Sign up | Login
ಸಂಪದ
  • ಲೇಖನಗಳು
  • ಬ್ಲಾಗ್ಸ್
  • ಚರ್ಚೆಯ ವೇದಿಕೆ
  • ಚಿತ್ರಪುಟಗಳು
  • Podcasts
  • ಪುಸ್ತಕಗಳು
  • ಆರ್ಕೈವ್
  • ಸಂಪರ್ಕಿಸಿ
  • Support Sampada
  • ಅಂಚೆ ಪೆಟ್ಟಿಗೆ
  • Font Help

Internet Explorer ಬಳಸುತ್ತಿರುವ ಸಂಪದ ಓದುಗರ ಗಮನಕ್ಕೆ

ಸಂಪದ › Sampada Blogs › vinayaka ರವರ ಬ್ಲಾಗ್

ಅಕ್ಷರವಿಹಾರ

ಮಲೆನಾಡ ಮಡಿಲಿನಿಂದ ಹೊರಟ ವಾಕಿಂಗು...

ಮೂಲಾನಕ್ಷತ್ರದ ಅನಿಷ್ಟದವಳೇ....

April 3, 2008 - 6:18pm — vinayaka

ಹಾಯ್ ಪುಟ್ಟಿ
"ಏನೇ ನಮ್ಮ ಅಪ್ಪಾ, ಅಮ್ಮನ್ನೇ ಗಯ್ಯಾಳಿ ಮನೆತನದವರು ಅಂತೀಯಾ? ನಿಂಗೆ ಕೊಬ್ಬು ತುಂಬಾ ಹೆಚ್ಚಾಗಿದೆ. ನೀನು ಏನು ಹೇಳಿದರೂ ನಾನು ತಿರುಗಿ ಮಾತಾಡಲ್ಲ ಅನ್ನೋ ಭಾವ ನಿನ್ನಲ್ಲಿ ಮೂಡಿದೆ. ನೋಡು ಇದು ನಿಂಗೆ ಲಾಸ್ಟ್ ವಾರ್ನಿಂಗ್. ಇನ್ನೊಂದು ಸಲ ಈ ರೀತಿ ಕಿರಿಕ್ ಮಾಡಿದ್ಯಾ ಅವಳು ಸರಿಯಿಲ್ಲ ಅಂತಾ ನಿಮ್ಮೂರಿಗೆಲ್ಲಾ ಹಬ್ಬಿಸುತ್ತೇನೆ. ನನ್ನಂತಹ ಪಾಪದ ಹುಡುಗನ ಜೊತೆಯೇ ಜಗಳ ಕಾಯೋ ಜಗಳಗಂಟಿ ಅಂತಾ ನಿಮ್ಮುರಿನ ಬಾಯಿಬಡುಕ ಹೆಂಗಸರಿದ್ದಾರಲ್ಲ, ಅದೇ ಸೀತಮ್ಮ, ಮೀನಾಕ್ಷಮ್ಮ...ಅವರ ಹತ್ರಾ ಹೇಳ್ತೀನಿ. ಆಮೇಲೆ ನಿನ್ನ ಮದ್ವೆಯಾಗಕೆ ಯಾರು ಬರಲ್ಲ. ಆಮೇಲೆ ಸಾಯೋವರೆಗೂ ನಿಮ್ಮಪ್ಪನ ಮನೇಲಿ ಮುಸುರೆ ತಿಕ್ಕಿಕೊಂಡು ಬಿದ್ದಿರಬೇಕು ನೀನು. ಆತರಹ ಮಾಡ್ತೀನಿ ನೋಡು" ಅಂತೆಲ್ಲಾ ಚೆನ್ನಾಗಿ ಬೈಯಬೇಕು ಅನ್ನೋವಷ್ಟು ಕೋಪ ಬಂದಿತ್ತು ನಿನ್ನ ಮೇಲೆ ನೀನು ಬರೆದ ಕಾಗದ ತೆರೆದು ನೋಡಿದಾಗ.
ತಕ್ಷಣ ನಿಮ್ಮಪ್ಪ ನಿಂಗೆ ಮೂಲಾನಕ್ಷತ್ರದ ಅನಿಷ್ಟ ಅಂತಾ ಬೈಯ್ಯುತ್ತಿದ್ದದ್ದು ನೆನಪಾಯಿತು. ಹಾಗಾಗಿ ನಾನು ಬೈಯಬೇಕು ಅಂದುಕೊಂಡಿದ್ದನ್ನೆಲ್ಲಾ ಕ್ಯಾನ್ಸ್‌ಲ್ ಮಾಡಿಬಿಟ್ಟೆ. ನಾನು ಬೈಯ್ಯೋದು, ಅದಕ್ಕೆ ನೀನು ಬೇಸರವಾಗೋದು ಕೊನೆಗೆ ನೀನು ತುಂಗಾ ನದಿಗೆ ಹೋಗಿ ಆತ್ಮಹತ್ಯೆ ಮಾಡಿಕೊಳ್ಳೋದು...ತುಂಗಾ ನದಿಗೆ ಹೋಗಿ ಹಾರ್ತಿಯಾ ಅಂದ್ರೆ ನಾನು ಬೈಯ್ಯಬೇಕು ಅಂದುಕೊಂಡಿದ್ದನ್ನೆಲ್ಲಾ ಖಂಡಿತವಾಗಿಯೂ ಬೈಯ್ಯುತ್ತಿದೆ. ಆದ್ರೆ ನಂಗೆ ಗೊತ್ತಿಲ್ವಾ ನೀನೆಷ್ಟು ಸೋಮಾರಿ ಅಂತಾ! ಸಾಯಲಿಕ್ಕೆ ತುಂಗಾ ನದಿವರೆಗೆ ನಡೆದುಕೊಂಡು ಹೋಗಬೇಕಾ? ನಮ್ಮ ಮನೆ ಹಿತ್ತಲಿನಲ್ಲಿರೋ ಬಾವಿ ಹಾರಿದರೆ ಆಗಲ್ವಾ ಅನ್ನೋ ಜಾತಿಯವಳು ನೀನು. ನೀನು ಬಾವಿಹಾರಿ ಸತ್ತರೆ ನಂಗೆ ಪ್ರಾಬ್ಲಂ! ಅಯ್ಯೋ ನಾನು ಜೀವನದಲ್ಲಿ ಉಳಿಸಿದ ಹಣಯೆಲ್ಲಾ ಖರ್ಚುಮಾಡಿ ಈ ಭಾವಿ ತೋಡಿಸಿದ್ದೆ ಈ ಮುಂಡೆಗೆ ಸಾಯಲಿಕ್ಕೆ ಈ ಭಾವಿನೇ ಬೇಕಿತ್ತಾ? ಅಂತಾ ನಿಮ್ಮಪ್ಪ ಜೋಯ್ಸ್ ಖಂಡಿತಾ ಕೂಗಾಡುತ್ತಾನೆ. ನಂಗೆ ಮುಸುರೆ ತಿಕ್ಕಿಕೊಡುತ್ತಿದ್ದವಳು, ನೀರೆತ್ತಿಕೊಡುತ್ತಿದ್ದವಳು ಸತ್ತೇ ಹೋದ್ಲಲ್ಲಾ..ನನ್ನ ಬಲಗೈ ಮುರಿದೇ ಹೋಯಿತಲ್ಲಾ ಅಂತಾ ನಿಮ್ಮಮ್ಮ ಕಿರುಚಾಡುತ್ತಾಳೆ. ನಿನ್ನ ಸಾವಿಗೆ ನಾನು ಬರೆದ ಪತ್ರವೇ ಕಾರಣ ಅಂತಾ ಊರವರಿಗೆಲ್ಲಾ ಹೇಳುತ್ತಾಳೆ. ಆಮೇಲೆ ಪೋಲಿಸ್‌ನವರು ಬಂದು ಸುಮ್ನೆ ನಂಗೆ ಕಿರಿಕಿರಿ ಮಾಡ್ತಾರೆ. ನೀನು ಬಾವಿ ಹಾರಿ ಸಾಯೋದು ಎಷ್ಟೆಲ್ಲಾ ನಷ್ಟ ಉಂಟುಮಾಡತ್ತೆ ಅಂತಾ ಆಲೋಚಿಸಿದ ಮೇಲೆ ನಾನು ಬೈಯ್ಯಬೇಕು ಅಂದುಕೊಂಡಿದ್ದನ್ನೆಲ್ಲಾ ಕ್ಯಾನ್ಸಲ್ ಮಾಡಿಬಿಟ್ಟೆ. ಈವಾಗ್ಲೂ ಕಾಲಮಿಂಚಿಲ್ಲ. ನೀನು ಬೈದರೆ ನಾನು ತುಂಗಾ ನದಿ ಹಾರಿಯೇ ಸಾಯುತ್ತೀನಿ ಅಂತಾ ಭರವಸೆ ಕೊಡು. ಖಂಡಿತಾ ನಾನು ನಿನಗೆ ಈ ಪತ್ರದ ಮೊದಲನೆ ಸಾಲುಗಳಲ್ಲಿ ಹೇಳಿದ ದಾಟಿಯಲ್ಲೇ ಬೈಯ್ಯುತ್ತೀನಿ!
ಮತ್ತೆ ಏನು ಕಾರುಬಾರು ಊರಲ್ಲಿ. ನಮ್ಮೂರಲ್ಲಿ ಕಾರು ಇಲ್ಲ, ಬಾರು ಇಲ್ಲ ಅಂತಿಯಾ ನೀನು ಅಂತಾ ನಂಗೆ ಗೊತ್ತು ಆದ್ರೂ ಸುಮ್ನೆ ಕೇಳಿದೆ. ಹೆದರಬೇಡ ನಾನು ಬಂದ ಮೇಲೆ ನಿಮ್ಮೂರಿಗೆ ಕಾರು ಅಥವಾ ಬಾರು ಎರಡರ ಒಳಗೆ ಯಾವುದಾದರೂ ಒಂದು ಎಂಟ್ರಿಕೊಡತ್ತೆ! ಬೆಂಗಳೂರೆಂಬ ಈ ಸಿಮೆಂಟು ಜಂಗಲ್ಲಿನ ಲೈಪು ತುಂಬಾ ಬೋರ್ ಆಗ್ತಾ ಇದೆ ಕಣೇ. ಜಗಳ ಆಡೋಣ ಅಂದ್ರು ಯಾರು ಸಿಗಲ್ಲ. ಅದೇ ಕೆಲಸವಿಲ್ಲದ ಹಾಳು ಆಫೀಸು, ಸೊಳ್ಳೆ ತುಂಬಿರುವ ರೂಂಮು ಇದೆ ನನ್ನ ಸದ್ಯದ ಪ್ರಪಂಚವಾಗಿಬಿಟ್ಟಿದೆ. ಆದ್ರೂ ದುಡಿಲೇಬೇಕು. ನನಗೋಸ್ಕರ ಅಲ್ಲದಿದ್ದರೂ ನಿನ್ನ ಕಟ್ಟಿಕೊಳ್ಳುತ್ತೀನಲ್ಲಾ ಅದಕ್ಕಾದರೂ ದುಡಿಯಬೇಕು! ಹೋಗ್ಲಿಬಿಡು ನನ್ನ ಕಷ್ಟ ನಿನ್ನ ಹತ್ತಿರ ಹೇಳಿ ನಿನಗ್ಯಾಕೆ ಸುಮ್ನೆ ಖುಷಿಯಾಗೋ ಹಾಗೆ ಮಾಡಲಿ. ಮತ್ತೆ ಸಮಾಚಾರ.
ಮಳೆ ಸಖತ್ತಾಗಿ ಹೊಯ್ಯುತ್ತಾ ಇದೆ ಅಂದೆ ಅಲ್ವಾ? ಛೇ ನಿಮ್ಮೂರಿನ ಮಳೆ ನೆನೆಸಿಕೊಂಡರೆ, ಮಳೆಯಲ್ಲಿ ನಾನು ನೀನು ನೆನೆಯೋದನ್ನಾ ನೆನಪಿಸಿಕೊಂಡರೆ ನಂಗೆ ತುಂಬಾ ಫೀಲ್ ಆಗತ್ತೆ ಕಣೇ. ಅಂದಹಾಗೆ ಬೆಂಗಳೂರಿನ ಮಳೆ ಕಥೆಯನ್ನಿನ್ನು ನಿಂಗೆ ಹೇಳಿಲ್ಲಾ ಅಲ್ವಾ? ಮುಂದಿನ ಪತ್ರದಲ್ಲಿ ಹೇಳ್ತೀನಿ. ಅಲ್ಲಿವರೆಗೂ ನೀನು ಬೆಂಗಳೂರು ಮಳೆ ಹೇಗಿರಬಹುದು ಅಂತಾ ಸುಮ್ನೆ ಆಲೋಚನೆ ಮಾಡ್ತಾ ಇರು. ಟಾಟಾ....ಬಾಬಾಯ್...
ಇಂತಿ ನಿನ್ನವ

  • ಕ್ರಿಯೇಟಿವ್ ಪೇಜ್
Ornamental seperator
  • vinayaka ರವರ ಬ್ಲಾಗ್
  • Login or register to post comments
  • 530 hits
  • Email this blog
  • Delicious
  • Google
  • Yahoo

ಪ್ರತಿಕ್ರಿಯೆಗಳು

ಕಾಮೆಂಟ್ ನೋಟ ಆಯ್ಕೆಗಳು

Select your preferred way to display the comments and click "Save settings" to activate your changes.
April 3, 2008 - 9:25pm — Sunil Jayaprakash

ಉ: ಮೂಲಾನಕ್ಷತ್ರದ ಅನಿಷ್ಟದವಳೇ....

Sunil Jayaprakash's picture

ವಾರೆ ವಾಹ್. ವಿನಾಯಕ ಅವರೇ, ಪತ್ರ ಅಂದರೆ ಹೀಗಿರಬೇಕು ಕಣ್ರೀ. ಮನಸ್ಸಿಗೆ ಮುದ ನೀಡುವ ಮಾತುಗಳು, ಕಚಗುಳಿಯಿಡುವ ಕನ್ನಡದ ಶಬ್ದಗಳು, ತುಂಬಿ ತುಳುಕಬೇಕು. ಆಗ ಭಾವನೆಗಳು ಅಡೆತಡೆಯಿಲ್ಲದೆ ತುಂಗೆಯಂತೆ ಹರಿಯುತ್ತದೆ. :ಚಪ್ಪಾಳೆ:, :ಶಿಳ್ಳೆ: :ಖುಷಿಗೆ ಮಿಕ್ಕು ಖುಷಿ:

ನನಗೆ ಈ "ಪತ್ರ ಬರೆಯಿರಿ" (ಮುಖ್ಯವಾಗಿ ನೆಂಟರಿಗೆ - ತಾಯಿ, ತಂದೆ, ಅಣ್ಣ, ತಮ್ಮ, ಗೆಳೆಯರು ಹೀಗೆ ಯಾರಿಗಾದರು ಹತ್ತಿರದವರಿಗೆ ) ಅನ್ನೋ ಅಭ್ಯಾಸ ಇರ್ತಾ ಇತ್ತಲ್ಲ. ಆಗೆಲ್ಲ ಅದ್ಯಕಾಪ್ಪಾ ಈ ರೀತಿ ಇಷ್ಟು ಫಾರಮಲ್ಲಾಗಿ ಬರೀಬೇಕು ಅನ್ನಿಸ್ತಾ ಇರ್ತಾ ಇತ್ತು. ಪತ್ರಗಳು ತುಂಬಾ ಫಾರಮಲ್ಲಾಗಿಬಿಟ್ಟರೆ ಭಾವನೆಗಳೇ ಬರಿದಾಗಿಬಿಡುತ್ತೆ ಅಂತ ನನಗೆ ಎಷ್ಟೋ ಸಲ ಅನಿಸ್ತಾ ಇತ್ತು.

ಉದಾ:-
೧. ತಂದೆಗೆ ಬರೆಯಬೇಕೆಂದಿದ್ದರೆ, ತೀರ್ಥರೂಪುರವರಿಗೆ, ತಾಯಿಗಾದರೆ ಮಾತೃಶ್ರೀಯವರಿಗೆ, ಅಣ್ಣನಿಗಾದರೆ, ತೀರ್ಥರೂಪು ಸಮಾನರಾದ.
೨. "ಇಲ್ಲಿ ನಾನು ಕ್ಷೇಮ. ಅಲ್ಲಿ --- ಆದಿಯಾಗಿ ಸಕಲರೂ ಕ್ಷೇಮದಿಂದ್ದೀರೆಂದು ಭಾವಿಸುತ್ತೇನೆ. ಪ್ರಸ್ತುತ ತಿಳಿಸುವುದೇನೆಂದರೆ -----".
೩. ಉಭಯಕುಶಲೋಪರಿ ಸಾಂಪ್ರತ Eye-wink

ಇದನ್ನು ನೆನಪಿಸಿಕೊಂಡರೆ ಸಿಕ್ಕಾಪಟ್ಟೆ ನಗು ಬರುತ್ತದೆ.

  • Login or register to post comments
  • link
  • Email this ಪ್ರತಿಕ್ರಿಯೆ
April 4, 2008 - 8:58am — vinayudupa

ಉ: ಮೂಲಾನಕ್ಷತ್ರದ ಅನಿಷ್ಟದವಳೇ....

vinayudupa's picture

ವಿನಾಯಕರೆ,

ಚೆನ್ನಾಗಿ ಬರೆದಿದ್ದೀರ. ನೀವ್ ಹೇಳ್ದಂಗೆ ಕಾಂಕ್ರೀಟ್ ಜಂಗಲ್ ಬೇಸರ ಬಂದವರು ಬಹಳ ಇದಾರೆ(ನಾನೂ ಒಬ್ಬ ಅಂತ ಹೇಳೋ ಅಗತ್ಯ ಇಲ್ಲ).

ಆದ್ರೆ ಪುಟ್ಟಿ ಮಾತ್ರ ಬರೀ ಕನಸು, ಕಲ್ಪನೇನೆ. Smiling

-- -- --
ಹೆಸರಾಯಿತು ಕರ್ನಾಟಕ, ಉಸಿರಾಗಲಿ ಕನ್ನಡ

  • Login or register to post comments
  • link
  • Email this ಪ್ರತಿಕ್ರಿಯೆ
April 4, 2008 - 10:30am — vinayaka

ಉ: ಮೂಲಾನಕ್ಷತ್ರದ ಅನಿಷ್ಟದವಳೇ....

vinayaka's picture

@ಸುನಿಲ್ ಪ್ರಕಾಶ್,
ನಿಮ್ಮ ಮೆಚ್ಚುಗೆಯ ಮಾತುಗಳಿಗೆ ಧನ್ಯವಾದಗಳು. ನಂಗೆ ಕಾಗದ ಬರೆಯೋದು ತುಂಬಾ ಇಷ್ಟ. ಆದ್ರೆ ಲವ್ ಲೇಟರ್ ಪ್ರಯೋಗ ಮಾಡೋದು ಬರಹದಲ್ಲಿ ಮಾತ್ರ! ಇವತ್ತು ಮೊಬೈಲ್ ಅನ್ನೋದು ಕಾಗದದ ಸಂಸ್ಖೃತಿಯನ್ನು ನುಂಗಿ ಹಾಕಿದೆ ಅನ್ನೋದು ಬೇಸರದ ಸಂಗತಿ. www.aksharavihaara.wordpress.com ಇದು ನನ್ನ ಬರಹದ ತಾಣ ಇಲ್ಲಿ ಮತ್ತಷ್ಟು ಪತ್ರಗಳಿವೆ ಒಮ್ಮೆ ಬೇಟಿ ಕೊಡಿ
@ವಿನಯ್
ನಿಮ್ಮ ಪ್ರೋತ್ಸಾಹಕ್ಕೆ ವಂದೇ
ಇಂತಿ
ವಿನಾಯಕ

  • Login or register to post comments
  • link
  • Email this ಪ್ರತಿಕ್ರಿಯೆ
April 25, 2008 - 4:40pm — devi

ಉ: ಮೂಲಾನಕ್ಷತ್ರದ ಅನಿಷ್ಟದವಳೇ....

devi's picture

mundenayto?

  • Login or register to post comments
  • link
  • Email this ಪ್ರತಿಕ್ರಿಯೆ

ಮೇಲಿನ ಪುಟವನ್ನು ಹೋಲುವ ಪುಟಗಳು - 'ಸಂಪದ' ಆರ್ಕೈವಿನಿಂದ

  • ನೀರಿಲ್ಲದ ನದಿಯೊಂದಕ್ಕೆ ಹಾರಲು ಹೋಗಿ......
  • ಜಾತಿ ಬಿಟ್ಟ ಜೋಕುಮಾರನೆ....
  • "ನಾನು-ನೀನು
  • ನೀನು ನಿನ್ನ.....
  • ಚರ್ಚೆ-ಸಂಧಾನ
Syndicate content

ಲೇಖಕರು

vinayaka's picture

ಪೂರ್ಣ ಹೆಸರು
vinayaka

ಪರಿಚಯ

ಹುಟ್ಟಿದ್ದು ಮಲೆನಾಡಿನಲ್ಲಿ, ಓದಿದ್ದೆಲ್ಲಾ ತುಳುನಾಡಿನಲ್ಲಿ. ಜೀತ ಮಾಡ್ತಾ ಇರೋದು ಬೆಂಗಳೂರೆಂಬ ಅಪ್ಪಟ ಕಾಂಕ್ರೀಟು ಜಂಗಲ್ಲಿನಲ್ಲಿ.

ಸದಸ್ಯರ ಪೂರ್ಣ ಪ್ರೊಫೈಲ್ ವೀಕ್ಷಿಸಿ

ನೀರಿನ ಜಾಡು ಹಿಡಿದು

Sharada Prasad

ವಿಹರಿಸಿ

  • ಹೊಸ ಬರಹ ಸೇರಿಸಿ - Publish your write-up on Sampada
  • 'ಸಂಪದ' ಕುರಿತು ನಿಮ್ಮ ಸಲಹೆ/ಅಭಿಪ್ರಾಯಗಳನ್ನು ಕಳುಹಿಸಿ
  • Mailing Lists
  • ಚಟುವಟಿಕೆ
  • ಕನ್ನಡ ಬಟನ್ನುಗಳು
  • ಕನ್ವರ್ಟರ್

ಇತ್ತೀಚಿನ ಬ್ಲಾಗ್ ಬರಹಗಳು

  • ಕೊಂಡಗೂಳಿ ಕೇಶಿರಾಜ ಮತ್ತು ಶಬ್ದಮಣಿದರ್ಪಣದ ಕೇಶಿರಾಜರು ಬೇರೆಬೇರೆ
  • ಲಿನಕ್ಸಾಯಣ - ೬- ಪ್ರೊಗ್ರಾಮ್ ಇನ್ಸ್ಟಾಲೇಶನ್
  • lifestyle exhibition ನಲ್ಲಿ ಲಿನಕ್ಸು !!!
  • ಕವಿರಾಜಮಾರ್ಗ ತಂದ ಹುರುಪು,ಕುಸಿ,ನಲಿವು...
  • ಕಾಲೇಜು ಜೀವನಕ್ಕೆ ಸಂಬದಿಸಿದ ಚಿತ್ರಗಳು
  • ರಾಜ ಮುದ್ದು ರಾಜ
  • ಚುನಾವಣೆ - ಗುರುತಿನ ಚೀಟಿ - ಪಾಸ್-ಪೋರ್ಟ್
  • ತೆರೆದ ಕಣ್ಣು
  • ಅನುಭವ
  • ಮುಕ್ತಿ
ಇನ್ನಷ್ಟು

ಇತ್ತೀಚಿನ ಪ್ರತಿಕ್ರಿಯೆಗಳು

  • kannadakanda
    ಉ: ಸುಭಾಷಿತಗಳು
    May 12, 2008 - 2:57am
  • kannadakanda
    ಉ: ಒತ್ತಕ್ಷರಗಳು ಮತ್ತು ಸಂಯುಕ್ತಾಕ್ಷರಗಳು
    May 12, 2008 - 2:47am
  • hpn
    ಉ: ಚಿತ್ರದುರ್ಗಕ್ಕೆ ನೀರಿನ ಪೂರೈಕೆ- ಶಾಂತಸಾಗರದಿಂದ !
    May 12, 2008 - 1:00am
  • hpn
    ಉ: ಕವಿರಾಜಮಾರ್ಗ ತಂದ ಹುರುಪು,ಕುಸಿ,ನಲಿವು...
    May 12, 2008 - 12:52am
  • hpn
    ಉ: ಹಬ್ಬಕ್ಕೆ ಮುಂಚೆ ... ನಂತರ ... ಒಂದು ರೀಮಾಸ್ಟರ್ಡ್ ಸಿಡಿಯ ಕಥೆ ...
    May 12, 2008 - 12:48am
  • hamsanandi
    ಉ: ಕವಿರಾಜಮಾರ್ಗ ತಂದ ಹುರುಪು,ಕುಸಿ,ನಲಿವು...
    May 12, 2008 - 12:20am
  • ಗಣೇಶ
    ಉ: ಕೋಲಾ ಬಿಡಿ. ಕೋಕಂ(ಪುನರ್ಪುಳಿ) ಕುಡಿಯಿರಿ
    May 12, 2008 - 12:09am
  • ಗಣೇಶ
    ಉ: ಕೋಲಾ ಬಿಡಿ. ಕೋಕಂ(ಪುನರ್ಪುಳಿ) ಕುಡಿಯಿರಿ
    May 11, 2008 - 11:33pm
  • ವೈಭವ
    ಉ: ಒತ್ತಕ್ಷರಗಳು ಮತ್ತು ಸಂಯುಕ್ತಾಕ್ಷರಗಳು
    May 11, 2008 - 8:45pm
  • ವೈಭವ
    ಉ: ಕಲ್ಯಾಣ ಕ್ರಾಂತಿ ಎಂಬ ನೋವಿನ ಹಲ್ಲು!
    May 11, 2008 - 8:29pm
ಇನ್ನಷ್ಟು
ಈಗಿನಂತೆ ೧ ಸದಸ್ಯ/ಸದಸ್ಯೆ ಮತ್ತು 6 ಅತಿಥಿಗಳು ಆನ್ಲೈನ್ ಇರುವರು.

ಕಿವಿಯ೦ ದನಿಯೊಳು ಮನವನರ್ಥಧಿ೦
ಭವದರ್ಶನದೊಳು ಬುದ್ದಿಯನು
ನವರಸದಿ೦ ಹ್ಹೃದಯವ ತಣಿಸದ ಕೃತಿ
ಬುವಿಗೆ ತರದು ರಸಬುದ್ದಿಯನು

— - ಪು ತಿ ನ

Community: FAQ | ಕಾರ್ಯಕ್ರಮಗಳು | Podcasts | ನುಡಿಮುತ್ತುಗಳು | ಪುಸ್ತಕಗಳು |

Community Blogs: Collective Listing | ಆರೋಗ್ಯ ಸಂಪದ | ಕೃಷಿ - ಶ್ಯಾಮ್ ಕಶ್ಯಪ

Individual Blogs: U R Ananthamurthy | OLN Swamy | N A M Ismail | K V Narayan | Abdul Rashid (Blogambari)

Other associated projects: Kannada Learning Center | Kannada Localization Initiative | Development Wiki | Sampada Mailing Lists

ನಿಮಗಾಗಿ...

ಸಂಪದ ಪಾಡ್ಕ್ಯಾಸ್ಟ್ (ಶ್ರಾವ್ಯ ಸಂದರ್ಶನಗಳು) | "ದಿ ಬೆಸ್ಟ್ ಆಫ್ ಸಂಪದ" | ಪ್ಲಾನೆಟ್ ಕನ್ನಡ
ಡೌನ್ಲೋಡ್ ಮಾಡಿಕೊಳ್ಳಿ:‌ ಬರಹ IME | ಫೈರ್ ಫಾಕ್ಸ್ | ಒಪೇರಾ

Some Rights Reserved. Sampada Initiative by Sampada Foundation, 2005 - 2007.
Terms of Use | Contact | About Sampada | Sampada in News/Media | Core Team

The views expressed here are of the respective author(s) and Sampada administration does not necessarily subscribe to them.
RSS: All posts | Comments
Blogs | Podcasts

separator