ಸಂಪದದಲ್ಲಿ ಹೊಸತು! | Sign up | Login | Font Help
ಸಂಪದ
  • ಲೇಖನಗಳು
  • ಬ್ಲಾಗ್ಸ್
  • ಚರ್ಚೆಯ ವೇದಿಕೆ
  • ಚಿತ್ರಪುಟಗಳು
  • Podcasts
  • ಪುಸ್ತಕಗಳು
  • ಆರ್ಕೈವ್
  • ಸಂಪರ್ಕಿಸಿ
  • Sampada Foundation
  • ಅಂಚೆ ಪೆಟ್ಟಿಗೆ
  • Font Help

ನಿರೀಕ್ಷಿಸಿ: ಡಾ. ಉಲ್ಲಾಸ್ ಕಾರಂತರೊಂದಿಗಿನ ಮಾತುಕತೆ, ಸಂದರ್ಶನ

ಸಂಪದ

ವಾಸ್ತವ

June 4, 2008 - 3:29pm — rashmi_pai

ಮುಂಜಾನೆ ಮಿಂದು
ದೇವರಿಗೆ ನಮಿಸುವಾಗ
ಅಮ್ಮ ಹೇಳುತ್ತಿದ್ದಳಾಗ,
ಕೈ ಮುಗಿದು ಕಣ್ಮುಚ್ಚಿ ಬೇಡಿದರೆ
ಈಶ ಒಲಿವನೆಂದು..

ಸಂಧ್ಯಾವಂದನೆ ವೇಳೆ
ದೀಪ ಉರಿಸಿ ನನ್ನ ಅಜ್ಜಿ
ರಾಮನಾಮ ಜಪಿಸುತಿರಲು
ಕಣ್ಣೆರಡು ಮುಚ್ಚಿ ನಾನೂ
ದನಿಗೂಡಿಸುತ್ತಿದ್ದೆ..

ಇರುಳ ಬಾನಂಗಳದಲ್ಲಿ
ಕೋಟಿ ತಾರೆಗಳು ಮಿನುಗುವಾಗ
ನಿದ್ದೆ ಬರುತ್ತಿಲ್ಲ ತಾತ,
ಕತೆ ಹೇಳೆಂದು ಸತಾಯಿಸಿದಾಗ
ಸುಮ್ಮನೆ ಕಣ್ಣು ಮುಚ್ಚಿರು
ನಿದ್ದೆ ತಂತಾನೆ ಬರುವುದು
ಎಂದು ಅಪ್ಪ ಗದರಿಸಿದಾಗ
ಕಣ್ಣೆರಡು ಮುಚ್ಚಿ ಮಗ್ಗಲೆಳೆದು
ಆ ಸುಂದರ ರಾತ್ರಿಗಳಲ್ಲಿ ನಿದ್ದೆಗೆ ಜಾರಿದ್ದೆ

ಬಾಲ್ಯವೆಷ್ಟು ಮಧುರವಾಗಿತ್ತು!
ಕಣ್ತೆರೆದರೆ ಸುಂದರ ಲೋಕ
ಮುಚ್ಚಿದರೆ ಸ್ವಪ್ನ ಲೋಕಕ್ಕೆ
ಪಯಣ ಬೆಳೆಸುತಲಿದ್ದೆ

ಕಾಲ ಚಕ್ರವು ತಿರುಗುತಿರಲು
ಪ್ರಸ್ತುತಕ್ಕೆ ಮೊದಲ ಹೆಜ್ಜೆಯಿಟ್ಟು,
ಸುತ್ತ ಕಣ್ಣು ಹಾಯಿಸಿದರೆ...
ಹಗೆ ಹೊಗೆಯಾಡುವ ಜಗದಲ್ಲಿ
ನಗೆ ಮಾಸಿದ ಜೋಲು ಮುಖ!
ಜೀವ ತೆಗೆಯಲು ಕತ್ತಿ ಮಸೆಯುವ ಜನ,
ಇನ್ನೊಂದೆಡೆ,
ಜೀವಕ್ಕಾಗಿ ಬೇಡುವ ಮನ
ಹಣದಾಸೆಗಾಗಿ ಜೀವ ಹಿಂಡುವವರು,
ಬೇಡುವವರು, ಮುಂದೆ ಕೈ ಚಾಚಿ

ಜಗದಳುವಿನ ಮುಂದೆ
ನಿಸ್ಸಹಾಯಕ,ಮೂಕಪ್ರೇಕ್ಷಕ ನಾನು
ಹಿಂಸೆಗಳು ಕಣ್ಮುಂದೆ ನರ್ತನವಾಡಿದರೂ
ನಾ ಬಂಧಿ, ಕಟ್ಟುಪಾಡುಗಳ ಸೆರೆಮನೆಯಲ್ಲಿ
ದನಿಯೆತ್ತಲು ಚಡಪಡಿಸಿ ಸೋತಾಗ
ಎರಡು ಹನಿ ಕಣ್ಣೀರೆರೆದು
ಮತ್ತೆ,
ನನಗಿದರ ಅರಿವೇ ಇಲ್ಲದವನಂತೆ
ಕಣ್ಣು ಮುಚ್ಚಿಕೊಳ್ಳುತ್ತೇನೆ!

  • ಕಾವ್ಯ ಮತ್ತು ಕವನ
~.~
  • Login or register to post comments
  • 233 hits
  • ಈ ಪುಟವನ್ನು ಇ-ಮೇಯ್ಲ್ ಮಾಡಿ
  • Delicious
  • Google
  • Yahoo

ಪ್ರತಿಕ್ರಿಯೆಗಳು

ಕಾಮೆಂಟ್ ನೋಟ ಆಯ್ಕೆಗಳು

Select your preferred way to display the comments and click "Save settings" to activate your changes.
June 4, 2008 - 5:30pm — Sunil Jayaprakash

ಉ: ವಾಸ್ತವ

Sunil Jayaprakash's picture

ಹ್ಮ್..ರಶ್ಮಿಯವರೇ, ನಗು ನಗುತ್ತ ಉತ್ಸಾಹದಿಂದಿದ್ದ "ಚಿಕ್ಕಂದು", ಅಸಹಾಯಕದೆಡೆಗೆ ನೂಕಿರುವ "ದೊಡ್ಡಿಂದು" ನಡುವಿನ ದ್ವಂದ್ವವನ್ನು ಚೆನ್ನಾಗಿ ಹಿಡಿದಿಟ್ಟಿದ್ದೀರಿ. ಆದರೆ ಅಲ್ಲೇ ನಿಲ್ಲದೆ ಹೊರಬನ್ನಿ. "ಅಸಹಾಯಕತೆಯನ್ನು ನಾನು ಮೀರಬಲ್ಲೆ" ಎಂಬುದನ್ನು ನಿರೂಪಿಸಿ.

"ಅರಿವಿಗೆ ಮೀರಿದ ನಿಲುವಿನೊಳಿಹುದು ನಮ್ಮಯ ಗೆಲುವು". ಕನ್ನಡದ ಕವಿರಾಜಮಾರ್ಗಕಾರನೇ ಹೇಳಿರುವ ಹಾಗೆ, ವಿಷಾದವೇ ನಮ್ಮ ಶತ್ರು.

ನಗೆ ಮಾಸಿದ ಜೋಲು ಮೊಗದಲ್ಲಿ ಮಂದಹಾಸವನ್ನು ಬೀರುವಂತಹ ಶಕ್ತಿ ನೀವಾಗಿ. ಕತ್ತಿಮಸೆಯುತ್ತಿರುವ ಜನ ಮೇಣ್ ಕೈಚಾಚಿರುವ ಜನರನ್ನು ನೋಡುವಾಗ ಅಸಹಾಯಕ ದಿಟ್ಟಿನಲ್ಲಿ ನೋಡದೆ, ಅದನ್ನು ಒಪ್ಪಿಕೊಂಡು ಅದನ್ನು ಮೀರಿನಿಲ್ಲಲು ನಾನು ಏನು ಮಾಡಬಹುದು ಎಂಬುದನ್ನು ಯೋಚಿಸಿ. ಕಟ್ಟುಪಾಡುಗಳ ಸೆರೆಮನೆಯಲ್ಲಿ, ಚಡಪಡಿಸದೆ, ನಿಮ್ಮ ಅನಿಸಿಕೆಗಳನ್ನು, "ನಿಮ್ಮತನವನ್ನು ಮನದಟ್ಟು ಮಾಡುವ" ನಿಟ್ಟಿನಲ್ಲಿ ಹಂಚಿಕೊಳ್ಳಿರಿ. ಹೇಗೆ ಇದನ್ನೆಲ್ಲ ಮಾಡೋದು ? ಯೋಚಿಸಿ, ಇದರ ಬಗ್ಗೆಯೂ ಒಂದು ಕವನ ಬರೆದು ಹಾಕಿ. ಓದಿ ಸಂತೋಷಪಡ್ತೀವಿ.

ಚಿಕ್ಕಂದೂ ಚೆನ್ನಾಗಿತ್ತು, ದೊಡ್ಡಿಂದೂ ಚೆನ್ನಾಗಿದೆ, ಹೆಮ್ಮುಂದೂ ಚೆನ್ನಾಗಿರತ್ತೆ ಅಂತ ಯಾವಾಗಲೂ ಅಂದುಕೊಳ್ತಾ ಇರಿ. ಸದ್ಯಕ್ಕೆ, ನಿಮಗೆ "ದೊಡ್ಡಿಂದು ಚೆನ್ನಾಗಿಲ್ಲ" ಅನ್ನೋದೇ ವಾಸ್ತವವಾಗಿ (ಕವನದ ಹೆಸರು) ಕಾಣ್ತಾ ಇದೆ. ಆದರೆ "ನೀವಂದುಕೊಂಡಿರುವ ವಾಸ್ತವ", ನಿಜವಾದ ವಾಸ್ತವಕ್ಕೆ ಮಸುಕು ಹಾಕಿರಬಹುದು, ಅಲ್ವಾ !!!!!

  • Login or register to post comments
  • link
  • ಈ ಪುಟವನ್ನು ಇ-ಮೇಯ್ಲ್ ಮಾಡಿ
June 5, 2008 - 3:56pm — rashmi_pai

ಉ: ವಾಸ್ತವ

rashmi_pai's picture

ಹಾಯ್ ಸುನಿಲ್ ಅವರೇ,

ನಿಮ್ಮ ಒಲವಿನ ಪ್ರತಿಕ್ರಿಯೆಗೆ ಧನ್ಯವಾದಗಳು. ಪ್ರಸ್ತುತ ನನ್ನ ಭಾವನೆಗಳನ್ನು ಚೆನ್ನಾಗಿಯೇ ಅರ್ಥ ಮಾಡಿಕೊಂಡಿದ್ದೀರಿ. ನಿಮ್ಮ ಪ್ರೋತ್ಸಾಹದ ಮಾತುಗಳಿಗೆ ನಾನು ಎಂದೂ ಋಣಿಯಾಗಿರುವೆ.ಹಾಗಯೇ ನೀವು ಹೇಳಿದಂತೆ ಜೋಲು ಮುಖಗಳಲ್ಲಿ ನಗು ತುಂಬಲು ಪ್ರಯತ್ನಿಸುವೆ.
ಇತೀ,

ರಶ್ಮಿ.ಪೈ

  • Login or register to post comments
  • link
  • ಈ ಪುಟವನ್ನು ಇ-ಮೇಯ್ಲ್ ಮಾಡಿ

ಮೇಲಿನ ಪುಟವನ್ನು ಹೋಲುವ ಪುಟಗಳು - 'ಸಂಪದ' ಆರ್ಕೈವಿನಿಂದ

  • "ನೀನಿಲ್ಲದೆ’
  • ನಿದ್ದೆ ಯ ಬಗ್ಗೆ ಚಿ೦ತನೆ
  • ಪುಟ್ಟಿಯ ದಿನಚರಿ
  • ಕಂದಾ ಅಲ್ಲಿ ನೀ ಹೇಗಿರುವೆ? ನಿನ್ನಮ್ಮನ ಒಡಲಲ್ಲಿ
  • ಇವತ್ತಿನ ಕವಿತೆ
Syndicate content

ಲೇಖಕರು

rashmi_pai's picture

ಪೂರ್ಣ ಹೆಸರು
Rashmi Kasaragod

ಪರಿಚಯ

ನನ್ನ ಊರು ಗಡಿನಾಡಾದ ಕಾಸರಗೋಡು. ಪ್ರಸ್ತುತ ಚೆನ್ನೈಯಲ್ಲಿದ್ದೇನೆ. ಸಾಹಿತ್ಯ, ಕಲೆಗಳಲ್ಲಿ ಆಸಕ್ತಿ ಹೊಂದಿರುವುದರೊಂದಿಗೆ ಕತೆ, ಕವಿತೆ, ಭಾಷಣ ಮೊದಲಾದವುಗಳಲ್ಲಿ ನನ್ನನ್ನು ತೊಡಗಿಸಿಕೊಳ್ಳುತ್ತೇನೆ. ನನ್ನ ನೆಚ್ಚಿನ ಗೆಳೆಯನಾದ ಪ್ರಕೃತಿಯೊಂದಿಗೆ ಒಡನಾಟ ನಡೆಸುವುದು ಹಾಗೂ ಸ್ವಪ್ನಲೋಕದಲ್ಲಿ ವಿಹರಿಸುವುದೆಂದರೆ ನನಗಿಷ್ಟ.

ಸದಸ್ಯರ ಪೂರ್ಣ ಪ್ರೊಫೈಲ್ ವೀಕ್ಷಿಸಿ

ವಾಟರ್ ಪೋರ್ಟಲ್: ದಿನದ ಚಿತ್ರ

ಪರಿಶುದ್ಧ ಜಲ

(ಚಿತ್ರ: ವಸಂತ ಕಜೆ)

ವಾರದ ಲೇಖನ
ನಮ್ಮ ಕೊಳವೆ ಬಾವಿಯ ಮರುಪೂರಣ - ವಸಂತ ಕಜೆ

ವಾರದ ವೀಡಿಯೋ
ಬಾನಿಗೊಂದು ಆಲಿಕೆ (ಮಳೆನೀರು ಸಂಗ್ರಹ)

ಮತ್ತಷ್ಟು...

ವಿಹರಿಸಿ

  • ಸಂಪದದಲ್ಲಿ ಬರೆಯುವ ಮುನ್ನ
  • ಹೊಸ ಬರಹ/ಚಿತ್ರ ಸೇರಿಸಿ
  • 'ಸಂಪದ' ಕುರಿತು ನಿಮ್ಮ ಸಲಹೆ/ಅಭಿಪ್ರಾಯಗಳನ್ನು ಕಳುಹಿಸಿ
  • ಚಟುವಟಿಕೆ
  • ಕನ್ನಡ ಬಟನ್ನುಗಳು
  • ಕನ್ವರ್ಟರ್

ಹೊಸ ಲೇಖನಗಳು

  • ಬಂಗಾರದ ಅರಮನೆ
  • ಗುರಿಯ ಮೊಸರನ್ನದಲ್ಲೇಕೆ ಪ್ರೇಮದ ಕಲ್ಲು?
  • 'ಕಾಶ್ಮೀರದ ಬೆಂಕಿ:ಎಚ್ಚರವಿರಲಿ!' ಲೇಖನಕ್ಕೆ ಬಂದ ಪ್ರತಿಕ್ರಿಯೆಗಳಿಗೆ ಪ್ರತಿಸ್ಪಂದನ
  • ಸಹಜ ಕೃಷಿ ಹರಿಕಾರ ಮಸನೊಬು ಫುಕುಓಕಾ ಮರಳಿ ಮಣ್ಣಿಗೆ.
  • ಬಸವಣ್ಣನಾಗಬೇಕೆಂದು ಬಯಸಿದ ಯಡಿಯೂರಪ್ಪ ಅಮೆರಿಕದಲ್ಲಿ ಮೂಗಬಸವನಾದದ್ದು!
  • ತಪ್ಪಿ ನಡೆಸ ಸರ್ಕಾರ
  • ನಿಸ್ವಾರ್ಥಿ ಪಾರಂಪರಿಕ ವೈದ್ಯರ ಮುಂದೆ ಸ್ವಾರ್ಥದ ‘ಪೇಟೆಂಟ್’ ಹಾವಳಿ!

ಇತ್ತೀಚಿನ ಪ್ರತಿಕ್ರಿಯೆಗಳು

  • gururajkodkani
    ಉ: ಹೌದು........ಈ ಬರೆಯೋ ಅಭ್ಯಾಸ ನಿಮಗೆ.........?
    August 22, 2008 - 9:56am
  • mahesha
    ಉ: ಏಕೆ ಕರ್ನಾಟಕದೆಡೆಗೆ ತಾತ್ಸಾರ
    August 22, 2008 - 9:49am
  • uniquesupri
    ಉ: ಹೌದು........ಈ ಬರೆಯೋ ಅಭ್ಯಾಸ ನಿಮಗೆ.........?
    August 22, 2008 - 9:40am
  • Sunil Jayaprakash
    ಉ: ಅನುಭವ, ಅನುಭಾವ, ಅನುಭೂತಿ?
    August 22, 2008 - 9:33am
  • uniquesupri
    ಉ: ಎಲ್ಲ ತುಸುಹೊತ್ತು...
    August 22, 2008 - 9:22am
  • uniquesupri
    ಉ: ಯಾವ ಬೆಳಕಲ್ಲಿ ಮರೆಯಾದನೋ ಕೃಷ್ಣ!
    August 22, 2008 - 9:18am
  • savithasr
    ಉ: ಲಾಲಿ
    August 22, 2008 - 9:16am
  • Sunil Jayaprakash
    ಉ: ಹೌದು........ಈ ಬರೆಯೋ ಅಭ್ಯಾಸ ನಿಮಗೆ.........?
    August 22, 2008 - 9:14am
  • uniquesupri
    ಉ: 'ಕಾಶ್ಮೀರದ ಬೆಂಕಿ:ಎಚ್ಚರವಿರಲಿ!' ಲೇಖನಕ್ಕೆ ಬಂದ ಪ್ರತಿಕ್ರಿಯೆಗಳಿಗೆ ಪ್ರತಿಸ್ಪಂದನ
    August 22, 2008 - 9:12am
  • mahesha
    ಉ: ಅನುಭವ, ಅನುಭಾವ, ಅನುಭೂತಿ?
    August 22, 2008 - 8:56am
ಇನ್ನಷ್ಟು
ಈಗಿನಂತೆ 11 ಸದಸ್ಯರು ಮತ್ತು 37 ಅತಿಥಿಗಳು ಆನ್ಲೈನ್ ಇರುವರು.


ವಿನಾಶಕಾಲೇ ವಿಪರೀತ ಸಿಧ್ಧಿ!

— ಕೈಲಾಸಂ

ಮತ್ತಷ್ಟು: ಆರೋಗ್ಯ ಸಂಪದ | ಕೃಷಿ ಸಂಪದ | ನುಡಿಮುತ್ತುಗಳು

ಯೋಜನೆಗಳು: Kannada Learning Center | ಗ್ನು/ಲಿನಕ್ಸ್ ನಲ್ಲಿ ಕನ್ನಡ ತರಲು ನಡೆದಿರುವ ಕೆಲವು ಯೋಜನೆಗಳು | ಡಾಕ್ಯುಮೆಂಟೇಶನ್ Wiki | ಸಂಪದ ಅಂಚೆಪೆಟ್ಟಿಗೆಗಳು (Sampada Mailing Lists)

ಸ್ವರ್ಣ ಸಂಪದ ಸಂಪದ ಪಾಡ್ಕ್ಯಾಸ್ಟ್ (ಶ್ರಾವ್ಯ ಸಂದರ್ಶನಗಳು) | "ದಿ ಬೆಸ್ಟ್ ಆಫ್ ಸಂಪದ" | ಪ್ಲಾನೆಟ್ ಕನ್ನಡ

ಡೌನ್ಲೋಡ್ ಮಾಡಿಕೊಳ್ಳಿ:‌ ಬರಹ IME | ಫೈರ್ ಫಾಕ್ಸ್ | ಒಪೇರಾ

ಕೆಲವು ಹಕ್ಕುಗಳನ್ನು ಕಾಯ್ದಿರಿಸಲಾಗಿದೆ. ಸಂಪದ ಸಮುದಾಯ ಸಂಪದ ಫೌಂಡೇಶನ್ನಿನ ಒಂದು ಯೋಜನೆ.
Some rights reserved Sampada Initiative by Sampada Foundation, 2005 - 2008.
Terms of Use | Contact | About Sampada | Sampada in News/Media

The views expressed here are of the respective author(s) and Sampada administration does not necessarily subscribe to them.
RSS: All posts | Comments
Blogs | Podcasts

separator