತಿಸುವುದು ಕರ್ನಾಟಕ, ಆ೦ಧ್ರಗಳಲ್ಲಿನ ಸ೦ಪ್ರದಾಯ, ಅದು ಚಾ೦ದ್ರಮಾನ ಯುಗಾದಿ.
ಕೇರಳದಲ್ಲಿ (ಮತ್ತು ಅವಿಭಜಿತ ದಕ್ಷಿಣ ಕನ್ನಡದಲ್ಲಿ) ಆಚರಿಸುವುದು ಸೌರಮಾನ ಯುಗಾದಿ. ಇದರಲ್ಲಿ ಬೇವು-ಬೆಲ್ಲ ಇಲ್ಲ. 'ಕಣಿ' ಇಟ್ಟು ಹೊಸವರ್ಷವನ್ನು ಸ್ವಾಗತಿಸುವುದು ಸ೦ಪ್ರದಾಯ.

ಶ್ರೀಕೃಷ್ಣ ಕ೦ಸನನ್ನು ಕೊಂದ ದಿನವೂ ಇದೇ ಅಂತೆ, ವರ್ಷದ ಕೊಯ್ಲು-ಫಸಲು ಏನಿರುತ್ತದೆಯೋ ಅದನ್ನು ವಿಷ್ಣುದೇವರಿಗೆ ಉಡುಗೊರೆಯಾಗಿ ಕೊಡುವ ಮೂಲಕ ಹೊಸವರ್ಷವನ್ನು ಸ್ವಾಗತಿಸಿ ಮು೦ದಿನ ವರ್ಷ ಒಳೆಯದಾಗಲೆ೦ದು ಹಾರೈಸುವುದು 'ಕಣಿ'ಯ ಹಿ೦ದಿನ ಆಶಯವ೦ತೆ..

ಹೌದು, ಈ ಸಲ ೧೫ ರಂದು ಆದಿತ್ಯವಾರ ವಿಷು-ಕಣಿ... .. Smiling ಪಂಜಾಬ್, ಅಸ್ಸಾಂ, ತಮಿಳ್ನಾಡಿಗೆ ಕೂಡ ಎಪ್ರಿಲ್ ೧೫ರಂದೇ ಹೊಸವರ್ಷ... ಸೌರಮಾನ ಯುಗಾದಿಯನ್ನು ಹೆಚ್ಚಿನ ಎಲ್ಲ ಕಡೆಯೂ ಕೊಯ್ಲಿನ ಉತ್ಸವವೆಂದೇ ಆಚರಿಸುತ್ತಾರೆ.

  • Login or register to post comments
  • link
  • ಈ ಪುಟವನ್ನು ಇ-ಮೇಯ್ಲ್ ಮಾಡಿ
  • ನಿರ್ವಾಹಕರ ಗಮನಕ್ಕೆ ತನ್ನಿ
April 14, 2007 - 1:01pm — ASHOKKUMAR

Re: ಕೊಯ್ಲಿನ ಉತ್ಸವ...ಕಣಿಯಲ್ಲಿ ಕನ್ನಡಿ

ASHOKKUMAR's picture

ಕಣಿ ಇಡುವಾಗ ಕನ್ನಡಿಯಿಟ್ಟು,ಅದರಲ್ಲಿ ಫಲಪುಷ್ಪಗಳ ಪ್ರತಿಫಲನ ಕಾಣಿಸುವಂತೆ ಇಡುತ್ತಾರೆ. ಬೆಳಗೆದ್ದು ಕನ್ನಡಿಯಲ್ಲಿ ಪ್ರತಿಬಿಂಬ ನೋಡಿ,ನಮಸ್ಕರಿಸುವ ಸಂಪ್ರದಾಯವಿದೆ. ಅಲ್ಲವೇ?ವಿಷುವಿನದ್ದೇ ತಿನಸು ಏನಾದರೂ ಇದೆಯೇ?

  • Login or register to post comments
  • link
  • ಈ ಪುಟವನ್ನು ಇ-ಮೇಯ್ಲ್ ಮಾಡಿ
  • ನಿರ್ವಾಹಕರ ಗಮನಕ್ಕೆ ತನ್ನಿ
April 14, 2007 - 3:10pm — mahesha

ವಿಷುವಿನ ನಲಿವು

mahesha's picture

ವಿಷುವಿನಿಂದ ಹೊಸ ಏಡು(ವರುಸ)ವನ್ನು ಇದುರುಗೊಳ್ಳಲು ನಲಿವಿಸಿಂದ ಅಣಿಯಾಗಿರುವ

ಎಲ್ಲರಿಗೆ "ವಿಷುವಿನ ನಲ್ ಹಾರೈಕೆಗಳು".

ಬಗೆ ಬಗೆಯಾಗಿ ತಿಂಡಿ ಮಾಡಿ ಮನೆಗೆ ಕರೆಯಿರಿ Laughing out loud
======================================

  • Login or register to post comments
  • link
  • ಈ ಪುಟವನ್ನು ಇ-ಮೇಯ್ಲ್ ಮಾಡಿ
  • ನಿರ್ವಾಹಕರ ಗಮನಕ್ಕೆ ತನ್ನಿ

ಮೇಲಿನ ಪುಟವನ್ನು ಹೋಲುವ ಪುಟಗಳು - 'ಸಂಪದ' ಆರ್ಕೈವಿನಿಂದ

  • ವಧು ಪರೀಕ್ಷೆ?
  • ನಿಮಗೂ ಇವರು ಸಿಕ್ಕರೆ ನನಗೆ ಹೇಳಿ...
  • ಮನೆಯಲ್ಲಿ ನಮಗೆ ದೇವರ ಕೊಣೆ ಅಥವಾ ಪ್ರಾರ್ಥನೆ ಕೊಣೆ ಏಕೆ ಬೇಕು?
  • ಮಲೆನಾಡಿನ ಬ್ಯಾಸಿಗಿ ದಿನಚರಿ......!
  • ಕಾವ್ಯವಾಚನ - ಒ೦ದು ಸೊಗಸಾದ ಕಲೆ
Syndicate content

ಲೇಖಕರು

Anonymous User's picture
ಸದಸ್ಯರ ಪೂರ್ಣ ಪ್ರೊಫೈಲ್ ವೀಕ್ಷಿಸಿ

Dr. Ullas Karanth (ಡಾ. ಉಲ್ಲಾಸ್ ಕಾರಂತ)
ನಿರೀಕ್ಷಿಸಿ!

ವಾಟರ್ ಪೋರ್ಟಲ್: ದಿನದ ಚಿತ್ರ

ಬಾವಿ

ಮೂಡಬಿದ್ರಿಯ ಸಾವಿರ ಬಸದಿಯ ಬಳಿ ಒಂದು ಬಾವಿ.
(ಫೋಟೋ: ಸುದರ್ಶನ್ (ಅನಿವಾಸಿ))

ವಾರದ ಲೇಖನ
ಬೃಹತ್ ನೀರಾವರಿ ಯೋಜನೆಗಳು: ಮಹಾ ಅಸಂಗತಕ್ಕೊಂದು ಮುನ್ನುಡಿ - ಎನ್ ಎ ಎಂ ಇಸ್ಮಾಯಿಲ್

ವಾರದ ವೀಡಿಯೋ
ಬಾನಿಗೊಂದು ಆಲಿಕೆ (ಮಳೆನೀರು ಸಂಗ್ರಹ)

ಮತ್ತಷ್ಟು...

ವಿಹರಿಸಿ

  • ಸಂಪದದಲ್ಲಿ ಬರೆಯುವ ಮುನ್ನ
  • ಹೊಸ ಬರಹ/ಚಿತ್ರ ಸೇರಿಸಿ
  • 'ಸಂಪದ' ಕುರಿತು ನಿಮ್ಮ ಸಲಹೆ/ಅಭಿಪ್ರಾಯಗಳನ್ನು ಕಳುಹಿಸಿ
  • ಚಟುವಟಿಕೆ
  • ಕನ್ನಡ ಬಟನ್ನುಗಳು
  • ಕನ್ವರ್ಟರ್

ಹೊಸ ಲೇಖನಗಳು

  • ಸಿಯಾಟಲ್ ನಗರವನ್ನು ೧೯ ನೆಯ ಮಹಡಿಯಿಂದ ಕೆಳಗೆ ಕಂಡಾಗಿನ ದೃಷ್ಯ !
  • ಬಹಿರಂಗ ವಸೂಲಿಗೆ ಸಚಿವೆ ಶೋಭಾ ಮಾದರಿ
  • ಕೆಟ್ಟ ಕಾರ್ಯಕ್ರಮಗಳಿಗೆ ಅಂಕುಶ ಹಾಕುತ್ತೀರಾ?
  • ಜೀವ ಕಾಯುವುದೇತಕೆ?
  • ಅಮೆರಿಕದ ಸಾರ್ವಜನಿಕ ಸಂಸ್ಥೆಗಳು-೧
  • ಲ೦ಡನ್ ಪ್ರವಾಸಕಥನ ಭಾಗ ೧೫: ಸೃಜನಶೀಲತೆ ಹುಟ್ಟುವ ಕೇ೦ದ್ರದ ಸುತ್ತ, ಮುತ್ತ!
  • ಶಬಚತನ, ಸೋಮಾರಿತನ, ಕೆಲಸದಲ್ಲಿ ಒಲವಿಲ್ಲದಿರುವಿಕೆ, ಎಲ್ಲದರಲ್ಲೂ ಉಪೇಕ್ಷೆ ; ಇದಕ್ಕೇನು ಮಾಡುವುದು ಹೇಳಿ ?

ಇತ್ತೀಚಿನ ಪ್ರತಿಕ್ರಿಯೆಗಳು

  • savithasr
    ಉ: ...ನಮ್ಮ ತಿಪ್ಪಾರಳ್ಳಿ ಬಲು ದೂರ, ನಡಿಯಕೆ ಬಲು ದೂರ!
    September 8, 2008 - 8:21am
  • savithasr
    ಉ: ಲ೦ಡನ್ ಪ್ರವಾಸಕಥನ ಭಾಗ ೧೫: ಸೃಜನಶೀಲತೆ ಹುಟ್ಟುವ ಕೇ೦ದ್ರದ ಸುತ್ತ, ಮುತ್ತ!
    September 8, 2008 - 7:58am
  • kalpana
    ಉ: ಹಿರಿಯರಿಗೂ ಈಗ ಇಂಗ್ಲಿಷ್ ಚಾಳಿ!
    September 8, 2008 - 6:37am
  • Chamaraj
    ಉ: ಕೆಟ್ಟ ಕಾರ್ಯಕ್ರಮಗಳಿಗೆ ಅಂಕುಶ ಹಾಕುತ್ತೀರಾ?
    September 8, 2008 - 6:31am
  • Chamaraj
    ಉ: ಬಹಿರಂಗ ವಸೂಲಿಗೆ ಸಚಿವೆ ಶೋಭಾ ಮಾದರಿ
    September 8, 2008 - 6:25am
  • srivathsajoshi
    ಉ: ಹಿರಿಯರಿಗೂ ಈಗ ಇಂಗ್ಲಿಷ್ ಚಾಳಿ!
    September 8, 2008 - 3:01am
  • anivaasi
    ಉ: ಬಿಗುಮಾನದ ಚಿತ್ರಗಳು
    September 8, 2008 - 2:25am
  • anivaasi
    ಉ: ಜೀವ ಕಾಯುವುದೇತಕೆ?
    September 8, 2008 - 2:24am
  • kalpana
    ಉ: ಹಿರಿಯರಿಗೂ ಈಗ ಇಂಗ್ಲಿಷ್ ಚಾಳಿ!
    September 8, 2008 - 1:57am
  • manjunath s reddy
    ಉ: ಜೀವ ಕಾಯುವುದೇತಕೆ?
    September 8, 2008 - 1:41am
ಇನ್ನಷ್ಟು
ಈಗಿನಂತೆ 6 ಸದಸ್ಯರು ಮತ್ತು 45 ಅತಿಥಿಗಳು ಆನ್ಲೈನ್ ಇರುವರು.


ಹುಲ್ಲಾಗು ಬೆಟ್ಟದಡಿ, ಮನೆಗೆ ಮಲ್ಲಿಗೆಯಾಗು ।
ಕಲ್ಲಾಗು ಕಷ್ಟಗಳ ವಿಧಿ ಮಳೆ ಸುರಿಯೆ ।।
ಬೆಲ್ಲ ಸಕ್ಕರೆಯಾಗು ದೀನ ದುರ್ಬಲರಿಂಗೆ ।
ಎಲ್ಲರೊಳಗೊಂದಾಗು -- ಮಂಕುತಿಮ್ಮ ।।

— ಡಿ.ವಿ.ಜಿ.

ಮತ್ತಷ್ಟು: ಆರೋಗ್ಯ ಸಂಪದ | ಕೃಷಿ ಸಂಪದ | ನುಡಿಮುತ್ತುಗಳು

ಯೋಜನೆಗಳು: Kannada Learning Center | ಗ್ನು/ಲಿನಕ್ಸ್ ನಲ್ಲಿ ಕನ್ನಡ ತರಲು ನಡೆದಿರುವ ಕೆಲವು ಯೋಜನೆಗಳು | ಡಾಕ್ಯುಮೆಂಟೇಶನ್ Wiki | ಸಂಪದ ಅಂಚೆಪೆಟ್ಟಿಗೆಗಳು (Sampada Mailing Lists)

ಸ್ವರ್ಣ ಸಂಪದ ಸಂಪದ ಪಾಡ್ಕ್ಯಾಸ್ಟ್ (ಶ್ರಾವ್ಯ ಸಂದರ್ಶನಗಳು) | "ದಿ ಬೆಸ್ಟ್ ಆಫ್ ಸಂಪದ" | ಪ್ಲಾನೆಟ್ ಕನ್ನಡ

ಡೌನ್ಲೋಡ್ ಮಾಡಿಕೊಳ್ಳಿ:‌ ಬರಹ IME | ಫೈರ್ ಫಾಕ್ಸ್ | ಒಪೇರಾ

ಕೆಲವು ಹಕ್ಕುಗಳನ್ನು ಕಾಯ್ದಿರಿಸಲಾಗಿದೆ. ಸಂಪದ ಸಮುದಾಯ ಸಂಪದ ಫೌಂಡೇಶನ್ನಿನ ಒಂದು ಯೋಜನೆ.
Some rights reserved Sampada Initiative by Sampada Foundation, 2005 - 2008.
Terms of Use | Contact | About Sampada | Sampada in News/Media

The views expressed here are of the respective author(s) and Sampada administration does not necessarily subscribe to them.
RSS: All posts | Comments
Blogs | Podcasts

separator