ಸಂಪದದಲ್ಲಿ ಹೊಸತು! | Sign up | Login | Font Help
ಸಂಪದ
  • ಲೇಖನಗಳು
  • ಬ್ಲಾಗ್ಸ್
  • ಚರ್ಚೆಯ ವೇದಿಕೆ
  • ಚಿತ್ರಪುಟಗಳು
  • Podcasts
  • ಪುಸ್ತಕಗಳು
  • ಆರ್ಕೈವ್
  • ಸಂಪರ್ಕಿಸಿ
  • Support Sampada
  • ಅಂಚೆ ಪೆಟ್ಟಿಗೆ
  • Font Help

ಹೊಸತು: ಹರಿದಾಸ ಸಂಪದ ಸಂಪುಟ

ಸಂಪದ

ಆ ರಜೆಯನ್ನು ಕಳೆಯುವುದಕ್ಕೆ ಪ್ಲಾನ್ ಮಾಡುವ ಮುನ್ನ…

April 25, 2008 - 1:27am — uniquesupri

ಈ ಲೇಖನ ಮೊದಲು ಇಲ್ಲಿ ಪ್ರಕಟವಾಗಿತ್ತು...

.............................

ಕಾಫಿ ಡೇಗಳಲ್ಲಿ, ಹೊಟೇಲುಗಳಲ್ಲಿ, ಸಿನೆಮಾ ಥಿಯೇಟರುಗಳಲ್ಲಿ, ಹಾಸ್ಟೆಲ್ಲಿನ
ಕಿಕ್ಕಿರಿದ ರೂಮುಗಳಲ್ಲಿ, ಮೊಬೈಲುಗಳಲ್ಲಿ, ಗಂಭೀರ ಚರ್ಚೆಗಳಲ್ಲಿ, ಬೀದಿ ದೀಪದ ಅಡಿಯ
ಬೆಳಕಿನಲ್ಲಿ ಗುಂಪು ಕಟ್ಟಿದಾಗ ನಾವು ದೇಶದ ಬಗ್ಗೆ ಅಪಾರ ಕಾಳಜಿ ಉಳ್ಳವರ ಹಾಗೆ
ಮಾತನಾಡುತ್ತಿರುತ್ತೇವೆ. ‘ಈ ದೇಶದ ಗತಿಯೇ
ಇಷ್ಟು, ಇಲ್ಲಿದ್ದುಕೊಂಡು ನಾವು ಉದ್ಧಾರವಾಗುವುದಕ್ಕೆ ಸಾಧ್ಯವಾ? ಇಂತಹ
ವ್ಯವಸ್ಥೆಯನ್ನು ನೆಚ್ಚಿಕೊಂಡು ನಾವು ದೇಶವನ್ನು ಉದ್ಧಾರ ಮಾಡಲು ಸಾಧ್ಯವಾಗುತ್ತದಾ?
ನಮ್ಮ ದೇಶದ ದೊಡ್ಡ ಸಮಸ್ಯೆಯೆಂದರೆ ರಾಜಕೀಯ. ಈ ಪೊಲಿಟೀಶಿಯನ್ನುಗಳನ್ನು ಲೈನಾಗಿ
ನಿಲ್ಲಿಸಿ ಶೂಟ್ ಮಾಡಬೇಕು. ಆಗಲೇ ನಮ್ಮ ದೇಶ ಸುಧಾರಿಸೋದು. ಇಲ್ಲಾಂದ್ರೆ ಖಂಡಿತಾ
ಸಾಧ್ಯವಿಲ್ಲ ಬಾಸ್’ ಎಂದು ಭಾಷಣ ಕಚ್ಚುತ್ತಿರುತ್ತೇವೆ. ಗದ್ದದ ಮೇಲೆ ಬೆರಳಿಟ್ಟುಕೊಂಡು
ಆಳವಾಗಿ ಯೋಚಿಸುವವರಂತೆ ಫೋಸುಕೊಡುತ್ತಾ ಆಗಾಗ ನಿಟ್ಟುಸಿರಿಡುತ್ತಿರುತ್ತೇವೆ.

ನಿಜಕ್ಕೂ ನಮ್ಮ ದೇಶದ ಎಲ್ಲಾ ಸಮಸ್ಯೆಗಳಿಗೂ ನಾವು ದೂಷಿಸುವಂತೆ ಕೇವಲ ರಾಜಕೀಯವೇ
ಕಾರಣವಾ? ರಾಜಕಾರಣಿಗಳ ಮೇಲೆ ಅಷ್ಟು ಭಯಾನಕವಾದ ಕೋಪವನ್ನು ವ್ಯಕ್ತಪಡಿಸುವ ನಮಗೆ
ಒಮ್ಮೆಗೇ ಎಲ್ಲಾ ರಾಜಕಾರಣಿಗಳನ್ನು ನಿರ್ನಾಮ ಮಾಡಿಬಿಟ್ಟರೆ ದೇಶವನ್ನು ನಡೆಸಲು
ಸಾಧ್ಯವಾ? ಈಗಿರುವ ರಾಜಕಾರಣಿಗಳನ್ನೆಲ್ಲಾ ಬದಿಗೆ ಸರಿಸಿಬಿಟ್ಟರೆ ಅವರ ಸ್ಥಾನವನ್ನು
ತುಂಬಲು ನಾವು ಸಿದ್ಧರಿದ್ದೇವಾ? ಒಂದು ಮಾತು ನೆನಪಿರಬೇಕು, ಹಿಂದೆಂದೋ ಹೀಗೇ ನಮ್ಮ
ನಡುವೆಯೇ, ನಮ್ಮಂತೆಯೇ ಇದ್ದವರೇ ಅಧಿಕಾರಕ್ಕೇರಿದಾಗ ರಾಜಕಾರಣಿಗಳು
ಎನ್ನಿಸಿಕೊಳ್ಳುವುದು. ಅವರು ನಮ್ಮ ನಡುವಿನಿಂದಲೇ ಅಧಿಕಾರದ ಶಕ್ತಿ ಕೇಂದ್ರದೆಡೆಗೆ
ನಡೆದವರು. ಅವರು ನಮ್ಮ ಸಮಾಜದ ಪ್ರತಿನಿಧಿಗಳು. ಅವರನ್ನೇ ನಿರ್ನಾಮ ಮಾಡಬೇಕು ಎಂದರೆ
ನಮ್ಮಿಡೀ ಸಮಾಜ ನಿರ್ನಾಮಕ್ಕೆ ಅರ್ಹವಾದದ್ದು ಎಂಬ ತೀರ್ಮಾನಕ್ಕೆ ಬಂದಂತಾಗುವುದಿಲ್ಲವೇ?

ನಿಜ, ರಾಜಕೀಯವೆಂಬುದು ಈಗ ಹಣ ಮಾಡುವ ದಂಧೆಯಾಗಿದೆ. ಹಿಂದೆಲ್ಲ ತಮ್ಮ ತತ್ವಾದರ್ಶಗಳ
ಪ್ರಣಾಳಿಕೆಯನ್ನು ಬಿಡುಗಡೆ ಮಾಡಿ ಪಕ್ಷಗಳು ಸಿದ್ಧಾಂತದ ಆಧಾರದ ಮೇಲೆ ಓಟು ಕೇಳಲು ಜನರ
ಬಳಿಗೆ ಹೋಗುತ್ತಿದ್ದರು. ಜನರು ಪಕ್ಷಗಳ ತತ್ವಾದರ್ಶಗಳನ್ನು ನಂಬಿಕೊಂಡು
ಓಟುಕೊಡುತ್ತಿದ್ದರು. ರಾಜಕೀಯ ನಾಯಕರುಗಳು ನಿಜವಾದ ಜನಪ್ರತಿನಿಧಿಗಳಾಗಿರುತ್ತಿದ್ದರು.
ಚಳುವಳಿ, ಸಂಘಟನೆಗಳಲ್ಲಿ ಬೆಳೆದವರು ನಾಯಕರಾಗುತ್ತಿದ್ದರು. ಆದರೆ ಇಂದು
ರಾಜಕಾರಣವೆಂಬುದೂ ಕುದುರೆ ರೇಸಿನಂತಾಗಿದೆ. ಜನಸೇವೆ ಮಾಡುವುದಕ್ಕಾಗಿ ರಾಜಕೀಯಕ್ಕೆ
ಇಳಿಯುತ್ತಿರುವುದಾಗಿ ಘೋಷಿಸುತ್ತಿರುವ ನಮ್ಮ ರಾಜಕಾರಣಿಗಳು ಹೇಳುವುದನ್ನೇ
ನಂಬುವುದಾಗಿದ್ದರೆ, ಈ ‘ಜನಸೇವೆ’ಗಾಗಿ ಇರುವ ಪೈಪೋಟಿಯನ್ನು ಗಮನಿಸಿದ್ದೇ ಆದಲ್ಲಿ ನಮ್ಮ
ದೇಶ ಎಂದೋ ಸುಭೀಕ್ಷವಾಗಿರಬೇಕಿತ್ತು. ನಮ್ಮ ರಾಜಕಾರಣಿಗಳ ಪ್ರಕಾರ ಈ ‘ಜನಸೇವೆ’ಯ ಜನ
ಯಾರೋ! ತಮಗೆ ಓಟುಕೊಟ್ಟ ಜನರೋ ಅಥವಾ ತಮ್ಮ ಮನೆ ಮಂದಿಯೋ?

ಇಂದು ರಾಜಕಾರಣಿಯಾದವನೊಬ್ಬ ಭ್ರಷ್ಠನಾಗಿದ್ದಾನೆ ಎಂದರೆ ನಮಗ್ಯಾರಿಗೂ
ಗಾಬರಿಯಾಗುವುದಿಲ್ಲ. ಆತನನ್ನು ವಿರೋಧಿಸುವ ಕೆಚ್ಚು ಹುಟ್ಟುವುದಿಲ್ಲ. ಅದೇ ಒಂದು ವೇಳೆ
ಒಬ್ಬ ರಾಜಕಾರಣಿ ಶುದ್ಧ ಹಸ್ತದವನಾಗಿದ್ದಾನೆ ಎಂದರೆ ನಮಗೆ ಆಶ್ಚರ್ಯವಾಗುತ್ತದೆ. ನಾವು
ಆತನನ್ನು ಸಂಶಯಿಸುತ್ತೇವೆ. ಆತನನ್ನು ಭ್ರಷ್ಟನನ್ನಾಗಿಸಲು ಪ್ರಯತ್ನಿಸುತ್ತೇವೆ.
ಇವನಿಗೆ ಪ್ರಾಕ್ಟಿಕಲ್ಲಾಗಿರೋದು ಗೊತ್ತೇ ಇಲ್ಲ ಅಂತ ಚುಡಾಯಿಸುತ್ತೇವೆ. ಕೊನೆಗೆ ಆತನೂ
ಭ್ರಷ್ಠಾಚಾರದ ಕೊಚ್ಚೆಯಲ್ಲಿ ಬೀಳುವವರೆಗೂ ನಮಗೆ ನೆಮ್ಮದಿಯಿರುವುದಿಲ್ಲ . ಇದು
ಅಸ್ವಾಭಾವಿಕ ಎನ್ನಿಸುವುದಾದರೆ ನಿಮ್ಮ ನಡುವಿನ ಉದಾಹರಣೆಗಳನ್ನೇ ತೆಗೆದುಕೊಳ್ಳಿ,
ನಮ್ಮೊಡನೆ ಹರಟೆಗಳಲ್ಲಿ ಪಾಲ್ಗೊಳ್ಳದ, ನಿಮ್ಮ ಹಾಗೆ ಸಣ್ಣ ಪುಟ್ಟ ಕರ್ಮಕಾಂಡಗಳನ್ನು
ಮಾಡಿಕೊಳ್ಳದವನನ್ನು ನಾವು ನಮ್ಮ ಹಾಗೆ ಮಾಡಲು ಎಷ್ಟು ಚಡಪಡಿಸುತ್ತೇವೆ ಅಲ್ಲವೇ?
ಆದರ್ಶವಾದಿಗಳನ್ನು ನಾವು ಕನಿಕರದಿಂದ ನೋಡುವ ನೈತಿಕ ಅಧಃಪತನವನ್ನು ನಾವು
ಕಂಡಿದ್ದೇವೆನ್ನುವುದಾದರೆ ಇದಕ್ಕೆ ರಾಜಕೀಯ ಮಾತ್ರ ಹೇಗೆ ಹೊಣೆಯಾದೀತು?

ರಾಜ್ಯದಲ್ಲಿ ಮತ್ತೊಂದು ಚುನಾವಣೆ ಬಂದಿದೆ. ಪಕ್ಷಗಳ ಮೇಲಾಟ ನಡೆಯುತ್ತಿದ್ದೆ.
ಹಣವಿದ್ದವರು, ರಿಯಲ್ ಎಸ್ಟೇಟು ಕುಳಗಳು, ಗಣಿ ಧಣಿಗಳು, ಮದ್ಯದ ದೊರೆಗಳು ಓಟು
ಕೇಳಿಕೊಂಡು ಮನೆ ಬಾಗಿಲಿಗೆ ಬಂದಿದ್ದಾರೆ. ಪ್ರಜ್ಞಾವಂತರು, ವಿಚಾರವಂತರು ಎಂದುಕೊಳ್ಳುವ
ನಮ್ಮಂತಹ ಯುವಕರು ಬಾಗಿಲು ಗಿಡಿದುಕೊಂಡು ಮನೆಯೊಳಗೆ ಕುಳಿತು ಮಜವಾಗಿ ಸಿನೆಮಾ
ನೋಡುತ್ತಿದ್ದೇವೆ. ಅದರಲ್ಲಿ ಕಾಣುವ ರಾಜಕಾರಣಿಗಳನ್ನು ಕೊಲ್ಲಬೇಕು, ಗಲ್ಲಿಗೇರಿಸಬೇಕು
ಅಂತ ಮಾತನಾಡುತ್ತೇವೆ. ಬಾಗಿಲು ತೆರೆದು ಹೊರಗೆ ಬಂದು ಒಂದು ಓಟು ಹಾಕಲಾಗದ ನಮಗೆ ದೇಶದ
ಬಗ್ಗೆ ಮಾತನಾಡುವ ಹಕ್ಕು ಬರುವುದಾದರೂ ಹೇಗೆ? ರಾಜಕಾರಣಿಗಳ ಕೊರಳ ಪಟ್ಟಿ ಹಿಡಿದು
ಪ್ರಶ್ನಿಸುವ ನೈತಿಕತೆ ಬರುವುದಾದರೂ ಎಲ್ಲಿಂದ?

ಹದಿನೆಂಟು ದಾಟಿರುವ ನಮ್ಮಲ್ಲಿ ಬಹುತೇಕರಿಗೆ ಇದೇ ಮೊದಲ ವೋಟಿಂಗ್ ಅವಕಾಶ. ಮತದಾನ
ನಡೆಯುವ ದಿನದ ರಜೆಯನ್ನು ಹೇಗೆ ಕಳೆಯುವುದು ಎಂದು ಪ್ಲಾನ್ ಮಾಡುವ ಮುನ್ನ ಯಾರಿಗೆ ಓಟ್
ಹಾಕಬೇಕು ಎಂಬುದನ್ನೂ ಕೊಂಚ ವಿವೇಚಿಸೋಣ. ನಮ್ಮ ಮೊದಲ ಮತವನ್ನು , ಮಗುವನ್ನು ಶಾಲೆಗೆ
ಸೇರಿಸುವ ಕಾಳಜಿಯಲ್ಲಿ ಚಲಾಯಿಸೋಣ. If you are not the part of the solution,
then you are the part of the problem!

  • ಪ್ರಚಲಿತ
~.~
  • Login or register to post comments
  • 294 hits
  • ಈ ಪುಟವನ್ನು ಇ-ಮೇಯ್ಲ್ ಮಾಡಿ
  • Delicious
  • Google
  • Yahoo

ಮೇಲಿನ ಪುಟವನ್ನು ಹೋಲುವ ಪುಟಗಳು - 'ಸಂಪದ' ಆರ್ಕೈವಿನಿಂದ

  • ರಾಜಕೀಯ
  • ಕನ್ನಡವೇ ಜಾತಿ-ಧರ್ಮ-ದೇವರು ?
  • ಮತದಾನ .
  • ಕವಿತೆ: ಪೋಲೆಂಡ್: ಯುಗದ ಮಕ್ಕಳು
Syndicate content

ಲೇಖಕರು

uniquesupri's picture

ಪೂರ್ಣ ಹೆಸರು
ಸುಪ್ರೀತ್.ಕೆ.ಎಸ್

ಪರಿಚಯ

I am a simple life loving person with a sensitive heart.

ನಾನು ಇಂಜಿನಿಯರಿಂಗ್ ಓದುತ್ತಿದ್ದೇನೆ. ನಾನು ಹಾಗೂ ನನ್ನ ಗೆಳೆಯರು ಸೇರಿ ಒಂದು ಸಣ್ಣ ಪತ್ರಿಕೆಯೊಂದನ್ನು ಪ್ರತಿ ತಿಂಗಳು ಹೊರಡಿಸುತ್ತಿದ್ದೇವೆ. ಅದರ ಬ್ಲಾಗು ಇಲ್ಲಿದೆ:http://kalaravapatrike.wordpress.com/
ನನ್ನ ಬ್ಲಾಗು:
http://uniquesupri.wordpress.com/

ಸದಸ್ಯರ ಪೂರ್ಣ ಪ್ರೊಫೈಲ್ ವೀಕ್ಷಿಸಿ

ವಾಟರ್ ಪೋರ್ಟಲ್: ದಿನದ ಚಿತ್ರ

ವಿದ್ಯುತ್ ಉಚಿತ, ಆದರೆ ನೀರಿಲ್ಲ!

(ಚಿತ್ರ: ಹರಿ ಪ್ರಸಾದ್ ನಾಡಿಗ್.)

ವಾರದ ಲೇಖನ
ವಿದ್ಯುತ್ ಉಚಿತ... ಷಾಕ್ ಖಚಿತ...!

ವಾರದ ವೀಡಿಯೋ
ಬಾನಿಗೊಂದು ಆಲಿಕೆ (ಮಳೆನೀರು ಸಂಗ್ರಹ)

ವಿಹರಿಸಿ

  • ಸಂಪದದಲ್ಲಿ ಬರೆಯುವ ಮುನ್ನ
  • ಹೊಸ ಬರಹ/ಚಿತ್ರ ಸೇರಿಸಿ
  • 'ಸಂಪದ' ಕುರಿತು ನಿಮ್ಮ ಸಲಹೆ/ಅಭಿಪ್ರಾಯಗಳನ್ನು ಕಳುಹಿಸಿ
  • Mailing Lists
  • ಚಟುವಟಿಕೆ
  • ಕನ್ನಡ ಬಟನ್ನುಗಳು
  • ಕನ್ವರ್ಟರ್

ಹೊಸ ಲೇಖನಗಳು

  • ಪರಿಧಿಯಿಂದ ಹೊರಗೆ ಹೋದ ವ್ಯಾಸ
  • ನೂರು ವರ್ಷ ಕವನಗಳನ್ನು ಬ್ಯಾನ್ ಮಾಡ
  • ಬನ್ನಿ..ಇಂದು ಕೆಲಗೇರಿ ಕೆರೆಯ ಶ್ರಾದ್ಧ, ಶ್ರದ್ಧೆಯಿಂದ ಮಾಡೋಣ!
  • ’ಎಂ.ಪಿ.ಶಂಕರ್’, ಒಬ್ಬ ಅದ್ವಿತೀಯ ಕಲಾಕಾರ ; ಕನ್ನಡ ಚಿತ್ರರಂಗದ, ನಿರ್ಮಾಪಕ, ನಿರ್ದೇಶಕ, ವಿತರಕ, ಹಾಗೂ ಅಭಿನಯಕಾರ, ಶಿವೈಕ್ಯರಾದರು !
  • ಚಾ(ವ)ಡಿ ಪಟ್ಟಾಂಗ
  • ‘ತಂಪು’ಪಾನೀಯ ಕಂಪನಿಯ ಒಡಲು ‘ಉರಿಸು’ವ ಬಗೆ!
  • ಕನ್ನಡಿಯೊಳಗಿನ ಗಂಟು

ಇತ್ತೀಚಿನ ಪ್ರತಿಕ್ರಿಯೆಗಳು

  • hpn
    ಉ: ಪರಿಧಿಯಿಂದ ಹೊರಗೆ ಹೋದ ವ್ಯಾಸ
    July 25, 2008 - 1:10am
  • uniquesupri
    ಉ: ಸೇತುವೆ ಇತ್ತಂತೆ ರಾಮನೇ ಒಡದನಂತೆ....!
    July 25, 2008 - 12:27am
  • srinivasps
    ಉ: ಸೇತುವೆ ಇತ್ತಂತೆ ರಾಮನೇ ಒಡದನಂತೆ....!
    July 25, 2008 - 12:23am
  • uniquesupri
    ಉ: ಸೇತುವೆ ಇತ್ತಂತೆ ರಾಮನೇ ಒಡದನಂತೆ....!
    July 25, 2008 - 12:17am
  • srinivasps
    ಉ: ವಿಶ್ವಾಸ ಮತ ಮತ್ತು ವಿಶ್ವಾಸಘಾತ
    July 25, 2008 - 12:10am
  • srinivasps
    ಉ: ಸೇತುವೆ ಇತ್ತಂತೆ ರಾಮನೇ ಒಡದನಂತೆ....!
    July 25, 2008 - 12:08am
  • uniquesupri
    ಉ: ವಿಶ್ವಾಸ ಮತ ಮತ್ತು ವಿಶ್ವಾಸಘಾತ
    July 25, 2008 - 12:06am
  • uniquesupri
    ಉ: ಸೇತುವೆ ಇತ್ತಂತೆ ರಾಮನೇ ಒಡದನಂತೆ....!
    July 25, 2008 - 12:01am
  • srinivasps
    ಉ: ವಿಶ್ವಾಸ ಮತ ಮತ್ತು ವಿಶ್ವಾಸಘಾತ
    July 25, 2008 - 12:00am
  • srinivasps
    ಉ: ಸೇತುವೆ ಇತ್ತಂತೆ ರಾಮನೇ ಒಡದನಂತೆ....!
    July 24, 2008 - 11:57pm
ಇನ್ನಷ್ಟು
ಈಗಿನಂತೆ 0 ಸದಸ್ಯರು ಮತ್ತು 40 ಅತಿಥಿಗಳು ಆನ್ಲೈನ್ ಇರುವರು.


ನಿಮಗೆ ಒಂದು ವೇಳೆ ಒಳ್ಳೆಯ ಸಲಹೆ ದೊರೆತರೆ ಅದನ್ನು ಕೂಡಲೆ ಬೇರೆಯವರಿಗೆ ತಲುಪಿಸಿ. ಅದರಿಂದ ನಿಮಗೆ ಉಪಯೋಗವಾಗುವುದು ಅಷ್ಟರಲ್ಲೇ ಇದೆ ಬಿಡಿ.

— ಆಸ್ಕರ್ ವೈಲ್ಡ್, ಹೆಸರಾಂತ ಐರಿಶ್ ಹಾಸ್ಯಗಾರ, ಕವಿ, ಕಾದಂಬರಿಗಾರ

ಮತ್ತಷ್ಟು: ಆರೋಗ್ಯ ಸಂಪದ | ಕೃಷಿ ಸಂಪದ | ನುಡಿಮುತ್ತುಗಳು

ಯೋಜನೆಗಳು: Kannada Learning Center | ಗ್ನು/ಲಿನಕ್ಸ್ ನಲ್ಲಿ ಕನ್ನಡ ತರಲು ನಡೆದಿರುವ ಕೆಲವು ಯೋಜನೆಗಳು | ಡಾಕ್ಯುಮೆಂಟೇಶನ್ Wiki | ಸಂಪದ ಅಂಚೆಪೆಟ್ಟಿಗೆಗಳು (Sampada Mailing Lists)

ಸ್ವರ್ಣ ಸಂಪದ ಸಂಪದ ಪಾಡ್ಕ್ಯಾಸ್ಟ್ (ಶ್ರಾವ್ಯ ಸಂದರ್ಶನಗಳು) | "ದಿ ಬೆಸ್ಟ್ ಆಫ್ ಸಂಪದ" | ಪ್ಲಾನೆಟ್ ಕನ್ನಡ

ಡೌನ್ಲೋಡ್ ಮಾಡಿಕೊಳ್ಳಿ:‌ ಬರಹ IME | ಫೈರ್ ಫಾಕ್ಸ್ | ಒಪೇರಾ

ಕೆಲವು ಹಕ್ಕುಗಳನ್ನು ಕಾಯ್ದಿರಿಸಲಾಗಿದೆ. ಸಂಪದ ಸಮುದಾಯ ಸಂಪದ ಫೌಂಡೇಶನ್ನಿನ ಒಂದು ಯೋಜನೆ.
Some rights reserved Sampada Initiative by Sampada Foundation, 2005 - 2008.
Terms of Use | Contact | About Sampada | Sampada in News/Media

The views expressed here are of the respective author(s) and Sampada administration does not necessarily subscribe to them.
RSS: All posts | Comments
Blogs | Podcasts

separator