ಸಂಪದದಲ್ಲಿ ಹೊಸತು! | Sign up | Login | Font Help
ಸಂಪದ
  • ಲೇಖನಗಳು
  • ಬ್ಲಾಗ್ಸ್
  • ಚರ್ಚೆಯ ವೇದಿಕೆ
  • ಚಿತ್ರಪುಟಗಳು
  • Podcasts
  • ಪುಸ್ತಕಗಳು
  • ಆರ್ಕೈವ್
  • ಸಂಪರ್ಕಿಸಿ
  • Support Sampada
  • ಅಂಚೆ ಪೆಟ್ಟಿಗೆ
  • Font Help

ಹೊಸತು: ಹರಿದಾಸ ಸಂಪದ ಸಂಪುಟ

ಸಂಪದ

ಆದರ್ಶಗಳ ಕೊಲೆ!

August 10, 2007 - 9:49pm — prasad3003

ಮದುವೆಗಿಂತ ಮೊದಲು ನಾನು ಅಂದುಕೊಳ್ಳುತ್ತಿದ್ದೆ, ನನ್ನ ಮದುವೆ ಆದರ್ಶ ಮದುವೆ ಅಗಬೇಕು. ಹುಚ್ಚಾ ಪಟ್ಟೆ ಖರ್ಚು ಆಗಬಾರ್ದು, ರೆಜಿಸ್ಟರ್ ಮ್ಯಾರೇಜ್ ಆಗ್ಬೇಕು! ಇತ್ಯಾದಿ ಇತ್ಯಾದಿ. ಡೊಡ್ಡ ದೊಡ್ಡ ಆದರ್ಶಗಳು. ಆದರೆ ಅದದ್ದೆ ಬೇರೆ! ರೆಜಿಸ್ಟರ್ ಮ್ಯಾರೇಜ್ ಆಗ್ಲಿಲ್ಲಾ. ಒಳ್ಳೆ ಅದ್ಧೂರಿಯಾಗಿ ಮದುವೆಯಾಯ್ತು. ಅಂದುಕೊಂಡದ್ದಕ್ಕಿಂತ ಜಾಸ್ತಿ ಖರ್ಚು ಆಯ್ತು! ಅದಕ್ಕೆಲ್ಲಾ ಕಾರಣಗಳು ಇದ್ವು ಅಥವ ಅದಕ್ಕೆ ನಾನೇ ಕಾರಣ ಹುಡುಕಿದ್ದಿರಬೆಕು. ಆದರೆ ಒಂದು ಮಾತ್ರಾ ನಿಜ ಏನೇ ಆದರ್ಶಗಳನ್ನು ಇಟ್ಟುಕೊಂಡ್ರೂ ಅದನ್ನು ಪಾಲಿಸೋ ಜನ ತುಂಬಾ ಕಡಿಮೆ. ಯಾಕೆ ಹೀಗಾಗುತ್ತೆ ಅಂತ? ಪರಿಸ್ಥಿತಿ ಹಾಗೆ ಬರುತ್ತೆಯೆ? ಅಥವಾ ಸಮಾಜದಲ್ಲಿದ್ದು ಬೇರೆ ರೀತಿಯಲ್ಲಿ ಯೋಚನೆ ಮಾಡೊಕೆ ಭಯವೆ?
ಮಕ್ಕಳೆ ಬೇಡ ಅಂತೀವಿ. ಯಾವುದಾದರು ಅನಾಥ ಮಗುವನ್ನು ದತ್ತು ತೊಗೊಂಡು ಸಾಕ್ತಿನಿ ಅಂತೀವಿ! ಆದರೆ ಗೆಳೆಯನೊಬ್ಬ ಅಪ್ಪ ಆಗ್ತಿರೊ ವಿಷಯ ಕೇಳಿ ಅಸೂಯೆಯಿಂದ ಕರುಬಿ ನಾನು ಅಪ್ಪ ಆಗ್ಲೇಬೇಕು ಅನ್ನೊ ಹಠ ತೊಡ್ತಿವಿ. ಯಾಕೆಂದರೆ ಸಮಾಜಕ್ಕೆ ತಾನು ಗಂಡಸು ಅನ್ನೊದನ್ನ ಪ್ರಮಾಣಿಸಿ ತೋರಿಸಬೆಕಲ್ಲಾ. ಇಲ್ಲದಿದ್ರೆ, ಮಿತ್ರರು, ಸಂಬಂಧಿಗಳು ಆಡೊ ಕುಹಕದ ಮಾತು ಸಹಿಸಬೇಕು! ನನ್ನ ಗೆಳೆಯನೊಬ್ಬನಿಗೆ ಅಪ್ಪನಾಗೊ ಸಡಗರ ಒದಗಿ ಬಂತು. ಆತ ನನಗೆ ಫೋನ್ ಮಾಡಿದಾಗಲೆಲ್ಲ ಕೇಳೋನು "ನಿಮ್ದು ಯಾವಾಗರಿ ಸುದ್ದಿ ? ಏನೂ ವಿಶೇಷ ಇಲ್ಲೇನು", ಅರೇ ಇದಾವ ಲೆಕ್ಕ? ಅವನದು ವಿಶೇಷ ಆಗಿದ್ದೆ ತಡ, ಹಿಂಗಾಡೊದಾ? ಹಿಂಗಾದಾಗ ಮೊದಲು ಒಂದು ಮಗು ಆಗ್ಲಿ ಆಮೇಲೆ ನೋಡಿದ್ರಾಯ್ತು ಅಂತ ಶುರು ಹಚ್ಕೋತೀವಿ. ಇದೆ ಅಲ್ವೆ ಆದರ್ಶಗಳ ಕೊಲೆ?
ಕಡಿಮೆ ಪಗಾರ ಬರ್ತಿದ್ದಾಗ, ಇದಕ್ಕಿಂತ ಇನ್ನೂ ಹತ್ತು ಸಾವಿರ ಜಾಸ್ತಿಯಾದ್ರೂ ಸರಿ ಸಮಾಜ ಸೇವೆ ಮಾಡೇ ತೀರುವೆ ಅಂತ ಶಪಥ ಮಾಡ್ತೀವಿ. ಹತ್ತು ಸಾವಿರ ಜಾಸ್ತಿ ಆಗುತ್ತೆ ಆದ್ರೆ ಅದಕ್ಕೆ ತಕ್ಕ ಹಾಗೆ ಬೇರೆ ಖಯಾಲಿಗಳು ಬೆಳೆದಿರುತ್ತವೆ. ಶಪಥ ಮರೆತು ಹೋಗಿರುತ್ತದೆ!
ಮೇಲಿನ ಎಲ್ಲ ಉದಾಹರಣೆಗಳಲ್ಲಿ ಸಾಮಾನ್ಯವಾದುದೆಂದರೆ, ನಮ್ಮ ಸುತ್ತಲಿರುವವರ ಪ್ರಭಾವ, ಅವರು ಯಾರೇ ಆಗಿರಬಹುದು. ಅಪ್ಪ, ಅಮ್ಮಾ, ಬಂಧು ಅಥವಾ ಗೆಳೆಯಾ. ರೆಜಿಸ್ಟರ್ ಮದುವೆ ಆಗ್ತೀನಿ ಅಂದಾಗ ಅಪ್ಪ ಅಂತಾನೆ "ನೀನು ಹಿಂಗೆಲ್ಲಾ ಅಂದ್ರ ಹೆಂಗ? ನಮ್ಮ ಮನಿತನಕ್ಕ ತಕ್ಕಂಗ ಲಗ್ನಾ ಆಗ್ಬೇಕು. ಇಲ್ಲಾ ಅಂದ್ರ ಎಲ್ಲಾರು ಎನು ತಿಳ್ಕೋತಾರ?" "ಇದ್ದೊಬ್ಬ ಮಗಂದು ಲಗ್ನಾ ಚೆಂದಾಗಿ ನೋಡೂದು ನನ್ನ ನಸೀಬದಾಗ ಇಲ್ಲಾ ಅಂತ ಕಾಣ್ತದ" ಅಂತ ಅಮ್ಮ ಕಣ್ಣೀರು ಹಾಕ್ತಾಳೆ. ಇದನ್ನೆಲ್ಲ ವಿರೋಧಿಸಿ ತಮ್ಮ ಆದರ್ಶ ಮೆರೆಯುವವರೂ ಇದ್ದಾರೆ. ಆದರೆ ಅವರ ಭಾವನೆಗಳಿಗೆ ಸ್ಪಂಧಿಸಿ ತಮ್ಮ ಆದರ್ಶಗಳನ್ನು ಕೊಲೆ ಮಾಡುವವರೂ ಇನೂ ಜಾಸ್ತಿ ಇದ್ದಾರೆ. ಇದೊಂದು ಸಣ್ಣ ಉದಾಹರಣೆ ಅಷ್ಟೇ. ಆದರೆ ಯಾವುದು ಸರಿ, ಯಾವುದು ತಪ್ಪು ಅಂತ ಮನಸ್ಸು ಯೋಚಿಸಲು ತೊಡಗುತ್ತದೆ...ಆದರ್ಶಗಳನ್ನು ಪಾಲಿಸಿದರೆ ಬೇರೆಯವರಿಗೆ ಬೇಜಾರು, ಪಾಲಿಸದಿದ್ದರೆ ತನ್ನ ಮನಸ್ಸಾಕ್ಷಿಗೆ ದ್ರೋಹ ಬಗೆದಂತೆ! ಇದಕ್ಕೆ ಪರಿಹಾರವೇನು?

  • ಚಿಂತನೆ
~.~
  • Login or register to post comments
  • 507 hits
  • ಈ ಪುಟವನ್ನು ಇ-ಮೇಯ್ಲ್ ಮಾಡಿ
  • Delicious
  • Google
  • Yahoo

ಪ್ರತಿಕ್ರಿಯೆಗಳು

ಕಾಮೆಂಟ್ ನೋಟ ಆಯ್ಕೆಗಳು

Select your preferred way to display the comments and click "Save settings" to activate your changes.
August 11, 2007 - 8:33pm — uniquesupri

ಉ: ಆದರ್ಶಗಳ ಕೊಲೆ!

uniquesupri's picture

Quote:
ಆದರ್ಶಗಳನ್ನು ಪಾಲಿಸಿದರೆ ಬೇರೆಯವರಿಗೆ ಬೇಜಾರು, ಪಾಲಿಸದಿದ್ದರೆ ತನ್ನ ಮನಸ್ಸಾಕ್ಷಿಗೆ ದ್ರೋಹ ಬಗೆದಂತೆ!

ಚಿಂತನಾರ್ಹವಾದ ವಿಚಾರ... ಬಹುಪಾಲು ಸಂದರ್ಭಗಳಲ್ಲಿ ಆದರ್ಶದ ಉನ್ಮಾದದಲ್ಲಿ ನಾವು ನಮ್ಮವರ ಭಾವನೆಗಳಿಗೆ ಸ್ಪಂದಿಸಲಾಗದಷ್ಟು ಸ್ವಾರ್ಥಿಗಳಾಗಿಬಿಡುತ್ತೇವೆ... ______________________
ಅಸಾಮಾನ್ಯವಾದ ಕೆಲಸಗಳನ್ನು ನಾವು ಮಾಡೋಕಾಗಲ್ಲ. ನಾವೇನಿದ್ದರೂ ಸಾಮಾನ್ಯ ಕೆಲಸವನ್ನು ಅಸಾಮಾನ್ಯ ಪ್ರೀತಿಯಿಂದ ಮಾಡಬಹುದು.
http://uniquesupri.wordpress.com
http://kalaravablog.blogspot.com

  • Login or register to post comments
  • link
  • ಈ ಪುಟವನ್ನು ಇ-ಮೇಯ್ಲ್ ಮಾಡಿ
August 13, 2007 - 9:41am — roshan_netla

ಉ: ಆದರ್ಶಗಳ ಕೊಲೆ!

roshan_netla's picture

ಸರಳ ಮದುವೆ ಬಗ್ಗೆ ಇಲ್ಲದ ಭಾವನೆ ಬೆಳೆಸಿಕೊಂಡು ಅದನ್ನು ಆದರ್ಶ ಅನ್ನೂದು ತಪ್ಪನಿಸುತ್ತೆ. ಸರಳ ಮದುವೆ ಅಂದರೆ ದುಂದು ವೆಚ್ಚ ಮಾಡದೆ ಆಗೊ ಮದುವೆ ಅಂತ ನನ್ನ ಅನಿಸಿಕೆ. ನಿಮ್ಮ ಜೀವನ ಸಂಗಾತಿಯನ್ನು ಪಡೆಯುವ ಆ ಗಳಿಗೆ ನೆನಪಲ್ಲಿ ಉಳಿಯುವಂತೆ ಬಂದು ಮಿತ್ರರನ್ನು ಸೇರಿಸಿ ನಿಮ್ಮ ಮಿತಿಯಲ್ಲಿ ಸಂಭ್ರಮಿಸಿದರೆ ಅದರಲ್ಲಿ ತಪ್ಪಿಲ ಅನ್ಸುತ್ತೆ. ಮತ್ತೆ ಸಮಜಸೇವೆ ಅದು ಹ್ರದಯದಿಂದ ಹುಟ್ಟಿ ಮಾಡುವಂತ ಕೆಲಸ ಹಣದಿಂದ ಅಲ್ಲ. ಆದರ್ಶ ಗಳನ್ನು ರೂಪಿಸುವಾಗ ಜಗ್ರತೆ ವಹಿಸಿದರೆ ಅದರ ಕೋಲೆ ಆಗೊದಿಲ್ಲ.

  • Login or register to post comments
  • link
  • ಈ ಪುಟವನ್ನು ಇ-ಮೇಯ್ಲ್ ಮಾಡಿ
August 13, 2007 - 9:42am — roshan_netla

ಉ: ಆದರ್ಶಗಳ ಕೊಲೆ!

roshan_netla's picture

ಸರಳ ಮದುವೆ ಬಗ್ಗೆ ಇಲ್ಲದ ಭಾವನೆ ಬೆಳೆಸಿಕೊಂಡು ಅದನ್ನು ಆದರ್ಶ ಅನ್ನೂದು ತಪ್ಪನಿಸುತ್ತೆ. ಸರಳ ಮದುವೆ ಅಂದರೆ ದುಂದು ವೆಚ್ಚ ಮಾಡದೆ ಆಗೊ ಮದುವೆ ಅಂತ ನನ್ನ ಅನಿಸಿಕೆ. ನಿಮ್ಮ ಜೀವನ ಸಂಗಾತಿಯನ್ನು ಪಡೆಯುವ ಆ ಗಳಿಗೆ ನೆನಪಲ್ಲಿ ಉಳಿಯುವಂತೆ ಬಂದು ಮಿತ್ರರನ್ನು ಸೇರಿಸಿ ನಿಮ್ಮ ಮಿತಿಯಲ್ಲಿ ಸಂಭ್ರಮಿಸಿದರೆ ಅದರಲ್ಲಿ ತಪ್ಪಿಲ ಅನ್ಸುತ್ತೆ. ಮತ್ತೆ ಸಮಜಸೇವೆ ಅದು ಹ್ರದಯದಿಂದ ಹುಟ್ಟಿ ಮಾಡುವಂತ ಕೆಲಸ ಹಣದಿಂದ ಅಲ್ಲ. ಆದರ್ಶ ಗಳನ್ನು ರೂಪಿಸುವಾಗ ಅದರ ಜಾಗ್ರತೆ ವಹಿಸಿದರೆ ಅದರ ಕೊಲೆ ಆಗೊದಿಲ್ಲ.

  • Login or register to post comments
  • link
  • ಈ ಪುಟವನ್ನು ಇ-ಮೇಯ್ಲ್ ಮಾಡಿ
August 13, 2007 - 11:34am — muralihr

ಉ: ಆದರ್ಶಗಳ ಕೊಲೆ!

muralihr's picture

ಆಗಿದ್ದು ಆಯ್ತು ! ನಿಮ್ಮ ಮಕ್ಕಳಿಗೆ ರಿಜಿಸ್ಟರ್ ನಲ್ಲಿ ಮದುವೆ ಮಾಡಿ.
ಆದರೆ ಆಗ ಮದುವೆಯಾದ ನೆನಪು ಬರೀ ರಿಜಿಸ್ಟರ್ ನಲ್ಲಿ ಉಳಿಯುತ್ತೆ.

  • Login or register to post comments
  • link
  • ಈ ಪುಟವನ್ನು ಇ-ಮೇಯ್ಲ್ ಮಾಡಿ
August 13, 2007 - 12:09pm — ಶ್ರೀನಿವಾಸ ವೀ. ಬ೦ಗೋಡಿ

ಉ: ಆದರ್ಶಗಳ ಕೊಲೆ!

ಶ್ರೀನಿವಾಸ ವೀ. ಬ೦ಗೋಡಿ's picture

@ಪ್ರಸಾದ,
ಖರೆ ಐತಿ. ನಾನೂ ಮೊದ್ಲು ಸಣ್ಣ ಕೆಲಸದಲ್ಲಿದ್ದಾಗ, ಸ್ವಲ್ಪ ಛಲೋ ಕೆಲ್ಸ ಸಿಕ್ಕಾಗ ಅದನ್ನ ಮಾಡ್ಬೇಕು ಇದನ್ನು ಮಾಡ್ಬೇಕು ಅಂತೆಲ್ಲಾ ಕನಸ ಕಾಣ್ತಿದ್ದೆ. ಆದ್ರ ಛಲೋ ಕೆಲ್ಸದ ಜೊತಿ ಮನಿ ಜವಾಬ್ದಾರಿನೂ ಜಾಸ್ತಿ ಆಯ್ತು. ಅಂದಕೊಂಡಿದ್ದೆಲ್ಲಾ ಮಾಡಕ್ಕಾಗಲ್ಲ. ಆದ್ರ ಅದಕ್ಕ ನಂಗ ಒಂಚೂರು ಬೇಜಾರಿಲ್ಲ. ಇದೇ ಜೀವನ ಅಲ್ಲಾ?

muralihr wrote:
ಆಗಿದ್ದು ಆಯ್ತು ! ನಿಮ್ಮ ಮಕ್ಕಳಿಗೆ ರಿಜಿಸ್ಟರ್ ನಲ್ಲಿ ಮದುವೆ ಮಾಡಿ.

ತಪ್ಪಲ್ಲಾ? ನಮ್ಮಪ್ಪ ಅವ್ವಾ ತಮ್ಮ ಕನಸನ್ನು ನಮ್ಮ ಮ್ಯಾಗ ಹೇರಿದ್ರ ನಮಗ ಬೇಜಾರಾಕ್ಕೇತಿ. ನಾವ ಹೆಂಗ ಮಕ್ಕಳಿಗೆ ಬಲವಂತ ಮಾಡೋದು? ಒಂದ ವ್ಯಾಳೆ ಅವ್ರ rigister ಮದ್ವಿ ಮಾಡ್ಕೋಂತಿವಿ ಅಂದ್ರ ಬ್ಯಾರೆ ಮಾತು.

  • Login or register to post comments
  • link
  • ಈ ಪುಟವನ್ನು ಇ-ಮೇಯ್ಲ್ ಮಾಡಿ

ಮೇಲಿನ ಪುಟವನ್ನು ಹೋಲುವ ಪುಟಗಳು - 'ಸಂಪದ' ಆರ್ಕೈವಿನಿಂದ

  • ಯೋಚನೆಗಳು
  • ಹೆಂಡತಿಯರನ್ನು ಕುರಿತ ಜೋಕುಗಳು (ಮಹಿಳೆಯರ ಕ್ಷಮೆ ಕೋರುತ್ತಾ!)
  • ಎರೆಡು ಪತ್ರಗಳು
  • ಪ್ರಾಮಾಣಿಕ ಹುಡುಗನ ಕೊಲೆ
  • ಪೂರ್ವಗ್ರಹಗಳು
Syndicate content

ಲೇಖಕರು

prasad3003's picture

ಪೂರ್ಣ ಹೆಸರು
ಗುರುಪ್ರಸಾದ ಕುರ್ತಕೋಟಿ

ಸದಸ್ಯರ ಪೂರ್ಣ ಪ್ರೊಫೈಲ್ ವೀಕ್ಷಿಸಿ

ವಾಟರ್ ಪೋರ್ಟಲ್: ದಿನದ ಚಿತ್ರ

ವಿದ್ಯುತ್ ಉಚಿತ, ಆದರೆ ನೀರಿಲ್ಲ!

(ಚಿತ್ರ: ಹರಿ ಪ್ರಸಾದ್ ನಾಡಿಗ್.)

ವಾರದ ಲೇಖನ
ವಿದ್ಯುತ್ ಉಚಿತ... ಷಾಕ್ ಖಚಿತ...!

ವಾರದ ವೀಡಿಯೋ
ಬಾನಿಗೊಂದು ಆಲಿಕೆ (ಮಳೆನೀರು ಸಂಗ್ರಹ)

ವಿಹರಿಸಿ

  • ಸಂಪದದಲ್ಲಿ ಬರೆಯುವ ಮುನ್ನ
  • ಹೊಸ ಬರಹ/ಚಿತ್ರ ಸೇರಿಸಿ
  • 'ಸಂಪದ' ಕುರಿತು ನಿಮ್ಮ ಸಲಹೆ/ಅಭಿಪ್ರಾಯಗಳನ್ನು ಕಳುಹಿಸಿ
  • Mailing Lists
  • ಚಟುವಟಿಕೆ
  • ಕನ್ನಡ ಬಟನ್ನುಗಳು
  • ಕನ್ವರ್ಟರ್

ಹೊಸ ಲೇಖನಗಳು

  • ಪರಿಧಿಯಿಂದ ಹೊರಗೆ ಹೋದ ವ್ಯಾಸ
  • ನೂರು ವರ್ಷ ಕವನಗಳನ್ನು ಬ್ಯಾನ್ ಮಾಡ
  • ಬನ್ನಿ..ಇಂದು ಕೆಲಗೇರಿ ಕೆರೆಯ ಶ್ರಾದ್ಧ, ಶ್ರದ್ಧೆಯಿಂದ ಮಾಡೋಣ!
  • ’ಎಂ.ಪಿ.ಶಂಕರ್’, ಒಬ್ಬ ಅದ್ವಿತೀಯ ಕಲಾಕಾರ ; ಕನ್ನಡ ಚಿತ್ರರಂಗದ, ನಿರ್ಮಾಪಕ, ನಿರ್ದೇಶಕ, ವಿತರಕ, ಹಾಗೂ ಅಭಿನಯಕಾರ, ಶಿವೈಕ್ಯರಾದರು !
  • ಚಾ(ವ)ಡಿ ಪಟ್ಟಾಂಗ
  • ‘ತಂಪು’ಪಾನೀಯ ಕಂಪನಿಯ ಒಡಲು ‘ಉರಿಸು’ವ ಬಗೆ!
  • ಕನ್ನಡಿಯೊಳಗಿನ ಗಂಟು

ಇತ್ತೀಚಿನ ಪ್ರತಿಕ್ರಿಯೆಗಳು

  • hpn
    ಉ: ಪರಿಧಿಯಿಂದ ಹೊರಗೆ ಹೋದ ವ್ಯಾಸ
    July 25, 2008 - 1:10am
  • uniquesupri
    ಉ: ಸೇತುವೆ ಇತ್ತಂತೆ ರಾಮನೇ ಒಡದನಂತೆ....!
    July 25, 2008 - 12:27am
  • srinivasps
    ಉ: ಸೇತುವೆ ಇತ್ತಂತೆ ರಾಮನೇ ಒಡದನಂತೆ....!
    July 25, 2008 - 12:23am
  • uniquesupri
    ಉ: ಸೇತುವೆ ಇತ್ತಂತೆ ರಾಮನೇ ಒಡದನಂತೆ....!
    July 25, 2008 - 12:17am
  • srinivasps
    ಉ: ವಿಶ್ವಾಸ ಮತ ಮತ್ತು ವಿಶ್ವಾಸಘಾತ
    July 25, 2008 - 12:10am
  • srinivasps
    ಉ: ಸೇತುವೆ ಇತ್ತಂತೆ ರಾಮನೇ ಒಡದನಂತೆ....!
    July 25, 2008 - 12:08am
  • uniquesupri
    ಉ: ವಿಶ್ವಾಸ ಮತ ಮತ್ತು ವಿಶ್ವಾಸಘಾತ
    July 25, 2008 - 12:06am
  • uniquesupri
    ಉ: ಸೇತುವೆ ಇತ್ತಂತೆ ರಾಮನೇ ಒಡದನಂತೆ....!
    July 25, 2008 - 12:01am
  • srinivasps
    ಉ: ವಿಶ್ವಾಸ ಮತ ಮತ್ತು ವಿಶ್ವಾಸಘಾತ
    July 25, 2008 - 12:00am
  • srinivasps
    ಉ: ಸೇತುವೆ ಇತ್ತಂತೆ ರಾಮನೇ ಒಡದನಂತೆ....!
    July 24, 2008 - 11:57pm
ಇನ್ನಷ್ಟು
ಈಗಿನಂತೆ 2 ಸದಸ್ಯರು ಮತ್ತು 40 ಅತಿಥಿಗಳು ಆನ್ಲೈನ್ ಇರುವರು.


ಸತ್ತೆನೆಂದೆನಬೇಡ; ಸೋತೆನೆಂದೆನಬೇಡ ।
ಬತ್ತಿತೆನ್ನೊಳು ಸತ್ತ್ವದೂಟೆಯೆನಬೇಡ ।।
ಮೃತ್ಯುವೆನ್ನುವುದೊಂದು ತೆರೆಯಿಳಿತ; ತೆರೆಯೇರು ।
ಮತ್ತೆ ತೋರ್ಪುದು ನಾಳೆ -- ಮಂಕುತಿಮ್ಮ ।।

— ಡಿ.ವಿ.ಜಿ.

ಮತ್ತಷ್ಟು: ಆರೋಗ್ಯ ಸಂಪದ | ಕೃಷಿ ಸಂಪದ | ನುಡಿಮುತ್ತುಗಳು

ಯೋಜನೆಗಳು: Kannada Learning Center | ಗ್ನು/ಲಿನಕ್ಸ್ ನಲ್ಲಿ ಕನ್ನಡ ತರಲು ನಡೆದಿರುವ ಕೆಲವು ಯೋಜನೆಗಳು | ಡಾಕ್ಯುಮೆಂಟೇಶನ್ Wiki | ಸಂಪದ ಅಂಚೆಪೆಟ್ಟಿಗೆಗಳು (Sampada Mailing Lists)

ಸ್ವರ್ಣ ಸಂಪದ ಸಂಪದ ಪಾಡ್ಕ್ಯಾಸ್ಟ್ (ಶ್ರಾವ್ಯ ಸಂದರ್ಶನಗಳು) | "ದಿ ಬೆಸ್ಟ್ ಆಫ್ ಸಂಪದ" | ಪ್ಲಾನೆಟ್ ಕನ್ನಡ

ಡೌನ್ಲೋಡ್ ಮಾಡಿಕೊಳ್ಳಿ:‌ ಬರಹ IME | ಫೈರ್ ಫಾಕ್ಸ್ | ಒಪೇರಾ

ಕೆಲವು ಹಕ್ಕುಗಳನ್ನು ಕಾಯ್ದಿರಿಸಲಾಗಿದೆ. ಸಂಪದ ಸಮುದಾಯ ಸಂಪದ ಫೌಂಡೇಶನ್ನಿನ ಒಂದು ಯೋಜನೆ.
Some rights reserved Sampada Initiative by Sampada Foundation, 2005 - 2008.
Terms of Use | Contact | About Sampada | Sampada in News/Media

The views expressed here are of the respective author(s) and Sampada administration does not necessarily subscribe to them.
RSS: All posts | Comments
Blogs | Podcasts

separator