ಸಂಪದದಲ್ಲಿ ಹೊಸತು! | Sign up | Login | Font Help
ಸಂಪದ
  • ಲೇಖನಗಳು
  • ಬ್ಲಾಗ್ಸ್
  • ಸಂದರ್ಶನ
  • ಚರ್ಚೆ
  • ಚಿತ್ರಪುಟಗಳು
  • ಪುಸ್ತಕಗಳು
  • ಆರ್ಕೈವ್
  • ಸಂಪರ್ಕಿಸಿ
  • ಸಂಪದ ಫೌಂಡೇಶನ್
  • Font Help

~

ಸಂಪದ

ಅಮ್ಮನ ಒಲವಿನ ಓಲೆ.....

July 10, 2008 - 5:49pm — rashmi_pai

ಯಾಕೋ ಮನಸ್ಸು ನಿರಾಳವಾಗುತ್ತಿದೆ. ಬಿಸಿಲಿನಿಂದ ಇಷ್ಟು ದಿನ ಸುಡುತ್ತಿದ್ದ ಭೂಮಿ ತಂಪಾಗಿದೆ. ಮಳೆ ಇನ್ನೂ ಹನಿ ಬಿಟ್ಟಿಲ್ಲ. ಏನೋ ಮನೆಯ ನೆನಪು ತುಂಬಾ ಕಾಡುತ್ತಿದೆ, ಯಾವುದಾದರೂ ಪುಸ್ತಕ ಕೈಗೆತ್ತಿಕೊಳ್ಳೋಣ ಅಂತಾ ಇದ್ದೆ. ಭಾನುವಾರ ಆದ ಕಾರಣ ಹಾಸ್ಟೆಲ್‌ನಲ್ಲಿಯೇ ಇರಬೇಕಾದ ಪರಿಸ್ಥಿತಿ. ವಾರದಲ್ಲಿ ಸಿಗುವ ಒಂದೇ ಒಂದು ದಿನ ರಜಾದಿನ ಹಾಸ್ಟೆಲ್‌ನ ರೂಮಿನಲ್ಲಿ ಕಳೆಯುವಾಗ ಯಾಕೋ "ಏಕಾಂಗಿತನ" ನನ್ನನ್ನು ಆವರಿಸುತ್ತದೆ. ಸಾಧಾರಣ ಹುಡುಗಿಯರಂತೆ ಶಾಪಿಂಗ್, ಔಟಿಂಗ್ ಇಷ್ಟವಿಲ್ಲದ ನನಗೆ ನಾಲ್ಕು ಗೋಡೆಗಳ ಮಧ್ಯದಲ್ಲಿ, ಅನ್ಯಭಾಷೀಯರ ಪರಿಸರದಲ್ಲಿ ಪುಸ್ತಕಗಳೇ ಉತ್ತಮ ಸಂಗಾತಿಯಾಗಿವೆ.

ಹಾಸ್ಟೆಲ್‌ನ ಕಿಟಿಕಿಯಿಂದ ಹೊರಗಿಣುಕಿದರೆ ತುಂತುರು ಮಳೆಹನಿಗಳು ಮರದೆಲೆಯಿಂದ ಜಾರುತ್ತಿತ್ತು. ಕೈಗೆತ್ತಿದ ಪುಸ್ತಕವೂ ಓದಬೇಕೆಂಬ ಮೂಡ್ ಇರಲಿಲ್ಲ. ಆದಾಗಲೇ ನನ್ನ ಕಣ್ಣಿಗೆ ಬಿದ್ದದ್ದು ಕಂದು ಬಣ್ಣದ ಕವರ್. ಅದು ತುಂಬಾ ಅಮೂಲ್ಯವಾದದ್ದು. ಯಾಕೆ ಗೊತ್ತಾ? ಅದರಲ್ಲಿ ತುಂಬಾ ಸಿಹಿಮುತ್ತುಗಳಿವೆ, ವಾತ್ಸಲ್ಯವಿದೆ. ಸ್ನೇಹ, ಸಲಹೆ, ಮಮತೆ, ಕಾಳಜಿ ತುಂಬಿದ ಪತ್ರ ಅದು. ಈ ಚುಮುಚುಮು ಚಳಿಯಲ್ಲಿ ಕಂದು ಬಣ್ಣದ ಕವರ್‌ನೊಳಗೆ ನನ್ನ "ಅಮ್ಮನ ಪತ್ರ" ಬೆಚ್ಚನೆ ಕುಳಿತುಕೊಂಡಿದೆ. ಅದು ಕೈಗೆತ್ತಿಕೊಂಡ ಕೂಡಲೇ ಯಾಕೋ ಮನಸ್ಸು ನಿರಾಳವಾಗುತ್ತಿದೆ. ಭಗವಾನ್ ಶ್ರೀಕೃಷ್ಣ ಯುದ್ದ ಭೂಮಿಯಲ್ಲಿ ಕುಸಿದು ಕುಳಿತ ಅರ್ಜುನನಿಗೆ ಗೀತೋಪದೇಶ ನೀಡಿ ಹುರುಪು ಹುಟ್ಟಿಸಿದಂತೆ ಅಮ್ಮನ ಪತ್ರ ನನ್ನ ಕೈಗೆ ಸಿಕ್ಕಿದಾಗ ಚೈತನ್ಯ ನೀಡುವ ಅಸ್ತ್ರದಂತೆ ಭಾಸವಾಗುತ್ತದೆ.

ಚೆನ್ನೈ ಎಂಬ ಮಹಾನಗರಕ್ಕೆ ಬಂದು ವರುಷಗಳಾಗುತ್ತಾ ಬಂತು. ಅದರಲ್ಲಿ ಎಷ್ಟು ಏಳು ಬೀಳುಗಳು ಸಂಭವಿಸಿವೆಯೋ ಅಷ್ಟು ಬಾರಿ ಅಮ್ಮನ ಪತ್ರ ನನ್ನ ಕೈ ಸೇರಿದೆ. ನಿಜ ಹೇಳಬೇಕೇ? ಮೊಬೈಲ್ ಫೋನ್‌ನಲ್ಲಿ ಆಗಾಗ ಮಾತನಾಡುತ್ತಾ ಕಷ್ಟ ಸುಖ ಹೇಳುತ್ತಿದ್ದರೂ ಅಮ್ಮನ ಪತ್ರದಲ್ಲಿ ಸಿಗುವಂತಹ ತೃಪ್ತಿ ಎಲ್ಲಿಯೂ ಸಿಕ್ಕಿಲ್ಲ. ಆ ಪತ್ರ ಅಂತದ್ದು. ತನ್ನ ಮಕ್ಕಳು ಎಲ್ಲಿಯೇ ಇರಲಿ ಮನಸ್ಸಲ್ಲಿ ಮಕ್ಕಳದ್ದೇ ಚಿಂತೆ. ಮಾತೃ ಹೃದಯವಲ್ಲವೇ? ಮಕ್ಕಳ ಒಂದೊಂದು ಉಚ್ವಾಸ ನಿಶ್ವಾಸವೂ ಆ ಅಮ್ಮನಿಗೆ ತಿಳಿಯುವ ಶಕ್ತಿ ಇದೆ. ಅದಕ್ಕಾಗಿಯೇ ಬಲ್ಲವರು ಅಮ್ಮ ದೇವರ ರೂಪ ಅಂದದ್ದು?

ಇನ್ನು, ಹೆಣ್ಣು ಮಕ್ಕಳೆಂದರೆ ಅಮ್ಮನಿಗೆ ಕಾಳಜಿ ಇಲ್ಲದೆ ಇರುತ್ತದಾ?. ನೋಡು ಪುಟ್ಟಿ, ಅದು ಹಾಗೆ, ಇದು ಹೀಗೆ, ಜಾಗರೂಕತೆಯಿಂದಿರು ಎಂಬ ಉಪದೇಶಗಳೊಂದಿಗೆ ತುಂಬಾ ಮಮತೆ, ತಪ್ಪು ಮಾಡಿದಲ್ಲಿ ಅಷ್ಟೇ ಕಟುವಾದ ಟೀಕೆ ಎಲ್ಲವೂ ತುಂಬಿರುವ ಅದೆಷ್ಟೋ ಪತ್ರಗಳು ನನ್ನಲ್ಲಿ ಭದ್ರವಾಗಿವೆ. ಅವು ನೀಡುವಂತಹ ಮಾರ್ಗದರ್ಶನ, ಒಲವು, ಸಾಂತ್ವನ.. ನಾನು ಧೃತಿಗೆಟ್ಟಾಗ "ಏಕಾಂಗಿಯಲ್ಲ" ಎಂಬ ಅರಿವು ಮೂಡಿಸಿ ಯಾವುದೇ ಕಷ್ಟ ಬಂದರೂ ಸೆಟೆದು ನಿಲ್ಲುವ ತಾಕತ್ತನ್ನು ನೀಡಿದೆ.

ಪತ್ರದ ಬಗ್ಗೆ ಹೇಳುವಾಗ ತಕ್ಷಣ ನೆನಪಿಗೆ ಬರುವುದೇ ನೀಲಿ ಬಣ್ಣದ ಇನ್‌ಲ್ಯಾಂಡ್ ಲೆಟರ್. ಈಗ ಅದು ಕಾಣಲಿಕ್ಕೇ ಅಪರೂಪ. ನಿಜ, ಕಾಲಬದಲಾಗಿದೆ. ತಾಂತ್ರಿಕತೆ ವರ್ಧಿಸುತ್ತಾ ಬಂದಂತೆ ಪತ್ರಗಳ ಸ್ಥಾನವನ್ನು ಮೊಬೈಲ್ ಎಸ್‌ಎಂಎಸ್‌ಗಳು ಇಮೇಲ್ ಕಸಿದುಕೊಂಡಿವೆ. ಏನೇ ಇರಲಿ ತಮ್ಮ ಕೈಯಕ್ಷರಗಳಲ್ಲಿ ಬರೆದ ಪತ್ರದಲ್ಲಿ "ನನ್ನೂರಿನ" ಮಣ್ಣಿನ ಸುಗಂಧವಿದೆ, ವಿವರವಾಗಿ ಬರೆದ ಮುದ್ದಾದ ಅಕ್ಷರಗಳಲ್ಲಿ ಮಮತೆಯ ಕೊಂಡಿಯಿದೆ. ಪ್ರೀತಿಯ...ಎಂದು ಆರಂಭವಾಗುವ ಪತ್ರಗಳಿಂದ ಇತೀ ನಿನ್ನ.. ಎಂದು ಕೊನೆಗೊಳ್ಳುವ ಈ ಪತ್ರಗಳು ಹೊತ್ತು ತರುವ ಅದೆಷ್ಟು ಸುದ್ದಿಗಳು, ಭಾವನೆಗಳು! ಎಲ್ಲವನ್ನೂ ಓದಿ ಮುಗಿಸುವಾಗ ಕಣ್ಣು ತೇವಗೊಂಡಿರುತ್ತದೆ.

ನೆನಪುಗಳು ಮನಸ್ಸಿನ ಕದ ತಟ್ಟಿ ಒಮ್ಮೆ ನಗು ಮತ್ತೊಮ್ಮೆ ಅಳು ತರಿಸಿದರೂ ಪತ್ರದಲ್ಲಿನ ಅಕ್ಷರಗಳು ಮತ್ತಷ್ಟು ಮುದ್ದಾಗಿ ಕಾಣಿಸುತ್ತವೆ. ಓದಿದ ಪತ್ರವನ್ನು ಮತ್ತೆ ಮತ್ತೆ ಓದುವಾಗ ಹೊಸ ಉತ್ಸಾಹ, ಅಮ್ಮನ ನೆನಪು ಕಾಡುತ್ತದೆ. ಮರೆಯದೆ ಪತ್ರ ಬರಿ ಎಂದು ಕೊನೆಯ ಸಾಲಿನಲ್ಲಿ ಅಮ್ಮ ಬರೆದದ್ದು ನೋಡಿದಾಗ ನೆನಪಾದದ್ದು, ಅದೆಷ್ಟೋ ನನ್ನ ಉತ್ತರಗಳು ಅಮ್ಮನ ಕೈ ಸೇರಿವೆ ಎಂದು. ಸದ್ಯ, ನಾನು ನನ್ನವರನ್ನು ಮಿಸ್ ಮಾಡುವಾಗ ಪತ್ರವನ್ನು ಕೈಗೆತ್ತಿಕೊಂಡು ನೋವು ಮರೆಯುವಂತೆ, ಅವರೂ ಹಾಗೆ ಮಾಡುತ್ತಿರುತ್ತಾರಲ್ಲಾ..ಅದಕ್ಕೇ ಪತ್ರ ಬರೆಯುವುದನ್ನು ಮುಂದುವರಿಸುತ್ತಾ ಬಂದಿದ್ದೇನೆ. ಅದರಲ್ಲಿ ಏನೋ ಒಂಥಾರ ತೃಪ್ತಿಯಿದೆ, ಮನದಾಳದ ಮಾತನ್ನು ಹೇಳುವ ತಾಕತ್ತಿದೆ. ಸ್ನೇಹದ ಅಕ್ಷರಗಳು ಓಲೆ ರೂಪದಲ್ಲಿ ಕೈ ಸೇರುವಾಗ ಮನಸ್ಸಿನ ಮೂಲೆಯಲ್ಲಿರುವ ಪ್ರೀತಿಯ ಸೆಳೆತವು ಮುಂದಿನ ಪತ್ರವನ್ನು ನಿರೀಕ್ಷಿಸುತ್ತಿರುತ್ತದೆ..

  • ಅನುಭವ ಕಥನ
~.~
  • Login or register to post comments
  • 378 hits
  • ಈ ಪುಟವನ್ನು ಇ-ಮೇಯ್ಲ್ ಮಾಡಿಈ ಪುಟವನ್ನು ಇ-ಮೇಯ್ಲ್ ಮಾಡಿ
  • Printer-friendly versionPrinter-friendly version
  • ನಿರ್ವಾಹಕರ ಗಮನಕ್ಕೆ ತನ್ನಿ

ಪ್ರತಿಕ್ರಿಯೆಗಳು

ಕಾಮೆಂಟ್ ನೋಟ ಆಯ್ಕೆಗಳು

Select your preferred way to display the comments and click "Save settings" to activate your changes.
July 11, 2008 - 10:01am — pallavi.dharwad

ಉ: ಅಮ್ಮನ ಒಲವಿನ ಓಲೆ.....

pallavi.dharwad's picture

ತುಂಬಾ ಚೆನ್ನಾಗಿ ಬರೆದಿದ್ದೀರಿ ರಶ್ಮಿ.

ಕೈಬರಹದ ಪತ್ರದ ಘಮ, ಸೊಗಸು, ಆತ್ಮೀಯತೆ ಮತ್ತು ನೆಮ್ಮದಿ ಈಮೇಲ್‌ಗೆ ಖಂಡಿತಾ ಇಲ್ಲ. ನಾವೆಲ್ಲ ಅಂಚೆ ಮತ್ತು ಪತ್ರಗಳನ್ನು ನಿಜಕ್ಕೂ ಮಿಸ್‌ ಮಾಡಿಕೊಂಡುಬಿಟ್ಟಿದ್ದೇವೆ.

ಏನು ಬರೆದಿದ್ದರು ಅಮ್ಮ? ದೂರದೂರಿನಲ್ಲಿರುವ ಮಗಳನ್ನು ಅದೆಷ್ಟು ಕಣ್ತುಂಬಿಕೊಂಡಿದ್ದರೋ. ಅದನ್ನೂ ಬರೆಯಿರಿ. ಓದುವಾಸೆ.

ಜೊತೆಯಲ್ಲೇ ಇರುವುದರಿಂದ ನಾನು ಅವ್ವನೊಂದಿಗೆ ಆಗಾಗ ಜಗಳವಾಡುತ್ತೇನೆ. ಒಮ್ಮೊಮ್ಮೆ ದಿನಗಟ್ಟಲೇ ಮಾತನಾಡುವುದಿಲ್ಲ. ಆದರೂ ಆಕೆಯ ಪ್ರೀತಿ ತಾಕುತ್ತಲೇ ಇರುತ್ತದೆ. ಅಪರೂಪಕ್ಕೆ ಎಂಬಂತೆ ಅಮ್ಮ ಯಾವುದಾದರೂ ಊರಿಗೆ ಹೋದರೆ, ಮನಸ್ಸಿನ ತುಂಬ ಹಳಹಳಿ. ನೆಮ್ಮದಿಯೇ ಇರುವುದಿಲ್ಲ. ನಿಮ್ಮ ಬರಹ ಓದುತ್ತ ಅದೆಲ್ಲ ಮತ್ತೆ ನೆನಪಾಯಿತು.

- ಪಲ್ಲವಿ. ಎಸ್‌.
ಎಲ್ಲರನ್ನು ಜೋಡಿಸಿರುವ ಎಳೆ ಹುಡುಕುತ್ತಾ...

  • Login or register to post comments
  • link
  • ನಿರ್ವಾಹಕರ ಗಮನಕ್ಕೆ ತನ್ನಿ
July 11, 2008 - 10:38am — rashmi_pai

ಉ: ಅಮ್ಮನ ಒಲವಿನ ಓಲೆ.....

rashmi_pai's picture

ಧನ್ಯವಾದ ಪಲ್ಲವಿಯವರೇ...

ಅಮ್ಮ ಜೊತೆಗೆ ಇರುವಾಗ ನಾನು ಕೂಡಾ ತುಂಬಾ ತುಂಟಾಟ ಮಾಡ್ತಿದ್ದೆ. ಆದ್ರೆ ಅಮ್ಮ ಇಲ್ಲದೇ ಇರುವಾಗ ಬೇಸರವೆನಿಸುತ್ತದೆ. ಎಲ್ಲ ಅಮ್ಮಂದಿರೂ ಪತ್ರದಲ್ಲಿ ಉಪದೇಶಗಳನ್ನೇ ನೀಡುತ್ತಾರಲ್ಲವಾ? ನನ್ನ ಅಮ್ಮನೂ ಅಷ್ಟೇ..ಆ ಪತ್ರವನ್ನು ಓದುವಾಗ ಅಮ್ಮ ನನ್ನ ಹತ್ತಿರವೇ ಇದ್ದಾರೆ ಎಂಬ ಅನುಭವ. ಅದು ಸಾಕಲ್ಲವೇ? ನಿಮಗೂ ಹಾಗೆ ಅನಿಸುತ್ತಿರಬಹುದು..ಏನಂತಿರಾ?

ನಗು ಮಾಸದ ಮುಖವಿರಲಿ, ಮನ ತುಂಬ ಪ್ರೀತಿಯಿರಲಿ...

ರಶ್ಮಿ

  • Login or register to post comments
  • link
  • ನಿರ್ವಾಹಕರ ಗಮನಕ್ಕೆ ತನ್ನಿ
July 11, 2008 - 5:51pm — sreekrishna

ಉ: ಅಮ್ಮನ ಒಲವಿನ ಓಲೆ.....

sreekrishna's picture

ಹತ್ತಿರವಿದ್ದಾಗ ಅಮ್ಮನ ಜೊತೆಗೆ ಅದೆಷ್ಟು ಸಾರಿ ಜಗಳವಾಡಿದರೂ ಒಂದು ಸಾರಿಯೂ ಕೋಪಿಸಿಕೊಳ್ಳದ ಅಮ್ಮನ ಪ್ರೀತಿಯ ಮುಂದೆ ನಾವು ದುಡಿಯುತ್ತಿರುವ ಹಣ ಯಾವ ಲೆಕ್ಕದ್ದು, ಎಲ್ಲಿಯೆ ಇದ್ದರೂ , ಎಷ್ಟೇ ದೊಡ್ಡವರಾಗಿದ್ದರೂ ಅಮ್ಮನ ಹಿತನುಡಿಗಳು ಪೋನಿನ ಮೂಲಕವಾಗಲೀ, ಪತ್ರದ ಮೂಲಕವಾಗಲೀ ನಮ್ಮನ್ನು ತಲುಪಿದಾಗ ಆಗುವ ಆನಂದ ಅಷ್ಟಿಷ್ಟಲ್ಲ. ಅಂತಹ ನೆನಪನ್ನು ನೆನೆಪಿಸಿದ ನಿಮಗೆ ನನ್ನ ಧನ್ಯವಾದಗಳು.

  • Login or register to post comments
  • link
  • ನಿರ್ವಾಹಕರ ಗಮನಕ್ಕೆ ತನ್ನಿ
July 12, 2008 - 9:09am — rashmi_pai

ಉ: ಅಮ್ಮನ ಒಲವಿನ ಓಲೆ.....

rashmi_pai's picture

ಶ್ರೀಕೃಷ್ಣ ಅವರೇ,

ನಿಮ್ಮ ಒಲವಿನ ಪ್ರತಿಕ್ರಿಯೆಗೆ ಧನ್ಯವಾದಗಳು.

  • Login or register to post comments
  • link
  • ನಿರ್ವಾಹಕರ ಗಮನಕ್ಕೆ ತನ್ನಿ
September 6, 2008 - 8:55am — baktavarbaba

ಉ: ಅಮ್ಮನ ಒಲವಿನ ಓಲೆ.....

baktavarbaba's picture

ನಿಜವಾಗಿಯೂ ಮಾತೃ ಪ್ರೇಮದ ಯಾವ ಬೆಲೆಯೂ ಕತ್ತಾಲಿಕ್ಕಗದು .. ಸ್ವಾರ್ಥ ರಹಿತ ನಿಷ್ಕಲ್ಮಶ, ಮಾತೃ ಪ್ರೇಮ ದೇವರು ಕೊಟ್ಟ ವರ ನಮಗೆ.. ಇಗಲಂತೂ mechnanical life ನಲ್ಲಿ ಸಿಲುಕಿ ತಾಯಿಯ ಪ್ರೀತಿಯನ್ನು ನೆನೆಸುತ್ತಿದ್ದೇವೆ....ದೇವರೇ ನಮಗೆ ಮುಂದಿನ ಜನ್ಮದಲಿ ಇದೆ ಭಾಗ್ಯ ಕೊಡು..
ನಿಮ್ಮ ಪ್ರೀತಿಯ
ಬಾಬಾ

  • Login or register to post comments
  • link
  • ನಿರ್ವಾಹಕರ ಗಮನಕ್ಕೆ ತನ್ನಿ
September 6, 2008 - 8:41am — baktavarbaba

ಉ: ಅಮ್ಮನ ಒಲವಿನ ಓಲೆ.....

baktavarbaba's picture

ಒಳ್ಳೆಯ ಆರ್ಟಿಕಲ್ ರಶ್ಮಿ ಯವರೇ ಮನಸ್ಸಿಗೆ ನಾಟಿತು.. ನಿಜವಾಗಿಯೂ ನಾವು ಪುಣ್ಯವಂತರು ಮಹಾತಾಯಿಯ ಪ್ರೀತಿಯನ್ನು ಪಡೆಯಲಿಕ್ಕೆ... ಮಾತೃ ಹೃದಯಯದ ಮುಂದೆ ಎಲ್ಲವು ಗೌನ್ಯ..

ನಿಮ್ಮ ಪ್ರೀತಿಯ
ಬಾಬಾ

  • Login or register to post comments
  • link
  • ನಿರ್ವಾಹಕರ ಗಮನಕ್ಕೆ ತನ್ನಿ

ಮೇಲಿನ ಪುಟವನ್ನು ಹೋಲುವ ಪುಟಗಳು - 'ಸಂಪದ' ಆರ್ಕೈವಿನಿಂದ

  • ಪತ್ರ ಬರೆಯುವ ಬಗೆ
  • ಪತ್ರ.... ನಾಸ್ಟಾಲ್ಜಿಯಾ
  • ಅಮ್ಮ.
  • ಅವಸರ - ಅವಾಂತರ
  • ಹೇಳಿ ನಿಮ್ಮಲ್ಲಾರಿಗಾದರೂ ಇದ್ದರೆ ಪತ್ರ ಓದುವಾಸೆ
Syndicate content

ಲೇಖಕರು

rashmi_pai's picture

ಪೂರ್ಣ ಹೆಸರು
Rashmi Pai

ಪರಿಚಯ

ನನ್ನ ಊರು ಗಡಿನಾಡಾದ ಕಾಸರಗೋಡು. ಪ್ರಸ್ತುತ ಬೆಂಗಳೂರಿನಲ್ಲಿ ಕೆಲಸದಲ್ಲಿದ್ದೇನೆ. ಸಾಹಿತ್ಯ, ಕಲೆಗಳಲ್ಲಿ ಆಸಕ್ತಿ ಹೊಂದಿರುವುದರೊಂದಿಗೆ ಕತೆ, ಕವಿತೆ, ಭಾಷಣ ಮೊದಲಾದವುಗಳಲ್ಲಿ ನನ್ನನ್ನು ತೊಡಗಿಸಿಕೊಳ್ಳುತ್ತೇನೆ. ನನ್ನ ನೆಚ್ಚಿನ ಗೆಳೆಯನಾದ ಪ್ರಕೃತಿಯೊಂದಿಗೆ ಒಡನಾಟ ನಡೆಸುವುದು ಹಾಗೂ ಸ್ವಪ್ನಲೋಕದಲ್ಲಿ ವಿಹರಿಸುವುದೆಂದರೆ ನನಗಿಷ್ಟ.

ಸದಸ್ಯರ ಪೂರ್ಣ ಪ್ರೊಫೈಲ್ ವೀಕ್ಷಿಸಿ

ವಾಟರ್ ಪೋರ್ಟಲ್: ದಿನದ ಚಿತ್ರ

ದೋಹಿನಿ ಕುಂಡ್

ಬ್ರಜ್ ಫೌಂಡೇಶನ್ನಿನವರು ಹಲವು ಪುರಾತನ ನೀರ ಆಧಾರಗಳನ್ನು ಪುನಶ್ಚೇತನಗೊಳಿಸುವಲ್ಲಿ ಕೆಲಸ ಮಾಡಿದ್ದಾರೆ.

ಪುನಶ್ಚೇತನಗೊಳಿಸಿದ ದೋಹಿನಿ ಕುಂಡ್ ಮೇಲಿನ ಚಿತ್ರದಲ್ಲಿ.

ಚಿತ್ರ: ರಜನೀಶ್ ಬ್ರಜ್ (ಬ್ರಜ್ ಫೌಂಡೇಶನ್)

ಮತ್ತಷ್ಟು...

ವಿಹರಿಸಿ

  • ಸಂಪದದಲ್ಲಿ ಬರೆಯುವ ಮುನ್ನ
  • ಹೊಸ ಬರಹ/ಚಿತ್ರ ಸೇರಿಸಿ
  • 'ಸಂಪದ' ಕುರಿತು ನಿಮ್ಮ ಸಲಹೆ/ಅಭಿಪ್ರಾಯಗಳನ್ನು ಕಳುಹಿಸಿ
  • ಚಟುವಟಿಕೆ
  • ಕನ್ನಡ ಬಟನ್ನುಗಳು
  • ಕನ್ವರ್ಟರ್

ಹೊಸ ಲೇಖನಗಳು

  • ಸೇತುವೆ: ಕಾಫ್ಕಾ ಕಥೆ
  • ಕನ್ನಡ/ಇಂಗ್ಲೀಷ್ ಭಾಷೆಗಳ ಸುಂದರ ಕೈಬರಹದ, ಮಧುರ ಸ್ಮೃತಿ !
  • ’ಕಿಂಗ್ ಕತೆ’
  • ಅನರ್ಥಕೋಶ ೬
  • ನಾವು ಅದೆಷ್ಟು ಬಡವರು!
  • ಓ ಮನಸ್ಸೆ ನೀ ಏಕೆ ಇಷ್ಟು ಕಲ್ಲಾಗುವೆ ?....................
  • ಮಾತೆಂಬ ಜ್ಯೋತಿರ್ಲಿಂಗ-೧ (ಸರ್ವಜ್ಞನ ಸಗ್ಗ)

ಇತ್ತೀಚಿನ ಪ್ರತಿಕ್ರಿಯೆಗಳು

  • harshab
    ಉ: ಓದಿದ್ದು ಕೇಳಿದ್ದು ನೋಡಿದ್ದು -135 ರಾಜು ಬನ್ ಗಯಾ ಬಂಡಲ್‌ಮನ್
    January 8, 2009 - 10:51am
  • savithasr
    ಉ: ನಗುವ ನಯನ, ಮಧುರ ಮೌನ
    January 8, 2009 - 10:46am
  • ASHOKKUMAR
    ಉ: ಓದಿದ್ದು ಕೇಳಿದ್ದು ನೋಡಿದ್ದು -135 ರಾಜು ಬನ್ ಗಯಾ ಬಂಡಲ್‌ಮನ್
    January 8, 2009 - 10:27am
  • venkatesh
    ಉ: ಕನ್ನಡ/ಇಂಗ್ಲೀಷ್ ಭಾಷೆಗಳ ಸುಂದರ ಕೈಬರಹದ, ಮಧುರ ಸ್ಮೃತಿ !
    January 8, 2009 - 10:10am
  • ಅರವಿಂದ್
    ಉ: ನಗುವ ನಯನ, ಮಧುರ ಮೌನ
    January 8, 2009 - 10:04am
  • venkatesh
    ಉ: ಕನ್ನಡ/ಇಂಗ್ಲೀಷ್ ಭಾಷೆಗಳ ಸುಂದರ ಕೈಬರಹದ, ಮಧುರ ಸ್ಮೃತಿ !
    January 8, 2009 - 10:02am
  • karthik
    ಉ: ಬಹು - ಭಾಷಾ - ತಮಾಷಾ!!!
    January 8, 2009 - 9:56am
  • palachandra
    ಉ: ನಗುವ ನಯನ, ಮಧುರ ಮೌನ
    January 8, 2009 - 9:33am
  • palachandra
    ಉ: ನಗುವ ನಯನ, ಮಧುರ ಮೌನ
    January 8, 2009 - 9:32am
  • palachandra
    ಉ: ನಗುವ ನಯನ, ಮಧುರ ಮೌನ
    January 8, 2009 - 9:31am
ಇನ್ನಷ್ಟು
ಈಗಿನಂತೆ 12 ಸದಸ್ಯರು ಮತ್ತು 133 ಅತಿಥಿಗಳು ಆನ್ಲೈನ್ ಇರುವರು.


ಮೇಘವೃಷ್ಟಿಯಂತೆ (ಮಳೆಯಂತೆ) ಉಪದೇಶ ಕೊಡು. ಗುರು ಯಾರನ್ನೂ ಶಿಷ್ಯನನ್ನಾಗಿ ಮಾಡಿಕೊಳ್ಳುವುದು ಬೇಡ. ಶಿಷ್ಯನಾದರೆ ಅವನ ಕರ್ಮದ ಅರ್ಧಾಂಶವನ್ನು ಗುರು ಅನುಭವಿಸಬೇಕು.

— ತುಕಾರಾಮ

ಮತ್ತಷ್ಟು: ಆರೋಗ್ಯ ಸಂಪದ | ಕೃಷಿ ಸಂಪದ | ನುಡಿಮುತ್ತುಗಳು

ಯೋಜನೆಗಳು: Kannada Learning Center | ಗ್ನು/ಲಿನಕ್ಸ್ ನಲ್ಲಿ ಕನ್ನಡ ತರಲು ನಡೆದಿರುವ ಕೆಲವು ಯೋಜನೆಗಳು | ಡಾಕ್ಯುಮೆಂಟೇಶನ್ Wiki | ಸಂಪದ ಅಂಚೆಪೆಟ್ಟಿಗೆಗಳು (Sampada Mailing Lists)

ಸ್ವರ್ಣ ಸಂಪದ ಸಂಪದ ಪಾಡ್ಕ್ಯಾಸ್ಟ್ (ಶ್ರಾವ್ಯ ಸಂದರ್ಶನಗಳು) | "ದಿ ಬೆಸ್ಟ್ ಆಫ್ ಸಂಪದ" | ಪ್ಲಾನೆಟ್ ಕನ್ನಡ

ಡೌನ್ಲೋಡ್ ಮಾಡಿಕೊಳ್ಳಿ:‌ ಬರಹ IME | ಫೈರ್ ಫಾಕ್ಸ್ | ಒಪೇರಾ

ಕೆಲವು ಹಕ್ಕುಗಳನ್ನು ಕಾಯ್ದಿರಿಸಲಾಗಿದೆ. ಸಂಪದ ಸಮುದಾಯ ಸಂಪದ ಫೌಂಡೇಶನ್ನಿನ ಒಂದು ಯೋಜನೆ.
Some rights reserved Sampada Initiative by Sampada Foundation, 2005 - 2008.
Terms of Use | Contact | About Sampada | Sampada in News/Media

The views expressed here are of the respective author(s) and Sampada administration does not necessarily subscribe to them.
RSS: All posts | Comments | Podcasts

separator