ಕಾವೇರಿ ಪ್ರತಿಭಟನೆ ಮತ್ತು ಕರಾವಳಿ ಜಿಲ್ಲೆಗಳು
March 5, 2007 - 4:12pm — Yaminiಕಾವೇರಿ ನ್ಯಾಯ ಮಂಡಳಿಯ ತೀರ್ಪು ಬಂದ ನಂತರ 'ಕರ್ನಾಟಕಾದ್ಯಂತ ಪ್ರತಿಭಟನೆಗಳು ನಡೆದವು' ಆದರೆ ಕರಾವಳಿಯ ಮೂರು ಜಿಲ್ಲೆಗಳಲ್ಲಿ ಮಾತ್ರ ಇದಕ್ಕೆ ಸಂಬಂಧಿಸಿ ಏನೂ ನಡೆಯಲಿಲ್ಲ. ಸರಕಾರ ಪರೋಕ್ಷ ಬೆಂಬಲ ನೀಡಿದ್ದ ಬಂದ್ ನಲ್ಲಿ ದಕ್ಷಿಣ ಕನ್ನಡ, ಉಡುಪಿ ಮತ್ತು ಉತ್ತರ ಕನ್ನಡ ಜಿಲ್ಲೆಗಳು ಭಾಗವಹಿಸಲಿಲ್ಲ. ಅರ್ಥಾತ್ ಯಾರೂ ಬಂದ್ ಮಾಡಲಿಲ್ಲ. ಇದೆಲ್ಲಾ ಏನನ್ನು ತೋರಿಸುತ್ತದೆ?
ಕರಾವಳಿ ಜಿಲ್ಲೆಗಳವರಿಗೆ ಕರ್ನಾಟಕದ ಹಿತದ ಕುರಿತು ಯಾವ ಕಾಳಜಿಯೂ ಇಲ್ಲವೇ?
ಈ ಮೊದಲು ವರ ನಟ ಡಾ.ರಾಜ್ ಕುಮಾರ್ ರನ್ನು ಕಾಡುಗಳ್ಳ ವೀರಪ್ಪನ್ ಅಪಹರಿಸಿದಾಗಲೂ ಕರಾವಳಿ ಜಿಲ್ಲೆಗಳು ಹೆಚ್ಚು ಕಡಿಮೆ ಇಂಥದ್ದೇ ಪ್ರತಿಕ್ರಿಯೆಯನ್ನು ತೋರಿದ್ದವು. ಇದನ್ನು ಡಾ.ರಾಜ್ ಕುಮಾರ್ ಅಭಿಮಾನಿಗಳ ಸಂಘದ ಸಾ.ರಾ. ಗೋವಿಂದು ಅವರು ಕರಾವಳಿ ಜಿಲ್ಲೆಯ ಜನಗಳ ವರ್ತನೆಯನ್ನು ಖಂಡಿಸಿದ್ದರು. ಕಾವೇರಿ ವಿಷಯದಲ್ಲಿ ಕರಾವಳಿ ಜಿಲ್ಲೆಗಳ ಜನರು ತೋರಿಸಿದ ನಿರ್ಲಿಪ್ತ ಮನೋಭಾವವನ್ನೂ ಹಲವರು ಖಂಡಿಸಿದರು. ಆದರೆ ಇದು ಹಿಂದಿನಷ್ಟು ಸುದ್ದಿಯಾಗಲಿಲ್ಲ.
ಕರ್ನಾಟಕದ ಇತಿಹಾಸ ಮತ್ತು ರಾಜಕಾರಣದ ಕುರಿತು ಬಹಳ ಅಧ್ಯಯನ ನಡೆಸಿರುವ ಜೇಮ್ಸ್ ಮೇನರ್ ಕೂಡಾ ಒಮ್ಮೆ ಕರಾವಳಿ ಜಿಲ್ಲೆಗಳನ್ನು ಸೋಷಿಯಲೀ ಎಕ್ಸೆಂಟ್ರಿಕ್ ಡಿಸ್ಟ್ರಿಕ್ಟ್ಸ್ ಎಂದು ಹೇಳಿದ್ದರು. ಕರಾವಳಿ ಜಿಲ್ಲೆಗಳು ಕರ್ನಾಟಕದ ಮುಖ್ಯವಾಹಿನಿಯ ಜತೆಗೆ ಒಂದಾಗಿಲ್ಲ ಎಂಬುದನ್ನು ಈ ಎಲ್ಲಾ ಅಂಶಗಳು ಎತ್ತಿ ತೋರಿಸುತ್ತಿವೆ. ಆದರೆ ಇದರ ಕಾರಣಗಳು ಮೈನ್ ಲ್ಯಾಂಡ್ ಕರ್ನಾಟಕ ಎಂದು ಕರೆಯಬಹುದಾದ ಪ್ರದೇಶಗಳ ಸಾಮಾಜಿಕ ಮನಸ್ಥಿತಿಯಲ್ಲಿದೆ ಎಂದು ನನಗನ್ನಿಸುತ್ತದೆ. ಮುಂದೆ ಓದಿ »

- 5 ಪ್ರತಿಕ್ರಿಯೆಗಳು
- 1013 hits
- ಈ ಪುಟವನ್ನು ಇ-ಮೇಯ್ಲ್ ಮಾಡಿ



ಪಿಯುಸಿಯಲ್ಲಿ ಫೇಲಾಗುವುದು ಹೀಗೆ?
July 14, 2006 - 5:31pm — Yaminiನನ್ನ ಅಮ್ಮನ ಲೆಕ್ಕಾಚಾರ ಸರಿಯಾಗಿದ್ದರೆ ನಾನು ಇಷ್ಟು ಹೊತ್ತಿಗೆ ಎಂಬಿಬಿಎಸ್ ಓದುತ್ತಾ ಇರಬೇಕಿತ್ತು. ಅಪ್ಪ ಹೇಳಿದಂತೆ ಕೇಳಿದ್ದರೆ ಈಗ ಕಂಪ್ಯೂಟರ್ ಸೈನ್ಸ್ ಕಲಿಯಬೇಕಿತ್ತು. ಯಾರ ಮಾತನ್ನೂ ಕೇಳದೇ ಇದ್ದುದರಿಂದ ಸಮಾಜ ಕಾರ್ಯ ಕಲಿಯುತ್ತಾ ಇದ್ದೇನೆ. ಈಗ ನಾನು ಬರೆಯಲು ಹೊರಟಿರುವ ವಿಷಯಕ್ಕೆ ಈ ವಿವರಗಳು ಎಷ್ಟರ ಮಟ್ಟಿಗೆ ಬೇಕು ಎಂಬುದು ಗೊತ್ತಿಲ್ಲ. ನನಗೆ ಮಾತ್ರ ಈ ವಿವರಗಳು ಅಗತ್ಯ ಎನಿಸುತ್ತಿವೆ. ಮುಂದೆ ಓದಿ »

- 9 ಪ್ರತಿಕ್ರಿಯೆಗಳು
- 928 hits
- ಈ ಪುಟವನ್ನು ಇ-ಮೇಯ್ಲ್ ಮಾಡಿ



ಅ-ಪರಿಚಿತ!
June 13, 2006 - 5:40pm — Yaminiನಾಲ್ಕು ದಿನಗಳಿಂದ ಮಳೆ ನಿಂತಿದೆ. ಮಂಗಳೂರಿನಲ್ಲಿ ಮಳೆ ನಿಂತಿದೆ ಅಂದರೆ ಬಿಸಿಲು ಹೆಚ್ಚಿದೆ ಎಂಬ ಅರ್ಥವೂ ಇದೆ! ಮುಂದೆ ಓದಿ »

- 4 ಪ್ರತಿಕ್ರಿಯೆಗಳು
- 786 hits
- ಈ ಪುಟವನ್ನು ಇ-ಮೇಯ್ಲ್ ಮಾಡಿ




RSS: