ಸಂಪದದಲ್ಲಿ ಹೊಸತು! | Sign up | Login | Font Help
ಸಂಪದ
  • ಲೇಖನಗಳು
  • ಬ್ಲಾಗ್ಸ್
  • ಚರ್ಚೆಯ ವೇದಿಕೆ
  • ಚಿತ್ರಪುಟಗಳು
  • Podcasts
  • ಪುಸ್ತಕಗಳು
  • ಆರ್ಕೈವ್
  • ಸಂಪರ್ಕಿಸಿ
  • Support Sampada
  • ಅಂಚೆ ಪೆಟ್ಟಿಗೆ
  • Font Help

ಹೊಸತು: ಹರಿದಾಸ ಸಂಪದ ಸಂಪುಟ

ಸಂಪದ › Sampada Blogs › hamsanandi ರವರ ಬ್ಲಾಗ್

ಹಂಸ ನಾದ

ಹಂಸ ನುಡಿದರೆ, ಹಂಸನಾದ!

ತಿರುಪತಿ ತಿಮ್ಮನೂ, ಉಡುಪಿಯ ಹೋಟೆಲೂ...

May 21, 2008 - 4:45am — hamsanandi

ಪ್ರಪಂಚದ ಎಲ್ಲಿಂದ ಎಲ್ಲಿಗೆ ಹೋದರೂ, ಅಲ್ಲೊಬ್ಬ ಕಾಕಾ ಟೀ ಅಂಗಡಿ ಇಟ್ಟುಕೊಂಡಿರುತ್ತಾನೆ ಅನ್ನೋದೊಂದು ಹಳೇ ನಗೆಚಟಾಕಿ. ಅರವತ್ತೊಂಬತ್ತರಲ್ಲಿ, ನೀಲ್ ಆರ್ಮ್ ಸ್ಟ್ರಾಂಗ್ ಚಂದ್ರನಮೇಲೆ ಇಳಿದಾಗ ಅಲ್ಲಿಯೂ ಒಬ್ಬ ಪ್ರತ್ಯಕ್ಷ ಆಗಿದ್ದನಂತೆ ಟೀ ಹಿಡ್ಕೊಂಡು ಎನ್ನೋ ಮಟ್ಟಿಗೆ ಇದು ಪ್ರಖ್ಯಾತ. ಇದರ ಹಿಂದೇ ಬರೋದು ಉಡುಪಿ ಹೋಟೆಲ್ ಗಳ ಸಮಾಚಾರ. ಆಡು ಮುಟ್ಟದ ಸೊಪ್ಪಿಲ್ಲ, ಅನ್ನೋ ಹಾಗೆ ಉಡುಪಿ ಹೋಟೆಲ್ ಗಳಿಲ್ಲದ ಊರೇ ಇಲ್ಲ. ಮೊದಮೊದಲು ಹೋಟೆಲ್ ನಡೆಸುವ ಆಸೆ, ಅಥವಾ ಯೋಚನೆ ಉಡುಪಿಯವರಿಗೇ ಏಕೆ ಬಂತು? ಅದನ್ನು ಯಾರಾದ್ರೂ ಉಡುಪಿ ಕಡೇವ್ರೇ ಹೇಳಬೇಕು. ಅಥವಾ ತಿಂಡಿಪೋತ ಅನ್ನೋ ಹೆಸರು ಗಳಿಸಿರೋ ಕೃಷ್ಣ ಇರೋ ಊರ್ನೋರಾದ್ರಿಂದ ಹೀಗೇನಾದ್ರೂ ಆಯ್ತಾ? ನನಗೆ ಗೊತ್ತಿಲ್ಲ. ಅಂತೂ, ಭಾರತದ ಸುಮಾರು ಹಲವು ರಾಜ್ಯಗಳಲ್ಲಿ,ಅದ್ರಲ್ಲೂ, ಮಹಾರಾಷ್ಟ್ರ, ತಮಿಳುನಾಡುಗಳಲ್ಲಿ ವಿಶೇಷವಾಗಿಯೇ ಉಡುಪಿ ಹೋಟೆಲ್ಗಳನ್ನು ಕಾಣಬಹುದು.

ಈ ಉಡುಪಿ ಹೋಟೆಲ್ ಅನ್ನೋದು ತಮಿಳ್ನಾಡಿನಲ್ಲಿ ಹೇಗೆ ಹಾಸುಹೊಕ್ಕಾಗಿದೆ ಅಂದರೆ, ಅದಕ್ಕೆ ಸಸ್ಯಾಹಾರಿ ಅಂತ ಬೇರೆಯೇ ಅರ್ಥ ಬಂದುಬಿಟ್ಟಿದೆ. ವೆಜಿಟೇರಿಯನ್ ಅಂತ ಹೇಳೋಬದಲು ಅವರು ಉಡುಪಿ ಅಂತಷ್ಟೇ ಹೇಳುತ್ತಾರೆ. ಸರವಣ ಭವನ್ (ಉಡುಪಿ) ಅನ್ನೋ ಬೋರ್ಡ್ ನಿಮಗೆ ಕಂಡ್ರೆ, ಅದು ನಡೆಸ್ತಾಇರೋದು ಉಡುಪಿಯವರಲ್ಲದೇ, ಆಂಧ್ರದವರೇ ಆಗಿದ್ದರೂ, ಅಥವಾ ಅಸ್ಸಾಮ್ ನವರೇ ಆಗಿದ್ರೂ, ಅದಕ್ಕೆ ವೆಜಿಟೇರಿಯನ್ ಅನ್ನೋದೇ ಅರ್ಥ.

ಪರದೇಶಗಳಲ್ಲಿಯೂ ಹೆಚ್ಚು ಭಾರತೀಯರಿರೋ ಕಡೆ, ರೆಸ್ಟೂರಾ ಬಿಸಿನೆಸ್ಸಿಗೆ ಇಳಿದೋರು, ಈ ಉಡುಪಿ ಹೆಸರನ್ನ ಚೆನ್ನಾಗೇ ಉಪಯೋಗಿಸ್ಕೋತಾರೆ. ಉಡುಪಿ ಪ್ಯಾಲೇಸ್ ಅನ್ನೋ ಹೆಸರು ಅಮೆರಿಕೆಯ ಪೂರ್ವದ ವಾಷಿಂಗ್ಟನ್ ಡಿ.ಸಿ.ಇಂದ ಪಶ್ಚಿಮದ ವಾಷಿಂಗ್ಟನ್ ರಾಜ್ಯದ ಸಿಯಾಟಲ್ ವರೆಗೆ ಹತ್ತು ಹಲವು ಕಡೆ ಇವೆ. ಇವಲ್ಲಿ ಅಸಲಿ ಉಡುಪಿ ಎಷ್ಟೋ ನಕಲಿ ಎಷ್ಟೋ ಗೊತ್ತಿಲ್ಲ.ಇದೇ ರೀತಿ ಬೇರೆ ದೇಶಗಳಲ್ಲೂ ಇರಬಹುದು. ಆದ್ರೆ ಒಂದು ವಿಷಯ ಮಾತ್ರ ಹೇಳ್ಬಿಡ್ತೀನಿ. ಈ ಉಡುಪಿ ಪ್ಯಾಲೇಸ್ಗಳಲ್ಲೆಲ್ಲ ಹೆಸರು ಮಾತ್ರ ಉಡುಪಿ. ದೋಸೆ ನೋಡಕ್ಕೆ ನಮ್ಮ ಒರಿಜಿನಲ್ ಉಡುಪಿತರಹವೇ. ಆದರೆ, ಬಾಯಿ ಬಿಟ್ಟರೆ ಬಣ್ಣಗೇಡು! ಒಟ್ಟಿನಲ್ಲಿ, ವಿಧಿ ಇಲ್ಲದೇ ಹೋದರೆ ಮಾತ್ರ ಹೋಗಬೇಕಾದ ಪ್ಯಾಲೇಸ್ ಗಳು ಇವು ನನ್ನ ಮಟ್ಟಿಗಂತೂ! ಕಾಸೂ ಹಾಳು ತಲೇನೂ ಬೋಳು ಅನ್ನೋ ಗಾದೆ ಯಾವ್ದೋ ಇಂತಾ ಕಡೇನೇ ಮಾಡಿರ್ಬೇಕು.

ಅದೆಲ್ಲ ಇರಲಿ. ಈ ಉಡುಪಿ ಪುರಾಣ ನಿಲ್ಸಿ ಸ್ವಲ್ಪ ತಿರುಪತಿ ತಿಮ್ಮಪ್ಪನ ಸ್ಮರಣೆ ಮಾಡ್ತೀನಿ. ಇಲ್ಲಿ, ತಿರುಪತಿ ಭೀಮಾಸ್ ಅನ್ನೋ ಒಂದು ದೋಸೆ-ಇಡ್ಲಿ ಹೋಟೆಲ್ ಇದೆ. ಭೀಮ ಏನೋ ಅಡಿಗೆಗೆ ಪ್ರಖ್ಯಾತಿ ಆದವನು. ಆದ್ರೆ, ತಿರುಪತಿಗೂ, ಭೀಮಂಗೂ ಯಾವ ಸಂಬಂಧ? ಅಥವಾ ತಿರುಪತಿಗೂ ಹೋಟೆಲ್ ಇಂಡಸ್ಟ್ರಿಗೂ ಏನಾರೂ ನಂಟಿದೆಯೋ ಅನ್ನೋ ವಿಷಯ ಅಂತೂ ನನಗೆ ಗೊತ್ತಿರಲಿಲ್ಲ - ಇವತ್ತಿನತನಕ.

ಒಂದು ಪುರಂದರ ದಾಸರ ದೇವರನಾಮ ಓದುತ್ತಿದ್ದಹಾಗೆ ಛಕ್ಕನೆ , ಕೊಳವೆದೀಪ ಹೊತ್ತಿ ಉರಿಯತೊಡಗಿತು Eye-wink ಮೊದಲಿಗೆ ಆ ಹಾಡನ್ನು ಇಲ್ಲಿ ಬರೆಯುವೆ.

ಧಣಿಯ ನೋಡಿದೆನಾ ವೆಂಕಟನ ಮನದಣಿಯೇ ನೋಡಿದೆನಾ! ||ಪಲ್ಲವಿ||

ಧಣಿಯ ನೋಡಿದೆ ಶಿಖಾಮಣಿ ತಿರುಮಲನಾ! ||ಅನುಪಲ್ಲವಿ||

 

ಕೇಸಕ್ಕಿ ಅನ್ನ ಉಂಬುವನಾ ಬಡ್ಡಿ

ಕಾಸು ಬಿಡದೇ ಹೊನ್ನ ಗಳಿಸುವನಾ!

ದೋಸೆ ಅನ್ನವ ಮಾರಿಸುವನಾ ತನ್ನ

ದಾಸರ ಮ್ಯಾಳದಿ ಕುಣಿದಾಡುತಿಹನಾ! ||೧||

ಬೆಟ್ಟದೊಳಗೆ ಇರುತಿಹನ ಮನ

ಮುಟ್ಟಿ ಭಜಿಪರಿಗಿಷ್ಟವ ಸಲ್ಲಿಸುವನಾ!

ಕೊಟ್ಟ ವರವ ತಪ್ಪದವನ

ಸೃಷ್ಟಿಗಧಿಕ ಶ್ರೀ ಪುರಂದರ ವಿಠಲನ! ||೨||

ತಿರುಮಲ, ಬೆಟ್ಟದ ಮೇಲೆ ಇರುವುದು ಎಲ್ಲವನ್ನೂ ನೋಡಿದಾಗ , ಇದು ತಿರುಪತಿ ತಿಮ್ಮಪ್ಪನ ಮೇಲೆ ಎಂದು ಸುಲಭವಾಗಿ ತಿಳಿಯುತ್ತೆ. ತಿಮ್ಮಪ್ಪ ತನ್ನ ಮದುವೆಯ ಸಾಲಕ್ಕೆ ಬಡ್ಡಿಕಾಸಿಗೆಂದು ದುಡ್ಡು ಸಂಪಾದಿಸುತ್ತಿದ್ದಾನೆ ಅನ್ನೋದು ಪರಂಪರೆಯ ನಂಬಿಕೆ ಅಲ್ಲವೆ? ಇದರ ಜೊತೆಗೆ, ದೋಸೆ ಅನ್ನವ ಮಾರಿಸುವನಾ ಎನ್ನುವ ಮಾತನ್ನು ನೋಡಿದಾಗ, ೧೫-೧೬ನೇ ಶತಮಾನದಲ್ಲೇ ತಿರುಪತಿಯಲ್ಲಿ ದೋಸೆ-ಊಟದ ಖಾನಾವಳಿಗಳಿದ್ದವು ಅನ್ನೋದು ಗೊತ್ತಾಗುತ್ತೆ ಅಲ್ಲವೆ? ಪ್ರವಾಸಿಗಳಿಗೆ ಅನುಕೂಲಕ್ಕಾಗಿ ಧರ್ಮಛತ್ರ ಅರವಟ್ಟಿಗೆಗಳು ಇದ್ದ ಮಾತನ್ನ ನಾವು ಕೇಳೇ ಇದ್ದೇವೆ. ಆದರೆ, ೫೦೦ ವರ್ಷಗಳ ಹಿಂದೆಯೇ ಊಟ-ತಿಂಡಿ ಮಾರುವೆಡೆಗಳು ಇದ್ದವು ಅನ್ನೋದು ಈ ಹಾಡಿಂದ ಅನುಮಾನವಿಲ್ಲದೇ ತಿಳೀತಾಇದೆ. ಇದಕ್ಕೇ ಇರಬೇಕು, ಸಾಹಿತ್ಯ ಅನ್ನೋದು ಸಮಾಜದ ಕನ್ನಡಿ ಅಂತ ಹೇಳೋದು!

ಆದ್ರೆ, ನಾನು ಹೇಳ್ದೆ ಅಂತ ಈಗ್ಲೆ ಎಲ್ಲಾರ್ಗೂ ಹೇಳ್ತಾ ಬಂದ್ಬಿಡ್ಬೇಡಿ! ಈಗ ಹೆಸರಿಗಾದ್ರೂ ಉಡುಪಿ ಹೋಟೆಲ್ ಗಳು, ಬೆಂಗಳೂರು ಅಯ್ಯಂಗಾರ್ ಬೇಕರಿಗಳು ಇನ್ನೂ ಬದುಕಿವೆ. ಆಮೇಲೆ, ಅವುಗಳೆಲ್ಲವೂ ತಿರುಪತಿ ಅಂತ ಹೆಸ್ರು ಬದ್ಲಾಯ್ಸಿಕೊಂಡ್ರೆ ಕಷ್ಟ. ಅಲ್ವಾ?

-ಹಂಸಾನಂದಿ

  • ಉಡುಪಿ ಕೃಷ್ಣ
  • ತಿರುಪತಿ ತಿಮ್ಮಪ್ಪ
  • ಹರಟೆ
~.~
  • hamsanandi ರವರ ಬ್ಲಾಗ್
  • Login or register to post comments
  • 602 hits
  • ಈ ಪುಟವನ್ನು ಇ-ಮೇಯ್ಲ್ ಮಾಡಿ
  • Delicious
  • Google
  • Yahoo

ಪ್ರತಿಕ್ರಿಯೆಗಳು

ಕಾಮೆಂಟ್ ನೋಟ ಆಯ್ಕೆಗಳು

Select your preferred way to display the comments and click "Save settings" to activate your changes.
May 21, 2008 - 5:07pm — Shivakumar.Revadi

ಉ: ತಿರುಪತಿ ತಿಮ್ಮನೂ, ಉಡುಪಿಯ ಹೋಟೆಲೂ...

Shivakumar.Revadi's picture

ನಾನು ಅಬುದಾಬಿಯಲ್ಲಿದ್ದಾಗ ಅಲ್ಲೊಂದು ಉಡುಪಿ ಹೋಟೆಲ್‍ನಲ್ಲಿ Non-Veg ಸಹ ಮಾಡ್ತಾಯಿದ್ರು, ಒಂದಿನಾ ನಾನು ಮತ್ತು ಪಾಟೀಲ್ ಎಂಬ ಮಿತ್ರ ಆ ಹೋಗಿ ಕೇಳಿದೆವು, "ಏನ್ರೀ ಉಡುಪಿ ಹೋಟೆಲ್ ಆಂತ ಬೋರ್ಡ್‌ಹಾಕಿ Non-Veg ಕೊಡ್ತಿರಲ್ಲಾ" ಅಂತ. ಆದಕ್ಕವರಂದ್ರು ಸರಿಯಾಗಿ ಬೋರ್ಡ್ ಓದಿಕೊಂಡು ವಳಗೆ ಬನ್ನಿ, ನಾನು ಮತ್ತು ಪಾಟೀಲ್ ಹೋರಗ ಬಂದು ಮತ್ತೊಮ್ಮೆ ಸರಿಯಾಗಿ ನೊಡಿದ್ರ ಅಲ್ಲೆನೈತಿ, ಉಡುಪಿ ಅನ್ನೋ ಅಕ್ಷರದ ಪಕ್ಕ ಸಣ್ಣದಾಗಿ Arab ಅಂತ ಬರೆದಿದ್ರು ಹೀಗಾಗಿ ಅದು ಬರೀ ಉಡುಪಿ ಹೋಟೆಲ್ ಆಗಿರದೇ ಆರಬ್-ಉಡುಪಿ ಆಗಿತ್ತು.

ನನ್ನಿ............

  • Login or register to post comments
  • link
  • ಈ ಪುಟವನ್ನು ಇ-ಮೇಯ್ಲ್ ಮಾಡಿ
May 21, 2008 - 7:21pm — ವೈಭವ

ಉ: ತಿರುಪತಿ ತಿಮ್ಮನೂ, ಉಡುಪಿಯ ಹೋಟೆಲೂ...

ವೈಭವ's picture

ಸಂತ ಕ್ಲಾರ ದಲ್ಲಿರುವ ಉಡುಪಿ ಪಾಲೇಸ್ ನಡ್ಸೋದು ಗುಜರಾತಿಗಳು ಅಂತ ನನ್ನ ಅಯ್ಬು. ದಿಟವೆ?
--
ಕನ್ನಡಕ್ಕೆ ಬೇಕು ಕನ್ನಡದೇ ಸೊಬಗು,ಸೊಗಡು

  • Login or register to post comments
  • link
  • ಈ ಪುಟವನ್ನು ಇ-ಮೇಯ್ಲ್ ಮಾಡಿ
May 21, 2008 - 9:28pm — Sunil Jayaprakash

ಉ: ತಿರುಪತಿ ತಿಮ್ಮನೂ, ಉಡುಪಿಯ ಹೋಟೆಲೂ...

Sunil Jayaprakash's picture

ಚಾಂಗು ಭಳಾ ಹಂಸಾನಂದಿ. ಎಂಥ ವಿಷಯ ಹೆಕ್ಕಿ ತೆಗೆದಿದ್ದೀರಿ. ಮೊದಲು ಈ ನಿಮ್ಮ ಬರಹವನ್ನು ನನ್ನ ಎಲ್ಲ ಉಡುಪಿ ಗೆಳೆಯರಿಗೂ ತೋರಿಸುತ್ತೇನೆ.

  • Login or register to post comments
  • link
  • ಈ ಪುಟವನ್ನು ಇ-ಮೇಯ್ಲ್ ಮಾಡಿ

ಮೇಲಿನ ಪುಟವನ್ನು ಹೋಲುವ ಪುಟಗಳು - 'ಸಂಪದ' ಆರ್ಕೈವಿನಿಂದ

  • ಉಡುಪಿ ಸಾಹಿತ್ಯ ಸಮ್ಮೇಳನದಲ್ಲಿ ನಡೆದ ಗೋಷ್ಠಿಗಳ ಬಗ್ಗೆ ದಯಮಾಡಿ ಯಾರಾದ್ರೂ ಬರೀರಿ.....
  • ಉಡುಪಿ ಕನ್ನಡ ಸಾಹಿತ್ಯ ಸಮ್ಮೇಳನ-ಅಧ್ಯಕ್ಷತೆ ಮಹಿಳೆ ವಹಿಸಬೇಕೇ?
  • ಚಂಡೀಗಢದ ಮೂಲೆಯಲ್ಲಿ ಕನ್ನಡದ ಸವಿ
  • ಆಸೆಯ ದೋಸೆ
  • ಗುಳೇದಗುಡ್ಡ ಆಗಬೇಕಿತ್ತು...ಆದರೆ....
Syndicate content

ಲೇಖಕರು

hamsanandi's picture

ಪೂರ್ಣ ಹೆಸರು
ಹಂಸಾನಂದಿ

ಪರಿಚಯ

ಹೇಮಾವತಿಯ ನೆಲೆಯಿಂದ ಅಡಯಾರ್ ದಡಕ್ಕೆ,
ಅಡಯಾರ್ ದಡದಿಂದ ಮುಳಾ ನದಿಯ ಬದಿಗೆ,
ಮುಳಾ ಬದಿಯಿಂದ ವೃಷಭಾವತಿ ಕಡೆಗೆ ಸಾರಿ,
ಮತ್ತಲ್ಲಿಂದ ಸಾಕ್ರಮೆಂಟೋ, ಅಮೆರಿಕನ್ ನದಿಗಳ ನೀರು ಕುಡಿದು ............................................
ಸದ್ಯಕ್ಕೆ ಗ್ವಾಡಲೂಪೆ ನದಿ ದಡದಲ್ಲಿ ಸುಧಾರಿಸಿಕೊಳ್ಳುತ್ತಿರುವ ಒಬ್ಬ ಕನ್ನಡಿಗ!

ಸದಸ್ಯರ ಪೂರ್ಣ ಪ್ರೊಫೈಲ್ ವೀಕ್ಷಿಸಿ

ವಾಟರ್ ಪೋರ್ಟಲ್: ದಿನದ ಚಿತ್ರ

ವಿದ್ಯುತ್ ಉಚಿತ, ಆದರೆ ನೀರಿಲ್ಲ!

(ಚಿತ್ರ: ಹರಿ ಪ್ರಸಾದ್ ನಾಡಿಗ್.)

ವಾರದ ಲೇಖನ
ವಿದ್ಯುತ್ ಉಚಿತ... ಷಾಕ್ ಖಚಿತ...!

ವಾರದ ವೀಡಿಯೋ
ಬಾನಿಗೊಂದು ಆಲಿಕೆ (ಮಳೆನೀರು ಸಂಗ್ರಹ)

ವಿಹರಿಸಿ

  • ಸಂಪದದಲ್ಲಿ ಬರೆಯುವ ಮುನ್ನ
  • ಹೊಸ ಬರಹ/ಚಿತ್ರ ಸೇರಿಸಿ
  • 'ಸಂಪದ' ಕುರಿತು ನಿಮ್ಮ ಸಲಹೆ/ಅಭಿಪ್ರಾಯಗಳನ್ನು ಕಳುಹಿಸಿ
  • Mailing Lists
  • ಚಟುವಟಿಕೆ
  • ಕನ್ನಡ ಬಟನ್ನುಗಳು
  • ಕನ್ವರ್ಟರ್

ಇತ್ತೀಚಿನ ಬ್ಲಾಗ್ ಬರಹಗಳು

  • ಪ್ರೌಢಲೇಖನಗಳ ರಹಸ್ಯ
  • ವಿಪಿನಸಂವಾದ
  • ನನ್ನ ಅನುನಾಯಿ
  • ನೆನಪುಗಳು
  • ಕನಸಾ,,,,,,,,,,,,,,,,
  • ಶರಣರ ಬದುಕನ್ನು ಮರಣದಲ್ಲಿ ನೋಡು
  • ಸೇತುವೆ ಇತ್ತಂತೆ ರಾಮನೇ ಒಡದನಂತೆ....!
  • ಗೂಡು...
  • ಮುತ್ತಿನ-ಶೃಂಗಾರ
  • ನಾನಿರುವುದೆ ನಿಮಗಾಗಿ :REMIX
ಇನ್ನಷ್ಟು

ಇತ್ತೀಚಿನ ಪ್ರತಿಕ್ರಿಯೆಗಳು

  • hpn
    ಉ: ಪರಿಧಿಯಿಂದ ಹೊರಗೆ ಹೋದ ವ್ಯಾಸ
    July 25, 2008 - 1:10am
  • uniquesupri
    ಉ: ಸೇತುವೆ ಇತ್ತಂತೆ ರಾಮನೇ ಒಡದನಂತೆ....!
    July 25, 2008 - 12:27am
  • srinivasps
    ಉ: ಸೇತುವೆ ಇತ್ತಂತೆ ರಾಮನೇ ಒಡದನಂತೆ....!
    July 25, 2008 - 12:23am
  • uniquesupri
    ಉ: ಸೇತುವೆ ಇತ್ತಂತೆ ರಾಮನೇ ಒಡದನಂತೆ....!
    July 25, 2008 - 12:17am
  • srinivasps
    ಉ: ವಿಶ್ವಾಸ ಮತ ಮತ್ತು ವಿಶ್ವಾಸಘಾತ
    July 25, 2008 - 12:10am
  • srinivasps
    ಉ: ಸೇತುವೆ ಇತ್ತಂತೆ ರಾಮನೇ ಒಡದನಂತೆ....!
    July 25, 2008 - 12:08am
  • uniquesupri
    ಉ: ವಿಶ್ವಾಸ ಮತ ಮತ್ತು ವಿಶ್ವಾಸಘಾತ
    July 25, 2008 - 12:06am
  • uniquesupri
    ಉ: ಸೇತುವೆ ಇತ್ತಂತೆ ರಾಮನೇ ಒಡದನಂತೆ....!
    July 25, 2008 - 12:01am
  • srinivasps
    ಉ: ವಿಶ್ವಾಸ ಮತ ಮತ್ತು ವಿಶ್ವಾಸಘಾತ
    July 25, 2008 - 12:00am
  • srinivasps
    ಉ: ಸೇತುವೆ ಇತ್ತಂತೆ ರಾಮನೇ ಒಡದನಂತೆ....!
    July 24, 2008 - 11:57pm
ಇನ್ನಷ್ಟು
ಈಗಿನಂತೆ 3 ಸದಸ್ಯರು ಮತ್ತು 36 ಅತಿಥಿಗಳು ಆನ್ಲೈನ್ ಇರುವರು.


ನೀವು ಹಣಕ್ಕಾಗಿ ಕೆಲಸಮಾಡುವುದಿಲ್ಲ ಎಂಬ ಗುರಿಯನ್ನು ಖಂಡಿತಾ ಮುಟ್ಟಬಹುದು.

— ವಾಲ್ಟ್ ಡಿಸ್ನಿ

ಮತ್ತಷ್ಟು: ಆರೋಗ್ಯ ಸಂಪದ | ಕೃಷಿ ಸಂಪದ | ನುಡಿಮುತ್ತುಗಳು

ಯೋಜನೆಗಳು: Kannada Learning Center | ಗ್ನು/ಲಿನಕ್ಸ್ ನಲ್ಲಿ ಕನ್ನಡ ತರಲು ನಡೆದಿರುವ ಕೆಲವು ಯೋಜನೆಗಳು | ಡಾಕ್ಯುಮೆಂಟೇಶನ್ Wiki | ಸಂಪದ ಅಂಚೆಪೆಟ್ಟಿಗೆಗಳು (Sampada Mailing Lists)

ಸ್ವರ್ಣ ಸಂಪದ ಸಂಪದ ಪಾಡ್ಕ್ಯಾಸ್ಟ್ (ಶ್ರಾವ್ಯ ಸಂದರ್ಶನಗಳು) | "ದಿ ಬೆಸ್ಟ್ ಆಫ್ ಸಂಪದ" | ಪ್ಲಾನೆಟ್ ಕನ್ನಡ

ಡೌನ್ಲೋಡ್ ಮಾಡಿಕೊಳ್ಳಿ:‌ ಬರಹ IME | ಫೈರ್ ಫಾಕ್ಸ್ | ಒಪೇರಾ

ಕೆಲವು ಹಕ್ಕುಗಳನ್ನು ಕಾಯ್ದಿರಿಸಲಾಗಿದೆ. ಸಂಪದ ಸಮುದಾಯ ಸಂಪದ ಫೌಂಡೇಶನ್ನಿನ ಒಂದು ಯೋಜನೆ.
Some rights reserved Sampada Initiative by Sampada Foundation, 2005 - 2008.
Terms of Use | Contact | About Sampada | Sampada in News/Media

The views expressed here are of the respective author(s) and Sampada administration does not necessarily subscribe to them.
RSS: All posts | Comments
Blogs | Podcasts

separator