ಸಂಪದದಲ್ಲಿ ಹೊಸತು! | Sign up | Login | Font Help
ಸಂಪದ
  • ಲೇಖನಗಳು
  • ಬ್ಲಾಗ್ಸ್
  • ಚರ್ಚೆಯ ವೇದಿಕೆ
  • ಚಿತ್ರಪುಟಗಳು
  • Podcasts
  • ಪುಸ್ತಕಗಳು
  • ಆರ್ಕೈವ್
  • ಸಂಪರ್ಕಿಸಿ
  • Sampada Foundation
  • ಅಂಚೆ ಪೆಟ್ಟಿಗೆ
  • Font Help

'ಛಂದ' ಪುಸ್ತಕದ ಹೊಸ ಪುಸ್ತಕಕ್ಕೆ ನಿಮ್ಮದೇ ಮುಖಪುಟ!

ಸಂಪದ › Sampada Blogs › Chamaraj ರವರ ಬ್ಲಾಗ್

ಚಾಮರಾಜ ಸವಡಿ

ಸತ್ಯದ ಹಸಿ ದರ್ಶನ

ಜನರಿಗೆ ಬೇಡವಾದ ಬಡಾಯಿದಾಸ

June 29, 2008 - 4:52pm — Chamaraj

ವಾಟಾಳ್‌ ನಾಗರಾಜ್‌ ಮತ್ತೊಮ್ಮೆ ಹೀನಾಯ ಸೋಲು ಕಂಡಿದ್ದಾರೆ.

ಈ ವ್ಯಕ್ತಿಯ ಬಗ್ಗೆ ಒಂದಾನೊಂದು ಸಮಯದಲ್ಲಿ ಗೌರವವಿತ್ತು. ಅವರ ಚಳುವಳಿಗಳು, ಘೋಷಣೆಗಳು ರೋಮಾಂಚನ ಹುಟ್ಟಿಸುತ್ತಿದ್ದವು. ಆಗ ನಾನಿನ್ನೂ ಹೈಸ್ಕೂಲಲ್ಲಿ ಓದುತ್ತಿದ್ದೆ. ಪತ್ರಿಕೆಯಲ್ಲಿ ತಗ್ಗು ಬಿದ್ದಿರುವ ಕೆನ್ನೆಯ, ಉಬ್ಬುಹಲ್ಲುಗಳ ವ್ಯಕ್ತಿಯ ಘೋಷಣೆಗಳನ್ನು ಓದಿ ಮೈ ನವಿರೇಳುತ್ತಿತ್ತು. ಮುಂದೆ ಕಾಲೇಜಿಗೆ ಬಂದಾಗ ಆ ಅಭಿಮಾನ ಇನ್ನಷ್ಟು ಜಾಗೃತವಾಯಿತು. ವಾಟಾಳ್‌ ನಾಗರಾಜ್‌ ಹುಟ್ಟಿದ್ದೇ ಕನ್ನಡ ಮತ್ತು ಕರ್ನಾಟಕದ ಹಿತರಕ್ಷಣೆಗೆ ಅಂತ ಮಾತಾಡಿಕೊಳ್ಳುತ್ತಿದ್ದೆವು.

ಮುಂದೆ ಆ ಭಾವನೆ ಕುಸಿಯತೊಡಗಿತು. ಬೇರೆ ಬೇರೆ ವೃತ್ತಿಗಳಲ್ಲಿ ಏಳೆಂಟು ವರ್ಷ ಸರ್ವೀಸ್‌ ಮಾಡಿ, ಕೊನೆಗೆ ಪತ್ರಿಕೋದ್ಯಮಕ್ಕೆ ಬಂದಾಗ, ವಾಟಾಳ್‌ ಅಸಲಿಯತ್ತು ಸ್ಪಷ್ಟವಾಗಿ ಕಾಣಿಸತೊಡಗಿತು. ಪತ್ರಿಕೋದ್ಯಮದಲ್ಲಿ ಎರಡು ರೀತಿಯ ದುರಂತಗಳಿರುತ್ತವೆ. ಕೆಲವೊಂದು ವಿಷಯಗಳ ಬಗ್ಗೆ ತುಂಬ ಸ್ಪಷ್ಟವಾದ ಮಾಹಿತಿ ಇರುತ್ತದೆ. ಆದರೆ, ಅದನ್ನು ಬರೆಯಲು ಅಥವಾ ಪ್ರಸಾರ ಮಾಡಲು ಆಗುವುದಿಲ್ಲ. ಏಕೆಂದರೆ, ಬೇಕಾದ ಸಾಕ್ಷ್ಯಾಧಾರ ಸಿಗುವುದಿಲ್ಲ. ಅಂತಹ ಮಾಹಿತಿಗಳು, ನಮ್ಮ ನಮ್ಮ ಖಾಸಗಿ ಮಾತುಕತೆಯಲ್ಲಿಯೇ ಉಳಿದುಬಿಡುತ್ತವೆ. ಇನ್ನೊಂದಿಷ್ಟು ವಿಷಯಗಳಿರುತ್ತವೆ. ಅದರ ಬಗ್ಗೆ ಅನಗತ್ಯವಾಗಿ ಬರೆಯುವ, ವಿಸ್ತರಿಸುವ, ವೈಭವೀಕರಿಸುವ ಮನಸ್ಸಿರುವುದಿಲ್ಲ. ಉದಾಹರಣೆಗೆ ಹೇಳುವುದಾದರೆ, ಉಡುಪಿ ಶಾಸಕ ಪದ್ಮಪ್ರಿಯ ಅವರ ಸಾವು.

ಆದರೆ, ಮಾಧ್ಯಮದ ಸ್ಪರ್ಧೆಯಲ್ಲಿ ವೈಯಕ್ತಿಕ ಅನಿಸಿಕೆಗಳು ವೈಯಕ್ತಿಕವಾಗಿಯೇ ಉಳಿದುಬಿಡುತ್ತವೆ. ಇನ್ನೊಂದು ಚಾನೆಲ್‌ನವರು ಕೊಡುತ್ತಾರೆ ಎಂದು ನಾವು, ಅವರೆಲ್ಲಿ ಕೊಟ್ಟುಬಿಡುತ್ತಾರೋ ಎಂದು ಅವರು ಆತುರಾತುರವಾಗಿ ಸುದ್ದಿ ಪ್ರಸಾರವಾಗುತ್ತದೆ. ಅದೊಂಥರಾ ಸುಳಿಯಲ್ಲಿ ಸಿಕ್ಕ ಬಡ ದೋಣಿಯ ರೀತಿ.

ಆದರೆ, ನಿರ್ಧಾರ ತೆಗೆದುಕೊಳ್ಳುವ ಸ್ಥಾನದಲ್ಲಿರುವ ವ್ಯಕ್ತಿ ಸಂಯಮ ವಹಿಸಿದರೆ, ಕೆರಳಿಸುವ ಹಾಗೂ ವೈಭವೀಕರಿಸುವ ಸುದ್ದಿಗಳಿಗೆ ಖಂಡಿತ ಕತ್ತರಿ ಹಾಕಬಹುದು. ಪೂರ್ತಿ ನಿವಾರಿಸಲಾಗದಿದ್ದರೂ, ಅದರ ತೀವ್ರತೆಯನ್ನು ಖಂಡಿತ ಕಡಿಮೆ ಮಾಡಬಹುದು. ಆದರೆ, ಅಂತಹ ವಿವೇಕ ಇರುವವರ ಸಂಖ್ಯೆ ತುಂಬ ಕಡಿಮೆ. ವೈಭವೀಕರಿಸುವುದೇ ಮಾಧ್ಯಮದ ಮೂಲ ಉದ್ದೇಶ ಎಂಬಂತೆ ಬಹುತೇಕ ಜನ ವರ್ತಿಸುತ್ತಿರುವಾಗ, ಇಂತಹ ವಿವೇಕವಂತರು ಕಣ್ಣಿಗೆ ಬೀಳುವುದೂ ಕಡಿಮೆ.

ಇಂತಹ ಪರಿಸ್ಥಿತಿಯಲ್ಲಿ, ಕತ್ತೆ, ಎಮ್ಮೆ ಹತ್ತಿ ಪೋಸು ಕೊಡುವ, ಖಾಲಿ ಬಿಂದಿಗೆ ಪ್ರದರ್ಶಿಸಿ ಫೋಟೊಕ್ಕೆ ಹಲ್ಲು ತೋರಿಸುವ ವಾಟಾಳ್‌ ನಾಗರಾಜ್ ಅವರ ಬಾಲಿಶ ಪ್ರದರ್ಶನಗಳಿಗೆ ಮಾಧ್ಯಮ ಏಕೆ ಅಷ್ಟೊಂದು ಆದ್ಯತೆ ನೀಡುತ್ತದೆ? ನಾನು ಕೆಲಸ ಮಾಡಿದ ಬಹುತೇಕ ಸುದ್ದಿ ಸಂಸ್ಥೆಗಳಲ್ಲಿ ಸಂಬಂಧಿಸಿದ ಹಿರಿಯರಿಗೆ ಈ ವ್ಯಕ್ತಿಗೆ ಏಕೆ ಅನಗತ್ಯ ಆದ್ಯತೆ ಎಂದು ಕೇಳಿದ್ದೇನೆ. ನನ್ನ ಮಟ್ಟದಲ್ಲಿ ವಿರೋಧಿಸಿದ್ದೇನೆ. ಆ ವ್ಯಕ್ತಿಯದು ಬೂಟಾಟಿಕೆ ಮಾತ್ರ. ಏಕೆ ಪ್ರಚಾರ ಕೊಟ್ಟು ಓದುಗರ ದಾರಿ ತಪ್ಪಿಸುತ್ತೀರಿ ಎಂದು ವಾದಿಸಿದ್ದೇನೆ. ಆದರೆ, ಹಿರಿಯ ಪತ್ರಕರ್ತರಿಗೆ ವಾಟಾಳ್ ಬಗ್ಗೆ ಎಂಥದೋ ಭಯ. ಪ್ರಚಾರ ಸಿಗದಿದ್ದರೆ, ಆ ವ್ಯಕ್ತಿ ಕಚೇರಿಗೇ ಬಂದು ಗದ್ದಲ ಮಾಡಿಯಾನು ಎಂಬ ಆತಂಕ. ಹೋಗಲಿ ಬಿಡಿ, ಒಂದು ಫೊಟೊ, ಕ್ಯಾಪ್ಷನ್‌ ಹಾಕಿ ಕೈತೊಳೆದುಕೊಳ್ಳೋಣ ಎಂದು ಹೇಳುವುದು ಸಾಮಾನ್ಯ.

ಕನ್ನಡಕ್ಕಾಗಿ ಮಾಡಿದ ಕೆಲಸಕ್ಕಿಂತ, ಹೀಗೆ ಫೊಟೊ ಮೇಲೆ ಫೊಟೊಗಳು ಬಂದು ವಾಟಾಳ್‌ ಕನ್ನಡ ಹೋರಾಟಗಾರ ಎಂಬ ಹೆಸರನ್ನು ಸಂಪಾದಿಸಿದರು. ಪ್ರಾರಂಭದಲ್ಲಿ ಅವರು ಕನ್ನಡಕ್ಕಾಗಿ ಮಾಡಿದ ಹೋರಾಟ ಕುರಿತು ನನಗೆ ಅಪಾರ ಗೌರವವಿದೆ. ಆದರೆ, ಅದು ತುಂಬ ದಿನ ಉಳಿಯದೇ, ನಕಲಿ ಶ್ಯಾಮನಂತೆ ವರ್ತಿಸತೊಡಗಿದ್ದರ ಬಗ್ಗೆ ಅಷ್ಟೇ ತಿರಸ್ಕಾರವಿದೆ.

ಈಗ ಜನ ಕೂಡ ಅವರ ಅಸಲಿಯತ್ತು ಅರ್ಥ ಮಾಡಿಕೊಂಡಂತೆ ಕಾಣುತ್ತಿದೆ. ಅದಕ್ಕೆಂದೇ ವಿಧಾನಸಭೆ ಹಾಗೂ ವಿಧಾನ ಪರಿಷತ್ತಿನ ಚುನಾವಣೆಗಳಲ್ಲಿ ಠೇವಣಿ ಕಳೆದುಕೊಳ್ಳುವಂತೆ ಮರ್ಯಾದೆ ಮಾಡಿದ್ದಾರೆ. ಇನ್ನಾದರೂ ಬಡಾಯಿದಾಸ ಮಾತಿಗಿಂತ ಹೆಚ್ಚಾಗಿ ಕೃತಿಯ ಮೂಲಕ ಕನ್ನಡ ಸೇವೆ ಮಾಡುವಂತಾಗಲಿ. ಚಿಲ್ಲರೆ ತಂತ್ರಗಳ ಮೂಲಕ ಪ್ರಚಾರ ಗಿಟ್ಟಿಸುವ ಕೀಳು ಹವ್ಯಾಸ ಬಿಟ್ಟು, ಗಂಭೀರವಾಗಿ ಕನ್ನಡ ಬೆಳೆಸುವ ಕೆಲಸ ಮಾಡಲಿ.

- ಚಾಮರಾಜ ಸವಡಿ
http://chamarajsavadi.blogspot.com

  • ಕನ್ನಡ
  • ಚಳುವಳಿ
  • ವಾಟಾಳ್‌ ನಾಗರಾಜ
~.~
  • Chamaraj ರವರ ಬ್ಲಾಗ್
  • Login or register to post comments
  • 207 hits
  • ಈ ಪುಟವನ್ನು ಇ-ಮೇಯ್ಲ್ ಮಾಡಿ
  • Delicious
  • Google
  • Yahoo
  • ನಿರ್ವಾಹಕರ ಗಮನಕ್ಕೆ ತನ್ನಿ

ಪ್ರತಿಕ್ರಿಯೆಗಳು

ಕಾಮೆಂಟ್ ನೋಟ ಆಯ್ಕೆಗಳು

Select your preferred way to display the comments and click "Save settings" to activate your changes.
July 2, 2008 - 10:22pm — Sunil Jayaprakash

ಉ: ಜನರಿಗೆ ಬೇಡವಾದ ಬಡಾಯಿದಾಸ

Sunil Jayaprakash's picture

ಚಾಮರಾಜ ಸವಡಿಯವರೇ, ನೀವೇಕೆ ಒಂದೇ ಬರಹವನ್ನು ಒಂದು ಬ್ಲಾಗ್ ಮತ್ತು ಒಂದು ಲೇಖನವೆಂಬಂತೆ ಎರೆಡೆರೆಡು ಕಡೆ ಹಾಕ್ತೀರಿ Laughing out loud ? ತಿಳಿಯುವ ಕುತೂಹಲ.

  • Login or register to post comments
  • link
  • ಈ ಪುಟವನ್ನು ಇ-ಮೇಯ್ಲ್ ಮಾಡಿ
  • ನಿರ್ವಾಹಕರ ಗಮನಕ್ಕೆ ತನ್ನಿ
July 3, 2008 - 6:28am — Chamaraj

ಉ: ಜನರಿಗೆ ಬೇಡವಾದ ಬಡಾಯಿದಾಸ

Chamaraj's picture

ಅನೇಕರಿಗೆ ಬ್ಲಾಗ್‌ ಬರವಣಿಗೆಗಳಲ್ಲಿ ಆಸಕ್ತಿ ಇರುವುದಿಲ್ಲ. ಅಲ್ಲದೇ ಬ್ಲಾಗ್‌ನಲ್ಲಿ ಖಾಸಗಿ ವಿಷಯಗಳು ಮಾತ್ರ ಇರುತ್ತವೆ ಎಂದು ಅಂದುಕೊಂಡಿರುತ್ತಾರೆ. ಹೀಗಾಗಿ ಬರೆದ ಒಂದು ಪ್ರತಿಯನ್ನು ಲೇಖನ ವಿಭಾಗದಲ್ಲಿಯೂ ಸೇರಿಸಲು ಇಷ್ಟಪಡುತ್ತೇನೆ. ಅಷ್ಟೇ.

- ಚಾಮರಾಜ ಸವಡಿ

  • Login or register to post comments
  • link
  • ಈ ಪುಟವನ್ನು ಇ-ಮೇಯ್ಲ್ ಮಾಡಿ
  • ನಿರ್ವಾಹಕರ ಗಮನಕ್ಕೆ ತನ್ನಿ

ಮೇಲಿನ ಪುಟವನ್ನು ಹೋಲುವ ಪುಟಗಳು - 'ಸಂಪದ' ಆರ್ಕೈವಿನಿಂದ

  • ಜನರಿಗೆ ಬೇಡವಾದ ಬಡಾಯಿದಾಸ
  • ಮಾಧ್ಯಮಗಳು ಸ್ವಯಂ ನಿಯಂತ್ರಣ ಅನುಸರಿಸಲಿ
  • ಮಾಧ್ಯಮಗಳು ಸ್ವಯಂ ನಿಯಂತ್ರಣ ಅನುಸರಿಸಲಿ
  • ತಪ್ಪು ಯಾರದ್ದು?
  • ಕೆಟ್ಟ ಕಾರ್ಯಕ್ರಮಗಳಿಗೆ ಅಂಕುಶ ಹಾಕುತ್ತೀರಾ?
Syndicate content

ಲೇಖಕರು

Chamaraj's picture

ಪೂರ್ಣ ಹೆಸರು
ಚಾಮರಾಜ ಸವಡಿ

ಪರಿಚಯ

ವೃತ್ತಿಯಿಂದ ಪತ್ರಕರ್ತ. ಸದ್ಯ ಸುವರ್ಣ ನ್ಯೂಸ್‌ ಚಾನೆಲ್‌ನಲ್ಲಿ ಕೆಲಸ. ಓದುವುದು ಮತ್ತು ಬರೆಯುವುದು ಅಂದ್ರೆ ಇಷ್ಟ.

ನನ್ನ ಬ್ಲಾಗ್‌: http://chamarajsavadi.blogspot.com

ಸದಸ್ಯರ ಪೂರ್ಣ ಪ್ರೊಫೈಲ್ ವೀಕ್ಷಿಸಿ

ಸಂಪದ ವಿಶೇಷ

ನವರಾತ್ರಿಯ ದಿನಗಳು (ಲೇಖಕರು: ಹಂಸಾನಂದಿ)
(ನವರಾತ್ರಿ ಪ್ರಯುಕ್ತ)
'ಸಂಪದ' ಟಿ-ಶರ್ಟ್

ವಾಟರ್ ಪೋರ್ಟಲ್: ದಿನದ ಚಿತ್ರ

ಬಿಪಾಸರ್, ರಾಜಸ್ಥಾನ

(ಫೋಟೋ: ಫರ್ಹದ್ ಕಾಂಟ್ರಾಕ್ಟರ್)

ವಾರದ ಫೀಚರ್
ಜೀವನದಿ ಕಾವೇರಿ

ವೀಡಿಯೋ
ಬಾನಿಗೊಂದು ಆಲಿಕೆ (ಮಳೆನೀರು ಸಂಗ್ರಹ)

ಮತ್ತಷ್ಟು...

ವಿಹರಿಸಿ

  • ಸಂಪದದಲ್ಲಿ ಬರೆಯುವ ಮುನ್ನ
  • ಹೊಸ ಬರಹ/ಚಿತ್ರ ಸೇರಿಸಿ
  • 'ಸಂಪದ' ಕುರಿತು ನಿಮ್ಮ ಸಲಹೆ/ಅಭಿಪ್ರಾಯಗಳನ್ನು ಕಳುಹಿಸಿ
  • ಚಟುವಟಿಕೆ
  • ಕನ್ನಡ ಬಟನ್ನುಗಳು
  • ಕನ್ವರ್ಟರ್

ಇತ್ತೀಚಿನ ಬ್ಲಾಗ್ ಬರಹಗಳು

  • ಸ್ವಲ್ಪ ನಗಿ
  • ಗೋಕಾಕ ಮಾದರಿಯ ಚಳುವಳಿ ಎಂದರೇನು?
  • ಡೈರಿಯ ಕೆಲವು ಹಾಳೆಗಳು - ಭಾಗ ೭
  • ಡೈರಿಯ ಕೆಲವು ಹಾಳೆಗಳು - ಭಾಗ ೬
  • ನ್ಯಾಷನಲ್ ಪಾರ್ಕ್ ಎಂಬ ಕರಾಳ ಕೊಂಪೆ.
  • ಓದಿದ್ದು ಕೇಳಿದ್ದು ನೋಡಿದ್ದು 41 ವಾರೆಕೋರೆ: ಕನ್ನಡಿಗರನ್ನು ನಗಿಸಲೊಂದು ಹೊಸ ಪತ್ರಿಕೆ
  • ಇತ್ತೀಚಿನ ಕನ್ನಡ ಬ್ಲಾಗುಗಳು, ಕೋಮುವಾದ, ಆರ್ಥಿಕ ಅಭಿವೃದ್ಧಿ...
  • ಸಂಗೀತ ನವರಾತ್ರಿ - ಆಶ್ವಯುಜ ಶುದ್ಧ ಅಷ್ಟಮಿ
  • ಕಳೆದ ನೆನೆಪುಗಳು
  • ಕಾರ್ಟೂನಿಸ್ಟ್ ಪ್ರಕಾಶ್ ಶೆಟ್ಟಿಯವರಿಗೆ ಹೊಸ ಹುಚ್ಚು!
ಇನ್ನಷ್ಟು

ಇತ್ತೀಚಿನ ಪ್ರತಿಕ್ರಿಯೆಗಳು

  • muralihr
    ಉ: ನೋಡಿ ಸ್ವಾಮಿ ನಾವಿರೋದೇ ಹೀಗೆ
    October 7, 2008 - 6:28pm
  • Shribgm
    ಉ: 'ಛಂದ' ಪುಸ್ತಕದ ಹೊಸ ಪುಸ್ತಕಕ್ಕೆ ನಿಮ್ಮದೇ ಮುಖಪುಟ!
    October 7, 2008 - 6:23pm
  • ASHMYA
    ಉ: ಸ್ವಲ್ಪ ನಗಿ
    October 7, 2008 - 6:22pm
  • thoughtsarenotenough
    ಉ: ಅಟ್ಲಾಂಟಾದಲ್ಲಿ ಗಾದೆ ಗೌರಜ್ಜಿ
    October 7, 2008 - 6:17pm
  • Shribgm
    ಉ: 'ಛಂದ' ಪುಸ್ತಕದ ಹೊಸ ಪುಸ್ತಕಕ್ಕೆ ನಿಮ್ಮದೇ ಮುಖಪುಟ!
    October 7, 2008 - 6:15pm
  • Shribgm
    ಉ: 'ಛಂದ' ಪುಸ್ತಕದ ಹೊಸ ಪುಸ್ತಕಕ್ಕೆ ನಿಮ್ಮದೇ ಮುಖಪುಟ!
    October 7, 2008 - 6:10pm
  • gurubaliga
    ಉ: ಬಾಂಬು ದಾಳಿಗಳಿಂದ ಯಾರೂ ಸಾಯುವುದಿಲ್ಲ !
    October 7, 2008 - 5:52pm
  • gurubaliga
    ಉ: ಅಟ್ಲಾಂಟಾದಲ್ಲಿ ಗಾದೆ ಗೌರಜ್ಜಿ
    October 7, 2008 - 5:29pm
  • srinivasps
    ಉ: ಗುಬ್ಬಿಗಳ ಸಂರಕ್ಷಣೆ ಹೇಗೆ?
    October 7, 2008 - 5:24pm
  • girish.rajanal
    ಉ: ನಮ್ಮ ಫೀಲ್ಡ್...ನಮ್ಮ ಕೆಲಸ..ನಮ್ಮ ದೇಶ ಭಾರತ
    October 7, 2008 - 5:13pm
ಇನ್ನಷ್ಟು
ಈಗಿನಂತೆ 11 ಸದಸ್ಯರು ಮತ್ತು 476 ಅತಿಥಿಗಳು ಆನ್ಲೈನ್ ಇರುವರು.


ಅಸಾಧ್ಯವಾದುದನ್ನು ಮಾಡುವುದೊಂದು ಮಜಾ!

— ವಾಲ್ಟ್ ಡಿಸ್ನಿ

ಮತ್ತಷ್ಟು: ಆರೋಗ್ಯ ಸಂಪದ | ಕೃಷಿ ಸಂಪದ | ನುಡಿಮುತ್ತುಗಳು

ಯೋಜನೆಗಳು: Kannada Learning Center | ಗ್ನು/ಲಿನಕ್ಸ್ ನಲ್ಲಿ ಕನ್ನಡ ತರಲು ನಡೆದಿರುವ ಕೆಲವು ಯೋಜನೆಗಳು | ಡಾಕ್ಯುಮೆಂಟೇಶನ್ Wiki | ಸಂಪದ ಅಂಚೆಪೆಟ್ಟಿಗೆಗಳು (Sampada Mailing Lists)

ಸ್ವರ್ಣ ಸಂಪದ ಸಂಪದ ಪಾಡ್ಕ್ಯಾಸ್ಟ್ (ಶ್ರಾವ್ಯ ಸಂದರ್ಶನಗಳು) | "ದಿ ಬೆಸ್ಟ್ ಆಫ್ ಸಂಪದ" | ಪ್ಲಾನೆಟ್ ಕನ್ನಡ

ಡೌನ್ಲೋಡ್ ಮಾಡಿಕೊಳ್ಳಿ:‌ ಬರಹ IME | ಫೈರ್ ಫಾಕ್ಸ್ | ಒಪೇರಾ

ಕೆಲವು ಹಕ್ಕುಗಳನ್ನು ಕಾಯ್ದಿರಿಸಲಾಗಿದೆ. ಸಂಪದ ಸಮುದಾಯ ಸಂಪದ ಫೌಂಡೇಶನ್ನಿನ ಒಂದು ಯೋಜನೆ.
Some rights reserved Sampada Initiative by Sampada Foundation, 2005 - 2008.
Terms of Use | Contact | About Sampada | Sampada in News/Media

The views expressed here are of the respective author(s) and Sampada administration does not necessarily subscribe to them.
RSS: All posts | Comments
Blogs | Podcasts

separator