ಸಂಪದದಲ್ಲಿ ಹೊಸತು! | Sign up | Login | Font Help
ಸಂಪದ
  • ಲೇಖನಗಳು
  • ಬ್ಲಾಗ್ಸ್
  • ಸಂದರ್ಶನ
  • ಚರ್ಚೆ
  • ಚಿತ್ರಪುಟಗಳು
  • ಪುಸ್ತಕಗಳು
  • ಆರ್ಕೈವ್
  • ಸಂಪರ್ಕಿಸಿ
  • ಸಂಪದ ಫೌಂಡೇಶನ್
  • Font Help

'ಸಂಪದ' ಟಿ-ಶರ್ಟ್

ಸಂಪದ › Sampada Blogs › Kamalakar ರವರ ಬ್ಲಾಗ್

ಹಸಿವು

September 8, 2006 - 4:43pm — Kamalakar

 ಹಸಿವು
--- ಜಯಂತ ಮಹಾಪಾತ್ರ (Hunger)

ದೇಹದಾಹದ ಸೆಳವು ನನ್ನಲ್ಲಿ ಇಷ್ಟೆಂದು ನಂಬಲಾರೆ;
ಮೀನುಗಾರನೆಂದ ಅಸಡ್ಡೆಯಿಂದ: ಬೇಕಾ ನಿನಗೆ ಅವಳು.
ನರಜಾಲದಂತೆ ಅವನ ಹಿಂದೆಳೆವ ಬಲೆ; ಶಬ್ದಗಳೇ
ತನ್ನ ಉಳಿವಿನ ಇರಾದೆ ಪೂಜ್ಯಗೊಳಿಸಿತೆಂಬಂತಿದ್ದ ಅವನು.
ಕಣ್ಣೊಳಗೆ ಬಿಳಿಯೆಲುಬು ತೊನೆಯುವುದ ಕಂಡೆ.

ವಿಶಾಲ ಮರಳುದಿನ್ನೆಗುಂಟ ಅವನ ಹಿಂದೆ ನಡೆದೆ,
ಮನಸು ಮಾಂಸದ ಕವಣೆಯೊಳಗೆ ಗುದ್ದಾಡುತ್ತಲಿತ್ತು.
ನಾನಿರುವ ಮನೆಯ ಸುಡುವುದೊಂದೇ ಉಳಿದ ನಿರೀಕ್ಷೆಯಾಗಿತ್ತು.

ನನ್ನ ತೋಳುಗಳಗುಂಟ ಮೌನ; ಅವನ ದೇಹ ಸಮುದ್ರದಿಂದ
ಬಲೆಯೊಳಗೆ ಹಿಡಿದುತಂದ ನೊರೆಗಳನ್ನು ಪರಚುತ್ತಿತ್ತು.
ಮಿಣುಕು ಬೆಳಕಲ್ಲಿ ಗಾಯದಂತೆ ಅವನ ಬಿಡಾರ ತೆರೆದುಕೊಂಡಿತು.
ನಾನೇ ಗಾಳಿ ಒಳಗೆ, ಹಾಗೂ ಮುಂಚಿನ ದಿನಗಳು ರಾತ್ರಿಗಳು.
ಸೋಗೆ ತೊಗಲನ್ನು ಸೋಕಿದವು. ಬಿಡಾರದೊಳಗೆ
ಎಣ್ಣೆಬತ್ತಿಯೊಂದು ಗೋಡೆಯ ಮೇಲೆ ತಾಸುಗಳನ್ನು ಕಿಸಿದಿತ್ತು.
ಮತ್ತೆ ಮತ್ತೆ ಜಿಗುಟು ಮಸಿ ಮನಸಿನವಕಾಶವ ತುಂಬಿತ್ತು.
ಅವನು ಹೇಳುತ್ತಿದ್ದ: ಬೇಗ ಬರ್ತೇನೆ, ನಿನ್ನ ಬಸ್ಸು ಒಂಬತ್ತಕ್ಕೆ.
ಬಾನು ಬಿತ್ತು ನನ್ನ ಮೇಲೆ ಹಾಗೂ ಅಪ್ಪನೊಬ್ಬನ ದಣಿದ ಕಪಟತನ.
ಉದ್ದಕ್ಕೆ ಸಪೂರವಿದ್ದ ಅವಳ ವಯಸ್ಸು ರಬ್ಬರಿನಂತೆ ತಣ್ಣಗಿತ್ತು.
ಹುಳುವಿನಂತ ಕಾಲಗಲಿಸಿದಳು. ಅಲ್ಲಿನ ಹಸಿವು ಅರಿತೆ,
ಆ ಇನ್ನೊಂದು ಹಸಿವು, ಮೀನಂತೆ ತಿಣುಕುತ್ತ ಒಳತಿರುಗಿತು.

ಜಯಂತ ಮಹಪಾತ್ರ ಇಂಗ್ಲೀಷಿನಲ್ಲಿ ಬರೆಯುವ ಒರಿಯಾ ಕವಿ. ತಮ್ಮ ಸೂಕ್ಷ್ಮ ಸಂವೇದಿ ಕವನಗಳಿಗೆ ಪ್ರಸಿದ್ಧರು. ಇವರ ಕವನಗಳಲ್ಲಿ ಓರಿಸ್ಸಾದ ನದಿನಾಡು-ನಡೆನುಡಿ-ನಾಡಿಮಿಡಿತವಾಗಿ ಬರುತ್ತವೆ. ತಡವಾಗಿ ಬರೆಯಲು ಶುರುಮಾಡಿದ ಜಯಂತ ಶೀಘ್ರ ಭಾರತದ ಒಳ್ಳೆಯ ಕವಿಗಳಲ್ಲಿ ಒಬ್ಬರೆಂದು ಹೆಸರಾದರು. ಭಾಷೆಯ ಚತುರ ಪ್ರಯೋಗ, ಸಾಮಾನ್ಯ ಜೀವನದ ಬಗೆ ಬಗೆಯ ನವೆಗಳನ್ನು ಚುರುಕು ತಾಗುವಂತೆ ಬರೆವ ಜಯಂತ ತಮ್ಮ ಕಾವ್ಯವನ್ನು ಅಂತಸ್ಸಾಕ್ಷಿಯ ಒರೆಗಲ್ಲಾಗಿ ಉಪಯೋಗಿಸುತ್ತಾರೆ. ನಮ್ಮ ಪರಿಸರದೊಳಗೆ ಕಾಣುವ ನಾನಾ ಕೀಟಲೆಯ ನಿತ್ಯಬದುಕಿನ ಬಗ್ಗೆ, ಬಡತನದ ಬೇಗೆಯಲ್ಲಿ ಸಿಲುಕಿ ನಲುಗಿದ ಒಂದಿಡೀ ತಲೆಮಾರಿನ ಬಗ್ಗೆ ಅವರ ಕವನಗಳಲ್ಲಿ ಸೂಕ್ಷ್ಮ ಪರೀಕ್ಷೆ ಇರುತ್ತದೆ.
ಈ ಕವನದಲ್ಲಿ ಹಸಿವು ಶಬ್ದದ ಎರಡೂ ಅರ್ಥಗಳು ಪರಿಣಾಮಕಾರಿಯಾಗಿ ಬಂದಿವೆ. ಬಡತನದಿಂದ ಸೊರಗಿದ ತಂದೆಯೊಬ್ಬ ತನ್ನ ಮಗಳ ದೇಹಮಾರಿ ಹೊಟ್ಟೆಪಾಡು ಮಾಡುತ್ತಲಿದ್ದಾನೆ. ಕಾಮದ ಹಸಿವಿನ ತೃಪ್ತಿಗಾಗಿ ಹುಡುಕುತ್ತಿರುವ ಪ್ರವಾಸಿಗನೊಬ್ಬ ಇಲ್ಲಿ ನಿರೂಪಕ. ತಂದೆಯೇ ತನ್ನ ಆಡುವ ವಯಸ್ಸಿನ ಮಗಳನ್ನು ಸೂಳೆಯಾಗಿಸುವ, ಹಾಗೂ ಹಾಗೆ ಮಾಡಿ ಹಸಿವನ್ನು ಎದುರಿಸುವ ಭಯಾನಕ ಚಿತ್ರದೆದುರು ಆತನ ಕಾಮುಕತೆ ನಲುಗಿಬಿಡುತ್ತದೆ.
ಮಾರ್ಮಿಕವಾದ ಈ ಕವನದಲ್ಲಿ ಒದಗುವ ಸಾಮಾಜಿಕ ಟೀಕೆ ಎಷ್ಟು ಸೂಕ್ಷ್ಮವಾಗಿ ಬಂದಿದೆ ನೋಡಿ.

~.~
  • Kamalakar ರವರ ಬ್ಲಾಗ್
  • Login or register to post comments
  • 1031 hits
  • ಈ ಪುಟವನ್ನು ಇ-ಮೇಯ್ಲ್ ಮಾಡಿ
  • Delicious
  • Google
  • Yahoo
  • ನಿರ್ವಾಹಕರ ಗಮನಕ್ಕೆ ತನ್ನಿ

ಮೇಲಿನ ಪುಟವನ್ನು ಹೋಲುವ ಪುಟಗಳು - 'ಸಂಪದ' ಆರ್ಕೈವಿನಿಂದ

  • ಹಸಿವು - ಮಾಯ್ಸನ ಕಂತೆ ೧೨
  • ಒಳ್ಳೆಯ ಕನ್ನಡ ಪುಸ್ತಕಗಳು - ನನ್ನ ಪಟ್ಟಿ
  • ಹಸಿವು
  • ಅರುಣ ಕೊಲ್ಹಾಟ್ಕರರ ಕವನ
  • ಬೆರಗಿನ ಡೋಲು
Syndicate content

ಲೇಖಕರು

Kamalakar's picture
ಸದಸ್ಯರ ಪೂರ್ಣ ಪ್ರೊಫೈಲ್ ವೀಕ್ಷಿಸಿ

ಸಂಪದ ವಿಶೇಷ

'ಸಂಪದ' ಟಿ-ಶರ್ಟ್

ವಾಟರ್ ಪೋರ್ಟಲ್: ದಿನದ ಚಿತ್ರ

ಬಿಪಾಸರ್, ರಾಜಸ್ಥಾನ

(ಫೋಟೋ: ಫರ್ಹದ್ ಕಾಂಟ್ರಾಕ್ಟರ್)

ವಾರದ ಫೀಚರ್
ಜೀವನದಿ ಕಾವೇರಿ

ವೀಡಿಯೋ
ಬಾನಿಗೊಂದು ಆಲಿಕೆ (ಮಳೆನೀರು ಸಂಗ್ರಹ)

ಮತ್ತಷ್ಟು...

ವಿಹರಿಸಿ

  • ಸಂಪದದಲ್ಲಿ ಬರೆಯುವ ಮುನ್ನ
  • ಹೊಸ ಬರಹ/ಚಿತ್ರ ಸೇರಿಸಿ
  • 'ಸಂಪದ' ಕುರಿತು ನಿಮ್ಮ ಸಲಹೆ/ಅಭಿಪ್ರಾಯಗಳನ್ನು ಕಳುಹಿಸಿ
  • ಚಟುವಟಿಕೆ
  • ಕನ್ನಡ ಬಟನ್ನುಗಳು
  • ಕನ್ವರ್ಟರ್

ಇತ್ತೀಚಿನ ಬ್ಲಾಗ್ ಬರಹಗಳು

  • ಸಹಾಯ ಬೇಕಾಗಿದೆ
  • Attitude
  • ಓದಿದ್ದು ಕೇಳಿದ್ದು ನೋಡಿದ್ದು 47 ವಿದ್ಯುತ್ ಉಳಿಸಲು ಕೆಲವು ಸೂತ್ರಗಳು
  • ವಾಪಾಸ್ ಬಂದುಬಿಟ್ಟೆ...!
  • ಸ್ವಲ್ಪ ಖುಷಿ... ಸ್ವಲ್ಪ ದುಃಖ... ಈ ಬ್ಲಾಗ್‌ಗಳು....
  • ಕನಸು ಕದ್ದ ಹುಡುಗಿ...
  • ಚೌರದವನ ಕಷ್ಟ ಸುಖ
  • ಇ೦ದಿನಿ೦ದ ಸ೦ಪದ ಬಳಗದಲ್ಲಿ ನಾನೂ ಒಬ್ಬ
  • ಹನ್ನೊಂದು ಅಡಿ ಎತ್ತರದ ತಂಬೂರಿ!
  • ಓದಿದ್ದು ಕೇಳಿದ್ದು ನೋಡಿದ್ದು-46 ಅರ್ಥಶಾಸ್ತ್ರದಲ್ಲಿ ನೋಬೆಲ್ ವಿಜೇತ,ಪ್ರಶಸ್ತಿಯ ಹಣವನ್ನು ಎಲ್ಲಿ ಹೂಡಲಿದ್ದಾರೆ?
ಇನ್ನಷ್ಟು

ಇತ್ತೀಚಿನ ಪ್ರತಿಕ್ರಿಯೆಗಳು

  • ASHOKKUMAR
    ಉ: ಓದಿದ್ದು ಕೇಳಿದ್ದು ನೋಡಿದ್ದು 47 ವಿದ್ಯುತ್ ಉಳಿಸಲು ಕೆಲವು ಸೂತ್ರಗಳು
    October 13, 2008 - 5:28am
  • venkatesh
    ಉ: ಪರ್ಯಟಕ ಮಿತ್ರರ ಜೊತೆಯಲ್ಲಿ !
    October 13, 2008 - 4:54am
  • ವರ್ಣನಾಥ ಎನ್. ವೆ...
    ಉ: ಕನ್ನಡ ಸಂಘಟನೆಗಳನ್ನು ನಿಷೇದಿಸಿ
    October 13, 2008 - 1:37am
  • ಗಣೇಶ
    ಉ: ನನ್ನ ಮೆಚ್ಚಿನ ಟಿ.ವಿ.ಕಾರ್ಯಕ್ರಮಗಳು
    October 13, 2008 - 12:16am
  • anil.ramesh
    ಉ: ನನ್ನ ಮೆಚ್ಚಿನ ಟಿ.ವಿ.ಕಾರ್ಯಕ್ರಮಗಳು
    October 12, 2008 - 11:59pm
  • ಗಣೇಶ
    ಉ: ಓದಿದ್ದು ಕೇಳಿದ್ದು ನೋಡಿದ್ದು 47 ವಿದ್ಯುತ್ ಉಳಿಸಲು ಕೆಲವು ಸೂತ್ರಗಳು
    October 12, 2008 - 11:50pm
  • anil.ramesh
    ಉ: ಓದಿದ್ದು ಕೇಳಿದ್ದು ನೋಡಿದ್ದು 47 ವಿದ್ಯುತ್ ಉಳಿಸಲು ಕೆಲವು ಸೂತ್ರಗಳು
    October 12, 2008 - 11:27pm
  • anil.ramesh
    ಉ: ಅವರು ಯಾರಿರಬಹುದು?
    October 12, 2008 - 11:26pm
  • ಗಣೇಶ
    ಉ: ಮತಾಂತರ ಏನು ಎತ್ತ
    October 12, 2008 - 11:22pm
  • anil.ramesh
    ಉ: ಬಸವನ ಹುಳು...
    October 12, 2008 - 11:19pm
ಇನ್ನಷ್ಟು
ಈಗಿನಂತೆ 3 ಸದಸ್ಯರು ಮತ್ತು 71 ಅತಿಥಿಗಳು ಆನ್ಲೈನ್ ಇರುವರು.


ಕಲ್ಪನೆ ಮತ್ತು ಕನಸುಗಳು ಬರಿಯ ತಿಳುವಳಿಕೆಗಿಂತ ಹೆಚ್ಚಿನ ಪ್ರಾಮುಖ್ಯತೆಯನ್ನು ಹೊಂದಿವೆ.

- ಆಲ್ಬರ್ಟ್ ಐನ್‍ಸ್ಟೈನ್

ಮತ್ತಷ್ಟು: ಆರೋಗ್ಯ ಸಂಪದ | ಕೃಷಿ ಸಂಪದ | ನುಡಿಮುತ್ತುಗಳು

ಯೋಜನೆಗಳು: Kannada Learning Center | ಗ್ನು/ಲಿನಕ್ಸ್ ನಲ್ಲಿ ಕನ್ನಡ ತರಲು ನಡೆದಿರುವ ಕೆಲವು ಯೋಜನೆಗಳು | ಡಾಕ್ಯುಮೆಂಟೇಶನ್ Wiki | ಸಂಪದ ಅಂಚೆಪೆಟ್ಟಿಗೆಗಳು (Sampada Mailing Lists)

ಸ್ವರ್ಣ ಸಂಪದ ಸಂಪದ ಪಾಡ್ಕ್ಯಾಸ್ಟ್ (ಶ್ರಾವ್ಯ ಸಂದರ್ಶನಗಳು) | "ದಿ ಬೆಸ್ಟ್ ಆಫ್ ಸಂಪದ" | ಪ್ಲಾನೆಟ್ ಕನ್ನಡ

ಡೌನ್ಲೋಡ್ ಮಾಡಿಕೊಳ್ಳಿ:‌ ಬರಹ IME | ಫೈರ್ ಫಾಕ್ಸ್ | ಒಪೇರಾ

ಕೆಲವು ಹಕ್ಕುಗಳನ್ನು ಕಾಯ್ದಿರಿಸಲಾಗಿದೆ. ಸಂಪದ ಸಮುದಾಯ ಸಂಪದ ಫೌಂಡೇಶನ್ನಿನ ಒಂದು ಯೋಜನೆ.
Some rights reserved Sampada Initiative by Sampada Foundation, 2005 - 2008.
Terms of Use | Contact | About Sampada | Sampada in News/Media

The views expressed here are of the respective author(s) and Sampada administration does not necessarily subscribe to them.
RSS: All posts | Comments
Blogs | Podcasts

separator