ಸಂಪದದಲ್ಲಿ ಹೊಸತು! | Sign up | Login | Font Help
ಸಂಪದ
  • ಲೇಖನಗಳು
  • ಬ್ಲಾಗ್ಸ್
  • ಚರ್ಚೆಯ ವೇದಿಕೆ
  • ಚಿತ್ರಪುಟಗಳು
  • Podcasts
  • ಪುಸ್ತಕಗಳು
  • ಆರ್ಕೈವ್
  • ಸಂಪರ್ಕಿಸಿ
  • Sampada Foundation
  • ಅಂಚೆ ಪೆಟ್ಟಿಗೆ
  • Font Help

ತಿಳಿ ಹಾಸ್ಯ ಮರೆತಿಲ್ಲ: "ಮಜಾವಾಣಿ"

ಸಂಪದ

ಪ್ರಾದೇಶಿಕ ಪಕ್ಷ v/s ರಾಷ್ಟ್ರೀಯ ಪಕ್ಷ

April 1, 2008 - 5:27pm — Nagendra.trasi

ಇತ್ತೀಚೆಗೆ ಜೈತ್ರಯಾತ್ರೆ ಆರಂಭಿಸಿರುವ ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿಯವರು ಬೆಳಗಾವಿಯಲ್ಲಿ ಕಾರ್ಯಕರ್ತರ ಸಭೆಯನ್ನು ಉದ್ದೇಶಿಸಿ ಮಾತನಾಡುತ್ತ, ರಾಜ್ಯದ ಅಭಿವೃದ್ಧಿ ವಿಷಯ ಬಂದಾಗ ರಾಷ್ಟ್ರೀಯ ಪಕ್ಷಗಳು ದ್ವಂದ್ವ ನೀತಿ ಅನುಸರಿಸುತ್ತವೆ.ಕೇಂದ್ರದಿಂದ ನ್ಯಾಯ ಸಿಗುವುದಿಲ್ಲ. ರಾಜ್ಯಕ್ಕೆ ತಕ್ಕ ಗೌರವ ಸಲ್ಲಬೇಕಾದರೆ ತಮಿಳುನಾಡನ್ನು ಮಾದರಿಯಾಗಿಟ್ಟುಕೊಂಡು ಪ್ರಾದೇಶಿಕ ಪಕ್ಷವನ್ನು ಬೆಂಬಲಿಸಬೇಕು ಎಂಬುದಾಗಿ ಹೇಳಿದ್ದರು.

ಆದರೆ ರಾಜಕೀಯವಾಗಿ ಕುಮಾರಸ್ವಾಮಿಯವರ ಹೇಳಿಕೆಯನ್ನು ತಿರಸ್ಕರಿಸಬಹುದು ಅಥವಾ ಅವರ ವಿಶ್ವಾಸದ್ರೋಹವನ್ನೇ ನೆಪವಾಗಿಟ್ಟುಕೊಂಡು ಹಂಗಿಸಬಹುದು. ನಾವು ಅವೆರಡನ್ನೂ ಬಿಟ್ಟು ರಾಜ್ಯದ ವಿಷಯವನ್ನು ಗಮದಲ್ಲಿಟ್ಟುಕೊಂಡರೆ, ಕುಮಾರಸ್ವಾಮಿಯವರು ಹೇಳಿದ ಮಾತಿನಲ್ಲಿ ಸತ್ಯಾಂಶ ಇದೆ. ಅಲ್ಲದೇ 1996ರ ಬಳಿಕ ಹಲವು ಪ್ರಾದೇಶಿಕ ಪಕ್ಷಗಳು ರಾಷ್ಟ್ರೀಯ ರಾಜಕಾರಣದಲ್ಲಿ ಪ್ರಮುಖ ಪಾತ್ರವಹಿಸಿರುವುದನ್ನು ಮನಗಾಣಬೇಕಾಗಿದೆ. 1960ರಲ್ಲಿ ಹಿಂದಿ ವಿರೋಧಿ ಚಳವಳಿಯೊಂದಿಗೆ ಜನ್ಮತಳೆದ ಡಿಎಂಕೆ ಜನಪ್ರಿಯವಾಗುವುದರೊಂದಿಗೆ ರಾಜಕೀಯವಾಗಿ ಬಹಳಷ್ಟು ಪ್ರಬಲವಾಯಿತು.

1967ರಲ್ಲಿ ರಾಷ್ಟ್ರೀಯ ಪಕ್ಷವಾಗಿದ್ದ ಕಾಂಗ್ರೆಸ್ ಬಲವನ್ನು ಕುಗ್ಗಿಸುವ ಮೂಲಕ ಡಿಎಂಕೆಯ ಸಿಎನ್ ಅಣ್ಣಾದೊರೈ ಪ್ರಥಮ ಮುಖ್ಯಮಂತ್ರಿಯಾಗಿ ಆಯ್ಕೆಗೊಂಡಿದ್ದರು. ಅಣ್ಣಾ ಮರಣಾ ನಂತರ 1969ರಲ್ಲಿ ಕರುಣಾನಿಧಿ ಮುಖ್ಯಮಂತ್ರಿ ಗಾದಿಗೆ ಏರಿದ್ದರು. ಬಳಿಕ ಕಾಂಗ್ರೆಸ್ ತೊರೆದು ಡಿಎಂಕೆ ಸೇರಿದ್ದ ತಮಿಳು ಚಿತ್ರರಂಗದ ಸೂಪರ್‌ಸ್ಟಾರ್ ಎಂ.ಜಿ.ರಾಮಚಂದ್ರನ್(ಎಂಜಿಆರ್) ಕರುಣಾನಿಧಿ ನಡುವಿನ ವಿರಸದಿಂದಾಗಿ 1972ರಲ್ಲಿ ಎಡಿಎಂಕೆ(ನಂತರ ಎಐಎಡಿಎಂಕೆ ಆಗಿದ್ದು) ಅನ್ನು ಹುಟ್ಟು ಹಾಕುವ ಮೂಲಕ ಡಿಎಂಕೆಗೆ ಪ್ರಬಲ ಪ್ರತಿಸ್ಪರ್ಧಿಯಾಗಿ ಬೆಳೆದಿದೆ. ಇಂದು ತಮಿಳುನಾಡಿನ ಡಿಎಂಕೆ ಕೇಂದ್ರದಲ್ಲಿ ಬಲವಾಗಿ ಧ್ವನಿ ಎತ್ತುವಷ್ಟು ಶಕ್ತವಾಗಿದೆ. ಅದಕ್ಕಿಂತಲೂ ಮುಖ್ಯವಾಗಿ ತಮಿಳುನಾಡಿನಲ್ಲಿ ಪ್ರತಿ ಮನೆಯಲ್ಲೂ ಗ್ಯಾಸ್ ಸಿಲೆಂಡರ್ (ಪ್ರತಿಮನೆಯಲ್ಲಿ ಟಿವಿ)ಇದೆ, ಇಲ್ಲಿನ ರೈಲು ವ್ಯವಸ್ಥೆ, ಪ್ಲೈ ಒವರ್, ಬಸ್ ಟಿಕೇಟ್ ದರ, ವಿದ್ಯುತ್ ದರ ಎಲ್ಲವೂ ಜನಪರವಾಗಿದೆ.

ಇದು ಸಾಧ್ಯವಾಗಿದ್ದು ಪ್ರಾದೇಶಿಕ ಪಕ್ಷಗಳ ಹೋರಾಟದ ಫಲ. ಅದೇ ರೀತಿಯಾಗಿ ರಾಜ್ಯದಲ್ಲಿನ ಕಾಂಗ್ರೆಸ್ ಆಡಳಿತಕ್ಕೆ ಸೆಡ್ಡು ಹೊಡೆದು 1982 ಮಾರ್ಚ್ 29ರಂದು ತೆಲುಗು ಸಿನಿಮಾರಂಗದ ಖ್ಯಾತ ಚಿತ್ರನಟ ಎನ್.ಟಿ.ರಾಮರಾವ್(ಎನ್‌ಟಿಆರ್) ತೆಲುಗು ದೇಶಂ ಪಕ್ಷವನ್ನು ಸ್ಥಾಪಿಸಿದರು.1984ರಲ್ಲಿ ನಡೆದ ಲೋಕಸಭೆ ಚುನಾವಣೆಯಲ್ಲಿ 35ಸೀಟುಗಳನ್ನು ಪಡೆದಿತ್ತು. 1999-2004ರಲ್ಲಿ ನಡೆದ 13ನೇ ಲೋಕಸಭಾ ಚುನಾವಣೆಯಲ್ಲೇ ಅದು ನಾಲ್ಕನೇ (29ಸೀಟುಗಳನ್ನು ಗಳಿಸಿತ್ತು) ದೊಡ್ಡ ಪಕ್ಷವಾಗಿ ಹೊರಹೊಮ್ಮಿತ್ತು. ಎರಡು ಬಾರಿ ಮುಖ್ಯಮಂತ್ರಿಯಾಗಿ ಅಧಿಕಾರ ನಡೆಸಿದ್ದರು. ನಂತರ 1996ರಲ್ಲಿ ಚಂದ್ರಬಾಬು ನಾಯ್ಡು ಅವರು ಅಧಿಕಾರಕ್ಕೆ ಬಂದ ಮೇಲೆ ಆಂಧ್ರಪ್ರದೇಶ, ಹೈದರಾಬಾದ್ ಹೆಸರು ಜಾಗತಿಕವಾಗಿ ಬೆಳೆಯಿತು.

ಕರ್ನಾಟಕ ರಾಜ್ಯ ರಾಜಕಾರಣದಲ್ಲಿ 1969ರಲ್ಲಿ ಕಾಂಗ್ರೆಸ್‌‌ಗೆ ಸೇರ್ಪಡೆಗೊಂಡಿದ್ದ ರಾಮಕೃಷ್ಣ ಹೆಗಡೆಯವರು, ನಂತರದಲ್ಲಿ 1975ರ ತುರ್ತುಪರಿಸ್ಥಿತಿಯಿಂದ ರೋಸಿಹೋದ ಅವರು,ಜನತಾ ಪಕ್ಷವನ್ನು ಸೇರಿದ್ದರು. ನಿಜಲಿಂಗಪ್ಪ ಹಾಗೂ ವೀರೇಂದ್ರ ಪಾಟೀಲ್ ಮಂತ್ರಿಮಂಡಲದಲ್ಲಿ ಮಂತ್ರಿಯಾಗಿ ಸೇವೆ ಸಲ್ಲಿಸಿದ್ದ, ರಾಮಕೃಷ್ಣ ಹೆಗಡೆ 1983ರಲ್ಲಿ ಬಿಜೆಪಿ ಮತ್ತು ಎಡಪಕ್ಷಗಳ ಬಾಹ್ಯ ಬೆಂಬಲದೊಂದಿಗೆ ಕಾಂಗ್ರೆಸ್ಸೇತರ ಮುಖ್ಯಮಂತ್ರಿಯಾಗಿ ಅಧಿಕಾರ ವಹಿಸಿಕೊಂಡರು. ಅವರ ಅಧಿಕಾರಾವಧಿಯಲ್ಲಿನ ಪಂಚಾಯತ್ ರಾಜ್ ವ್ಯವಸ್ಥೆ, ಸಾರ್ವಜನಿಕ ವ್ಯವಸ್ಥೆಯಲ್ಲಿ ಪಾರದರ್ಶಕತೆ ಹೀಗೆ ಪ್ರಮುಖ ನಿರ್ಧಾರಗಳು ಜನಪರವಾಗಿದ್ದವು.

ಅಲ್ಲದೆ ಮೌಲ್ಯಾಧಾರಿತ ರಾಜಕಾರಣಿ ಎಂದೆ ಹೆಸರು ಪಡೆದಿದ್ದರು(ಹಗರಣಗಳ ವಿವಾದಗಳಲ್ಲಿ ಸಿಲುಕಿದ್ದು ಕೂಡ ಅಷ್ಟೇ ವಿಪರ್ಯಾಸ) ನಂತರ ಆರೋಪ, ಅಧಿಕಾರ, ಒಳರಾಜಕೀಯ, ಹಗರಣಗಳಿಂದ 1986ರಲ್ಲಿ ರಾಜೀನಾಮೆ ನೀಡಿದ ಹೆಗಡೆ, ನಂತರ ಮತ್ತೆ ಅಧಿಕಾರಕ್ಕೆ ಬಂದ ಅವರು 1988ರವರೆಗೆ ಮುಖ್ಯಮಂತ್ರಿಯಾಗಿದ್ದರು.

ಬಳಿಕ ರಾಷ್ಟ್ರೀಯ ನವನಿರ್ಮಾಣ ವೇದಿಕೆ, ನಂತರ ಲೋಕಶಕ್ತಿಯನ್ನು ಹುಟ್ಟುಹಾಕಿದರು ಕೂಡ ಅದು ದುರ್ಬಲಗೊಂಡಿತ್ತು. ಆದರೆ ಇಂದು ಜನತಾಪಕ್ಷ ಒಡೆದು, ಒಡೆದು ಅವುಗಳೇ ತಮ್ಮ ಅಸ್ತಿತ್ವಕ್ಕೆ ಧಕ್ಕೆ ತಂದಿಕೊಂಡಿರುವುದು ಹಾಗೂ ಸಮಾಜವಾದಿಗಳಾಗಿ, ಕಾಂಗ್ರೆಸ್ ವಿರೋಧಿ ಧೋರಣೆ ಹೊಂದಿದ್ದ ನಾಯಕರುಗಳೇ ಕಾಂಗ್ರೆಸ್ ಸೇರ್ಪಡೆಗೊಂಡಿರುವುದು ದುರಂತವಲ್ಲದೆ ಇನ್ನೇನು. ಇವತ್ತು ಕರ್ನಾಟಕದ ಪ್ರತಿಯೊಂದು ಸಮಸ್ಯೆಗೂ ನಮ್ಮ ರಾಜಕಾರಣಿಗಳು ಕೇಂದ್ರದಲ್ಲಿ ಹ್ಯಾಪು ಮೋರೆ ಹಾಕಿಕೊಳ್ಳವಂತಾಗಿದೆ, ಅದೇ ತಮಿಳುನಾಡು ವಿಷಯಕ್ಕೆ ಬನ್ನಿ ಕಾವೇರಿ ವಿವಾದ, ಹೊಗೇನಕಲ್ ವಿವಾದ, ವಿದ್ಯುತ್ ಸರಬರಾಜು ಯಾವುದೇ ಇರಲಿ ತನ್ನ ರಾಜ್ಯದ ಹಿತಾಸಕ್ತಿಯನ್ನು ಬಲಿಗೊಡುವುದಿಲ್ಲ, ಅದ್ಯಾಕೆ ಇತ್ತೀಚೆಗೆ ಮಧುರೈಯಲ್ಲಿ ಸಾಂಪ್ರದಾಯಿಕ ಹೆಸರಲ್ಲಿ ನಡೆಯುವ ಜಲ್ಲಿಕಾಟ್ಟು (ಗೂಳಿಕಾಳಗ)ಗೆ ಸ್ವತಃ ಸರಕಾರವೇ ಸರ್ವೊಚ್ಛನ್ಯಾಯಾಲಯಕ್ಕೆ ಅಪೀಲು ಸಲ್ಲಿಸಿ, ಅದರಿಂದ ಯಾರಿಗೂ ಜೀವಹಾನಿ ಇಲ್ಲ, ಜಲ್ಲಿಕಾಟ್ಟುಗೆ ಕೆಲವು ಶತಮಾನಗಳ ಇತಿಹಾಸ ಇದೆ ಎಂಬುದಾಗಿ ಸಮರ್ಥಿಸಿಕೊಂಡಿತ್ತು. ಆದರೂ ನ್ಯಾಯಾಲಯ ಷರತ್ತನ್ನು ವಿಧಿಸಿ ಗೂಳಿಕಾಳಗಕ್ಕೆ ಅನುಮತಿ ನೀಡಿತ್ತಾದರೂ,ಇಬ್ಬರು ಪ್ರಾಣಕಳೆದುಕೊಂಡಿದ್ದರು.

ಇಂದು ತಮಿಳುನಾಡಿನಲ್ಲಿ ಡಿಎಂಕೆ (ದ್ರಾವಿಡ ಮುನ್ನೇತ್ರಾ ಕಜಗಂ), ಎಐಡಿಎಂಕೆ (ಅಣ್ಣಾ ದ್ರಾವಿಡ ಮುನ್ನೇತ್ರಾ ಕಜಗಂ), ಆಂಧ್ರಪ್ರದೇಶದಲ್ಲಿ ತೆಲುಗುದೇಶಂ ಪಕ್ಷ, ರಾಷ್ಟ್ರೀಯ ತೆಲಂಗಾಣ ಪಕ್ಷ,ಇಂಡಿಯಾ ಫಾರ್ವರ್ಡ್ ಬ್ಲಾಕ್(ಪಶ್ಚಿಮಬಂಗಾಳ), ಆಲ್ ಇಂಡಿಯಾ ತೃಣಮೂಲ ಕಾಂಗ್ರೆಸ್ (ಮೇಘಾಲಯ,ಪಶ್ಚಿಮಬಂಗಾಲ),ಅಸ್ಸೋಮ್ ಗಣ ಪರಿಷತ್ (ಅಸ್ಸಾಂ), ಬಿಜು ಜನತಾದಳ (ಒರಿಸ್ಸಾ),ಇಂಡಿಯನ್ ಫೆಡರಲ್ ಡೆಮೋಕ್ರೆಟಿಕ್ ಪಾರ್ಟಿ(ಕೇರಳ), ಇಂಡಿಯನ್ ನ್ಯಾಶನಲ್ ಲೋಕದಳ (ಹರಿಯಾಣ),ಇಂಡಿಯನ್ ಯೂನಿಯನ್ ಮುಸ್ಲಿಂ ಲೀಗ್(ಕೇರಳ),ಜನತಾದಳ (ಬಿಹಾರ,ಜಾರ್ಖಂಡ್,ನಾಗಾಲ್ಯಾಂಡ್) ರಾಷ್ಟ್ರೀಯ ಜನತಾದಳ (ಬಿಹಾರ್,ಜಾರ್ಖಂಡ್),ಸಮಾಜವಾದಿ ಪಕ್ಷ (ಮಧ್ಯಪ್ರದೇಶ, ಉತ್ತರಪ್ರದೇಶ,ಉತ್ತರಖಂಡ), ಶಿವಸೇನೆ(ಮಹಾರಾಷ್ಟ್ರ),ಯುನೈಟೆಡ್ ಗೋವನ್ಸ್ ಡೆಮೋಕ್ರೆಟಿಕ್ ಪಾರ್ಟಿ(ಗೋವಾ)ಇವು ಪ್ರಮುಖ ಪ್ರಾದೇಶಿಕ ಪಕ್ಷಗಳು. ತಮಿಳುನಾಡಿನಲ್ಲಂತೂ ಜನ ಒಮ್ಮೆ ಕರುಣಾನಿಧಿಯವರನ್ನು ಅಧಿಕಾರದ ಗದ್ದುಗೆ ಏರಿಸಿದರೆ, ಮತ್ತೊಮ್ಮೆ ಎಐಎಡಿಎಂಕೆ ಜಯಲಲಿತಾ ಅವರನ್ನು, ಹೀಗೆ ಕಳೆದ 40ವರ್ಷಗಳಿಂದ ಪ್ರಾದೇಶಿಕ ಪಕ್ಷಗಳೇ ಇಲ್ಲಿ ಪ್ರಾಬಲ್ಯ ಪಡೆದಿದೆ.

ಯಾವುದೇ ರಾಷ್ಟ್ರೀಯ ಪಕ್ಷಗಳು ತಮ್ಮ ಬಲವನ್ನು ಹೆಚ್ಚಿಸಿಕೊಳ್ಳಲು ಸಾಧ್ಯವಾಗಿಲ್ಲ. ಉತ್ತರಪ್ರದೇಶದಲ್ಲಿಯೂ ಬಹುಜನ್ ಸಮಾಜ ಪಕ್ಷ ಗಟ್ಟಿಯಾಗಿ ನೆಲೆಯೂರಿದೆ, ಆಂಧ್ರಪ್ರದೇಶದಲ್ಲಿ ತೆಲುಗು ದೇಶಂ, ತೆಲಂಗಾಣ ರಾಷ್ಟ್ರ ಸಮಿತಿ ಬಲವರ್ಧಿಸಿಕೊಂಡಿವೆ. ಕರ್ನಾಟಕದ ಜನ ಹೆಸರಿಗಷ್ಟೇ ಬುದ್ಧಿವಂತರಾಗಿದ್ದೇವೆ. ರಾಷ್ಟ್ರೀಯ ಪಕ್ಷಗಳಲ್ಲಿನ ರಾಜಕೀಯ ನಾಯಕರಿಗೆ ಇಚ್ಛಾಶಕ್ತಿಯ ಕೊರತೆ ತುಂಬಿಕೊಂಡಿದ್ದರೆ, ಕೇವಲ ಭರವಸೆಗಳ ಮೂಟೆಯೊಂದಿಗೆ ಅಧಿಕಾರದ ಗದ್ದುಗೆ ಏರುವುದು ಮಾತ್ರ ಮುಖ್ಯವಾಗಿದೆ ವಿನಃ ಜನಪರ ಕಾಳಜಿ ಬೇಕಾಗಿಲ್ಲ ಎನ್ನುವುದಕ್ಕೆ ರಾಜ್ಯದಲ್ಲಿ ಹಲವಾರು ವರ್ಷಗಳಿಂದ ಬಗೆಹರಿಯದೆ ಇರುವ ಸಮಸ್ಯೆಗಳೇ ಸಾಕ್ಷಿ. ಕರ್ನಾಟಕದ ಸಮಸ್ಯೆಯನ್ನು ಪಟ್ಟು ಹಿಡಿದು ಮಾಡಿಸಿಕೊಳ್ಳಲಿಕ್ಕಾದರೂ ಒಂದು ಪ್ರಾದೇಶಿಕ ಪಕ್ಷದ ಅಗತ್ಯವಿದೆ, ಆದರೆ ಬೆಕ್ಕಿನ ಕೊರಳಿಗೆ ಗಂಟೆ ಕಟ್ಟುವವರು ಯಾರು ಎಂಬ ಪ್ರಶ್ನೆಯಂತೆ, ಅಂತಹ ನಾಯಕರು ಮತ್ತು ಮತದಾರರು ಯಾರು...!!

  • ಪ್ರಚಲಿತ
~.~
  • Login or register to post comments
  • 269 hits
  • ಈ ಪುಟವನ್ನು ಇ-ಮೇಯ್ಲ್ ಮಾಡಿ
  • Delicious
  • Google
  • Yahoo
  • ನಿರ್ವಾಹಕರ ಗಮನಕ್ಕೆ ತನ್ನಿ

ಪ್ರತಿಕ್ರಿಯೆಗಳು

ಕಾಮೆಂಟ್ ನೋಟ ಆಯ್ಕೆಗಳು

Select your preferred way to display the comments and click "Save settings" to activate your changes.
April 2, 2008 - 8:03am — Sunil Jayaprakash

ಉ: ಪ್ರಾದೇಶಿಕ ಪಕ್ಷ v/s ರಾಷ್ಟ್ರೀಯ ಪಕ್ಷ

Sunil Jayaprakash's picture

ಕರ್ನಾಟಕದ ಜನ ಹೆಸರಿಗಷ್ಟೇ ಬುದ್ಧಿವಂತರಾಗಿದ್ದೇವೆ.

ಅಪ್ಪಟ ಸತ್ಯ!!!!

  • Login or register to post comments
  • link
  • ಈ ಪುಟವನ್ನು ಇ-ಮೇಯ್ಲ್ ಮಾಡಿ
  • ನಿರ್ವಾಹಕರ ಗಮನಕ್ಕೆ ತನ್ನಿ
April 2, 2008 - 12:10pm — girish.rajanal

ಉ: ಪ್ರಾದೇಶಿಕ ಪಕ್ಷ v/s ರಾಷ್ಟ್ರೀಯ ಪಕ್ಷ

girish.rajanal's picture

ನಿಮ್ಮ ಲೇಖನ ಚೆನ್ನಾಗಿದೆ, ಅದರಲ್ಲಿ ಅರಿಯಬೇಕಾದ ಅಂಶ ಸಾಕಷ್ಟಿದೆ.
ಈ ವಿಚಾರವಾಗಿ ಬಹಿರಂಗ ಸಭೆ ಮತ್ತು ಚರ್ಚೆ ನಡೆದರೆ ತಕ್ಕಮಟ್ಟಿಗೆ ಜನರಿಗೆ ತಿಳಿಗೊಡಬಹುದು.
ಇನ್ನಷ್ಡು ಸಲಹೆ ಅಭಿಪ್ರಾಯಗಳು ಬರಲಿ.

ನಿಮ್ಮ,
ಗಿರೀಶ ರಾಜನಾಳ
ನನಗಿರುವುದು ಒಂದೇ ಕನ್ನಡ.

  • Login or register to post comments
  • link
  • ಈ ಪುಟವನ್ನು ಇ-ಮೇಯ್ಲ್ ಮಾಡಿ
  • ನಿರ್ವಾಹಕರ ಗಮನಕ್ಕೆ ತನ್ನಿ
April 2, 2008 - 12:21pm — roshan_netla

ಉ: ಪ್ರಾದೇಶಿಕ ಪಕ್ಷ v/s ರಾಷ್ಟ್ರೀಯ ಪಕ್ಷ

roshan_netla's picture

ನಮಗೆ ಪಕ್ಷಗಳಿಗಿಂತ ಒಳ್ಳೆಯ ನಾಯಕರುಗಳು ಬೇಕು.. ನಮ್ಮ ಬಾಷೆ, ನಾಡು ನುಡಿ ಬಗ್ಗೆ ಪ್ರೀತಿ ಇರುವ, ಸ್ವಾರ್ಥ ವಿಲ್ಲದ ನಾಯಕರು ಬೇಕು. ನೀವು ತಮಿಳುನಾಡನ್ನು ಮಾದರಿಯಾಗಿ ಯಾಕೆ ತೆಗೆದುಕೊಳುತ್ತೀರಿ? ಗುಜರಾತ್, ಪ.ಬಂಗಾಲ ಇವೆಲ್ಲ ರಾಷ್ಟ್ರೀಯ ಪಕ್ಷಗಳ ಆಡಳಿತದಲ್ಲಿ ಮುಂದೆಬಂದಿವೆಯಲ್ಲ?..ನಮ್ಮ ಯೆಲ್ಲಾ ಪಕ್ಷದ ನಾಯಕರುಗಳು ಹಾಗು ಸಂಗಟನೆಗಳ ನಾಯಕರುಗಳು ಪ್ರಚಾರ ಪ್ರೀಯರೇ ಹೊರತು ರಾಜ್ಯದ ಬಗ್ಗೆ ಪ್ರೀತಿಇರುವವರಲ್ಲ. ಕುಮಾರ ಸ್ವಾಮಿ ಹಾಗು ಅವರಪ್ಪ ಮುಖ್ಯಮಂತ್ರಿ, ಹಾಗು ಕೇಂದ್ರ ಸಂಸದರಾಗಿರುವಾಗಲೇ ಕಾವೇರಿ, ಮರಾಠಿ ಗಡಿ..ಗಲಬೆ ನಡೆದುವಲ್ಲ? ಯೇನುಮಾಡೀದರು!!

  • Login or register to post comments
  • link
  • ಈ ಪುಟವನ್ನು ಇ-ಮೇಯ್ಲ್ ಮಾಡಿ
  • ನಿರ್ವಾಹಕರ ಗಮನಕ್ಕೆ ತನ್ನಿ
April 2, 2008 - 6:39pm — Nagendra.trasi

ಉ: ಪ್ರಾದೇಶಿಕ ಪಕ್ಷ v/s ರಾಷ್ಟ್ರೀಯ ಪಕ್ಷ

Nagendra.trasi's picture

ರೋಶನ್‌‌ರೆ,

ನಿಮ್ಮ ಪ್ರತಿಕ್ರಿಯೆ ಧನ್ಯವಾದಗಳು, ತಮಿಳುನಾಡು ಮಾದರಿಯಾಗಬೇಕು ಎಂಬ ಮಾತು ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿಯವರದ್ದು, ಆ ಮಾತನ್ನ ನಾನು ಬಳಸಿಕೊಂಡು ಪ್ರಾದೇಶಿಕ ಪಕ್ಷಗಳ ಪ್ರಾಮುಖ್ಯತೆಯನ್ನು ಹೇಳಿದ್ದೇನೆ, ಅಲ್ಲದೇ ನಾನು ನೆರೆಯ ಆಂಧ್ರ ಪ್ರದೇಶವನ್ನೂ ಕೂಡ, ಹಾಗೇ ಹೆಚ್ಚಿನ ರಾಜ್ಯಗಳಲ್ಲಿ ಇರುವ ಪ್ರಾದೇಶಿಕ ಪಕ್ಷಗಳನ್ನೂ ಉಲ್ಲೇಖಿಸಿದ್ದೇನೆ. ಪಶ್ಚಿಮಬಂಗಾಳದಲ್ಲಿ ಇರುವುದು ಎಡಪಕ್ಷದ ಆಡಳಿತ ಅದು ರಾಷ್ಟ್ರೀಯ ಪಕ್ಷವಾಗಿ ಗುರುತಿಸಿಕೊಂಡಿರುವುದು ಸತ್ಯ, ಕೇವಲ ಒಂದೆರಡು ರಾಜ್ಯಗಳಲ್ಲಿ ರಾಷ್ಟ್ರೀಯ ಪಕ್ಷಗಳು ಅಭಿವೃದ್ಧಿ, ಸಾಧನೆ ಸರಿ, ಆದರೂ ನೀವೇ ಹೇಳಿದಂತೆ ನಾಡು, ನುಡಿ, ಭಾಷೆ ಈ ಎಲ್ಲಾ ಅಂಶವನ್ನು ಗಮನದಲ್ಲಿಟ್ಟು ನಾನು ಪ್ರಾದೇಶಿಕ ಪಕ್ಷದ ಬಗ್ಗೆ ಅಭಿಪ್ರಾಯ ವ್ಯಕ್ತಪಡಿಸಿದ್ದೆ.

ನಾಗೇಂದ್ರ ತ್ರಾಸಿ.

  • Login or register to post comments
  • link
  • ಈ ಪುಟವನ್ನು ಇ-ಮೇಯ್ಲ್ ಮಾಡಿ
  • ನಿರ್ವಾಹಕರ ಗಮನಕ್ಕೆ ತನ್ನಿ

ಮೇಲಿನ ಪುಟವನ್ನು ಹೋಲುವ ಪುಟಗಳು - 'ಸಂಪದ' ಆರ್ಕೈವಿನಿಂದ

  • ಕನ್ನಡ ನಾಡಿಗೆ ಪ್ರಾದೇಶಿಕ ಪಕ್ಷ ಬೇಕೆ?
  • ಜನತಾದಳ(ಕರ್ನಾಟಕ)yes!-ಈಡೇರದ ಕನಸು:(
  • ಇದು ಹೊಸ ಇನ್ನಿಂಗ್ಸ್ ಗುರು
  • ಚುನಾವಣಾ ಭವಿಷ್ಯ
  • ನಮ್ಮ ಮತ ಯಾರಿಗೆ?
Syndicate content

ಲೇಖಕರು

Nagendra.trasi's picture

ಪೂರ್ಣ ಹೆಸರು
ನಾಗೇಂದ್ರ .ತ್ರಾಸಿ

ಪರಿಚಯ

ಕಳೆದ ಹತ್ತು ವರ್ಷಗಳಿಂದ ಪತ್ರಿಕೋದ್ಯಮಿಯಾಗಿ ಕಾರ್ಯನಿರ್ವಹಿಸಿದ್ದು, ಇದೀಗ ಚೆನ್ನೈಯ ವೆಬ್ ದುನಿಯಾ ಡಾಟ್ ಕಾಮ್‌‌ನಲ್ಲಿ ಆನ್ ಲೈನ್ ಪತ್ರಕರ್ತನಾಗಿ ಕಾರ್ಯನಿರ್ವಹಿಸುತ್ತಿದ್ದೇನೆ.

ಸದಸ್ಯರ ಪೂರ್ಣ ಪ್ರೊಫೈಲ್ ವೀಕ್ಷಿಸಿ

Dr. Ullas Karanth (ಡಾ. ಉಲ್ಲಾಸ್ ಕಾರಂತ)
ನಿರೀಕ್ಷಿಸಿ!

ವಾಟರ್ ಪೋರ್ಟಲ್: ದಿನದ ಚಿತ್ರ

ಬಾವಿ

ಮೂಡಬಿದ್ರಿಯ ಸಾವಿರ ಬಸದಿಯ ಬಳಿ ಒಂದು ಬಾವಿ.
(ಫೋಟೋ: ಸುದರ್ಶನ್ (ಅನಿವಾಸಿ))

ವಾರದ ಲೇಖನ
ಬೃಹತ್ ನೀರಾವರಿ ಯೋಜನೆಗಳು: ಮಹಾ ಅಸಂಗತಕ್ಕೊಂದು ಮುನ್ನುಡಿ - ಎನ್ ಎ ಎಂ ಇಸ್ಮಾಯಿಲ್

ವಾರದ ವೀಡಿಯೋ
ಬಾನಿಗೊಂದು ಆಲಿಕೆ (ಮಳೆನೀರು ಸಂಗ್ರಹ)

ಮತ್ತಷ್ಟು...

ವಿಹರಿಸಿ

  • ಸಂಪದದಲ್ಲಿ ಬರೆಯುವ ಮುನ್ನ
  • ಹೊಸ ಬರಹ/ಚಿತ್ರ ಸೇರಿಸಿ
  • 'ಸಂಪದ' ಕುರಿತು ನಿಮ್ಮ ಸಲಹೆ/ಅಭಿಪ್ರಾಯಗಳನ್ನು ಕಳುಹಿಸಿ
  • ಚಟುವಟಿಕೆ
  • ಕನ್ನಡ ಬಟನ್ನುಗಳು
  • ಕನ್ವರ್ಟರ್

ಹೊಸ ಲೇಖನಗಳು

  • ಜೀವ ಕಾಯುವುದೇತಕೆ?
  • ಅಮೆರಿಕದ ಸಾರ್ವಜನಿಕ ಸಂಸ್ಥೆಗಳು-೧
  • ಲ೦ಡನ್ ಪ್ರವಾಸಕಥನ ಭಾಗ ೧೫: ಸೃಜನಶೀಲತೆ ಹುಟ್ಟುವ ಕೇ೦ದ್ರದ ಸುತ್ತ, ಮುತ್ತ!
  • ಶಬಚತನ, ಸೋಮಾರಿತನ, ಕೆಲಸದಲ್ಲಿ ಒಲವಿಲ್ಲದಿರುವಿಕೆ, ಎಲ್ಲದರಲ್ಲೂ ಉಪೇಕ್ಷೆ ; ಇದಕ್ಕೇನು ಮಾಡುವುದು ಹೇಳಿ ?
  • ಬದುಕಿಗೆ ಗೌರವದ ಭಾಷ್ಯೆ ಬರೆದ ಅದಮ್ಯ ಆತ್ಮಬಲದ ಶಿಕ್ಷಕರಿವರು..
  • ’ಕೊಲಂಬಿಯ ಪೋಸ್ಟ್ ಆಫೀಸ್’
  • ಗಣಪನ ಗಂಡಾಂತರಗಳು ಅನೇಕ

ಇತ್ತೀಚಿನ ಪ್ರತಿಕ್ರಿಯೆಗಳು

  • ASHOKKUMAR
    ಉ: ದಯವಿಟ್ಟೂ ಸ್ವಲ್ಪ ಅರ್ಥ ಹೇಳ್ತೀರಾ ????
    September 7, 2008 - 6:48am
  • kalpana
    ಉ: ಜೀವ ಕಾಯುವುದೇತಕೆ?
    September 7, 2008 - 5:19am
  • kalpana
    ಉ: ಮೊದಲ ಚಿತ್ರ
    September 7, 2008 - 1:48am
  • srivathsajoshi
    ಉ: ದಯವಿಟ್ಟೂ ಸ್ವಲ್ಪ ಅರ್ಥ ಹೇಳ್ತೀರಾ ????
    September 7, 2008 - 12:24am
  • yuvapremi
    ಉ: Splendours of Royal Mysore
    September 6, 2008 - 10:19pm
  • yuvapremi
    ಉ: ಮೊದಲ ಚಿತ್ರ
    September 6, 2008 - 10:11pm
  • ASHOKKUMAR
    ಉ: ಹಬ್ಬ ತಂದ ನೆನಪು...
    September 6, 2008 - 9:59pm
  • uniquesupri
    ಉ: ಜೀವ ಕಾಯುವುದೇತಕೆ?
    September 6, 2008 - 9:30pm
  • cmariejoseph
    ಉ: ಹಬ್ಬ ತಂದ ನೆನಪು...
    September 6, 2008 - 9:16pm
  • cmariejoseph
    ಉ: ಚಂದಿರನ ನೋಡಿದವ
    September 6, 2008 - 9:01pm
ಇನ್ನಷ್ಟು
ಈಗಿನಂತೆ 2 ಸದಸ್ಯರು ಮತ್ತು 130 ಅತಿಥಿಗಳು ಆನ್ಲೈನ್ ಇರುವರು.


ಮುಕ್ತ ಮನಸ್ಸು ಖಾಲಿ ಆಕಾಶದಂತೆ. ಹೊರಗಡೆ ವಿಶಾಲ ಮತ್ತು ಒಳಗಡೆ ಶೂನ್ಯ. ಅದರಲ್ಲಿ ಅಂಟುತನ ಇಲ್ಲವೇ ಇಲ್ಲ.

— ವಿನೋಬಾ ಭಾವೆ

ಮತ್ತಷ್ಟು: ಆರೋಗ್ಯ ಸಂಪದ | ಕೃಷಿ ಸಂಪದ | ನುಡಿಮುತ್ತುಗಳು

ಯೋಜನೆಗಳು: Kannada Learning Center | ಗ್ನು/ಲಿನಕ್ಸ್ ನಲ್ಲಿ ಕನ್ನಡ ತರಲು ನಡೆದಿರುವ ಕೆಲವು ಯೋಜನೆಗಳು | ಡಾಕ್ಯುಮೆಂಟೇಶನ್ Wiki | ಸಂಪದ ಅಂಚೆಪೆಟ್ಟಿಗೆಗಳು (Sampada Mailing Lists)

ಸ್ವರ್ಣ ಸಂಪದ ಸಂಪದ ಪಾಡ್ಕ್ಯಾಸ್ಟ್ (ಶ್ರಾವ್ಯ ಸಂದರ್ಶನಗಳು) | "ದಿ ಬೆಸ್ಟ್ ಆಫ್ ಸಂಪದ" | ಪ್ಲಾನೆಟ್ ಕನ್ನಡ

ಡೌನ್ಲೋಡ್ ಮಾಡಿಕೊಳ್ಳಿ:‌ ಬರಹ IME | ಫೈರ್ ಫಾಕ್ಸ್ | ಒಪೇರಾ

ಕೆಲವು ಹಕ್ಕುಗಳನ್ನು ಕಾಯ್ದಿರಿಸಲಾಗಿದೆ. ಸಂಪದ ಸಮುದಾಯ ಸಂಪದ ಫೌಂಡೇಶನ್ನಿನ ಒಂದು ಯೋಜನೆ.
Some rights reserved Sampada Initiative by Sampada Foundation, 2005 - 2008.
Terms of Use | Contact | About Sampada | Sampada in News/Media

The views expressed here are of the respective author(s) and Sampada administration does not necessarily subscribe to them.
RSS: All posts | Comments
Blogs | Podcasts

separator