ಸಂಪದದಲ್ಲಿ ಹೊಸತು! | Sign up | Login | Font Help
ಸಂಪದ
  • ಲೇಖನಗಳು
  • ಬ್ಲಾಗ್ಸ್
  • ಚರ್ಚೆಯ ವೇದಿಕೆ
  • ಚಿತ್ರಪುಟಗಳು
  • Podcasts
  • ಪುಸ್ತಕಗಳು
  • ಆರ್ಕೈವ್
  • ಸಂಪರ್ಕಿಸಿ
  • Sampada Foundation
  • ಅಂಚೆ ಪೆಟ್ಟಿಗೆ
  • Font Help

ತಿಳಿ ಹಾಸ್ಯ ಮರೆತಿಲ್ಲ: "ಮಜಾವಾಣಿ"

ಸಂಪದ

ಅನಾಮಧೇಯರಾಗಿರುವ ಖುಷಿ

June 1, 2008 - 1:17pm — pallavi.dharwad

ಒಮ್ಮೆ ಸುಮ್ಮನೇ ಯೋಚಿಸಿ ನೋಡಿ!

ನೀವು ಯಾವುದೋ ಜಾಗಕ್ಕೆ ಹೋಗುತ್ತೀರಿ. ಅಲ್ಲಿ ಜನ ನಿಮ್ಮನ್ನು ಮುತ್ತಿಕೊಳ್ಳುತ್ತಾರೆ. ನಿಮ್ಮ ಬಗ್ಗೆ ವಿಚಾರಿಸುತ್ತಾರೆ. ಆಟೊಗ್ರಾಫ್‌ ತೆಗೆದುಕೊಳ್ಳುತ್ತಾರೆ. ಫೋಟೊ ತೆಗೆಸಿಕೊಳ್ಳುತ್ತಾರೆ. ಕಾರ್ಯಕ್ರಮಗಳಿಗೆ ಬರುವಂತೆ ಒತ್ತಡ ಹೇರುತ್ತಾರೆ. ಅವರ ಪ್ರೀತಿ ಮೊದಮೊದಲು ಸಂತಸ ತಂದರೂ, ಕ್ರಮೇಣ ಕಿರಿಕಿರಿ ಶುರುವಾಗುತ್ತದೆ. ಯಾವ ಉದ್ದೇಶಕ್ಕೆ ನೀವು ಹೋಗಿರುತ್ತೀರೋ, ಅದನ್ನು ಬಿಟ್ಟು ಉಳಿದೆಲ್ಲದೂ ನಡೆಯುತ್ತಿರುತ್ತದೆ.

ಆದರೆ, ಈ ಜಾಗದಲ್ಲಿ ಇನ್ನೊಂದು ಚಿತ್ರಣ ಊಹಿಸಿ ನೋಡಿ!

ನೀವು ಹೋದ ಜಾಗದಲ್ಲಿ ಯಾರೂ ನಿಮ್ಮನ್ನು, ’ನೀವೇ’ ಎಂದು ಗುರುತಿಸುವುದಿಲ್ಲ. ನೀವು ಎಲ್ಲರನ್ನೂ ಸುಮ್ಮನೇ ಗಮನಿಸುತ್ತ ಹೋಗುತ್ತೀರಿ. ಅದರಲ್ಲಿ ಎಷ್ಟೋ ಜನರ ಬಗ್ಗೆ ನಿಮಗೆ ಚೆನ್ನಾಗಿ ಗೊತ್ತಿರುತ್ತದೆ. ಆದರೂ, ನೀವು ಅವರೊಂದಿಗೆ ಮಾತನಾಡುವುದಿಲ್ಲ. ಪರಿಚಯ ಮಾಡಿಕೊಳ್ಳುವುದಿಲ್ಲ. ಸುಮ್ಮನೇ ವಾತಾವರಣವನ್ನು ಅನುಭವಿಸುತ್ತ, ಸನ್ನಿವೇಶವನ್ನು ಅರ್ಥ ಮಾಡಿಕೊಳ್ಳುತ್ತ, ಹೋದ ಕೆಲಸವನ್ನು ಮುಗಿಸಿಕೊಂಡು ವಾಪಸ್ಸಾಗುತ್ತೀರಿ.

ಯಾವುದು ನಿಮಗೆ ಇಷ್ಟ?

ಆಯ್ಕೆ ನಿಮ್ಮದು. ನನ್ನನ್ನು ಕೇಳಿದರೆ, ಎರಡನಯದೇ ನನಗೆ ಇಷ್ಟ. ಜನ ಗುರುತಿಸುವುದು ಖುಷಿ ಕೊಡುತ್ತದೆ ನಿಜ. ಆದರೆ, ಕ್ರಮೇಣ ಅದು ನಮ್ಮ ಖಾಸಗಿತನವನ್ನು ಕಿತ್ತುಕೊಂಡು ಬಿಡುತ್ತದೆ. ಹಾಗಂತ, ಜನರಿಂದ ದೂರವಾಗಿ ಇರುವುದೂ ಸಾಧ್ಯವಿಲ್ಲ. ಪರಿಚಯದ ನಡುವೆ ಒಂದಿಷ್ಟು ಅನಾಮಧೇಯತೆ, ಸಂತೆಯೊಳಗೆ ಒಂಟಿತನ, ಗುಂಪಿನ ನಡುವೆ ಒಬ್ಬಂಟಿಯಾಗಿರುವುದು ಖುಷಿ ಕೊಡುತ್ತದೆ. ಯಾರೂ ನಮ್ಮನ್ನು ವಿಶೇಷವಾಗಿ ಗುರುತಿಸಲಿಲ್ಲ ಎಂಬ ನೋವಿಗಿಂತ, ಹಾಗೆ ದೂರವಾಗಿದ್ದುಕೊಂಡೇ ಎಲ್ಲವನ್ನೂ ಮನ ತಣಿಯೇ ಆಸ್ವಾದಿಸಬಹುದು.

ಏಕೋ ಇತ್ತೀಚೆಗೆ ಈ ವಿಚಾರವೇ ಮನಸ್ಸನ್ನು ತುಂಬಿಕೊಂಡಿದೆ.

ಯಾರೂ ಯಾರನ್ನೂ ವಿಶೇಷವಾಗಿ ಗುರುತಿಸುವುದು ಬೇಕಿಲ್ಲ ಅನಿಸುತ್ತದೆ. ಪರಿಚಯ ಇರಲಿ, ಗೌರವ ಇರಲಿ, ಆದರೆ ಅತ್ಯುತ್ಸಾಹ ಬೇಡ. ಅವರವರ ಖಾಸಗಿತನ ಅವರವರಿಗೆ ಇರಲಿ. ಅಭಿಮಾನ ವ್ಯಕ್ತಪಡಿಸಲು ಬೇರೆ ಮಾರ್ಗಗಳು ಸಾಕಷ್ಟಿವೆ.

ಟಿವಿ ತಾರೆಯರು, ಸಿನಿಮಾ ನಟ-ನಟಿಯರು, ಕ್ರೀಡಾಪಟುಗಳು ಅನಗತ್ಯ ಗಮನಕ್ಕೆ ಸಿಲುಕುತ್ತಾರೆ. ಅವರನ್ನು ಮುತ್ತಿಕೊಂಡು ಹಿಂಸಿಸುವುದಕ್ಕಿಂತ, ಅಭಿಮಾನ ಇದ್ದರೆ, ದೂರ ನಿಂತು ಮುಗುಳ್ನಗುವುದು ಉತ್ತಮವಲ್ಲವೆ?

- ಪಲ್ಲವಿ ಎಸ್‌.

~.~
  • Login or register to post comments
  • 157 hits
  • ಈ ಪುಟವನ್ನು ಇ-ಮೇಯ್ಲ್ ಮಾಡಿ
  • Delicious
  • Google
  • Yahoo
  • ನಿರ್ವಾಹಕರ ಗಮನಕ್ಕೆ ತನ್ನಿ

ಮೇಲಿನ ಪುಟವನ್ನು ಹೋಲುವ ಪುಟಗಳು - 'ಸಂಪದ' ಆರ್ಕೈವಿನಿಂದ

  • ಅನಾಮಧೇಯರಾಗಿರುವ ಖುಷಿ!
  • ಅಕ್ಷರಗಳಿಂದ ದೂರ
  • Typical ನಲ್ಲನ ಒಲುಮೆಯಳಲು
  • ಕವಿತೆ ಬರೆಯೋಣ್ವಾ?
  • ಕವಿತೆ ಬರೆಯೋಣ್ವಾ?
Syndicate content

ಲೇಖಕರು

pallavi.dharwad's picture

ಪೂರ್ಣ ಹೆಸರು
ಪಲ್ಲವಿ ಎಸ್‌.

ಪರಿಚಯ

ಡಿಗ್ರಿ ಮುಗಿದಿದೆ. ಕೆಲಸದ ಗಾಣಕ್ಕೆ ಬೀಳಲು ಇಷ್ಟ ಇಲ್ಲ. ಆದ್ರೆ ಹಕ್ಕಿ ಹಾಡು, ಬೆಳ್ಳಂಬೆಳಿಗ್ಗೆ ಕರ್ನಾಟಕ ವಿಶ್ವವಿದ್ಯಾಲಯದ ಶಾಲ್ಮಲಾ ಕಣಿವೆಯಲ್ಲಿ ಸುತ್ತು ಹಾಕೋದು ಇಷ್ಟ. ಲೈನ್‌ ಬಜಾರ್‌ನಲ್ಲಿ ಅಡ್ಡಾಡುತ್ತ ಜನರನ್ನು ನೋಡ್ತಾ ಇರೋದು ಇಷ್ಟ. ಒಂಟಿ ಅನ್ನಿಸಿದಾಗ ಇಂಟರ್‌ನೆಟ್‌, ಕಂಪನಿ ಇದ್ದಾಗ ಸೋಮೇಶ್ವರ ದೇವಸ್ಥಾನ, ಕೆಲಗೇರಿ ಕೆರೆ. ಓದೋಕೆ ಇಷ್ಟ. ಇತ್ತೀಚಿಗೆ, ಬರೆಯೋದೂ ಇಷ್ಟ.

ಸದಸ್ಯರ ಪೂರ್ಣ ಪ್ರೊಫೈಲ್ ವೀಕ್ಷಿಸಿ

Dr. Ullas Karanth (ಡಾ. ಉಲ್ಲಾಸ್ ಕಾರಂತ)
ನಿರೀಕ್ಷಿಸಿ!

ವಾಟರ್ ಪೋರ್ಟಲ್: ದಿನದ ಚಿತ್ರ

ಬಾವಿ

ಮೂಡಬಿದ್ರಿಯ ಸಾವಿರ ಬಸದಿಯ ಬಳಿ ಒಂದು ಬಾವಿ.
(ಫೋಟೋ: ಸುದರ್ಶನ್ (ಅನಿವಾಸಿ))

ವಾರದ ಲೇಖನ
ಬೃಹತ್ ನೀರಾವರಿ ಯೋಜನೆಗಳು: ಮಹಾ ಅಸಂಗತಕ್ಕೊಂದು ಮುನ್ನುಡಿ - ಎನ್ ಎ ಎಂ ಇಸ್ಮಾಯಿಲ್

ವಾರದ ವೀಡಿಯೋ
ಬಾನಿಗೊಂದು ಆಲಿಕೆ (ಮಳೆನೀರು ಸಂಗ್ರಹ)

ಮತ್ತಷ್ಟು...

ವಿಹರಿಸಿ

  • ಸಂಪದದಲ್ಲಿ ಬರೆಯುವ ಮುನ್ನ
  • ಹೊಸ ಬರಹ/ಚಿತ್ರ ಸೇರಿಸಿ
  • 'ಸಂಪದ' ಕುರಿತು ನಿಮ್ಮ ಸಲಹೆ/ಅಭಿಪ್ರಾಯಗಳನ್ನು ಕಳುಹಿಸಿ
  • ಚಟುವಟಿಕೆ
  • ಕನ್ನಡ ಬಟನ್ನುಗಳು
  • ಕನ್ವರ್ಟರ್

ಹೊಸ ಲೇಖನಗಳು

  • ಜೀವ ಕಾಯುವುದೇತಕೆ?
  • ಅಮೆರಿಕದ ಸಾರ್ವಜನಿಕ ಸಂಸ್ಥೆಗಳು-೧
  • ಲ೦ಡನ್ ಪ್ರವಾಸಕಥನ ಭಾಗ ೧೫: ಸೃಜನಶೀಲತೆ ಹುಟ್ಟುವ ಕೇ೦ದ್ರದ ಸುತ್ತ, ಮುತ್ತ!
  • ಶಬಚತನ, ಸೋಮಾರಿತನ, ಕೆಲಸದಲ್ಲಿ ಒಲವಿಲ್ಲದಿರುವಿಕೆ, ಎಲ್ಲದರಲ್ಲೂ ಉಪೇಕ್ಷೆ ; ಇದಕ್ಕೇನು ಮಾಡುವುದು ಹೇಳಿ ?
  • ಬದುಕಿಗೆ ಗೌರವದ ಭಾಷ್ಯೆ ಬರೆದ ಅದಮ್ಯ ಆತ್ಮಬಲದ ಶಿಕ್ಷಕರಿವರು..
  • ’ಕೊಲಂಬಿಯ ಪೋಸ್ಟ್ ಆಫೀಸ್’
  • ಗಣಪನ ಗಂಡಾಂತರಗಳು ಅನೇಕ

ಇತ್ತೀಚಿನ ಪ್ರತಿಕ್ರಿಯೆಗಳು

  • ASHOKKUMAR
    ಉ: ದಯವಿಟ್ಟೂ ಸ್ವಲ್ಪ ಅರ್ಥ ಹೇಳ್ತೀರಾ ????
    September 7, 2008 - 6:48am
  • kalpana
    ಉ: ಜೀವ ಕಾಯುವುದೇತಕೆ?
    September 7, 2008 - 5:19am
  • kalpana
    ಉ: ಮೊದಲ ಚಿತ್ರ
    September 7, 2008 - 1:48am
  • srivathsajoshi
    ಉ: ದಯವಿಟ್ಟೂ ಸ್ವಲ್ಪ ಅರ್ಥ ಹೇಳ್ತೀರಾ ????
    September 7, 2008 - 12:24am
  • yuvapremi
    ಉ: Splendours of Royal Mysore
    September 6, 2008 - 10:19pm
  • yuvapremi
    ಉ: ಮೊದಲ ಚಿತ್ರ
    September 6, 2008 - 10:11pm
  • ASHOKKUMAR
    ಉ: ಹಬ್ಬ ತಂದ ನೆನಪು...
    September 6, 2008 - 9:59pm
  • uniquesupri
    ಉ: ಜೀವ ಕಾಯುವುದೇತಕೆ?
    September 6, 2008 - 9:30pm
  • cmariejoseph
    ಉ: ಹಬ್ಬ ತಂದ ನೆನಪು...
    September 6, 2008 - 9:16pm
  • cmariejoseph
    ಉ: ಚಂದಿರನ ನೋಡಿದವ
    September 6, 2008 - 9:01pm
ಇನ್ನಷ್ಟು
ಈಗಿನಂತೆ 2 ಸದಸ್ಯರು ಮತ್ತು 152 ಅತಿಥಿಗಳು ಆನ್ಲೈನ್ ಇರುವರು.


ನಾವು ಸಮಯವನ್ನು ಉಪಕರಣವನ್ನಾಗಿ ಬಳಸಿಕೊಳ್ಳಬೇಕು, ಊರುಗೋಲಾಗಿ ಅಲ್ಲ.

— ಜಾನ್ ಕೆನಡಿ

ಮತ್ತಷ್ಟು: ಆರೋಗ್ಯ ಸಂಪದ | ಕೃಷಿ ಸಂಪದ | ನುಡಿಮುತ್ತುಗಳು

ಯೋಜನೆಗಳು: Kannada Learning Center | ಗ್ನು/ಲಿನಕ್ಸ್ ನಲ್ಲಿ ಕನ್ನಡ ತರಲು ನಡೆದಿರುವ ಕೆಲವು ಯೋಜನೆಗಳು | ಡಾಕ್ಯುಮೆಂಟೇಶನ್ Wiki | ಸಂಪದ ಅಂಚೆಪೆಟ್ಟಿಗೆಗಳು (Sampada Mailing Lists)

ಸ್ವರ್ಣ ಸಂಪದ ಸಂಪದ ಪಾಡ್ಕ್ಯಾಸ್ಟ್ (ಶ್ರಾವ್ಯ ಸಂದರ್ಶನಗಳು) | "ದಿ ಬೆಸ್ಟ್ ಆಫ್ ಸಂಪದ" | ಪ್ಲಾನೆಟ್ ಕನ್ನಡ

ಡೌನ್ಲೋಡ್ ಮಾಡಿಕೊಳ್ಳಿ:‌ ಬರಹ IME | ಫೈರ್ ಫಾಕ್ಸ್ | ಒಪೇರಾ

ಕೆಲವು ಹಕ್ಕುಗಳನ್ನು ಕಾಯ್ದಿರಿಸಲಾಗಿದೆ. ಸಂಪದ ಸಮುದಾಯ ಸಂಪದ ಫೌಂಡೇಶನ್ನಿನ ಒಂದು ಯೋಜನೆ.
Some rights reserved Sampada Initiative by Sampada Foundation, 2005 - 2008.
Terms of Use | Contact | About Sampada | Sampada in News/Media

The views expressed here are of the respective author(s) and Sampada administration does not necessarily subscribe to them.
RSS: All posts | Comments
Blogs | Podcasts

separator