ಸಂಪದದಲ್ಲಿ ಹೊಸತು! | Sign up | Login | Font Help
ಸಂಪದ
  • ಲೇಖನಗಳು
  • ಬ್ಲಾಗ್ಸ್
  • ಚರ್ಚೆಯ ವೇದಿಕೆ
  • ಚಿತ್ರಪುಟಗಳು
  • Podcasts
  • ಪುಸ್ತಕಗಳು
  • ಆರ್ಕೈವ್
  • ಸಂಪರ್ಕಿಸಿ
  • Support Sampada
  • ಅಂಚೆ ಪೆಟ್ಟಿಗೆ
  • Font Help

ಹೊಸತು: ಹರಿದಾಸ ಸಂಪದ ಸಂಪುಟ

ಸಂಪದ › Sampada Blogs › uniquesupri ರವರ ಬ್ಲಾಗ್

ಹಾಗೆ ಬೆಳೆಯಿತು ಬರವಣಿಗೆಯೆಡೆಗಿನ ಪ್ಯಾಶನ್!

April 25, 2008 - 1:40am — uniquesupri

ಮೂಲ ಲೇಖನ ಇಲ್ಲಿ ಪ್ರಕಟವಾಗಿತ್ತು...
.............
ಪ್ರೈಮರಿ ಸ್ಕೂಲಿನಲ್ಲಿದ್ದಾಗ ನಮ್ಮ ಕನ್ನಡ ಮೇಷ್ಟ್ರ ಒತ್ತಾಯಕ್ಕಾಗಿ ಒಂದೆರಡು
ಪ್ರಬಂಧಗಳನ್ನು, ಪ್ರಾಸಕ್ಕೆ ಜೋತುಬಿದ್ದ ನಾಲ್ಕೈದು ಕವನಗಳನ್ನು ಬರೆದಿದ್ದೆ.
ತರಗತಿಯಲ್ಲಿದ್ದ ನಮ್ಮೆಲ್ಲರಿಗೂ ಅವರು ಹೋಂ ವರ್ಕ್ ಎಂಬಂತೆ ಒಂದೊಂದು ವಿಷಯ ಕೊಟ್ಟು
ಪ್ರಬಂಧ ಬರೆದು ತರಲು ಹೇಳುತ್ತಿದ್ದರು. ಕೆಲವರಿಗೆ ಚಿತ್ರಗಳನ್ನು ಬರೆದುಕೊಡಲು
ಹೇಳುತ್ತಿದ್ದರು. ಅವುಗಳಲ್ಲಿ ಆಯ್ದು ಕೆಲವನ್ನು ಅವರು ಸ್ಥಳೀಯ ಪತ್ರಿಕೆಯೊಂದರ ಮಕ್ಕಳ
ಪುಟಕ್ಕೆ ಕಳುಹಿಸಿಕೊಡುತ್ತಿದ್ದರು. ಹೋಂ ವರ್ಕ್ ಎಂದುಕೊಂಡು ಏನೇನನ್ನೋ ಗೀಚಿ
ಕೊಟ್ಟಿರುತ್ತಿದ್ದ ನನಗೆ ಅದು ಪೇಪರಿನಲ್ಲಿ ಹಾಕುವುದಕ್ಕಾಗಿ ಎಂದು ಗೊತ್ತಾದಾಗ,
‘ಇನ್ನೂ ಚೆನ್ನಾಗಿ ಬರೆಯಬಹುದಿತ್ತಲ್ಲವಾ’ ಎಂದು ಕೈ ಕೈ
ಹಿಸುಕಿಕೊಳ್ಳುವಂತಾಗುತ್ತಿತ್ತು.

ಅದಾದ ನಂತರ ಬರವಣಿಗೆಯ ಅಭ್ಯಾಸ ತಪ್ಪಿ ಹೋಗಿತ್ತು. ಬರವಣಿಗೆ, ಕತೆ, ಕವನ
ಎಂಬುವೆಲ್ಲಾ ಅಪರಿಚಿತ ಪದಗಳಾಗಿದ್ದವು. ಆಗ ನನಗೆ ಪರಿಚಯವಾದದ್ದೇ ‘ಹಾಯ್ ಬೆಂಗಳೂರ್!’.
ನನ್ನ ಸಂಬಂಧಿಕರೊಬ್ಬರ ಮನೆಯಲ್ಲಿ ಈ ವಾರಪತ್ರಿಕೆಯನ್ನು ರೆಗ್ಯುಲರ್ ಆಗಿ
ತರಿಸುತ್ತಿದ್ದರು. ನಾನು ಆಗಾಗ ಅವರ ಮನೆಗೆ ಹೋದಾಗ ಅಲ್ಲಿರುತ್ತಿದ್ದ ದಿಕ್ಸೂಚಿ,
ತರಂಗಗಳನ್ನು ತಿರುವಿ ಹಾಕಿದ ನಂತರ ಕಪ್ಪು-ಕಪ್ಪು ಬಣ್ಣದ, ವಿಚಿತ್ರ ಆಕಾರದ ಈ
ಪತ್ರಿಕೆಯನ್ನು ಕುತೂಹಲಕ್ಕಾಗಿ ತೆಗೆದು ನೋಡುತ್ತಿದ್ದೆ. ಒಳಪುಟಗಳಲ್ಲಿ, ಕೆಲವೊಮ್ಮೆ
ಮುಖಪುಟದಲ್ಲೇ ಇರುತ್ತಿದ್ದ ಮುಜುಗರ ಪಡುವಂತಹ ಫೋಟೊಗಳು, ಕೊಲೆ, ರಕ್ತಪಾತದ
ಫೋಟೊಗಳನ್ನು ನೋಡಿ ಕೊಳೆತ ಬಾಳೆಗಣ್ಣಿನ ಬುಟ್ಟಿಗೆ ಕೈ ಹಾಕಿದವನಂತೆ
ಅಸಹ್ಯಪಟ್ಟುಕೊಳ್ಳುತ್ತಿದ್ದೆ.

ಹೀಗೆ ಒಮ್ಮೆ ಒಂದು ಬೀಡಾ ಅಂಗಡಿಯ ಎದುರು ನಿಂತಿದ್ದಾಗ ಅಂಗಡಿಯಲ್ಲಿ ನೇತುಹಾಕಿದ್ದ
ಹಲವಾರು ಪತ್ರಿಕೆಗಳ ಮಧ್ಯೆ ‘ಹಾಯ್ ಬೆಂಗಳೂರ್!’ ಕಂಡಿತು. ಮುಖಪುಟದಲ್ಲಿ ಅದರ ಸಂಪಾದಕ
ಅದೆಲ್ಲೋ ಅಫಘಾನಿಸ್ತಾನಕ್ಕೆ ಹೋಗಿದ್ದಾನೆ… ಅಲ್ಲಿಂದ ಬಂದ ವರದಿಗಳಿವೆ… ಎಂಬ
ಹೆಡ್ಡಿಂಗುಗಳನ್ನು ಓದಿ ಕುತೂಹಲ ಕೆರಳಿತ್ತು. ಆ ವಾರ ನನ್ನ ಸಂಬಂಧಿಕರ ಮನೆಗೆ ಹೋದಾಗ
ಮರೆಯದೆ ‘ಹಾಯ್’ನ್ನು ಹುಡುಕಿ ಓದತೊಡಗಿದೆ. ಆಗ ನಾನು ಆಶ್ಚರ್ಯದಿಂದ, ಬೆರಗಿನಿಂದ ಕಂಡ
ಹೆಸರೇ ರವಿ ಬೆಳಗೆರೆ!

ಆ ಕ್ಷಣದಿಂದ ನನ್ನ ಜೊತೆಯಾದ ಆತನ ವಿಲಕ್ಷಣ ಆಸಕ್ತಿಗಳು, ತಿಕ್ಕಲು ಸಾಹಸಗಳು,
ಆತ್ಮೀಯವಾದ ಬರವಣಿಗೆ ಇಂದಿಗೂ ನನ್ನೊಂದಿಗಿವೆ ನನ್ನನ್ನು ಬೆಳೆಸುತ್ತಿವೆ. ಬರವಣಿಗೆಯ
ಬಗ್ಗೆ ಒಂದು ಪ್ಯಾಶನ್ ಎಂಬುದು ಹುಟ್ಟಿದ್ದೇ ‘ಹಾಯ್ ಬೆಂಗಳೂರ್!’ ಓದಲು
ಪ್ರಾರಂಭಿಸಿದಂದಿನಿಂದ. ಒಂದು ಪತ್ರಿಕೆಯ ಸಂಪಾದಕನಿಗೆ ಇರುವ ಗ್ಲಾಮರ್‌ನ್ನು ಕಂಡು
ಮೊದಮೊದಲು ಮುದಗೊಳ್ಳುತ್ತಿದ್ದೆ. ಬಹುಶಃ ಆ ಗ್ಲಾಮರೇ ನನ್ನನ್ನು ಬರವಣಿಗೆಗೆ ಸೆಳೆಯಿತು
ಅನ್ನಿಸುತ್ತದೆ. ಒಂದು action ಸಿನೆಮಾ ನೋಡಿದ ನಂತರ ನಮ್ಮಲ್ಲೊಂದು ಹುರುಪು, ಒಂದು
ಬಗೆಯ ಹಿರೋಯಿಸಂ ಹುಟ್ಟಿಕೊಳ್ಳುತ್ತದಲ್ಲಾ ಅಂಥದ್ದೇ ಭಾವೋದ್ವೇಗ ‘ಹಾಯ್’ನಲ್ಲಿನ ರವಿ
ಬೆಳಗೆರೆಯ ಬರಹಗಳನ್ನು ಓದುವಾಗ ಹುಟ್ಟಿಕೊಳ್ಳುತ್ತಿದ್ದವು.

ಅದೇ ಸಮಯಕ್ಕೆ ಸರಿಯಾಗಿ ದಾವಣಗೆರೆಯ ಹರಪ್ಪನಹಳ್ಳಿಯ ಬಳಿ ನಕಲಿ ಚಿನ್ನದ ಜಾಲದ
ಬೆನ್ನುಹತ್ತಿ ಕೊರಚರ ಹಟ್ಟಿಯ ಡಕಾಯಿತನೊಬ್ಬನ ಕಾಲಿಗೆ ಗುಂಡು ಹೊಡೆದು, ಮಾಧ್ಯಮಗಳಲ್ಲಿ
ರಾಕ್ಷಸನಂತೆ ಬಿಂಬಿತವಾಗಿ, ತನ್ನ ಪತ್ರಿಕೆಯಲ್ಲಿ ‘ನಾನೇ ಡಕಾಯಿತನ ಕಾಲಿಗೆ ಗುಂಡು
ಹೊಡೆದದ್ದು’ ಎಂದು ಬರೆದುಕೊಂಡು ಸರಕಾರದ ವಿರುದ್ಧ ಕೇಸನ್ನು ಗೆದ್ದದ್ದು ಎಲ್ಲವನ್ನೂ
ಕಂಡವನಿಗೆ ಬೆಳಗೆರೆ ಮೇಲಿನ ಅಭಿಮಾನ ಹೆಚ್ಚಿತ್ತು. ‘ದಿನಕ್ಕೆ ಹದಿನೆಂಟು ತಾಸು ಓದು
ಬರೆದು ಮಾಡುತ್ತೇನೆ’, ‘ನಾಲ್ಕು ದಿನ ನಾಲ್ಕು ರಾತ್ರಿ ಕುಳಿತು ಒಂದು ಪುಸ್ತಕ ಬರೆದು
ಮುಗಿಸಿದೆ’ ಎಂಬಂಥ ಅವರ ಕೆಲಸದ ಬಗೆಗಿನ ಅವರದೇ ಮಾತುಗಳನ್ನು ಕೇಳಿ
ರೋಮಾಂಚಿತನಾಗುತ್ತಿದ್ದೆ. ಎಂಥವರಿಗಾದರೂ ಅಂಥ ಮಾತುಗಳು ಒಂದೆರಡು ಕ್ಷಣ ಆಸಕ್ತಿಯನ್ನು
ಕೆರಳಿಸಿಬಿಡುತ್ತವೆ. ಪತ್ರಿಕೋದ್ಯಮದ ಬಗ್ಗೆ, ಬರವಣಿಗೆಯ ಬಗ್ಗೆ ‘ಹಾಯ್’ನಲ್ಲಿ ರವಿ
ಬರೆಯುತ್ತಿದ್ದ ಸಂಗತಿಗಳನ್ನು ಓದಿಕೊಂಡು ನಾನೂ ಬರವಣಿಗೆಗೆ ಕೈ ಹಾಕಿದ್ದೆ. ನಾನಾಗ
ನಿಯಮಿತವಾಗಿ ಓದುತ್ತಿದ್ದದ್ದು ‘ಹಾಯ್ ಬೆಂಗಳೂರ್!’ ಒಂದನ್ನೇ ಆದ್ದರಿಂದ
ಸ್ವಾಭಾವಿಕವಾಗಿ ನನ್ನ ಬರವಣಿಗೆಯ ಶೈಲಿ, ಚಿಂತನೆಯ ಜಾಡು, ವಿಷಯಗಳ ಆಸಕ್ತಿಯ ಮೇಲೆ ರವಿ
ಬೆಳಗೆರೆಯ ಛಾಯೆ ಎದ್ದು ಕಾಣುತ್ತಿತ್ತು. ‘ಹಾಯ್…’ ಎಂಬ ಟ್ಯಾಬ್ಲಾಯ್ಡ್‌‌ನ ಭಾಷೆಯಲ್ಲಿ
ನಾನು ಬರೆಯುತ್ತಿದ್ದ ಕೆಲವು ಲೇಖನಗಳು ನಮ್ಮ ಶಾಲೆಯ ಗೋಡೆ ಪತ್ರಿಕೆಯಲ್ಲಿ ಬೆಳಕು ಕಂಡು
ಹಲವರನ್ನು ಬೆರಗುಗೊಳಿಸುತ್ತಿದ್ದವು. ಆಗಲೇ ಹುಟ್ಟಿದ್ದು ನಾನೂ ಒಂದು ಪತ್ರಿಕೆಯನ್ನೇಕೆ
ಮಾಡಬಾರದು ಎಂಬ ಐಡಿಯಾ!

ನನ್ನ ಬರವಣಿಗೆಯ ಹಾದಿಯಲ್ಲಿನ ಇಷ್ಟು ಕಾಲದಲ್ಲಿ ನಾನು ಪ್ರಜ್ಞಾಪೂರ್ವಕವಾಗಿ
ರವಿಬೆಳಗೆರೆ ಎಂಬ ಶಕ್ತಿಯ ಅನುಕರಣೆ ಮಾಡುವ ಪ್ರಯತ್ನ ಮಾಡಿದ್ದೇನೆ. ಅನಂತರ ಆ
ಅನುಕರಣೆಗಾಗಿ guilt ಅನುಭವಿಸಿದ್ದೇನೆ. ನಾನು ಯಾರ ಅನುಕರಣೆಯೂ ಮಾಡುತ್ತಿಲ್ಲ ಎಂದು
ಸಾಧಿಸುವ ವ್ಯರ್ಥ ಪ್ರಯತ್ನವನ್ನೂ ಮಾಡಿದ್ದೇನೆ. ಈಗೀಗ ಪ್ರಜ್ಞಾಪೂರ್ವಕವಾಗಿ ಎಲ್ಲಾ
ಬಗೆಯ ಅನುಕರಣೆಗಳ ಪ್ರಭಾವವನ್ನು ಮೀರಿನಿಲ್ಲುವ ಪ್ರಯತ್ನ ಮಾಡುತ್ತಿದ್ದೇನೆ. ಆದರೂ
ತುಂಬಾ ಚಿಕ್ಕಂದಿನಲ್ಲೇ ಬರವಣಿಗೆಯೆಡೆಗೆ, ಓದಿನೆಡೆಗೆ ನನ್ನಲ್ಲಿ ಅದಮ್ಯವಾದ ಪ್ಯಾಶನ್
ಹುಟ್ಟಿಸಿದ ಆ ಲೇಖಕನಿಗೊಂದು ಶುಕ್ರಿಯಾ!

  • influence
  • ravi belagere
  • tabloid journalism
  • ಪ್ರಭಾವಗಳು
  • ಬರವಣಿಗೆ
  • ಬರವವಣಿಗೆ
  • ರವಿ ಬೆಳಗೆರೆ
  • ಹಾಯ್ ಬೆಂಗಳೂರ್
~.~
  • uniquesupri ರವರ ಬ್ಲಾಗ್
  • Login or register to post comments
  • 565 hits
  • ಈ ಪುಟವನ್ನು ಇ-ಮೇಯ್ಲ್ ಮಾಡಿ
  • Delicious
  • Google
  • Yahoo

ಪ್ರತಿಕ್ರಿಯೆಗಳು

ಕಾಮೆಂಟ್ ನೋಟ ಆಯ್ಕೆಗಳು

Select your preferred way to display the comments and click "Save settings" to activate your changes.
April 25, 2008 - 12:52pm — gururajkodkani

ಉ: ಹಾಗೆ ಬೆಳೆಯಿತು ಬರವಣಿಗೆಯೆಡೆಗಿನ ಪ್ಯಾಶನ್!

gururajkodkani's picture

ಗುಱುಱಾಜ
www.kannadaguru.blogspot.com

"ನನ್ನ ಬರವಣಿಗೆಯ ಹಾದಿಯಲ್ಲಿನ ಇಷ್ಟು ಕಾಲದಲ್ಲಿ ನಾನು ಪ್ರಜ್ಞಾಪೂರ್ವಕವಾಗಿ
ರವಿಬೆಳಗೆರೆ ಎಂಬ ಶಕ್ತಿಯ ಅನುಕರಣೆ ಮಾಡುವ ಪ್ರಯತ್ನ ಮಾಡಿದ್ದೇನೆ. ಅನಂತರ ಆ
ಅನುಕರಣೆಗಾಗಿ guilt ಅನುಭವಿಸಿದ್ದೇನೆ. ನಾನು ಯಾರ ಅನುಕರಣೆಯೂ ಮಾಡುತ್ತಿಲ್ಲ ಎಂದು
ಸಾಧಿಸುವ ವ್ಯರ್ಥ ಪ್ರಯತ್ನವನ್ನೂ ಮಾಡಿದ್ದೇನೆ"

ಏನೇ ವಾದಮಾಡಿದರೂ ಶೈಲಿ ಮಾತ್ರಾ ರವಿಯದೇ.ಸ್ವಲ್ಪ ವ್ಯತ್ಯಾಸವೆ೦ದರೇ ಅತೀಯಾದ ಇ೦ಗ್ಲೀಷ ಶಬ್ದಗಳು ನಿಮ್ಮ ಲೇಖನಗಳಲ್ಲಿ ತಲೆ ಹಾಕುವುದಿಲ್ಲ.

  • Login or register to post comments
  • link
  • ಈ ಪುಟವನ್ನು ಇ-ಮೇಯ್ಲ್ ಮಾಡಿ
April 26, 2008 - 11:55pm — uniquesupri

ಉ: ಹಾಗೆ ಬೆಳೆಯಿತು ಬರವಣಿಗೆಯೆಡೆಗಿನ ಪ್ಯಾಶನ್!

uniquesupri's picture

ನಿಮ್ಮ ಪ್ರತಿಕ್ರಿಯೆಗೆ ಧನ್ಯವಾದಗಳು.
ನಾನೆಲ್ಲೂ ನನ್ನ ಶೈಲಿ ಸ್ವಂತದ್ದು ಎಂದು ವಾದಿಸುವ ಪ್ರಯತ್ನ ಮಾಡಿಲ್ಲ. ಪ್ರಭಾವಗಳಿಂದ ಬಿಡಿಸಿಕೊಳ್ಳುವ ಪ್ರಯತ್ನ ಮಾಡುತ್ತಿದ್ದೇನೆ ಎಂದಷ್ಟೇ ಹೇಳಿರುವುದು. ನಿಮ್ಮ ಕಾಳಜಿಗೆ ನಾನು ಕೃತಜ್ಞ...
_______________________
ಅಸಾಮಾನ್ಯವಾದ ಕೆಲಸಗಳನ್ನು ನಾವು ಮಾಡೋಕಾಗಲ್ಲ. ನಾವೇನಿದ್ದರೂ ಸಾಮಾನ್ಯ ಕೆಲಸವನ್ನು ಅಸಾಮಾನ್ಯ ಪ್ರೀತಿಯಿಂದ ಮಾಡಬಹುದು.
http://uniquesupri.wordpress.com
http://kalaravapatrike.wordpress.com
http://ekshanadasatya.wordpress.com

  • Login or register to post comments
  • link
  • ಈ ಪುಟವನ್ನು ಇ-ಮೇಯ್ಲ್ ಮಾಡಿ

ಮೇಲಿನ ಪುಟವನ್ನು ಹೋಲುವ ಪುಟಗಳು - 'ಸಂಪದ' ಆರ್ಕೈವಿನಿಂದ

  • ಕವಿತೆ ಅರ್ಥವಾಗೋದಿಲ್ಲ ಬಿಡಿ!
  • ಹಾಗೆ ಅರ್ಧಕ್ಕೆ ನಿಂತ ಕಥೆಗಳ ಕುರಿತು...
  • ಕಾವೇರಿ ಸಮಸ್ಯೆ ಹಾಗೂ ಹಾಯ್ ಬೆಂಗಳೂರ್!
  • ಭಾಗ - ೫
  • ಶುದ್ಧ ಕನ್ನಡ?
Syndicate content

ಲೇಖಕರು

uniquesupri's picture

ಪೂರ್ಣ ಹೆಸರು
ಸುಪ್ರೀತ್.ಕೆ.ಎಸ್

ಪರಿಚಯ

I am a simple life loving person with a sensitive heart.

ನಾನು ಇಂಜಿನಿಯರಿಂಗ್ ಓದುತ್ತಿದ್ದೇನೆ. ನಾನು ಹಾಗೂ ನನ್ನ ಗೆಳೆಯರು ಸೇರಿ ಒಂದು ಸಣ್ಣ ಪತ್ರಿಕೆಯೊಂದನ್ನು ಪ್ರತಿ ತಿಂಗಳು ಹೊರಡಿಸುತ್ತಿದ್ದೇವೆ. ಅದರ ಬ್ಲಾಗು ಇಲ್ಲಿದೆ:http://kalaravapatrike.wordpress.com/
ನನ್ನ ಬ್ಲಾಗು:
http://uniquesupri.wordpress.com/

ಸದಸ್ಯರ ಪೂರ್ಣ ಪ್ರೊಫೈಲ್ ವೀಕ್ಷಿಸಿ

ವಾಟರ್ ಪೋರ್ಟಲ್: ದಿನದ ಚಿತ್ರ

ರಾಜಸ್ಥಾನದಲ್ಲಿ ಕೆರೆಯೊಂದರ ನವನಿರ್ಮಾಣ

(ಫೋಟೋ : Farhad Contractor)

ವಾರದ ಲೇಖನ
ನಿಟ್ಟೆಯಲ್ಲಿ ನೀರಿಂಗಿಸಿ ನೀರಿನ ಬರಕ್ಕೆ ವಿದಾಯ

ವಾರದ ವೀಡಿಯೋ
ಬಾನಿಗೊಂದು ಆಲಿಕೆ (ಮಳೆನೀರು ಸಂಗ್ರಹ)

ವಿಹರಿಸಿ

  • ಹೊಸ ಬರಹ/ಚಿತ್ರ ಸೇರಿಸಿ
  • 'ಸಂಪದ' ಕುರಿತು ನಿಮ್ಮ ಸಲಹೆ/ಅಭಿಪ್ರಾಯಗಳನ್ನು ಕಳುಹಿಸಿ
  • Mailing Lists
  • ಚಟುವಟಿಕೆ
  • ಕನ್ನಡ ಬಟನ್ನುಗಳು
  • ಕನ್ವರ್ಟರ್

ಇತ್ತೀಚಿನ ಬ್ಲಾಗ್ ಬರಹಗಳು

  • ಹೃದಯದ ಭಾವ
  • ಕನಸ್ಸು
  • ರಂಗಿನ ಚಿಟ್ಟೆ
  • ಚಿರನಿದ್ರೆ
  • ಜಗನ್ನಾಥನ ತಬ್ಬಲಿ ಮಕ್ಕಳು
  • ಕನಸಿನ ಕನ್ಯ
  • ’ಹಾಸ್ಯದರಸ’
  • ಸಪ್ತಸ್ವರ-೨, ಮಕ್ಕಳ ಸಂಗೀತ ಗಾನ
  • ಹೊಗೆಯಾಗುಳಿದಿರುವ ನೆನಪುಗಳು
  • ಕವಿತೆಗೆ ಹೆಸರು ಕೊಡಿ
ಇನ್ನಷ್ಟು

ಇತ್ತೀಚಿನ ಪ್ರತಿಕ್ರಿಯೆಗಳು

  • ಗಣೇಶ
    ಉ: ಹೆಂಡತಿ-ಎಂದರೆ ಜೋಕು ಯಾಕೆ ?
    July 6, 2008 - 12:15am
  • ಚೈತನ್ಯ ಎಸ್
    ಉ: ಅಮರನಾಥದ ಬಗ್ಗೆ ನಿರ್ಥರಿಸಲು ಇವರು ಯಾರು?
    July 5, 2008 - 11:03pm
  • ಚೈತನ್ಯ ಎಸ್
    ಉ: ಅಮರನಾಥದ ಬಗ್ಗೆ ನಿರ್ಥರಿಸಲು ಇವರು ಯಾರು?
    July 5, 2008 - 10:35pm
  • rameshbalaganchi
    ಉ: ಅಸ್ತಿ ಕಶ್ಚಿತ್ ವಾಗ್ವಿಶೇಷಃ? ಅಥವಾ, ಹೆಂಡತಿಯೊಬ್ಬಳು ಮನೆಯೊಳಗಿದ್ದರೆ ....
    July 5, 2008 - 10:32pm
  • ಚೈತನ್ಯ ಎಸ್
    ಉ: ಅಮರನಾಥದ ಬಗ್ಗೆ ನಿರ್ಥರಿಸಲು ಇವರು ಯಾರು?
    July 5, 2008 - 10:28pm
  • rameshbalaganchi
    ಉ: ಅಸ್ತಿ ಕಶ್ಚಿತ್ ವಾಗ್ವಿಶೇಷಃ? ಅಥವಾ, ಹೆಂಡತಿಯೊಬ್ಬಳು ಮನೆಯೊಳಗಿದ್ದರೆ ....
    July 5, 2008 - 10:25pm
  • rameshbalaganchi
    ಉ: ನಾವೂ ಓಪನ್ ಆಫೀಸ್ ಉಪಯೋಗಿಸೋಣ. ನೀವೇನಂತೀರಾ?
    July 5, 2008 - 10:12pm
  • benaka
    ಉ: ಅಸ್ತಿ ಕಶ್ಚಿತ್ ವಾಗ್ವಿಶೇಷಃ? ಅಥವಾ, ಹೆಂಡತಿಯೊಬ್ಬಳು ಮನೆಯೊಳಗಿದ್ದರೆ ....
    July 5, 2008 - 10:02pm
  • kishorpatwardhan
    ಉ: ನಾವೂ ಓಪನ್ ಆಫೀಸ್ ಉಪಯೋಗಿಸೋಣ. ನೀವೇನಂತೀರಾ?
    July 5, 2008 - 9:20pm
  • kalpana
    ಉ: ಗಂಡ-ಹೆಂಡಿರು ಮತ್ತು ಪುರಂದರ ದಾಸರು
    July 5, 2008 - 9:15pm
ಇನ್ನಷ್ಟು
ಈಗಿನಂತೆ 0 ಸದಸ್ಯರು ಮತ್ತು 13 ಅತಿಥಿಗಳು ಆನ್ಲೈನ್ ಇರುವರು.


ಋತುಚಕ್ರ ತಿರುಗುವುದು, ಕಾಲನೆದೆ ಮರುಗುವುದು ।
ಮೃತನ ಮಣ್ಣಿಂದ ಹೊಸ ಹುಲ್ಲು ಮೊಳೆಯುವುದು ।।
ಕ್ಷಿತಿ ಗರ್ಭಧರಿಸುವಳು ಮತ್ತುದಿಸುವುದು ಜೀವ ।
ಸತತ ಕೃಷಿಯೋ ಪ್ರಕೃತಿ -- ಮಂಕುತಿಮ್ಮ ।

— ಡಿ.ವಿ.ಜಿ

ಮತ್ತಷ್ಟು: ಆರೋಗ್ಯ ಸಂಪದ | ಕೃಷಿ ಸಂಪದ | ನುಡಿಮುತ್ತುಗಳು

ಯೋಜನೆಗಳು: Kannada Learning Center | ಗ್ನು/ಲಿನಕ್ಸ್ ನಲ್ಲಿ ಕನ್ನಡ ತರಲು ನಡೆದಿರುವ ಕೆಲವು ಯೋಜನೆಗಳು | ಡಾಕ್ಯುಮೆಂಟೇಶನ್ Wiki | ಸಂಪದ ಅಂಚೆಪೆಟ್ಟಿಗೆಗಳು (Sampada Mailing Lists)

ಸ್ವರ್ಣ ಸಂಪದ ಸಂಪದ ಪಾಡ್ಕ್ಯಾಸ್ಟ್ (ಶ್ರಾವ್ಯ ಸಂದರ್ಶನಗಳು) | "ದಿ ಬೆಸ್ಟ್ ಆಫ್ ಸಂಪದ" | ಪ್ಲಾನೆಟ್ ಕನ್ನಡ

ಡೌನ್ಲೋಡ್ ಮಾಡಿಕೊಳ್ಳಿ:‌ ಬರಹ IME | ಫೈರ್ ಫಾಕ್ಸ್ | ಒಪೇರಾ

ಕೆಲವು ಹಕ್ಕುಗಳನ್ನು ಕಾಯ್ದಿರಿಸಲಾಗಿದೆ. ಸಂಪದ ಸಮುದಾಯ ಸಂಪದ ಫೌಂಡೇಶನ್ನಿನ ಒಂದು ಯೋಜನೆ.
Some rights reserved Sampada Initiative by Sampada Foundation, 2005 - 2008.
Terms of Use | Contact | About Sampada | Sampada in News/Media

The views expressed here are of the respective author(s) and Sampada administration does not necessarily subscribe to them.
RSS: All posts | Comments
Blogs | Podcasts

separator