ಸಂಪದದಲ್ಲಿ ಹೊಸತು! | Sign up | Login | Font Help
ಸಂಪದ
  • ಲೇಖನಗಳು
  • ಬ್ಲಾಗ್ಸ್
  • ಸಂದರ್ಶನ
  • ಚರ್ಚೆ
  • ಚಿತ್ರಪುಟಗಳು
  • ಪುಸ್ತಕಗಳು
  • ಆರ್ಕೈವ್
  • ಸಂಪರ್ಕಿಸಿ
  • ಸಂಪದ ಫೌಂಡೇಶನ್
  • Font Help

ಲೇಖನ: ಕಿಲಾರದ ಕಿಲಾಡಿ ಜಲಯೋಧರು

ಸಂಪದ › Sampada Blogs › BogaleRagale ರವರ ಬ್ಲಾಗ್

ಉಜ್ಜಯಿನಿ ದಂಡಯಾತ್ರೆ ಪೂರ್ಣತೆಯ ಭಾಗ

November 25, 2006 - 11:51am — BogaleRagale

ಉಜ್ಜಯಿನಿ ದಂಡಯಾತ್ರೆ ಪೂರ್ಣತೆಯ ಭಾಗಮುಂದೆ ಹೋಗಬೇಕಿತ್ತು. "ಉಜ್ಜಯಿನಿ ದರ್ಶನ"ಕ್ಕೆ ಮೃಚ್ಛಕಟಿಕದವರು ಏನಾದರೂ ತೀರ್ಥ ಕುಡಿಸಿಬಿಟ್ಟರೆ ಎಂಬ ಆತಂಕದಿಂದ ಸಹವಾಸ ಬೇಡ ಅಂದುಕೊಂಡು ಒಬ್ಬ ಮುಸಲ್ಮಾನ ವ್ಯಕ್ತಿಯ ಮೂರು ಚಕ್ರದ ರಿಕ್ಷಾ ಏರಲಾಯಿತು. ಆತನ ಹೆಸರು ಶಕೀಲ್ ಅಬ್ಬಾಸ್. 250 ರೂಪಾಯಿಗೆ ಉಜ್ಜಯಿನಿ ದರ್ಶನ ಮಾಡಿಸುವುದಾಗಿ ಒಪ್ಪಿಕೊಂಡಾಗ ಮೂರು ಲೋಕದ ದರ್ಶನವಾದ ಅನುಭವವಾಯಿತು. (ಚಿತ್ರ ಸಹಿತ ಇಲ್ಲಿದೆ : bogaleragale.blogspot.com)

ಮೊದಲು ತೆರಳಿದ್ದು ಗಢಕಾಳಿಕಾ ದೇವಿಯ ಮಂದಿರಕ್ಕೆ. ಕಾಳಿದಾಸನಿಗೊಲಿದ ಮಹಾಕಾಳಿಯು ನೆಲೆನಿಂತ ತಾಣವಿದು. ಬಸ್ಸಿನಲ್ಲಿ ಧೂಳಿದಾಸನಾಗುವುದರಿಂದ ಸ್ವಲ್ಪದರಲ್ಲೇ ತಪ್ಪಿಸಿಕೊಂಡು ಬಂದಾಗಿದೆ, ಅಲ್ಲೇ ರಿಕ್ಷಾದಿಂದಿಳಿದು , ಕಾಲಿದೋಸೆ ಸೇವಿಸಿ ಕಾಳಿದಾಸನ ಕೋಟಿಯ ಒಂದು ಭಾಗದಷ್ಟು ಜ್ಞಾನವನ್ನಾದರೂ ಕೊಡು ತಾಯಿ ಎಂದು ಪ್ರಾರ್ಥಿಸಿದಾಗ, ಇದುವೇ ಕೋಲ್ಕತಾದ ಕಾಳಿಯ ಮೂಲ ಸ್ಥಾನ ಎಂಬ ವಿವರಣೆ ದೊರೆಯಿತು.

ಮುಂದೆ ಸಾಗಿದ್ದು, ಮದ್ಯ ಸೇವಿಸುವ ದೇವತೆಯಿರುವ ತಾಣ ಕಾಳಭೈರವ ಕ್ಷೇತ್ರಕ್ಕೆ. ಇಲ್ಲಿ ಬಾಟಲಿ ರಮ್ ವಿಸ್ಕಿಯೆಲ್ಲವನ್ನು ಕಾಳಭೈರವನ ಬಾಯಲ್ಲಿರಿಸಿದರೆ, ಅದು ಹರಿದುಹೋಗುತ್ತಿತ್ತು. ಮಹಾಕಾಳೇಶ್ವರನ ದರ್ಶನ ಮಾಡಿದವರು, ಶಿವ ಗಣವಾದ ಕಾಳಭೈರವನನ್ನೂ ಒಂದು ಕೈ ನೋಡಿಬರಬೇಕೆಂಬುದು ಪ್ರತೀತಿ ಅಂತ ಆ ಮುಸಲ್ಮಾನ ವಿವರಿಸಿದ.

ಖಂಡಿತವಾಗಿಯೂ ಇದೊಂದು ತೀರ್ಥಯಾತ್ರೆ ಎಂಬುದು ಖಚಿತವಾಯಿತು. ಸುತ್ತಮುತ್ತ ನೋಡಿದಾಗ ಕೆರ್ರ್.... ಎಂಬ ಕಿರುಚಾಟದೊಂದಿಗೆ ನನ್ನ ಕೈಯಲ್ಲಿದ್ದ ಪ್ರಸಾದದ ಗಂಟನ್ನು ಎಳೆದೊಯ್ದಿತು ನನ್ನ ಪ್ರೀತಿಯ ಮಂಗ! ಎಲ್ಲಿ ನೋಡಿದರಲ್ಲಿ ಈ ನಮ್ಮ ಸಂತಾನದವರು! ನಮ್ಮದೇ ಬುದ್ದಿ, ನಮ್ಮದೇ ತುಂಟಾಟ, ನಮ್ಮದೇ ನಗು... ಮರ್ಕಟ ಮನಸಿನ ನಮಗೂ ಅದಕ್ಕೂ ಎಷ್ಟೊಂದು ಹೋಲಿಕೆ! (ಬಲಚಿತ್ರ: ಕಾಲಭೈರವ ಮಂದಿರ ಎದುರು ಪ್ರವಾಸಿಗರನ್ನು "ಸುಲಿಯುವ" ಜಾತಿಬಾಂಧವರು!)

ಬಳಿಕ ಮಂಗಗಳ ಗ್ರಹದಲ್ಲಿರುವ ನಮ್ಮಂಥವರಿಗೆ ಮಂಗಳಕಾರಕನಾಗಿರುವ ಮಂಗಳನ ಉತ್ಪತ್ತಿ ಸ್ಥಾನ ಎಂದು ಕರೆಯಲಾಗುವ ಮಂಗಲನಾಥ ಮಂದಿರ. ಮಂಗಳ ಗ್ರಹ ಶಾಂತಿ ಇಲ್ಲಿ ವಿಶೇಷ. ಖಗೋಳಶಾಸ್ತ್ರೀಯವಾಗಿಯೂ ಈ ಸ್ಥಾನಕ್ಕೆ ಬಹಳ ಮಹತ್ವವಿದೆ. ಅಲ್ಲಿಂದ ರಾಮಘಾಟ್ ಎಂಬ ಸರೋವರ ತಟ. ಸುತ್ತ 1000 ಮಂದಿರಗಳಿವೆ ಎಂಬ ಮಾಹಿತಿ ದೊರೆಯಿತು ರಿಕ್ಷಾವಾಲ ಶಕೀಲ್‌ನಿಂದ.

ಮೂರು ಚಕ್ರದ ಗಾಡಿಯಲ್ಲಿ ಕುಳಿತಾಗ ಮೃಚ್ಛಕಟಿಕದ್ದೇ ನೆನಪು. ಮುಂದೆ ಸಾಗಿದೆವು. ಕ್ಷಿಪ್ರಾ ನದಿಯನ್ನು ಶಿಪ್ರಾ ನದಿಯೆಂದೂ ಇಲ್ಲಿ ಕರೆಯಲಾಗುತ್ತಿದ್ದು, ಇದು ದಕ್ಷಿಣದಿಂದ ಉತ್ತರಕ್ಕೆ ಹರಿಯುತ್ತಾ ಚಂಬಲ್ ನದಿಯನ್ನು ಸೇರಿ ಆ ಮೂಲಕ ಸಮುದ್ರ ಪಾಲಾಗುತ್ತದೆ. ಮಧ್ಯಭಾರತದ ಗಂಗೆ ಎಂಬ ಹೆಗ್ಗಳಿಕೆಯ, ವಿಷ್ಣುವಿನ ಬೆರಳಿನಿಂದ ಹುಟ್ಟಿದ ಕ್ಷಿಪ್ರೆಯ ತಟದಲ್ಲಿಯೇ ವಿಕ್ರಮಾದಿತ್ಯನನ್ನು ಕಾಡಿದ ಬೇತಾಳ ನೇತುಕೊಂಡಿರುವ ವಟವೃಕ್ಷವಿದೆ. ಇದುವೇ ಸಿದ್ಧವಟ ಕ್ಷೇತ್ರ. ಇಲ್ಲಿ ಪಿತೃಗಳ ಮೋಕ್ಷಕ್ಕೆ ವಿಶೇಷ ಸೌಕರ್ಯವಿದೆ.

ಉತ್ತಮ ಮಾತುಗಾರ ಅರ್ಚಕರೊಬ್ಬರು ಎಲ್ಲಾ ಮಾಹಿತಿ ನೀಡಿದರು. ಆದರೆ ಬಲವಂತವಾಗಿ ಕೀಳುವುದಿಲ್ಲ ಎನ್ನಬಹುದು. ನಿಮ್ಮ ಶಕ್ತ್ಯಾನುಸಾರ ಕೊಡಿ, ಪಿತೃಗಳಿಗೆ ಮುಕ್ತಿ ದೊರಕಿಸುತ್ತೇವೆ ಎಂದರು.

ಮುಂದೆ ಹೊಕ್ಕಿದ್ದು ಎರಡು ಗುಹೆಗಳನ್ನು. ಅದರಲ್ಲೊಂದು ವಿಕ್ರಮಾದಿತ್ಯನ ಅಣ್ಣ ಭರ್ತೃಹರಿ ಅಲಿಯಾಸ್ ಭಟ್ಟಿ ತಪಸ್ಸು ಮಾಡಿದ ತಾಣ. ಅಲ್ಲಿ ಭಟ್ಟಿಯ ತಪಸ್ಸು ಹಾಳುಗೆಡಹಲು ಇಂದ್ರನು ಶಿಲೆಕಲ್ಲನ್ನು ಎಸೆದಾಗ, ಅದನ್ನು ಭಟ್ಟಿಯು ಭದ್ರವಾಗಿ ಎತ್ತಿ ಹಿಡಿದ. ಆಗ ಮೂಡಿದ ಆತನ ಕೈಯ ಪಡಿಯಚ್ಚು, ಮತ್ತು ಆ ಆಘಾತಕ್ಕೆ ತುಂಡಾದ ಶಿಲೆಯನ್ನು ಅದರೊಳಗಿರುವ ಮಹಾತ್ಮರು ತೋರಿಸಿದರು, ವಿವರಿಸಿದರು. ಭಟ್ಟಿಯ ಮೂರ್ತಿಯೂ ಅಲ್ಲಿತ್ತು.

ಸಮಯವಿಲ್ಲದ ಕಾರಣ, ಓಡೋಡಿದಾಗ ಸಾಗಿದ್ದು, ಶ್ರೀಕೃಷ್ಣ-ಬಲರಾಮ ಎಂಬ ಯಾದವ ಬ್ರದರ್ಸ್, LKG ವಿದ್ಯಾಭ್ಯಾಸ ಮಾಡಿದ ಮತ್ತು Friend ಸುದಾಮನ ಜತೆಗೆ ಆಟವಾಡಿದ ಸಾಂದೀಪನಿ ಆಶ್ರಮಕ್ಕೆ. ಅಲ್ಲಿರುವ ಗೋವುಗಳ ಮೈದಡವಿ ಸುಂದರ ವಾಸ್ತುಶಿಲ್ಪ ಕಲೆಯ ಚಾರ್‌ಧಾಮ ಮಂದಿರ, ಬಡೇ ಗಣೇಶ್‌ಜಿ, ಪಂಚಮುಖಿ ಹನುಮಾನ್, ವಿಕ್ರಮಾದಿತ್ಯನ ಆರಾಧ್ಯ ದೇವಿಯಾದ ಹರಸಿದ್ಧಿದೇವಿ ಮಂದಿರ ಇವೆಲ್ಲಕ್ಕೂ ಕಣ್ನೋಟ ಹರಿಸಿದಂತೆ ಸಾಗಿದ್ದು. ಯಾಕೆಂದರೆ ಅದಾಗಲೇ ಕತ್ತಲಾಗಿತ್ತು.

ಮತ್ತೆ ಕೊನೆಯ ನನ್ನ ಪ್ರಯತ್ನವೆಂದರೆ ವಿಕ್ರಮಾದಿತ್ಯನ ಬಹುನಿರೀಕ್ಷಿತ ಸಿಂಹಾಸನ ಏರಲು ಯತ್ನಿಸಿದ್ದು! ಆದರೆ ಇದು ಪ್ರತಿಕೃತಿಯಷ್ಟೇ. ಅವನ ಸಿಂಹಾಸನವೇರುವ ಅರ್ಹತೆಯುಳ್ಳವರು ಯಾರೂ ಈ ಜಗತ್ತಿನಲ್ಲಿ ಇಲ್ಲದಿರುವುರಿಂದ ಅದು ಪಾತಾಳಕ್ಕೆ ಹೋಯಿತು ಎಂಬ ಕಥೆ ಕೇಳಿಬರುತ್ತದೆ. ಹಾಗಾಗಿ ಸಿಂಹಾಸನ ಏರುವ ಚಪಲ ವಿಫಲವಾಗಿ ಮರಳಿ ಇಂದೋರಿಗೆ ಕತ್ತಲಲ್ಲಿ ತಡಕಾಡುತ್ತಾ ತೆರಳಿದಾಗ ಏನನ್ನೋ ಕಳೆದುಕೊಂಡ ಭಾವ. (ಮೇಲಿನಚಿತ್ರ: ಸಾಂದೀಪನಿ ಆಶ್ರಮದಲ್ಲಿ ಶಿವಲಿಂಗದೆದುರು ಎದ್ದು ನಿಂತಿರುವ ನಂದಿ. ಇದು ವಿಶೇಷವಿರಬಹುದು.

ಬೆಂಬಿಡದಂತೆ ಕಾಡುವ ಆ ಮೃಚ್ಛಕಟಿಕ, ಬಸ್ಸು ತುಂಬಿದರೂ ಖಾಲಿ ಖಾಲಿ ಎನ್ನುತ್ತಾ ಪ್ರಯಾಣಿಕರನ್ನು ರಾಶಿ ಹಾಕುವ ಕಂಡಕ್ಟರುಗಳು ನೆನಪಾಗುವುದರೊಂದಿಗೆ ಕಾಳಿದಾಸ, ವಿಕ್ರಮಾದಿತ್ಯರು ಮನದಲ್ಲಿ ಅಚ್ಚಳಿಯದೆ ಕುಳಿತಿದ್ದರು.

~.~
  • BogaleRagale ರವರ ಬ್ಲಾಗ್
  • Login or register to post comments
  • 282 hits
  • ಈ ಪುಟವನ್ನು ಇ-ಮೇಯ್ಲ್ ಮಾಡಿಈ ಪುಟವನ್ನು ಇ-ಮೇಯ್ಲ್ ಮಾಡಿ
  • Printer-friendly versionPrinter-friendly version
  • ನಿರ್ವಾಹಕರ ಗಮನಕ್ಕೆ ತನ್ನಿ

ಮೇಲಿನ ಪುಟವನ್ನು ಹೋಲುವ ಪುಟಗಳು - 'ಸಂಪದ' ಆರ್ಕೈವಿನಿಂದ

  • ಬರಲಿದೆ ಪ್ರಯಾಸ ಕಥನ!!!
  • ಪ್ರಯಾಸ ಕಥನ, 1/4 ಭಾಗ
  • (ಹಿಂ)ಬಾಲಕರಿಗೂ ಸೈಕಲ್: ಸರ್ಕಾರಿ ಯೋಜನೆ ವಿಫಲ
  • ದೆಹಲಿಯ ’ ಅಕ್ಷರ್ ಧಾಮ್ ’ ಮಂದಿರ, " ಗಿನ್ನಿಸ್ ಬುಕ್ ಆಫ್ ರೆಕಾರ್ಡ್ಸ್," ನಲ್ಲಿ ಸೇರ್ಪಡೆ !
  • ’ ಶ್ರೀಕೃಷ್ಣ ಮಂದಿರ,’ ದಲ್ಲಿ ’ಕರ್ಣಾಟಕ ಭಾಗವತ,’ ಉದ್ಗ್ರಂಥವನ್ನು ಶ್ರೀ ಕೃಷ್ಣನಿಗೆ ಸಮರ್ಪಣೆಮಾಡಲಾಯಿತು !
Syndicate content

ಲೇಖಕರು

BogaleRagale's picture

ಪರಿಚಯ

ಅಸತ್ಯದ ಅನ್ವೇಷಣೆಯಲ್ಲಿ ಜಗವ ಸುತ್ತುವ ಬೊಗಳೂರಿನ ಬೊಗಳೆ ಪಂಡಿತ.

ಸದಸ್ಯರ ಪೂರ್ಣ ಪ್ರೊಫೈಲ್ ವೀಕ್ಷಿಸಿ

ವಾಟರ್ ಪೋರ್ಟಲ್: ದಿನದ ಚಿತ್ರ

ದೋಹಿನಿ ಕುಂಡ್

ಬ್ರಜ್ ಫೌಂಡೇಶನ್ನಿನವರು ಹಲವು ಪುರಾತನ ನೀರ ಆಧಾರಗಳನ್ನು ಪುನಶ್ಚೇತನಗೊಳಿಸುವಲ್ಲಿ ಕೆಲಸ ಮಾಡಿದ್ದಾರೆ.

ಪುನಶ್ಚೇತನಗೊಳಿಸಿದ ದೋಹಿನಿ ಕುಂಡ್ ಮೇಲಿನ ಚಿತ್ರದಲ್ಲಿ.

ಚಿತ್ರ: ರಜನೀಶ್ ಬ್ರಜ್ (ಬ್ರಜ್ ಫೌಂಡೇಶನ್)

ಮತ್ತಷ್ಟು...

ವಿಹರಿಸಿ

  • ಸಂಪದದಲ್ಲಿ ಬರೆಯುವ ಮುನ್ನ
  • ಹೊಸ ಬರಹ/ಚಿತ್ರ ಸೇರಿಸಿ
  • 'ಸಂಪದ' ಕುರಿತು ನಿಮ್ಮ ಸಲಹೆ/ಅಭಿಪ್ರಾಯಗಳನ್ನು ಕಳುಹಿಸಿ
  • ಚಟುವಟಿಕೆ
  • ಕನ್ನಡ ಬಟನ್ನುಗಳು
  • ಕನ್ವರ್ಟರ್

ಇತ್ತೀಚಿನ ಬ್ಲಾಗ್ ಬರಹಗಳು

  • ಓದಿದ್ದು ಕೇಳಿದ್ದು ನೋಡಿದ್ದು -137 ನಾವೇಕೆ ಸಂತೋಷವಾಗಿರೋದಿಲ್ಲ?
  • ಹಸಿರೇ ಉಸಿರು
  • ಪೇಪರ್ ಬೇಕೋ ? ಪ್ಲಾಸ್ಟಿಕ್ ಬೇಕೋ?
  • ಕೊಳಲ ನಾದದ ಗುಂಗು..
  • ಪೂರ್ಣಚಂದಿರ
  • ವಿಶ್ವದ ಅತಿದೊಡ್ಡ ಈಜುಕೊಳ
  • ಭಾಗೀರಥಿ ಮತ್ತು ಬಿಸ್ಲೇರಿ
  • ಇನ್ನೂ ಹೊಗೆಯಾಡುತ್ತಲೇ ಇದೆ!!
  • ಕವನಗಳು ಕುವೆಂಪು ಮತ್ತು ದ.ರಾ. ಬೇಂದ್ರೆ
  • ಅಪರೂಪದ ಸಿದ್ದಗಿರಿ ತೋರ್ದಾಣ (MUSEUM)
ಇನ್ನಷ್ಟು

ಇತ್ತೀಚಿನ ಪ್ರತಿಕ್ರಿಯೆಗಳು

  • rasikathe
    ಉ: ಹಂಸನಾದ
    January 10, 2009 - 5:32am
  • hamsanandi
    ಉ: ಹಂಸನಾದ
    January 10, 2009 - 4:57am
  • hamsanandi
    ಉ: ಹಂಸನಾದ
    January 10, 2009 - 4:56am
  • bhasip
    ಉ: ಬಂಕಿಮ್ ಚಂದ್ರ ಚಟ್ಟೋಪಾಧ್ಯಾಯರ, ವಂದೇ ಮಾತರಂ, ಗೀತೆ.
    January 10, 2009 - 4:36am
  • kalpana
    ಉ: ಕೊಳಲ ನಾದದ ಗುಂಗು..
    January 10, 2009 - 1:44am
  • Aravinda
    ಉ: ಕೇಳಲೂ ಬೇಡಿ... ಕೇಳಿಸ್ಲೂ ಬೇಡಿ... ಲೈಫ್ ಎಲ್ಲರದ್ದಾಗಿಸಿ...
    January 10, 2009 - 1:08am
  • rasikathe
    ಉ: ’ಅನ್ವೇಷಣೆ,’-ಹೀಗೊಂದು ಪದ್ಯವಿದೆ
    January 10, 2009 - 1:06am
  • hamsanandi
    ಉ: ಹೊಸವರ್ಷಕ್ಕೊಂದಾದ್ರೂ ಬದ್ಲಾವಣೆ ಬೇಡ್ವಾ?
    January 10, 2009 - 12:11am
  • shaamala
    ಉ: ’ಅನ್ವೇಷಣೆ,’-ಹೀಗೊಂದು ಪದ್ಯವಿದೆ
    January 10, 2009 - 12:05am
  • ಗಣೇಶ
    ಉ: ಪೂರ್ಣಚಂದಿರ
    January 10, 2009 - 12:02am
ಇನ್ನಷ್ಟು
ಈಗಿನಂತೆ 3 ಸದಸ್ಯರು ಮತ್ತು 249 ಅತಿಥಿಗಳು ಆನ್ಲೈನ್ ಇರುವರು.


ಮಾತನಾಡುವ ಹತ್ತು ಜನರು ಮಾತನಾಡದ ಹತ್ತು ಸಾವಿರ ಜನರಿಗಿಂತ ಹೆಚ್ಚು ಗದ್ದಲ ಮಾಡುತ್ತಾರೆ

— ನೆಪೊಲಿಯನ್ ಬೊನಾಪಾರ್ಟೆ

ಮತ್ತಷ್ಟು: ಆರೋಗ್ಯ ಸಂಪದ | ಕೃಷಿ ಸಂಪದ | ನುಡಿಮುತ್ತುಗಳು

ಯೋಜನೆಗಳು: Kannada Learning Center | ಗ್ನು/ಲಿನಕ್ಸ್ ನಲ್ಲಿ ಕನ್ನಡ ತರಲು ನಡೆದಿರುವ ಕೆಲವು ಯೋಜನೆಗಳು | ಡಾಕ್ಯುಮೆಂಟೇಶನ್ Wiki | ಸಂಪದ ಅಂಚೆಪೆಟ್ಟಿಗೆಗಳು (Sampada Mailing Lists)

ಸ್ವರ್ಣ ಸಂಪದ ಸಂಪದ ಪಾಡ್ಕ್ಯಾಸ್ಟ್ (ಶ್ರಾವ್ಯ ಸಂದರ್ಶನಗಳು) | "ದಿ ಬೆಸ್ಟ್ ಆಫ್ ಸಂಪದ" | ಪ್ಲಾನೆಟ್ ಕನ್ನಡ

ಡೌನ್ಲೋಡ್ ಮಾಡಿಕೊಳ್ಳಿ:‌ ಬರಹ IME | ಫೈರ್ ಫಾಕ್ಸ್ | ಒಪೇರಾ

ಕೆಲವು ಹಕ್ಕುಗಳನ್ನು ಕಾಯ್ದಿರಿಸಲಾಗಿದೆ. ಸಂಪದ ಸಮುದಾಯ ಸಂಪದ ಫೌಂಡೇಶನ್ನಿನ ಒಂದು ಯೋಜನೆ.
Some rights reserved Sampada Initiative by Sampada Foundation, 2005 - 2008.
Terms of Use | Contact | About Sampada | Sampada in News/Media

The views expressed here are of the respective author(s) and Sampada administration does not necessarily subscribe to them.
RSS: All posts | Comments | Podcasts

separator