ಸಂಪದದಲ್ಲಿ ಹೊಸತು! | Sign up | Login | Font Help
ಸಂಪದ
  • ಲೇಖನಗಳು
  • ಬ್ಲಾಗ್ಸ್
  • ಚರ್ಚೆಯ ವೇದಿಕೆ
  • ಚಿತ್ರಪುಟಗಳು
  • Podcasts
  • ಪುಸ್ತಕಗಳು
  • ಆರ್ಕೈವ್
  • ಸಂಪರ್ಕಿಸಿ
  • Sampada Foundation
  • ಅಂಚೆ ಪೆಟ್ಟಿಗೆ
  • Font Help

ತಿಳಿ ಹಾಸ್ಯ ಮರೆತಿಲ್ಲ: "ಮಜಾವಾಣಿ"

ಸಂಪದ › Sampada Blogs › anivaasi ರವರ ಬ್ಲಾಗ್

ಅನಿವಾಸಿ

*~*~*~*

ಪಳೆಯುಳಿಕೆಗಳ ಪಿಸುನುಡಿ

June 1, 2007 - 7:29am — anivaasi

ಒಂದೊಂದು ಸಲ ನೂರಾರು ವರ್ಷ ಸುಮ್ಮನೆ ಕೂತಿರೋ ಪಳೆಯುಳಿಕೆಗಳು ಮಾತಾಡ್ತಾವಂತೆ. ಜಗಳ ಆಡ್ತಾವಂತೆ. ನಾನು ನಿನಗಿಂತ ಹಳೆಯ ಪಳೆಯುಳಿಕೆ. ಆದರೆ ನಿನಗಿಂತ ನಾನು ಹೆಚ್ಚು ಆಳದಲ್ಲಿದ್ದೀನಿ. ನೀನು ಬರೀ ನೂರಾರು ವರ್ಷದ ಹಿಂದಿನ ಮಾತಾಡಿದರೆ ನಾನು ಸಾವಿರಾರು ವರ್ಷದ ಹಿಂದಿನ ಮಾತಾಡ್ತೀನಿ. ನಿನ್ನ ಸಾವಿರಾರು ವರ್ಷದ ಮಾತು ಯಾರಿಗೆ ಬೇಕು, ನೂರಾರು ವರ್ಷದ ಮಾತೇ ಮುಖ್ಯ ರೆಲವೆಂಟು. ಹೀಗೆ ಏನೇನೋ ಮಾತಡ್ಕಂಡು ಅವುಗಳು ಪಿಸುದನೀಲಿ ಕೊಸರಾಡೋದು.

ಆ ಒಂದೊಂದು ಸಲದ ಮಾತು ಒಂದೊಂದು ಸಲ, ವಾಂತಿ ಮಾಡೋಕೆ ಅಂತ ಒಂದೊಂದು ಸಲ ರಾತ್ರಿ ಎದ್ದೋನಗೆ ಕೇಳಿಬಿಟ್ಟರೆ ಮುಗೀತು.

ಇದ್ದಕಿದ್ದಂಗೆ ಬೋರಾದ ಊರಲ್ಲಿ ದೊಂಬರಾಟ ಶುರು ಆಗತ್ತೆ. ಊರಿಗೆ ಸರ್ಕಸ್ ಬಂದು ಟೆಂಟು ಹಾಕಿ ಬಿಡತ್ತೆ. ಸರ್ಕಸಿಂದ ತಪ್ಪಿಸಿಕೊಂಡ ಪ್ರಾಣಿಗಳು ಊರೆಲ್ಲಾ ಓಡಾಡ್ತವೆ. ಒಂದರ ಮೇಲೊಂದು ಬಿದ್ದು ಹರಿದು ಮುಕ್ಕೋಕೆ ಹೊರಡ್ತಾವೆ. ಸರ್ಕಸ್ ಮಾಲೀಕ ಎಲ್ಲೋ ಕೂತ್ಕೊಂಡು ನಗ್ತಾನೆ. ಪ್ರಾಣಿ ಹಿಡಿಯೋರು ಕರೆಸಿ ಎಲ್ಲ ಪ್ರಾಣೀನೂ ಒಂದೊಂದಾಗಿ ಹಿಡಿಸ್ತಾನೆ. ಅವಕ್ಕೇ ಅಂತಲೇ ಕಟ್ಟಿಸಿರೋ ಬೋನ್ನಲ್ಲಿ ಹಾಕೋ ತನಕ ಅಪ್ಪ ಅಮ್ಮಂದಿರು ಮಕ್ಕಳನ್ನ ಮನೆಯಿಂದ ಆಚೆ ಕಳಿಸದೆ ಹಿಡ್ಕೊಂಡು ಕೂತಿರ್ತಾರೆ.

ಈ ಪಳೆಯುಳಿಕೆಗಳು ಯಾವುದೋ ಭೂಮಿಯ ಪದರದಿಂದ ಮಾತಾಡಿದರೆ ಯಾರಿಗೆ ಕೇಳತ್ತೆ ಅಂತ ಗುಮಾನಿ ಪಡಬೇಡಿ. ಅದಕ್ಕೂ ಒಂದು ಸಮಯ ಸಂದರ್ಭ ಪರಿಸ್ಥಿತಿ ಬೇಕು. ಅವುಗಳ ಕೊನರಾಟ ಕೇಳಿಸಬೇಕು ಅಂದರೆ ಅಕ್ಕಪಕ್ಕದಲ್ಲಿರೋರೆಲ್ಲ ಗಪ್‌ಚಿಪ್ಪಾಗಿ ಇರಬೇಕು. ಅದಕ್ಕೆ ಉಪ್ಪು ಮಾರೋರು, ತರಕಾರಿ ಮಾರೋರು ಸುಮ್ಮನಿರಬೇಕು. ಸಾಣೆ ಹಿಡಿಯೋರು, ಬೀಗ ರಿಪೇರಿ ಮಾಡೋರು ಸುಮ್ಮನೆ ಇರಬೇಕು. ಕಸ ಗುಡಿಸೋರು, ಬೀದಿ ತೊಳೆಯೋರು ಸುಮ್ಮನಿರಬೇಕು. ಮಕ್ಕಳಿಗೆ ಕತೆ ಹೇಳೋರು, ಜೋಗುಳ ಹಾಡೋರು ಸುಮ್ಮನಿರಬೇಕು. ಹಾಡೋ ಪ್ರೇಮಿಗಳು, ನಲ್ಲನ ಕಿವೀಲಿ ಪಿಸುನುಡಿಯೋ ನಲ್ಲೇರು ಸುಮ್ಮನಿರಬೇಕು. ಅಂಥ ಮೌನದಲ್ಲಿ ಮಾತ್ರ ಈ ಪಳೆಯುಳಿಕೆಗಳ ಮಾತು ಕೇಳತ್ತೆ, ಮುಖ್ಯ ಅನಿಸತ್ತೆ.

~.~
  • anivaasi ರವರ ಬ್ಲಾಗ್
  • Login or register to post comments
  • 385 hits
  • ಈ ಪುಟವನ್ನು ಇ-ಮೇಯ್ಲ್ ಮಾಡಿ
  • Delicious
  • Google
  • Yahoo
  • ನಿರ್ವಾಹಕರ ಗಮನಕ್ಕೆ ತನ್ನಿ

ಪ್ರತಿಕ್ರಿಯೆಗಳು

ಕಾಮೆಂಟ್ ನೋಟ ಆಯ್ಕೆಗಳು

Select your preferred way to display the comments and click "Save settings" to activate your changes.
June 1, 2007 - 10:24am — ASHOKKUMAR

ಉ: ಪಳೆಯುಳಿಕೆಗಳ ಪಿಸುನುಡಿ

ASHOKKUMAR's picture

ಪಳೆಯುಳಿಕೆಗಳು ಮಾತ್ರಾ ಅಲ್ಲ,ಮನುಷ್ಯರೂ ಇದೇ ತರ ಮಾತಾಡ್ತಾರೆ. Smiling
*ಅಶೋಕ್

  • Login or register to post comments
  • link
  • ಈ ಪುಟವನ್ನು ಇ-ಮೇಯ್ಲ್ ಮಾಡಿ
  • ನಿರ್ವಾಹಕರ ಗಮನಕ್ಕೆ ತನ್ನಿ
August 26, 2008 - 3:03pm — kannadakanda

ಉ: ಪಳೆಯುಳಿಕೆಗಳ ಪಿಸುನುಡಿ

kannadakanda's picture

ಪೞೆಯುೞಿಕೆಯೇ ಒಂದು ಹೞೆಯ ಉೞಿಕೆ. ಹೊಸಗನ್ನಡದಲ್ಲಿ ಅದು ಹೞೆಯುೞಿಕೆಯಾಗಬೇಕಿತ್ತು. ಆದರದು ’ಪೞೆಯುೞಿಕೆ’.

  • Login or register to post comments
  • link
  • ಈ ಪುಟವನ್ನು ಇ-ಮೇಯ್ಲ್ ಮಾಡಿ
  • ನಿರ್ವಾಹಕರ ಗಮನಕ್ಕೆ ತನ್ನಿ
June 1, 2007 - 2:12pm — mahesha

ಉ: ಪಳೆಯುಳಿಕೆಗಳ ಪಿಸುನುಡಿ

mahesha's picture

ಚನ್ನಾಗಿದೆ, ನನ್ನಿ!

- ಮಾಯ್ಸ !!

  • Login or register to post comments
  • link
  • ಈ ಪುಟವನ್ನು ಇ-ಮೇಯ್ಲ್ ಮಾಡಿ
  • ನಿರ್ವಾಹಕರ ಗಮನಕ್ಕೆ ತನ್ನಿ
June 1, 2007 - 6:23pm — anivaasi

ಉ: ಪಳೆಯುಳಿಕೆಗಳ ಪಿಸುನುಡಿ

anivaasi's picture

ಅಶೋಕರೆ ವಂದನೆಗಳು:
ಪಳೆಯುಳಿಕಗಳು ಮಾತಾಡೋದು ಕೆಲವು ಮನುಷ್ಯರ ಮಾತಿನ ಹಾಗೆ ಕೇಳತ್ತೋ ಅಥವಾ ಕೆಲವು ಮನುಷ್ಯರು ಮಾತಾಡೋದು ಪಳೆಯುಳಿಕೆ ಥರ ಕೇಳತ್ತೋ ಹೇಳೋದು ನನಗಂತೂ ಕಷ್ಟ! Smiling
ಹೋಗಲಿ, ನಮಗ್ಯಾಕೆ ಬಿಡಿ ಪಳೆಯುಳಿಕೆಗಳ ಸಹವಾಸ!
ಮಹೇಶರೆ,
ಮೆಚ್ಚಿದ್ದಕ್ಕೆ ನಿಮಗೆ ವಂದನೆಗಳು.

  • Login or register to post comments
  • link
  • ಈ ಪುಟವನ್ನು ಇ-ಮೇಯ್ಲ್ ಮಾಡಿ
  • ನಿರ್ವಾಹಕರ ಗಮನಕ್ಕೆ ತನ್ನಿ
August 26, 2008 - 5:47pm — ಸಂಗನಗೌಡ

ಉ: ಪಳೆಯುಳಿಕೆಗಳ ಪಿಸುನುಡಿ

ಸಂಗನಗೌಡ's picture

ಅನಿವಾಸಿಗಳೇ, ತಲೆ-ಬುಡಾನೂ ತಿಳೀಲಿಲ್ಲ ನೀವು ಬರೆದುದರಲ್ಲಿ,.. ಆದರೂ, ಏನೋ ಒಂದು ಬೆರಗು ಹುಟ್ಟಿಸುತ್ತೆ ಬರಹ..

Quote:
ವಾಂತಿ ಮಾಡೋಕೆ ಅಂತ ಒಂದೊಂದು ಸಲ ರಾತ್ರಿ ಎದ್ದೋನಗೆ

ರಾತ್ರಿ "ವಾಂತಿ ಮಾಡ್ಕೊಳ್ಳೋಕೆ",Puzzled:?Puzzled ವಾಂತಿ ಮಾಡಿಕೊಳ್ಳೋಕೆ, ಇರುಳಲ್ಲಿ ಯಾರೂ ಏಳಬಾರದು ಅಂತ ಇಲ್ಲವಾದರೂ, ಅದನ್ನೇ ನೀವಿಲ್ಲಿ ಎತ್ತಿಕೊಡಿದ್ದೇಕೆ? ಈ ವಾಕ್ಕೆಯಲ್ಲಿ ಒಳತಿಳಿವೇನಾದರೂ ಇದೆಯ?

  • Login or register to post comments
  • link
  • ಈ ಪುಟವನ್ನು ಇ-ಮೇಯ್ಲ್ ಮಾಡಿ
  • ನಿರ್ವಾಹಕರ ಗಮನಕ್ಕೆ ತನ್ನಿ

ಮೇಲಿನ ಪುಟವನ್ನು ಹೋಲುವ ಪುಟಗಳು - 'ಸಂಪದ' ಆರ್ಕೈವಿನಿಂದ

  • ಹುಡುಗಿಯರ ಹಾಡುಗಳ ಪಾಡು
  • ಝೆನ್ ಕತೆ: ಯಾರಿಗೆ ಗೊತ್ತು?
  • ಇನ್ನೊಂದು ಹಿಡಿ ಹುರಿಗಾಳು
  • ಒಂದು ಸಣ್ಣ ಲೆಕ್ಕ
  • ನಾನು ಈಗ ಪ್ರೀತಿಯಲ್ಲಿ ಬೀಳಬೇಕು. ನನಗೆ ಒಬ್ಬ ಗೆಳೆಯಬೇಕು - ಮೊಗ್ಗಿನ ಮನಸು
Syndicate content

ಲೇಖಕರು

anivaasi's picture

ಪೂರ್ಣ ಹೆಸರು
ಅನಿವಾಸಿ

ಪರಿಚಯ

ಸಿನೆಮಾ, ನಾಟಕ, ಸಾಹಿತ್ಯದಲ್ಲಿ ಅಭಿರುಚಿ. ನಾಟಕ, ಕಿರುಚಿತ್ರ, ಸಾಕ್ಷ್ಯ ಚಿತ್ರ ಹಾಗು ಚಲನಚಿತ್ರ ಮಾಡಿದ ಅನುಭವ. ಇತ್ತೀಚೆಗೆ ನಾನು ನಿರ್ದೇಶಿಸಿದ "ಮುಖಾಮುಖಿ" ಚಿತ್ರದ ವೆಬ್ ಸೈಟ್ ಇಲ್ಲಿದೆ

ಸದಸ್ಯರ ಪೂರ್ಣ ಪ್ರೊಫೈಲ್ ವೀಕ್ಷಿಸಿ

Dr. Ullas Karanth (ಡಾ. ಉಲ್ಲಾಸ್ ಕಾರಂತ)
ನಿರೀಕ್ಷಿಸಿ!

ವಾಟರ್ ಪೋರ್ಟಲ್: ದಿನದ ಚಿತ್ರ

ಬಾವಿ

ಮೂಡಬಿದ್ರಿಯ ಸಾವಿರ ಬಸದಿಯ ಬಳಿ ಒಂದು ಬಾವಿ.
(ಫೋಟೋ: ಸುದರ್ಶನ್ (ಅನಿವಾಸಿ))

ವಾರದ ಲೇಖನ
ಬೃಹತ್ ನೀರಾವರಿ ಯೋಜನೆಗಳು: ಮಹಾ ಅಸಂಗತಕ್ಕೊಂದು ಮುನ್ನುಡಿ - ಎನ್ ಎ ಎಂ ಇಸ್ಮಾಯಿಲ್

ವಾರದ ವೀಡಿಯೋ
ಬಾನಿಗೊಂದು ಆಲಿಕೆ (ಮಳೆನೀರು ಸಂಗ್ರಹ)

ಮತ್ತಷ್ಟು...

ವಿಹರಿಸಿ

  • ಸಂಪದದಲ್ಲಿ ಬರೆಯುವ ಮುನ್ನ
  • ಹೊಸ ಬರಹ/ಚಿತ್ರ ಸೇರಿಸಿ
  • 'ಸಂಪದ' ಕುರಿತು ನಿಮ್ಮ ಸಲಹೆ/ಅಭಿಪ್ರಾಯಗಳನ್ನು ಕಳುಹಿಸಿ
  • ಚಟುವಟಿಕೆ
  • ಕನ್ನಡ ಬಟನ್ನುಗಳು
  • ಕನ್ವರ್ಟರ್

ಇತ್ತೀಚಿನ ಬ್ಲಾಗ್ ಬರಹಗಳು

  • ಬರಾಕ್ ಒಬಾಮ ಮತ್ತು ಜಾನ್ ಮೆಕೈನ್: ಯಾರು ಸರಿ?
  • ಹಿರಿಯರಿಗೂ ಈಗ ಇಂಗ್ಲಿಷ್ ಚಾಳಿ!
  • ಪುರಂದರದಾಸರ ಎರಡು ಪದಗಳು
  • IT - ಸಿಂಪ್ಟಮ್ಸ
  • ಬಿಟ್ಟು ಹೋದವಳಿಗಾಗಿ
  • ಶಾಲೆಗಳು, ಸ್ಪರ್ಧಾತ್ಮಕ ಜಗತ್ತು..
  • ನೀರವತೆ!
  • ಓದಿದ್ದು ಕೇಳಿದ್ದು ನೋಡಿದ್ದು-9
  • ಓ, ಬನ್ನಿ, ಸೋದರರೆ, ಬೇಗ ಬನ್ನಿ!
  • ನನ್ನ ನೆನಪು ನಿನಗೆ ಬರೋದೇ ಇಲ್ಲವಾ ?
ಇನ್ನಷ್ಟು

ಇತ್ತೀಚಿನ ಪ್ರತಿಕ್ರಿಯೆಗಳು

  • ಗಣೇಶ
    ಉ: ’ಹಾಯ್ ಬೆ೦ಗಳೂರ’ ಕೀಳು ಮಟ್ಟಕ್ಕಿಳಿದಿದೆಯೇ...?
    September 6, 2008 - 12:15am
  • ಗಣೇಶ
    ಉ: IT - ಸಿಂಪ್ಟಮ್ಸ
    September 5, 2008 - 11:34pm
  • yuvapremi
    ಉ: ಯುವ ಬ್ಲಾಗಿಗನ ಸಂದರ್ಶನ
    September 5, 2008 - 11:22pm
  • yuvapremi
    ಉ: Splendours of Royal Mysore
    September 5, 2008 - 11:03pm
  • hamsanandi
    ಉ: ಪುರಂದರದಾಸರ ಎರಡು ಪದಗಳು
    September 5, 2008 - 10:13pm
  • Sunil Jayaprakash
    ಉ: ಪುರಂದರದಾಸರ ಎರಡು ಪದಗಳು
    September 5, 2008 - 10:01pm
  • Sunil Jayaprakash
    ಉ: ಪುರಂದರದಾಸರ ಎರಡು ಪದಗಳು
    September 5, 2008 - 10:00pm
  • raghud
    ಉ: ಕನ್ನಡ ಮತ್ತು ಸ್ಟ್ಯಾಂಡರ್ಡ್ ಚಾರ್ಟೆಡ್ ಬ್ಯಾಂಕ್!
    September 5, 2008 - 9:58pm
  • kalpana
    ಉ: ಶಾಲೆಗಳು, ಸ್ಪರ್ಧಾತ್ಮಕ ಜಗತ್ತು..
    September 5, 2008 - 9:58pm
  • hamsanandi
    ಉ: ಚಂದಿರನ ನೋಡಿದವ
    September 5, 2008 - 9:55pm
ಇನ್ನಷ್ಟು
ಈಗಿನಂತೆ 2 ಸದಸ್ಯರು ಮತ್ತು 104 ಅತಿಥಿಗಳು ಆನ್ಲೈನ್ ಇರುವರು.


ಸತ್ ಆವುದೋ ಅದ ಸ೦ಪರ್ಕಿಸದಿರೆ
ಹತ್ತಿರ ಸುಳಿಯದು ಆನ೦ದ
ಸತ್ ಇಗು ಆನ೦ದಕು ಕಲೆ ಸೇತುವೆ
ಉತ್ತಾನಿಪನರಿವಿನ ಛ೦ದ.

— ಪು ತಿ ನ

ಮತ್ತಷ್ಟು: ಆರೋಗ್ಯ ಸಂಪದ | ಕೃಷಿ ಸಂಪದ | ನುಡಿಮುತ್ತುಗಳು

ಯೋಜನೆಗಳು: Kannada Learning Center | ಗ್ನು/ಲಿನಕ್ಸ್ ನಲ್ಲಿ ಕನ್ನಡ ತರಲು ನಡೆದಿರುವ ಕೆಲವು ಯೋಜನೆಗಳು | ಡಾಕ್ಯುಮೆಂಟೇಶನ್ Wiki | ಸಂಪದ ಅಂಚೆಪೆಟ್ಟಿಗೆಗಳು (Sampada Mailing Lists)

ಸ್ವರ್ಣ ಸಂಪದ ಸಂಪದ ಪಾಡ್ಕ್ಯಾಸ್ಟ್ (ಶ್ರಾವ್ಯ ಸಂದರ್ಶನಗಳು) | "ದಿ ಬೆಸ್ಟ್ ಆಫ್ ಸಂಪದ" | ಪ್ಲಾನೆಟ್ ಕನ್ನಡ

ಡೌನ್ಲೋಡ್ ಮಾಡಿಕೊಳ್ಳಿ:‌ ಬರಹ IME | ಫೈರ್ ಫಾಕ್ಸ್ | ಒಪೇರಾ

ಕೆಲವು ಹಕ್ಕುಗಳನ್ನು ಕಾಯ್ದಿರಿಸಲಾಗಿದೆ. ಸಂಪದ ಸಮುದಾಯ ಸಂಪದ ಫೌಂಡೇಶನ್ನಿನ ಒಂದು ಯೋಜನೆ.
Some rights reserved Sampada Initiative by Sampada Foundation, 2005 - 2008.
Terms of Use | Contact | About Sampada | Sampada in News/Media

The views expressed here are of the respective author(s) and Sampada administration does not necessarily subscribe to them.
RSS: All posts | Comments
Blogs | Podcasts

separator