ಸಂಪದದಲ್ಲಿ ಹೊಸತು! | Sign up | Login | Font Help
ಸಂಪದ
  • ಲೇಖನಗಳು
  • ಬ್ಲಾಗ್ಸ್
  • ಚರ್ಚೆಯ ವೇದಿಕೆ
  • ಚಿತ್ರಪುಟಗಳು
  • Podcasts
  • ಪುಸ್ತಕಗಳು
  • ಆರ್ಕೈವ್
  • ಸಂಪರ್ಕಿಸಿ
  • Sampada Foundation
  • ಅಂಚೆ ಪೆಟ್ಟಿಗೆ
  • Font Help

'ಛಂದ' ಪುಸ್ತಕದ ಹೊಸ ಪುಸ್ತಕಕ್ಕೆ ನಿಮ್ಮದೇ ಮುಖಪುಟ!

ಸಂಪದ › Sampada Blogs › sindhu ರವರ ಬ್ಲಾಗ್

ರುಚಿ

June 25, 2007 - 4:43pm — sindhu

ಎಲ್ಲ ಅಂಗಡಿಗಳು ಬಾಗಿಲು ಹಾಕುತ್ತಿವೆ. ಆಲ್ಲಿಂದ ಮೆಜೆಸ್ಟಿಕ್ಕಿಗೆ ಹೊರಡುವ ಕೊನೆಯ ಬಸ್ಸಿಗೆ, ರಾತ್ರಿ ಊರಿಗೆ ಹೊರಟ ಜನರೆಲ್ಲ ದೀಪದ ಕೆಳಗೆ ನಿಂತು ಕಾಯುತ್ತಿದ್ದಾರೆ.

ಸೊಪ್ಪು ಮಾರುವ ಹೆಂಗಸು, ಉಳಿದ ಕೊತ್ತಂಬರಿ ಕಟ್ಟನ್ನು ಬಾಳೆಯೆಲೆಯಲ್ಲಿ ಜೋಪಾನವಾಗಿ ಸುತ್ತಿಟ್ಟು, ಉಳಿದ ಸೊಪ್ಪನ್ನ ಹಾಗೆ ಒದ್ದೆಯ ಗೊಣಿಬಟ್ಟೆಯಲ್ಲಿ ಮುಚ್ಚಿ ಮಂಕರಿಗೆ ತುಂಬಿ, ನೋಟು ಚಿಲ್ಲರೆಗಳನ್ನು ಎಣಿಸಿ, ತನ್ನ ಪುಟ್ಟ ಪರ್ಸಿಗೆ ತುಂಬಿ, ಮತ್ತೊಂದ್ಸಲ ಆ ಜಾಗವನ್ನೆಲ್ಲ ನೋಡಿ, ಮನೆಗೆ ಹೊರಟಿದ್ದಾಳೆ.

ತಳ್ಳು ಗಾಡಿಯ ತರಕಾರಿ ಸಾಬರಿಗೆ ತುಂಬ ಖುಶಿ, ಇವತ್ತು ತಂದ ಟೊಮೆಟೊ ಎಲ್ಲ ಖಾಲಿ. ಉಳಿದ ಕೆಲವು ಕೊಳೆತ ಟೊಮೆಟೊಗಳನ್ನು ಅಲ್ಲಿ ಚರಂಡಿಯ ಬದಿಗಿದ್ದ ಅಗಲ ಕಲ್ಲಿನ ಮೇಲೆ ಸುರಿದು, ಖಾಲಿಯಾಗಿ ಹಗುರಾದ ಗಾಡಿಯನ್ನು, ತುಂಬಿಕೊಂಡು ಭಾರವಾದ ಜೋಬಿನ ಹಿತದಲ್ಲಿ ತಳ್ಳುತ್ತಿದ್ದಾರೆ.. ಬೀಬಿ ಏನಡಿಗೆ ಮಾಡಿರಬಹುದು ಅನ್ನುವ ಯೋಚನೆ ಈಗ ಗಾಡಿ ಖಾಲಿಯಾದ ಮೇಲೆ ಬಂತು. ಈವತ್ತು ಶುಕ್ರವಾರ, ಸುರಮಾ ಹಚ್ಚಿದ ಅವಳ ಕಣ್ಣುಗಳು ಪರದೆಯೊಳಗಿಂದ ಎಂದಿಗಿಂತ ಹೆಚ್ಚು ಪ್ರೀತಿಯಿಂದ ಮಿನುಗುವುದನ್ನು ನೆನಪಿಸಿಕೊಂಡು ಮನಸ್ಸು ನವಿರೆದ್ದಿತು. ಅಲ್ಲೆ ಬರುತ್ತಿದ್ದ ನನಗೆ ಅದು ಅವರ ಮಿರುಗುವ ಕಪ್ಪು ಗಡ್ಡದಲ್ಲಿ, ತುಟಿಯ ಹತ್ತಿರ ಕೊಂಚವೆ ಅರಳಿದ್ದ ಹೂನಗುವಿನಲ್ಲಿ ಇಣುಕಿ ಕಾಣುತ್ತಿತ್ತು.

ಅಲ್ಲಿ ತಿರುವಿನಲ್ಲಿ ಮಲ್ಲಿಗೆ ಹೂ, ಬಾಳೆಹಣ್ಣು ಮಾರುವ ಅಜ್ಜಿ, ದಿನದ ವ್ಯಾಪಾರ ಮುಗಿದ ಸಮಾಧಾನದಲ್ಲಿ, ರಸ್ತೆಯಾಚೆಗಿನ ಗಾಡಿಯಿಂದ ಮಸಾಲಪುರಿ ತಗೊಂಡು ಸವಿಯುತ್ತ ಕೂತಿದ್ದಳು. ಸವಿದದ್ದು ಅವಳ ನಾಲಗೆ, ರುಚಿ ಕಂಡದ್ದು ನನ್ನ ಕಣ್ಣು..

ಪುಟ್ಟ ಮೆಲಮೈನ್ ತಟ್ಟೆಯಿಂದ ಹಬೆಯಾಡುತ್ತಿರುವ ಮಸಾಲೆಯಲ್ಲಿ ಅವಳ ದಿನದ ದಣಿವು ಆವಿಯಾಗುತ್ತಿತ್ತು. ಗಾಢವಾಗಿ ಬರುವ ಮಸಾಲೆ ಪರಿಮಳದಲ್ಲಿ, ಮಲ್ಲಿಗೆ ಮೊಗ್ಗು ಪೋಣಿಸಿದ ಬೆರಳ ಘಮ ಉಯ್ಯಾಲೆಯಾಡುತ್ತಿತ್ತು. ಅಲ್ಲಿ ಗಾಡಿಯ ಬದಿಯಲ್ಲಿ ಬಾಲ ಮಡಚಿ, ಅವಳನ್ನೆ ನೋಡುತ್ತ ಕೂತಿದ್ದ ಬೀದಿನಾಯಿಯ ಬಾಯಿಗೆ ಸಿಗುವಂತೆ ಒಂದು ಪುರಿ ತುಂದನ್ನು ಎಸೆಯುತ್ತ, ಲೋಕದ ಹಣ್ಣೆಲ್ಲವನ್ನು ಸವಿದವರ ಭಾವದಲ್ಲಿ ಅಜ್ಜಿ ಅ ತಿಂಡಿಯನ್ನು ಸವಿಯುತ್ತಿದ್ದಳು.

ಆ ಮಸಾಲ ಪುರಿ ಎಷ್ಟು ರುಚಿಯಾಗಿತ್ತಂದರೆ, ಅವನ ಜೊತೆ ಇನ್ನೇನು ಮಳೆ ಬೀಳಲಿದೆ ಅನ್ನುವ ಸಂಜೆಯಲ್ಲಿ ಗಾಂಧಿಬಜಾರಿನ ಫ್ಲೈ ಓವರಿನ ಪಕ್ಕದ ಕಟ್ಟೆಯಲ್ಲಿ ಕೂತು ತಿನ್ನುವ ಸ್ಪೆಶಲ್ ಮಸಾಲಪುರಿಗಿಂತ ರುಚಿಯಾಗಿ, ಮಳೆ ಹನಿಯುವಾಗ ಬ್ಯೂಗಲ್ ರಾಕಿನ ಮಂಟಪದ ನೆರಳಲ್ಲಿ ಜೊತೆಯಾಗಿ ಕೂತು ತಿನ್ನುವ ಚುರುಮುರಿಗಿಂತ ಹಿತವಾಗಿ, ಬೇಸಗೆಯ ಸಂಜೆಯಲ್ಲಿ ಮೆಚ್ಚಿನ ಹೋಟೆಲಿನಲ್ಲಿ ತಿನ್ನುವ ಮಸಾಲೆ ದೋಸೆಗಿಂತಲು ಸ್ವಾದಿಷ್ಟವಾಗಿ ಇತ್ತು.. ಅವಳ ತೃಪ್ತಿ ತುಂಬಿದ ಮುಖ, ಸಂತುಷ್ಟಗೊಂಡ ಕಣ್ಣು, ಕೊರಳ ಶಂಖದಿಂದ ಬಂದ ಪುಟ್ಟ ತೇಗಿನಲ್ಲಿ ದಾಟಿ ಹೊರಹೋದ ದಿನದ ಸುಸ್ತು, ಎಲ್ಲವೂ ಆ ರುಚಿಯನ್ನ ನನಗೆ ದಾಟಿಸಿ ಹೇಳಿದವು.
ಅವಳು ಮಸಾಲೆ ಪುರಿ ಗಾಡಿಯವನಿಗೆ ದುಡ್ಡು ಕೊಡಲು ಹೋದಾಗ ಎರಡು ಪುಟ್ಟ ಪೂರಿಯನ್ನು ಇಸಿದು, ತನ್ನ ಪುಟ್ಟ ಪರ್ಸಿನೊಳಗಿಟ್ಟುಕೊಂಡಳು. ಮತ್ತೆ ಗಡಿಬಿಡಿಯಲ್ಲಿ ಬಂದು ಎಲ್ಲ ಸೇರಿಸಿಕೊಂಡು, ಗಾಡಿ ದೂಡುತ್ತ ಮನೆ ಕಡೆ ಹೊರಟಳು.

ಸೊಸೆ ಬಯ್ಯುತ್ತಾಳೆ ಅಂತ ಗೊತ್ತಿದ್ರೂ ಬಾಗಿಲಲ್ಲಿ ಪುಟ್ಟ ಜಮಖಾನೆಯಲ್ಲಿ ಕೂತು ಆಡುತ್ತ ಕಾದಿರುವ ಮೊಮ್ಮಗನಿಗೆ ಈ ಪೂರಿ ಮುರಿದು ತಿನ್ನಿಸದೆ ಹೋದರೆ ಅವಳು ಹೇಗೆ ಅಜ್ಜಿಯಾಗುತ್ತಾಳೆ, ನೀವೆ ಹೇಳಿ. ಅದು ಹೇಗೆ ಅಜ್ಜಿ ಇಷ್ಟು ಪ್ರೀತಿಯಿಂದ ನೆನಪಿಟ್ಟು ತಗೊಂಡು ಹೋಗುವ ಪುಟ್ಟ ಪೂರಿಯಲ್ಲಿ ರೋಗಾಣುವಿರುತ್ತದೆ? ಅಮ್ಮ ಎಷ್ಟೆ ಬೈದರೂ ಅಜ್ಜ ನನಗೆ ತಂದುಕೊಟ್ಟ ಗಟರ್ ಪಕ್ಕದ ಅಯ್ಯಂಗಾರ್ ಬೇಕ್ರಿ ರೊಟ್ಟಿಯಿಂದ ನನಗೆ ಹೇಗೆ ಯಾವತ್ತೂ ಅನಾರೋಗ್ಯವಾಗಲಿಲ್ಲವೋ ಹಾಗೆ. ಅಜ್ಜಿ ಎತ್ತಿಟ್ಟುಕೊಂಡ ಪುಟ್ಟ ಪೂರಿಗಳು ಅಪ್ತವಾಗಿ, ಮನದಲ್ಲಿ ರುಚಿಯಾದ ಪರಿಮಳ ನೆನಪುಗಳು ಹಬೆಯಾಡಿದವು..

ಇಲ್ಲಿ ರಸ್ತೆಯ ಪಕ್ಕ, ನಾರುವ ಊರಿನ ಗಬ್ಬು ನಾಳಗಳ ಮಧ್ಯೆ, ಚಂದ್ರನಿರದ ರಾತ್ರಿಯಲ್ಲಿ, ಪುಟ್ಟದಾಗಿ ಮಿನುಗಿದ ಅಜ್ಜಿ, ನಿನಗೆ ಪ್ರೀತಿಯ ನಮನ.

  • ಕೃತಜ್ಞತೆ
  • ಲಹರಿ
~.~
  • sindhu ರವರ ಬ್ಲಾಗ್
  • Login or register to post comments
  • 313 hits
  • ಈ ಪುಟವನ್ನು ಇ-ಮೇಯ್ಲ್ ಮಾಡಿ
  • Delicious
  • Google
  • Yahoo
  • ನಿರ್ವಾಹಕರ ಗಮನಕ್ಕೆ ತನ್ನಿ

ಪ್ರತಿಕ್ರಿಯೆಗಳು

ಕಾಮೆಂಟ್ ನೋಟ ಆಯ್ಕೆಗಳು

Select your preferred way to display the comments and click "Save settings" to activate your changes.
June 25, 2007 - 5:59pm — kavitha

ಉ: ರುಚಿ

kavitha's picture

ಪ್ರೀತಿಯ ಸಿಂಧುರವರೇ,

ನಿಮ್ಮ ವಿವರಣೆಯ ಧಾಟಿ ನಿಜಕ್ಕೂ ಮನಮುಟ್ಟುವಂತಿರುತ್ತದೆ. ಹೀಗೆ ಮೈಸೂರ್ ಪೋಸ್ಟ ವೆಬ್ ಸೈಟ್ ಗೆ ಭೇಟಿ ನೀಡಿದಾಗ, ನಿಮ್ಮ ನೆನಪು-ನೇವರಿಕೆ ಬ್ಲಾಗ್ ನ್ನು ವೀಕ್ಷಿಸಿದೆ, ತುಂಬಾ ಆತ್ಮೀಯವಾಗಿ ಬರೆಯುತ್ತೀರಿ. ಕ್ಯಾರಿ ಆನ್ .

ಕವಿತಾ ಪ್ರಶಾಂತ್.

  • Login or register to post comments
  • link
  • ಈ ಪುಟವನ್ನು ಇ-ಮೇಯ್ಲ್ ಮಾಡಿ
  • ನಿರ್ವಾಹಕರ ಗಮನಕ್ಕೆ ತನ್ನಿ
July 2, 2007 - 9:07pm — sindhu

ಉ: ರುಚಿ

sindhu's picture

ಕವಿತಾ,

ಧನ್ಯವಾದಗಳು. ನಿಮಗೆ ಮೆಚ್ಚುಗೆಯಾಗಿದ್ದು ನನಗೂ ಖುಷಿ.

  • Login or register to post comments
  • link
  • ಈ ಪುಟವನ್ನು ಇ-ಮೇಯ್ಲ್ ಮಾಡಿ
  • ನಿರ್ವಾಹಕರ ಗಮನಕ್ಕೆ ತನ್ನಿ

ಮೇಲಿನ ಪುಟವನ್ನು ಹೋಲುವ ಪುಟಗಳು - 'ಸಂಪದ' ಆರ್ಕೈವಿನಿಂದ

  • ನಿಮಗೆ ಇವರು ಸಿಕ್ಕರೆ ನನಗೆ ಹೇಳಿ...
  • ನಿಮಗೂ ಇವರು ಸಿಕ್ಕರೆ ನನಗೆ ಹೇಳಿ...
  • ಒಮ್ಮೆ ಮನೆಗೆ ಬಂದುಬಿಡು.
  • ಎರಡು ಒಳ್ಳೆಯ ನಗೆಹನಿಗಳು .
  • ಪಚ್ಚೆಕಲ್ಲು ಪಾಣಿ ಪೀಠ...
Syndicate content

ಲೇಖಕರು

sindhu's picture

ಪರಿಚಯ

ಹೇಳಿಕೊಳ್ಳುವಂತಹ ಪರಿಚಯ ವಿಷಯವೇನಿಲ್ಲ..
ಪ್ರಕೃತಿಯ ಚೆಲುವು ಮತ್ತು ಸಾಧ್ಯತೆಗಳನ್ನ ಮೆಚ್ಚುವವಳು.
ವೃತ್ತಿ: ಟೆಕ್ನಾಲಜಿ ಟ್ರೈನಿಂಗ್

ಎಲ್ಲ ನೋಟಗಳಾಚೆಗಿನ್ನೊಂದು ಚಿತ್ರವಿದೆ...

ಸದಸ್ಯರ ಪೂರ್ಣ ಪ್ರೊಫೈಲ್ ವೀಕ್ಷಿಸಿ

ಸಂಪದ ವಿಶೇಷ

ನವರಾತ್ರಿಯ ದಿನಗಳು (ಲೇಖಕರು: ಹಂಸಾನಂದಿ)
(ನವರಾತ್ರಿ ಪ್ರಯುಕ್ತ)
'ಸಂಪದ' ಟಿ-ಶರ್ಟ್

ವಾಟರ್ ಪೋರ್ಟಲ್: ದಿನದ ಚಿತ್ರ

ಬಿಪಾಸರ್, ರಾಜಸ್ಥಾನ

(ಫೋಟೋ: ಫರ್ಹದ್ ಕಾಂಟ್ರಾಕ್ಟರ್)

ವಾರದ ಫೀಚರ್
ಜೀವನದಿ ಕಾವೇರಿ

ವೀಡಿಯೋ
ಬಾನಿಗೊಂದು ಆಲಿಕೆ (ಮಳೆನೀರು ಸಂಗ್ರಹ)

ಮತ್ತಷ್ಟು...

ವಿಹರಿಸಿ

  • ಸಂಪದದಲ್ಲಿ ಬರೆಯುವ ಮುನ್ನ
  • ಹೊಸ ಬರಹ/ಚಿತ್ರ ಸೇರಿಸಿ
  • 'ಸಂಪದ' ಕುರಿತು ನಿಮ್ಮ ಸಲಹೆ/ಅಭಿಪ್ರಾಯಗಳನ್ನು ಕಳುಹಿಸಿ
  • ಚಟುವಟಿಕೆ
  • ಕನ್ನಡ ಬಟನ್ನುಗಳು
  • ಕನ್ವರ್ಟರ್

ಇತ್ತೀಚಿನ ಬ್ಲಾಗ್ ಬರಹಗಳು

  • ಗುರುದತ್ ಎಂಬ ದುರಂತ ನಾಯಕ
  • ಸ್ವಲ್ಪನಗಿ
  • ಮೈಸೂರು ದಸರಾ ೨೦೦೮ ವೆಬ್ಕಾಸ್ಟ
  • ಪಾಪೆ ಸೆರೆ ಹಿಡಿಯೋದು ಸುಮ್ಮನೆ ಹಂಗೆ ಅಲ್ಲ!!
  • ಡೈರಿಯ ಕೆಲವು ಹಾಳೆಗಳು - ಭಾಗ ೯
  • ಅವಮಾನ್ ಅಂದರೆ ಯಾರು ? He man :-)
  • ನಾನು ಮರಾಠಿ ಕಲಿಯುವುದು, " ಅವ್ವಾಚೀ ಪರವಾನಗೀ ಇಲ್ಲಾ ; ಲಗ್ನ ಇಲ್ಲಾ ! "
  • ವಿಜಯದಶಮಿ: ಇಂದು ರಸಿಕರ ರಾಜ್ಯದ ಸ್ಥಾಪನೆ
  • ಶಿವಮಣಿ ಎಂಬ ಅದ್ಭುತ ಪ್ರತಿಭೆ
  • ಹಿಮವದ್ ಗೋಪಾಲಸ್ವಾಮಿ ಬೆಟ್ಟ - ಪ್ರವಾಸ ಕಥನ
ಇನ್ನಷ್ಟು

ಇತ್ತೀಚಿನ ಪ್ರತಿಕ್ರಿಯೆಗಳು

  • Rasikara Rajya
    ಉ: ವಿಜಯದಶಮಿ: ಇಂದು ರಸಿಕರ ರಾಜ್ಯದ ಸ್ಥಾಪನೆ
    October 10, 2008 - 11:58pm
  • Rasikara Rajya
    ಉ: ವಿಜಯದಶಮಿ: ಇಂದು ರಸಿಕರ ರಾಜ್ಯದ ಸ್ಥಾಪನೆ
    October 10, 2008 - 11:56pm
  • hpn
    ಉ: 'ಛಂದ' ಪುಸ್ತಕದ ಹೊಸ ಪುಸ್ತಕಕ್ಕೆ ನಿಮ್ಮದೇ ಮುಖಪುಟ!
    October 10, 2008 - 11:52pm
  • hamsanandi
    ಉ: ಸಂಗೀತ ನವರಾತ್ರಿ - ವಿಜಯ ದಶಮಿ
    October 10, 2008 - 11:17pm
  • hpn
    ಉ: ಪತನದ ಕತೆ
    October 10, 2008 - 10:16pm
  • Chetan.Jeeral
    ಉ: ಡೈರಿಯ ಕೆಲವು ಹಾಳೆಗಳು - ಭಾಗ ೯
    October 10, 2008 - 10:10pm
  • hpn
    ಉ: ಪತನದ ಕತೆ
    October 10, 2008 - 10:07pm
  • hamsanandi
    ಉ: ಪತನದ ಕತೆ
    October 10, 2008 - 9:52pm
  • omshivaprakash
    ಉ: ಲಿನಕ್ಸಾಯಣ - ೨೨ - ಗ್ನೋಮ್ ಸಬ್ ಟೈಟಲ್ಸ್ - ದೃಶ್ಯಾವಳಿಯಲ್ಲಿ ಕನ್ನಡ
    October 10, 2008 - 9:30pm
  • hamsanandi
    ಉ: ವಿಜಯದಶಮಿ: ಇಂದು ರಸಿಕರ ರಾಜ್ಯದ ಸ್ಥಾಪನೆ
    October 10, 2008 - 9:27pm
ಇನ್ನಷ್ಟು
ಈಗಿನಂತೆ 4 ಸದಸ್ಯರು ಮತ್ತು 68 ಅತಿಥಿಗಳು ಆನ್ಲೈನ್ ಇರುವರು.


ಕಲ್ಪನೆ ಮತ್ತು ಕನಸುಗಳು ಬರಿಯ ತಿಳುವಳಿಕೆಗಿಂತ ಹೆಚ್ಚಿನ ಪ್ರಾಮುಖ್ಯತೆಯನ್ನು ಹೊಂದಿವೆ.

- ಆಲ್ಬರ್ಟ್ ಐನ್‍ಸ್ಟೈನ್

ಮತ್ತಷ್ಟು: ಆರೋಗ್ಯ ಸಂಪದ | ಕೃಷಿ ಸಂಪದ | ನುಡಿಮುತ್ತುಗಳು

ಯೋಜನೆಗಳು: Kannada Learning Center | ಗ್ನು/ಲಿನಕ್ಸ್ ನಲ್ಲಿ ಕನ್ನಡ ತರಲು ನಡೆದಿರುವ ಕೆಲವು ಯೋಜನೆಗಳು | ಡಾಕ್ಯುಮೆಂಟೇಶನ್ Wiki | ಸಂಪದ ಅಂಚೆಪೆಟ್ಟಿಗೆಗಳು (Sampada Mailing Lists)

ಸ್ವರ್ಣ ಸಂಪದ ಸಂಪದ ಪಾಡ್ಕ್ಯಾಸ್ಟ್ (ಶ್ರಾವ್ಯ ಸಂದರ್ಶನಗಳು) | "ದಿ ಬೆಸ್ಟ್ ಆಫ್ ಸಂಪದ" | ಪ್ಲಾನೆಟ್ ಕನ್ನಡ

ಡೌನ್ಲೋಡ್ ಮಾಡಿಕೊಳ್ಳಿ:‌ ಬರಹ IME | ಫೈರ್ ಫಾಕ್ಸ್ | ಒಪೇರಾ

ಕೆಲವು ಹಕ್ಕುಗಳನ್ನು ಕಾಯ್ದಿರಿಸಲಾಗಿದೆ. ಸಂಪದ ಸಮುದಾಯ ಸಂಪದ ಫೌಂಡೇಶನ್ನಿನ ಒಂದು ಯೋಜನೆ.
Some rights reserved Sampada Initiative by Sampada Foundation, 2005 - 2008.
Terms of Use | Contact | About Sampada | Sampada in News/Media

The views expressed here are of the respective author(s) and Sampada administration does not necessarily subscribe to them.
RSS: All posts | Comments
Blogs | Podcasts

separator