ನಮಗಾದ ಆಘಾತಗಳನ್ನು ಮತ್ತು ಗಾಯಗಳನ್ನು ತಿರಸ್ಕರಿಸಿದರೆ, ಅವು ತಾವಾಗಿಯೇ ಮಾಯವಾಗುತ್ತವೆ.

— ಮಾರ್ಕಸ್ ಅರಿಲಿಯಸ್, ಗ್ರೀಕರ ದಂಡನಾಯಕ.

ಕೃಷಿ ಸಂಪದ: ಫೆಬ್ರವರಿ ಸಂಚಿಕೆ

Krushi Sampada 5th Edition

BRS ರವರ ಬ್ಲಾಗ್

‘ತ್ರಿಪದಿ’ಯಲ್ಲಿ ತ್ರಿವಿಧ

ತ್ರಿಪದಿ ಎಂಬುದು ಹೆಸರೇ ಸೂಚಿಸುವಂತೆ ಮೂರು ಪಾದಗಳುಳ್ಳ ಪದ್ಯ. ಇದನ್ನು ತಿಪದಿ, ತಿವದಿ, ತ್ರಿವುಡೆ, ತ್ರಿಪದಿಕಾ ಮುಂತಾದ ಹೆಸರುಗಳಿಂದ ಕರೆಯಲಾಗಿದೆ. ಬೇಂದ್ರೆಯವರು ತ್ರಿಪದಿಯೇ ಕನ್ನಡ ವೃತ್ತಗಳ ಗಾಯತ್ರಿ ಎಂದಿದ್ದಾರೆ. ಇವುಗಳು ಅಚ್ಚಗನ್ನಡದ ಮಟ್ಟುಗಳು. ಜಾನಪದ ಸಾಹಿತ್ಯದಲ್ಲಿ ಇವುಗಳ ವಿರಾಟ್‌ಸ್ವರೂಪವನ್ನು ಕಂಡಾಗ ಇವುಗಳ ಇತಿಹಾಸವನ್ನು ನಿಖರವಾಗಿ ಗುರುತಿಸುವುದು ಕಷ್ಟವೆನ್ನಿಸುತ್ತದೆ. ಶಾಸನಗಳಲ್ಲಿ ಆಲ್ಲಲ್ಲಿ ಕಾಣಿಸಿಕೊಳ್ಳುತ್ತಾ, ಪಂಪ ಪೊನ್ನರ ಕೃತಿಗಳಲ್ಲಿ ಇಣುಕಿ, ಮುಂದಿನ ಕವಿಕೃತಿಗಳಲ್ಲಿ ಕಾಣಿಸಿಕೊಂಡು ಸರ್ವಜ್ಞನ ಕಾಲಕ್ಕೆ ಬೃಹತ್ತಾಗಿ ಬೆಳೆದು ಕನ್ನಡ ಸಾಹಿತ್ಯದಲ್ಲಿ ಮಹತ್ವದ ಸ್ಥಾನ ಕಲ್ಪಿಸಿಕೊಂಡಿವೆ. ಕನ್ನಡ ಜಾನಪದ ಸಾಹಿತ್ಯಪ್ರಕಾರಗಳಲ್ಲಿ ತ್ರಿಪದಿಗಳದೇ ಸಿಂಹಪಾಲು.
ತ್ರಿಪದಿಗಳ ಲಕ್ಷಣಗಳನ್ನು ಈ ರೀತಿ ಸರಳೀಕರಿಸಬಹುದು.-



  • ಮೂರು ಪಾದಗಳು. 

  • ಹನ್ನೊಂದು ಗಣಗಳು. 

  • 6 ಮತ್ತು 10ನೇ ಗಣಗಳು ಬ್ರಹ್ಮಗಣಗಳು; ಉಳಿದವು ವಿಷ್ಣುಗಣಗಳು.  

ಸರಸ್ವತೀ ಮಣಿಹಾರನಾದ ಪಂಪ ಮಹಾಕವಿ

ಪಂಪ ಕನ್ನಡದ ಆದಿಕವಿ. ‘ಆದಿಪುರಾಣ’ ಮತ್ತು ‘ಪಂಪಭಾರತ’ ಆತನ ಕೃತಿಗಳು. ಅವನೇ ಹೇಳಿರುವಂತೆ, ಭಾರತವೂ ‘ಆದಿಪುರಾಣ’ವೂ ಸಮಸ್ತ ಕ್ಷಿತಿಗೆ ಅಲಂಕಾರದಂತಿವೆ. ಸರಸ್ವತಿಗೆ ಅವು ಹೊಸ ವಿಲಸವನ್ನುಂಟುಮಾಡಿವೆ. ಸರಸ್ವತಿಗೇ ಹೊಸ ವಿಲಾಸವನ್ನುಂಟುಮಾಡಿದ ಪಂಪನ ವಾಗ್ವಿಳಾಸ ಸರಸ್ವತಿಯ ವಿಷಯದಲ್ಲಿಯೂ ಉದಾರವಾಗಿಯೇ ಇದೆ. ‘ಆದಿಪುರಾಣ’ ಕೃತಿರಚನೆಯ ಶಿಸ್ತಿನಲ್ಲೇ ಸರಸ್ವತಿಯು ನೆಲೆಯಾಗಿರುವುದನ್ನು ಕಾಣಬಹುದು. ಮೊದಲನೆಯ ಆಶ್ವಾಸವೊಂದನ್ನು ಉಳಿದು ಪ್ರತಿ ಆಶ್ವಾಸದ ಪ್ರಾರಂಭದ ಪದ್ಯದಲ್ಲಿ ತನ್ನ ಕಾವ್ಯದ ಮುಖ್ಯಪಾತ್ರಗಳಾದ ಮಹಾಬಲ, ಲಲಿತಾಂಗ, ವಜ್ರಜಂಘ, ಸುವಿಧಿ, ಪುರುದೇವ, ಶ್ರೀಪತಿ, ಆದಿನಾಥ, ಭರತ ಮೊದಲಾದವರನ್ನು ಸರಸ್ವತಿಗೆ ಮಣಿಹಾರವನ್ನಾಗಿಸಿದ್ದಾನೆ. ಸ್ವತಃ ತನ್ನನ್ನೇ ಮೂರು ಪದ್ಯಗಳಲ್ಲಿ ಸರಸ್ವತೀಮಣಿಹಾರನೆಂದು ಕರೆದುಕೊಳ್ಳುತ್ತಾನೆ.  ಮುಂದೆ ಓದಿ »

ಮ.ಮ.ಮ. ಓದಿಗೊಂದು ಪೂರ್ವಸಿದ್ಧತೆ: ಭಾಗ-1


‘ಏನು ಕಾಫಿಗೆ ಬರುವುದಿಲ್ಲವೆ?’
‘ತಾಳು ತಾಳು ಚಿನ್ನಮ್ಮ ತಪ್ಪಿಸಿಕೊಂಡು ಹೋಗಬೇಕು ಹಂಡೆ ಸದ್ದಾಗುತ್ತಿದೆ’

‘ಚಿನ್ನಮ್ಮಗೆ ಏನೂ ತೊಂದರೆಯಿಲ್ಲ. ತಪ್ಪಿಸಿಕೊಂಡು ಹೋಗುವಳು ನೀವು ಬಂದು ಕಾಫಿ ಕುಡಿದು ಹೋಗಿ’

ಅರ್ಧಗಂಟೆಯ ನಂತರ ಕಾಪಿ ಕುಡಿಯುತ್ತಾ,
 ಮುಂದೆ ಓದಿ »

‘ಕೇಸರಿ’ಗೇ ಒದ್ದ ‘ನಾಟಿದನ’ದಿಂದ ಮನೆಯ ಹೆಸರೇ ಬದಲಾಯಿತು!

“ಕರು ಹಾಕಿದ ದನಗಳ ಹಾಲು ಹಿಂಡದೇ ಇದ್ದರೆ ಅವು ‘ಗೊಡ್ಡು’ ದನ ಆಗುತ್ತವೆ! ಹಾಗಾಗಿ ದಿನಾ ಬೆಳಗ್ಗೆ ಮತ್ತು ಸಾಯಂಕಾಲ ಅವನ್ನು ಕರೆಯಲೇ ಬೇಕು, ಸಾರ್!” ಎಂದು ದನ ಮೇಯಿಸುವ ಹುಡುಗ ನನಗೆ ತಾಕೀತು ಮಾಡಿದ. ನಾನಾದರೋ ಬಹು ಜಂಬದಿಂದಲೇ “ಬಾಲೂ, ಅದೇನು ದೊಡ್ಡ ವಿಷಯ? ನಾನೇ ಸ್ವತಃ ಬೆಳಗ್ಗೆ ಮತ್ತು ಸಾಯಂಕಾಲ ಸ್ವಲ್ಪ ಹಾಲು ಕರೆದು, ಉಳಿಕೆಯ ಹಾಲನ್ನು ಕರುವಿಗೆ ಉಣ್ಣಲು ಬಿಡುತ್ತೇನೆ” ಎಂದೆ.


ಮರು ದಿನ ಬೆಳಗಾಗುತ್ತಲೇ ಎಳೇ ಕರುವಿನ ದನ ಕೆಂಪಿ ‘ಅಂಬಾ, ಅಂಬಾ!’ ಎಂದು ಅರಚುತ್ತಾ ಇತ್ತು. ನಾನು ನನ್ನ ನಿತ್ಯದ ಯೂನಿಫಾರ್ಮ್ ಆದ ಅರ್ಧ ಪ್ಯಾಂಟ್(ಶಾರ್ಟ್ಸ್), ಟೀ ಶರ್ಟ್, ಮಣಿಗಂಟಿನ ವರೆಗೆ ಕವರ್ ಮಾಡುತ್ತಾ ಇದ್ದ ಬಾಟಾ ಕಂಪನಿಯ ‘ಹಂಟರ್ ಬೂಟ್” ಹಾಗೂ ಬೆಂಗಳೂರಿನಲ್ಲಿ ನಾನು ಕೊಂಡಿದ್ದ ಅಗಲ ಬ್ರಿಮ್‌ನ ಹ್ಯಾಟು ಧರಿಸಿ ಹಟ್ಟಿಗೆ ಹೋದೆ.  ಮುಂದೆ ಓದಿ »

Syndicate content