Sign up | Login
ಸಂಪದ
  • ಲೇಖನಗಳು
  • ಬ್ಲಾಗ್ಸ್
  • ಚರ್ಚೆಯ ವೇದಿಕೆ
  • ಚಿತ್ರಪುಟಗಳು
  • Podcasts
  • ಪುಸ್ತಕಗಳು
  • ಆರ್ಕೈವ್
  • ಸಂಪರ್ಕಿಸಿ
  • Support Sampada
  • ಅಂಚೆ ಪೆಟ್ಟಿಗೆ
  • Font Help

Internet Explorer ಬಳಸುತ್ತಿರುವ ಸಂಪದ ಓದುಗರ ಗಮನಕ್ಕೆ

ಸಂಪದ › Sampada Blogs › vinayaka ರವರ ಬ್ಲಾಗ್

ಅಕ್ಷರವಿಹಾರ

ಮಲೆನಾಡ ಮಡಿಲಿನಿಂದ ಹೊರಟ ವಾಕಿಂಗು...

ಈ ಬೆಂಗಳೂರು ಹೀಗಾದ್ರೆ ಹೇಗೆ..?!

April 18, 2008 - 10:00am — vinayaka

(ಸೂಚನೆ: ನಿನ್ನೆ ಗೆಳೆಯನ ಹರಸಹಾಸದಿಂದಾಗಿ ಮತ್ತೆ ಸಂಪದ ಓಪನ್ ಆಗಿದೆ ಹಾಗಾಗಿ ಹಾಲಿಡೇಯನ್ನು ಕ್ಯಾನ್ಸ್‌ಲ್ ಮಾಡಿದ್ದೇನೆ. ಕ್ಷಮೆ ಇರಲಿ)
ಮೊನ್ನೆಮೊನ್ನೆವರೆಗೆ ೧ರೂ ಇದ್ದ ಲಿಂಬೆಹಣ್ಣು ಇವತ್ತು ೩ರೂ ಆಗಿದೆ ಸಾರ್. ಅಕ್ಕಿಯಂತೂ ಮಾತನಾಡಿಸುವ ಹಾಗೇ ಇಲ್ಲ. ಅದಕ್ಕೆ ಈಗ ನಮ್ಮ ಲ್ಯಾಂಡ್ರಿಯಲ್ಲೂ ಬೆಲೆ ಏರಿಕೆ! ಹಾಗಂದವ ಲ್ಯಾಂಡ್ರಿಯೊಳಗಿನ ಅಗಸ. ಇವತ್ತು ಬಟ್ಟೆ ತೊಳೆಯಲಾರೆ ಅನ್ನಿಸಿದಾಗ, ಬಟ್ಟೆಯಲ್ಲಿ ನನ್ನಿಂದ ತೆಗೆಯಲಾಗದಷ್ಟು ಕಲೆಯಿದೆ ಅಂತಾ ಗೊತ್ತಾದಾಗ ನಾನು ಬಟ್ಟೆ ಲ್ಯಾಂಡ್ರಿಗೆ ಕೊಡೋದು. ಈಗ ಎರಡು ತಿಂಗಳಾಗಿತ್ತು ಲ್ಯಾಂಡ್ರಿ ಕಡೆ ಹೋಗದೆ ಅದ್ಯಾಕೋ ಇವತ್ತು ಹೋದ್ರೆ ರೇಟು ಒಂದು ಪ್ಯಾಂಟಿಗೆ ೨೦ರೂ ಆಗಿದೆ! ಅಲ್ಲಯ್ಯಾ ಇನ್ನೊಂದು ೪೦ರೂ ಇದಕ್ಕೆ ಸೇರಿಸಿದರೆ ಯೂಸ್‌ ಅಂಡ್ ಥ್ರೋ ಪ್ಯಾಂಟ್ ಬರತ್ತಲ್ಲಾ ಅಂತಾ ಅವನ ಹತ್ರಾ ಜಗಳ ಹೊಡೆದಿದ್ದಕ್ಕೆ ಅಂವ ಲಿಂಬೆ ಹಣ್ಣು, ಅಕ್ಕಿ ಕಥೆ ಹೇಳಿದ!ಒಂದು ಬಟ್ಟೆ ವಾಷ್ ಮಾಡಲು ಆತನಿಗೆ ತಗುಲುವ ಖರ್ಚು ಅಬ್ಬಬ್ಬಾ ಅಂದ್ರೆ ೪ರೂ. ಇನ್ನೂ ಇದು ಬೆಂಗಳೂರು ಇಲ್ಲಿ ಎಲ್ಲವೂ ಕಾಸ್ಟ್ಲಿ ಅಂತಾನೇ ಭಾವಿಸಿದರು ಆರಾಮವಾಗಿ ೬ರೂಗೆ ಅವ ಒಂದು ಬಟ್ಟೆ ಒಗೆದು ಕೊಡಬಹುದು. ಅಷ್ಟು ಕೆಲಸಕ್ಕೆ ಅವ ೨೦ರೂ ಅಂತಾನೇ ಅಂದ್ರೆ? ಅವ ಅಂತಾನೇ ಅಂದ್ರೆ ಅನ್ನೋದು ಸಮಸ್ಯೆಯೆ ಅಲ್ಲ. ಅವ ಹೇಳಿದನ್ನೇ ಕೊಟ್ಟು ನಾವು ಬಟ್ಟೆ ಒಗೆಸಿಕೊಂಡು ಬರ್ತಿವಲ್ವಾ? ಹಾಗಾಗಿಯೇ ಇವತ್ತು ಎಲ್ಲದರ ಬೆಲೆಯೂ ಏರಿಕೆ ಆಗ್ತಾ ಇರೋದು.
ಬೆಲೆ ಏರಿಕೆ ಅನ್ನೋ ಪದಕ್ಕೆ ಒಂದು ಲೆಕ್ಕಾಚಾರವೇ ಇಲ್ಲದಂತಾಗಿದೆ ಇವತ್ತು. ಬೆಂಗಳೂರು ಹೊಟೆಲ್‌ಗಳಲ್ಲಿ ರೈಸ್‌ಸೂಪ್ ಅಂತಾ ಒಂದು ಐಟಂ ಸಿಗತ್ತೆ. ಅದಕ್ಕೆ ಬೆಲೆ ಎಷ್ಟು ಗೊತ್ತಾ? ಬರೊಬ್ಬರಿ ೨೫ರೂ! ಅಂದಹಾಗೆ ಈ ರೈಸ್‌ಸೂಪ್‌ ಅಂದ್ರೆ ಏನು ಗೊತ್ತಾ? ಅಪ್ಪಟ ಅನ್ನದ ತಿಳಿ! ಅದಕ್ಕೆ ಅದೇನೋ ಕಲರ್ ಪೌಡರು, ಹಚ್ಚಹಸಿರಾದ ಒಂದಿಷ್ಟು ತರಕಾರಿ ಹಾಕಿ ಕೊಡ್ತಾರೆ. ಅಲ್ಲಾರೀ ೧೮ರೂಗೆ ಒಂದು ಕಿಲೋ ಅಕ್ಕಿ ಬರತ್ತೆ ಅಂತಹದ್ದರಲ್ಲಿ ಅನ್ನದ ತಿಳಿಗೆ ೨೫ ಅಂದ್ರೆ..ರೀ ಸ್ವಾಮಿ ಬೇಕಾದ್ರೆ ಕುಡಿರಿ ಬೇಡದೇ ಹೋದ್ರೆ ಎದ್ದು ಹೋಗಿ ಅಂತಾನೇ ಹೋಟೆಲ್‌ನವ. ಈ ಬೆಂಗಳೂರು ಸಾಪ್ಟ್‌ವೇರ್ ಮಂದಿ ಕುರಿಗಳ ತರ ತಲೆಯಾಡಿಸಿ ಅದನ್ನೆ ಕುಡಿದುಕೊಂಡು ಬರುತ್ತವೆ. ಅವು ಏನಾದ್ರು ಕುಡಿದುಕೊಂಡು ಬಂದು ಸಾಯಲಿ ಯಾಕಂದ್ರೆ ಅವು ಕುಡಿಯೋದು ಅವರು ದುಡಿದ ದುಡ್ಡಿನಲ್ಲೇ ಹೊರತು ನಮ್ಮ ಅಪ್ಪನ ಮನೆ ಗಂಟಲ್ಲೇನು ಅಲ್ಲ ಅನ್ನಬಹುದು. ಆದ್ರೆ ೧೦೦ಕ್ಕೆ ೯ ಮಂದಿ ಇರೋ ಇವು ಮಾಡಿಬರೋ ಈ ಕೆಲಸದಿಂದ ಇನ್ನುಳಿದ ೯೧ಮಂದಿ ಮಧ್ಯಮ ವರ್ಗದವರು ಕಷ್ಟ ಅನುಭವಿಸಬೇಕಲ್ಲ ಅನ್ನೋದು ನೋವಿನ ಸಂಗತಿ.
ಹೌದು ಬೆಲೆ ಏರಿಕೆಗೆ ಕಾರಣ ನಾವೇ. ಎಷ್ಟಂದ್ರೂ ಬೆಂಗಳೂರು ಪುರುಸೊತ್ತು ಇಲ್ಲದ ನಾಡು ಅಂತಾ ಫೇಮಸ್‌ ಆಗಿಬಿಟ್ಟಿದೆ! ಹಾಗಾಗಿ ಅಗಸ ಎಷ್ಟು ಹೇಳಿದರೂ ಕೊಟ್ಟು ಬಟ್ಟೆ ತೊಳೆಸಿಕೊಂಡು ಬರುತ್ತೀವಿ. ಹೋಟೆಲ್‌ನವ ಎಷ್ಟು ಬೆಲೆಗೆ ಏನೂ ಕೊಟ್ಟರೂ ತಿಂದು ಬರುತ್ತೀವಿ. ತಕರಾರು ಮಾಡ್ಲಿಕ್ಕೂ ನಮಗೆ ಪುರುಸೊತ್ತು ಇಲ್ಲ. ನಾವು ಮಾಡಿದರೂ ಅವರು ಕೇಳೋದು ಇಲ್ಲ! ಇನ್ನೂ ನಮ್ಮ ಬಟ್ಟೆ ನಾವು ಒಗೆದುಕೊಂಡರೆ ನಮ್ಮನ್ನು ನಾವು ಡೀಗ್ರೇಡ್ ಮಾಡಿಕೊಂಡತೆ ಅಂತಾ ಭಾವಿಸುವ ಮಂದಿಯೂ ಇದ್ದಾರೆ!
ನಮಗೆನೋ ತಿಂಗಳ ಕೊನೆಗೆ ಗಂಟೆ ಭಾರಿಸಿದ ಹಾಗೇ ಸ್ಯಾಲರಿ ಬರತ್ತೆ. ಆದ್ರೆ ಕೂಲಿಯವರಿಗೆ, ಹಮಾಲಿಗಳಿಗೆ, ಕೆಳವರ್ಗದ ಜನತೆಗೆ ಕೆಲಸ ಸಿಕ್ಕಿದರೆ ಮಾತ್ರ ಕಾಸು. ಆವತ್ತು ದುಡಿದು ಆವತ್ತೆ ಉಣ್ಣೋದು ಅನ್ನುವ ಬದುಕು ಅವರದ್ದು. ಹೀಗೆ ಬೆಲೆ ಏರಿಕೆಯಾದರೆ ಅವರ ಗತಿಯೇನಾಗಬಹುದು. ಅವರದ್ದು ಸಂಬಳ ಹೆಚ್ಚಾಗತ್ತೆ! ಅನ್ನೋದು ನಂತರದ ಮಾತು. ನಮ್ಮ ಜನರ ಮಜ ಅದೇ ಗಾಡಿಯಲ್ಲಿ ತರಕಾರಿಮಾರಲು ಬರುವವನ ಬಳಿ, ಕೂಲಿಗೆ ಕೆಲಸಕ್ಕೆ ಬರುವವನ ಬಳಿ ವ್ಯವಹಾರದಲ್ಲಿ ಚೌಕಾಸಿ ಮಾಡುತ್ತೇವೆ! ಅದೇ ಮಾಲ್‌ಗಳಿಗೋ, ಬಜಾರ್ಗಳಿಗೋ ಹೋದರೆ? ಛೇ ಅಲ್ಲೆಲ್ಲಾ ಚೌಕಾಸಿ ಮಾಡಿದರೆ ನಮ್ಮ ಪ್ರಿಸ್ಟೇಜ್ ಹಾಳಾಗಿಬಿಡತ್ತೆ. ಅದು ಅಲ್ಲದೇ ಅವೆಲ್ಲಾ ಇರೋದು ಚೌಕಾಸಿ ಮಾಡದ ಜನರಿಗಾಗಿಯೇ ಅಂದುಬಿಡುತ್ತೇವೆ! ಆ ಮಾರ್ವಾಡಿ ಅಷ್ಟು ದೊಡ್ಡ ಏಸಿ ಮಾಲ್ ಕಟ್ಟಿದ್ದು ನಮ್ಮಂಥ ಬಕ್ರಾಗಳಿಂದಾನೇ ಅನ್ನೋದು ಕೊನೆಯವರೆಗೂ ನಮಗೆ ಅರ್ಥವೇ ಆಗೋದಿಲ್ಲ!
ಆದ್ರೂ ಈ ಬೆಲೆ ಏರಿಕೆಗೆ ಒಂದು ಕಡಿವಾಣ ಹಾಕೋದು ಇವತ್ತು ಅನಿವಾರ್ಯವಾಗಿದೆ. ಆ ದಿಸೆಯಲ್ಲಿ ನಾವೇನು ಮಾಡಬಹುದು ಅನ್ನೋದನ್ನ ನೀವೆ ಚಿಂತಿಸಿ. ಬಟ್ಟೆಯಲ್ಲಿ ನನ್ನ ಕೈಯಿಂದ ತೆಗೆಯಲಾಗದ ಕಲೆಯಾಗಿತ್ತು ಹಾಗಾಗಿ ನಾನು ಇವತ್ತು ಅರ್ದದಿನ ಹಾಳುಮಾಡಿಕೊಂಡು ೧೦ರೂಗೆ ಪ್ಯಾಂಟ್ ತೊಳೆದುಕೊಡುವವನನ್ನು ಹುಡುಕಿ ನನ್ನ ಬಟ್ಟೆ ವಾಷ್‌ಗೆ ಕೊಟ್ಟು ಬಂದೆ.
.

  • ಚಿಂತನೆ
Ornamental seperator
  • vinayaka ರವರ ಬ್ಲಾಗ್
  • Login or register to post comments
  • 720 hits
  • Email this blog
  • Delicious
  • Google
  • Yahoo

ಪ್ರತಿಕ್ರಿಯೆಗಳು

ಕಾಮೆಂಟ್ ನೋಟ ಆಯ್ಕೆಗಳು

Select your preferred way to display the comments and click "Save settings" to activate your changes.
April 18, 2008 - 10:57am — vikashegde

ಉ: ಈ ಬೆಂಗಳೂರು ಹೀಗಾದ್ರೆ ಹೇಗೆ..?!

vikashegde's picture

ಹಾಗೇ ಅದು. ಎಲ್ಲದಕ್ಕೂ ಇಂಗ್ಲೀಷಿನಲ್ಲಿ ಹೆಸರಿಟ್ಟು ನಾಲ್ಕು ಜಗಮಗಿಸುವ ದೀಪಗಳನ್ನು ಹಾಕಿದರೆ ಜನರು ಸ್ಟಾಂಡರ್ಡು, ಒಳ್ಳೆ ಕ್ವಾಲಿಟಿ ಅಂತ ಬರುತ್ತಾರೆ ಎಂಬ ಸತ್ಯ ವ್ಯಾಪಾರಿಗಳಿಗೆ ಗೊತ್ತಾಗಿ ಹೋಗಿದೆ. ಸಾಫ್ಟ್ ವೇರ್ ಎಂಜಿನಿಯರ್ ಗಳ ಸಂಬಳದ ಆಧಾರದ ಮೇಲೆ ಹೋಟೆಲ್, ಮತ್ತಿತರ ಕಡೆಗಳಲ್ಲಿ ದರಗಳನ್ನು ನಿಗದಿಗೊಳಿಸಿದ್ದಾರೆನೋ ಅನ್ನಿಸುತ್ತದೆ.

  • Login or register to post comments
  • link
  • Email this ಪ್ರತಿಕ್ರಿಯೆ
April 20, 2008 - 11:38am — mahesha

ಉ: ಈ ಬೆಂಗಳೂರು ಹೀಗಾದ್ರೆ ಹೇಗೆ..?!

mahesha's picture

ಇವರ ಪ್ಯಾಂಟ್ ಪುರಾಣ ಮತ್ತು ಸೂಪ್ ಕತೆ ಓದಿ ಮುಂದೆ ಓದಲೇ ಇಲ್ಲ.. Smiling

ಬರಹದ ಸಾರ ಸಾರಿ ಹೋಗಿತ್ತು! ಬೆಂಗಳೂರನ್ನು ಬಯ್ಯುವುದು... ಬಯಿದುಕೊಂಡು ಅಲ್ಲೇ ಇರೋದು..!!

ಏನೋಪ್ಪ.. ದೇಶದ ಅತಿಜಾಣರೆಲ್ಲ ನಮ್ ಬೆಂಗಳೂರಿಗೆ ಬರ್ತಾರೆ..

ಯಾರು ಏನೇ ಹೇಳಲಿ.. ನಮ್ ಬೆಂಗಳೂರು ರಾಕ್ಸ್!! ಇಶ್ಟು ಚನ್ನಾಗಿರೋ ಊರು ಅಪರೂಪ... ಚನ್ನಯ್ಯಿ, ಟ್ರಿವೇಂಡ್ರಮ್ಮು, ಹಯಿದರಬಾದುಗಳು ಇದರ ಮುಂದೆ ಕುರಿಮಂದೆ!! ( ನಾನು ಈ ಮೂರನ್ನೂ ನೋಡಿದ್ದೀನಿ, ಕೊಳಕು ಕೊಳಕು, ಟ್ರಿವೇಂಡ್ಮಮ್ಮು ವಾಸಿ )

=====================================
ಮಾಯ್ಸ!

  • Login or register to post comments
  • link
  • Email this ಪ್ರತಿಕ್ರಿಯೆ
April 22, 2008 - 1:49pm — ASHMYA

ಉ: ಈ ಬೆಂಗಳೂರು ಹೀಗಾದ್ರೆ ಹೇಗೆ..?!

ASHMYA's picture

(ವಿನಾಯಕರ ಕ್ಷಮೆ ಕೇಳಿ)
"ಬರಹದ ಸಾರ ಸಾರಿ ಹೋಗಿತ್ತು!" ಅಲ್ಲ, 'ಸೋರಿ ಹೋಗಿತ್ತು' ಅಂತ ಇರಬೇಕಿತ್ತು.

  • Login or register to post comments
  • link
  • Email this ಪ್ರತಿಕ್ರಿಯೆ
April 22, 2008 - 5:42pm — mahesha

ಉ: ಈ ಬೆಂಗಳೂರು ಹೀಗಾದ್ರೆ ಹೇಗೆ..?!

mahesha's picture

Smiling

ಸೋರಿ Smiling
=====================================
ಮಾಯ್ಸ!

  • Login or register to post comments
  • link
  • Email this ಪ್ರತಿಕ್ರಿಯೆ
April 22, 2008 - 10:26am — vinayaka

ಉ: ಈ ಬೆಂಗಳೂರು ಹೀಗಾದ್ರೆ ಹೇಗೆ..?!

vinayaka's picture

@mahesha
ಲೇಖನ ಸರಿಯಾಗಿ ಓದಿ ನಂತರ ಕಮೆಂಟ್ ಮಾಡಿ. ನಾಯಿಯನ್ನು ಮಂಗನೊಂದಿಗೆ ಹೋಲಿಸಿ ಚೆನ್ನಾಗಿದೆ ಅನ್ನೋದಕ್ಕಿಂತ ನಾಯಿಯನ್ನು ಯಾವುದರ ಜೊತೆ ಹೋಲಿಸಬಹುದು ಅಂತಾ ಚಿಂತನೆ ಮಾಡುವುದನ್ನು ಕಲಿತು ಆಮೇಲೆ ಪ್ರತಿಕ್ರಿಯಿಸಿ. ಸುಮ್ಮನೆ ಕಮೆಂಟ್ ಮಾಡಬೇಕೆಂಬ ತೆವಲಿಗೆ ಬಿದ್ದು ಪ್ರತಿಕ್ರಿಯಿಸಬೇಡಿ
ವಿನಾಯಕ

  • Login or register to post comments
  • link
  • Email this ಪ್ರತಿಕ್ರಿಯೆ
April 22, 2008 - 11:01am — mahesha

ಉ: ಈ ಬೆಂಗಳೂರು ಹೀಗಾದ್ರೆ ಹೇಗೆ..?!

mahesha's picture

ಹವುದು... ನೀವೇ ಸರಿ..

ಬೆಂಗಳೂರು ಬಂದು ಬೆಂಗಳೂರಲ್ಲಿ ನೆಲೆಸಿ, ಬೆಂಗಳೂರನ್ನೇ ಬಯ್ಯೋರಿಗೆ ಜಯ್!!

ಬಟ್... ಅಯ್ ಲವ್ ಮಯ್ ಬೆಂಗಳೂರು!!!
=====================================
ಮಾಯ್ಸ!

  • Login or register to post comments
  • link
  • Email this ಪ್ರತಿಕ್ರಿಯೆ
April 23, 2008 - 11:48am — vinayaka

ಉ: ಈ ಬೆಂಗಳೂರು ಹೀಗಾದ್ರೆ ಹೇಗೆ..?!

vinayaka's picture

@mahesha
mahesharae illi nandu sari nimmadau tappu annodu prashne alla. odhuga barahagaraan dhati artaisikollabeku embudaste nanna aagraha

  • Login or register to post comments
  • link
  • Email this ಪ್ರತಿಕ್ರಿಯೆ
April 23, 2008 - 12:00pm — mahesha

ಉ: ಈ ಬೆಂಗಳೂರು ಹೀಗಾದ್ರೆ ಹೇಗೆ..?!

mahesha's picture

ನಂಗೆ ಕನ್ನಡ ಅಕ್ಷರ ಬಿಟ್ಟು ಬೇರೇನು ಕಾಣಲ್ಲ.. ಕನ್ನಡಗುರುಡ ನಾನು!
=====================================
ಮಾಯ್ಸ!

  • Login or register to post comments
  • link
  • Email this ಪ್ರತಿಕ್ರಿಯೆ

ಮೇಲಿನ ಪುಟವನ್ನು ಹೋಲುವ ಪುಟಗಳು - 'ಸಂಪದ' ಆರ್ಕೈವಿನಿಂದ

  • ಮಲೆನಾಡಿನ ಬ್ಯಾಸಿಗಿ ದಿನಚರಿ......!
  • ಪಕ್ಕದ ಮನೆಯವರ ಅಂಗಳವನ್ನು ಹಂಬಲಿಸಿಕೊಂಡು, ತಮ್ಮ ಮನೆಯ ಹಿತ್ತಿಲು ಕಳೆದುಕೊಳ್ಳುವ ಪೆದ್ದುಜಾಣ್ಮೆ
  • ಜಾತಿ ಬಿಟ್ಟ ಜೋಕುಮಾರನೆ....
  • ಮಹಿಳೆಗಿನ್ನೂ ಮೀಸಲಾತಿ ಅನಿವಾರ್ಯವೇ...?!
  • ಅಕ್ಸಿಡೆಂಟು ನೋಡಿ
Syndicate content

ಲೇಖಕರು

vinayaka's picture

ಪೂರ್ಣ ಹೆಸರು
vinayaka

ಪರಿಚಯ

ಹುಟ್ಟಿದ್ದು ಮಲೆನಾಡಿನಲ್ಲಿ, ಓದಿದ್ದೆಲ್ಲಾ ತುಳುನಾಡಿನಲ್ಲಿ. ಜೀತ ಮಾಡ್ತಾ ಇರೋದು ಬೆಂಗಳೂರೆಂಬ ಅಪ್ಪಟ ಕಾಂಕ್ರೀಟು ಜಂಗಲ್ಲಿನಲ್ಲಿ.

ಸದಸ್ಯರ ಪೂರ್ಣ ಪ್ರೊಫೈಲ್ ವೀಕ್ಷಿಸಿ

ನೀರಿನ ಜಾಡು ಹಿಡಿದು

Sharada Prasad

ವಿಹರಿಸಿ

  • ಹೊಸ ಬರಹ ಸೇರಿಸಿ - Publish your write-up on Sampada
  • 'ಸಂಪದ' ಕುರಿತು ನಿಮ್ಮ ಸಲಹೆ/ಅಭಿಪ್ರಾಯಗಳನ್ನು ಕಳುಹಿಸಿ
  • Mailing Lists
  • ಚಟುವಟಿಕೆ
  • ಕನ್ನಡ ಬಟನ್ನುಗಳು
  • ಕನ್ವರ್ಟರ್

ಇತ್ತೀಚಿನ ಬ್ಲಾಗ್ ಬರಹಗಳು

  • ಅಕ್ಷರೋದಿ ಸೂತ್ರ
  • ಬ್ಲಾಗ್ ಮಂಡಲದಲ್ಲಿ ಸಿನಿಮಾ ದಿಗ್ಗಜರು
  • ವಿಂಡೋಸ್ ಒಳಗೇ ಲಿನಕ್ಸ್ ಹಾಕಿಕೊಳ್ಳಬಹುದು!
  • ’ಅವಧಿ’ಯಲ್ಲಿ ಆಡಿದ ಉಯ್ಯಾಲೆ
  • ಬಂದಿದೆ ಚುನಾವಣೆ
  • ಐನಾಪುರ ಸುತ್ತುಮುತ್ತಲ ಕನ್ನಡದ ಪರಿಚಯ
  • ಲಿನಕ್ಸಾಯಣ - ೭ - ಚಿತ್ರಪುಟಗಳ ಲೋಕಕ್ಕೊಂದು ಚೊಕ್ಕ ಕೊಡುಗೆ ಗಿಂಪ್
  • ಸೃಷ್ಟಿ(ಸುಶೀಲನ ಪದ್ಯಗಳು)
  • ಕಟಪಯಾದಿ ಸೂತ್ರ
  • ಸಂಸ್ಕೃತರಹಿತ ಕನ್ನಡ ಕನ್ನಡದ ಜಾಲಿಗರಿಗೆ ಮಾತ್ರವೆ?
ಇನ್ನಷ್ಟು

ಇತ್ತೀಚಿನ ಪ್ರತಿಕ್ರಿಯೆಗಳು

  • anivaasi
    ಉ: ಕಲಿತರೆ ಹೀಗೆ...
    May 16, 2008 - 3:36pm
  • vinayudupa
    ಉ: ಸಂಸ್ಕೃತರಹಿತ ಕನ್ನಡ ಕನ್ನಡದ ಜಾಲಿಗರಿಗೆ ಮಾತ್ರವೆ?
    May 16, 2008 - 3:32pm
  • vikashegde
    ಉ: ಸಂಸ್ಕೃತರಹಿತ ಕನ್ನಡ ಕನ್ನಡದ ಜಾಲಿಗರಿಗೆ ಮಾತ್ರವೆ?
    May 16, 2008 - 2:37pm
  • savithru
    ಉ: ಕಲ್ಯಾಣ ಕ್ರಾಂತಿ ಎಂಬ ನೋವಿನ ಹಲ್ಲು!
    May 16, 2008 - 2:30pm
  • madhava_hs
    ಉ: ಸಂಸ್ಕೃತರಹಿತ ಕನ್ನಡ ಕನ್ನಡದ ಜಾಲಿಗರಿಗೆ ಮಾತ್ರವೆ?
    May 16, 2008 - 2:29pm
  • savithru
    ಉ: ಕಲ್ಯಾಣ ಕ್ರಾಂತಿ ಎಂಬ ನೋವಿನ ಹಲ್ಲು!
    May 16, 2008 - 2:23pm
  • savithru
    ಉ: ಕಲ್ಯಾಣ ಕ್ರಾಂತಿ ಎಂಬ ನೋವಿನ ಹಲ್ಲು!
    May 16, 2008 - 2:10pm
  • vikashegde
    ಉ: ಸಂಸ್ಕೃತರಹಿತ ಕನ್ನಡ ಕನ್ನಡದ ಜಾಲಿಗರಿಗೆ ಮಾತ್ರವೆ?
    May 16, 2008 - 2:00pm
  • harshab
    ಉ: ಬ್ಲಾಗ್ ಮಂಡಲದಲ್ಲಿ ಸಿನಿಮಾ ದಿಗ್ಗಜರು
    May 16, 2008 - 1:59pm
  • savithru
    ಉ: ಕಲ್ಯಾಣ ಕ್ರಾಂತಿ ಎಂಬ ನೋವಿನ ಹಲ್ಲು!
    May 16, 2008 - 1:51pm
ಇನ್ನಷ್ಟು
ಈಗಿನಂತೆ 6 ಸದಸ್ಯರು ಮತ್ತು 19 ಅತಿಥಿಗಳು ಆನ್ಲೈನ್ ಇರುವರು.

ಧರ್ಮವಿಲ್ಲದ ವಿಜ್ಞಾನ ಹೇಗೆ ಕುಂಟೋ ಹಾಗೆಯೇ ವಿಜ್ಞಾನವಿಲ್ಲದ ಧರ್ಮ ಕುರುಡು.

- ಆಲ್ಬರ್ಟ್ ಐನ್‍ಸ್ಟೈನ್

Community: FAQ | ಕಾರ್ಯಕ್ರಮಗಳು | Podcasts | ನುಡಿಮುತ್ತುಗಳು | ಪುಸ್ತಕಗಳು |

Community Blogs: Collective Listing | ಆರೋಗ್ಯ ಸಂಪದ | ಕೃಷಿ - ಶ್ಯಾಮ್ ಕಶ್ಯಪ

Individual Blogs: U R Ananthamurthy | OLN Swamy | N A M Ismail | K V Narayan | Abdul Rashid (Blogambari)

Other associated projects: Kannada Learning Center | Kannada Localization Initiative | Development Wiki | Sampada Mailing Lists

ನಿಮಗಾಗಿ...

ಸಂಪದ ಪಾಡ್ಕ್ಯಾಸ್ಟ್ (ಶ್ರಾವ್ಯ ಸಂದರ್ಶನಗಳು) | "ದಿ ಬೆಸ್ಟ್ ಆಫ್ ಸಂಪದ" | ಪ್ಲಾನೆಟ್ ಕನ್ನಡ
ಡೌನ್ಲೋಡ್ ಮಾಡಿಕೊಳ್ಳಿ:‌ ಬರಹ IME | ಫೈರ್ ಫಾಕ್ಸ್ | ಒಪೇರಾ

Some Rights Reserved. Sampada Initiative by Sampada Foundation, 2005 - 2007.
Terms of Use | Contact | About Sampada | Sampada in News/Media | Core Team

The views expressed here are of the respective author(s) and Sampada administration does not necessarily subscribe to them.
RSS: All posts | Comments
Blogs | Podcasts

separator