ಪಯಣಿಸುವ ವೇಳೆಯಲಿ
ರಚನೆ: ಕೆ. ಎಸ್. ನರಸಿಂಹಸ್ವಾಮಿ
ಪಯಣಿಸುವ ವೇಳೆಯಲಿ ಬಂದು ಅಡಿಗೆರಗಿ
ಮುಂದೆ ನಿಂದಳು ನನ್ನ ಕೈಹಿಡಿದ ಹುಡುಗಿ
ಇನ್ನೆಂದು ಬರುವಿರೆಂದೆನ್ನ ಕೇಳಿದಳು
ಇನ್ನೊಂದು ತಿಂಗಳಿಗೆ ಎಂದು ಹೇಳಿದೆನು
ಕೆನ್ನೆ ಕೆಂಪಾಗಿರಲು ಸಂಜೆ ಮುಗಿಲಂತೆ
ಕಣ್ಣಿರಲು ತಿಳಿಬಾನ ಕಿರುತಾರೆಯಂತೆ
ವೇಣಿಯಿರಲು ವಸನ್ತ ಪುಷ್ಪವನದಂತೆ
ಮನಸು ಬಾರದು ನನಗೆ ಅಡಿಯನಿಡೆ ಮುಂದೆ
ಅಲ್ಲಲ್ಲಿ ನಿಂದವಳ ನೋಡುತಡಿಗಡಿಗೆ
ತೆರಳಿದೆನು ವಿರಹದಲಿ ನಿಲ್ದಾಣದೆಡೆಗೆ
ದಾರಿಯಲೆ ಕಂಡೊಬ್ಬ ಹಣ್ಣು ಮಾರುವನು
ಹೊರಟು ಹೋದುದು ಬಂಡಿ ಎಂದು ಹೇಳಿದೆನು
ಹಿಂದಿರುಗಿ ಬಂದೆನ್ನ ಒಂದೆ ಮಾತಿನಲಿ
ತಿಂಗಳಾಯಿತೆ ಎಂದಳೆನ್ನ ಹೊಸ ಹುಡುಗಿ

- Login or register to post comments
- 501 hits
- ಈ ಪುಟವನ್ನು ಇ-ಮೇಯ್ಲ್ ಮಾಡಿ





RSS: