ಪುಸ್ತಕ ಪರಿಚಯ

ಲೇಖಕರು: venkatesh
January 14, 2009
"ಭಕ್ತಾಷ್ಟಕ," ಪುಸ್ತಕದ ಸಂಪಾದಕ ಕರ್ತೃ, ಡಾ. ಶ್ರೀಪಾದ್ ರವರು, ಒಬ್ಬ ಭೌತಶಾಸ್ತ್ರದ ವಿದ್ಯಾರ್ಥಿ. ತಮ್ಮ ಪ್ರಮುಖ ಕೃಷಿ, ವಿಜ್ಞಾನವಾದಾಗ್ಯೂ ಪಾರಮಾರ್ಥದಲ್ಲಿ ವಿಶೇಷವಾದ ಆಸಕ್ತಿ, ಗೌರವ, ಹಾಗೂ ಒಲವುಳ್ಳವರು. ಇದಕ್ಕೆ ಅವರ ಮನೆತನದ ಪರಿಸರವೇ ಪ್ರಮುಖಕಾರಣ. ವಿಚಾರವಂತ ತಂದೆತಾಯಿ, ಅಜ್ಜ ಅಜ್ಜಿ, ಚಿಕ್ಕಪ್ಪ ಇವರುಗಳ ಆಶೀರ್ವಾದ ಹಾಗೂ ಜೀವನಶೈಲಿ, ಲೇಖಕರ ಹೃದಯದಲ್ಲಿ ಎಲ್ಲೋ ಒಂದು ಕಡೆ ಅಚ್ಚಾಗಿರುವ ಕಾರಣದಿಂದಲೇ, ಶ್ರೀಯವರ ಉಪನ್ಯಾಸಗಳನ್ನು ಆಲಿಸುತ್ತಿದ್ದಂತೆಯೇ ಆ ಸಂಸ್ಕಾರ ಅವರಲ್ಲಿ…
ಲೇಖಕರು: Aravind M.S
November 23, 2008
ಲೇಖಕನ ಬಗ್ಗೆ – ಜೋನಾಥನ್ ಸ್ವಿಫ್ಟ್ ಒಬ್ಬ ಹದಿನೇಳನೇ ಶತಮಾನದ ವಿಭಿನ್ನ ವ್ಯಕ್ತಿ. ಈತ ಜನರನ್ನು ಒಂದು ಒಂದು ಪಂಗಡವಾಗ್ ಪ್ರೀತಿಸಿದ, ವ್ಯಕ್ತಿಗತವಾಗಿ ದ್ವೇಷಿಸಿದ. ಮಾನವ ಸ್ವಾತಂತ್ರ್ಯದ ಪ್ರತಿಪಾದಕನಾಗಿದ್ದ ಜೋನಾಥನ್ ಒಬ್ಬ ಸಾಹಸಿ ಹಾಗೂ ವಿಕ್ಶಿಪ್ತ ಮನದ ವ್ಯಕ್ತಿ. ತನ್ನ ಕಷ್ಟ ಜೀವನದ ಮಧ್ಯೆ ಹಲವರಲ್ಲಿ ಕೆಲಸ ಮಾಡಿ ಮಾನವ ಪ್ರವೃತ್ತಿ, ಅಭ್ಯಾಸ, ಅಭಿವ್ಯಕ್ತಿಗಳನ್ನು ತಿಳಿದುಕೊಂಡ. ತನ್ನ ಗಲಿವರ್ ಟ್ರಾವಲ್ಸ್ ನಿಂದ ಲೋಕಪ್ರಸಿದ್ಧನಾದ. ರಾಜಕೀಯ ಚಾತುರ್ಯ ಹೊಂದಿದ್ದ ಅವನು ಸ್ಕಾಟ್ಲಾಂಡ್…
ಲೇಖಕರು: makrumanju
October 29, 2008
ಕನ್ನಡದ ಶ್ರೇಷ್ಠ ಬರಹಗಾರರಲ್ಲಿ ಪೂರ್ಣಚಂದ್ರ ತೇಜಸ್ವಿಯವರು ಒಬ್ಬರು. ಅವರ ಪ್ರತಿಯೊಂದು ಕೃತಿಗಳು ವಿಶಿಷ್ಟವಾದವುಗಳು. ನಾನು ಅವರ ಜುಗಾರಿ ಕ್ರಾಸ್ ಕಾದಂಬರಿಯನ್ನು ಇತ್ತೀಚಿಗೆ ಪುನಃ ಓದಿದೆ. ಈ ಕಾದಂಬರಿ ಕಾಣಬರುವ ವಿಚಾರಗಳನ್ನು ನನಗೆ ಅನಿಸಿದ ಮಟ್ಟಿಗೆ ಇಲ್ಲಿ ಹಂಚಿಕೊಳ್ಳುತ್ತೇನೆ.   ಇದೊಂದು ಕೇವಲ ೨೪ ಗಂಟೆಗಳ ಅವಧಿಯಲ್ಲಿ ನಡೆಯುವ ಪತ್ತೆದಾರಿ ಕಾದಂಬರಿಯಾಗಿದೆ. ಈ ಘಟನೆ ನಡೆಯುವ ಪ್ರದೇಶ ಮಂಗಳೂರು - ಬೆಂಗಳೂರು ರಸ್ತೆಯಲ್ಲಿರುವ ಜುಗಾರಿ ಕ್ರಾಸ್ ಮತ್ತು ದೇವಪುರಗಳಲ್ಲಿ.…
ಲೇಖಕರು: narendra
August 09, 2008
"ಧಾರವಾಡದ ಬೀದಿಯಲ್ಲಿ, ಒಂದು ಕೈಯಲ್ಲಿ ಚೀಲ ಮತ್ತೊಂದು ಕೈಯಲ್ಲಿ ಮಗುವನ್ನು ಹಿಡಿದು, ಗಿರಾಕಿಗಾಗಿ ಕಾಯುತ್ತ ನಿಂತ ದೇವತೆ; ಬದಲಾದ ಆರ್ಥಿಕ ಸ್ಥಿತಿಯಲ್ಲಿ ಬದುಕಿನ ಹೋರಾಟ ನಡೆಸುವ ಕುಟುಂಬ; ದಟ್ಟ ಅಡವಿಯನ್ನು ಬರಿದಾಗಿಸುತ್ತಿರುವ ಲಾರಿಗಳು; ಬಾರ್‌ನಲ್ಲಿ, ಡ್ಯಾನ್ಸ್ ಮಾಡುತ್ತ ಸಹಜ ಬದುಕಿಗೆ ಹಂಬಲಿಸುವ ಹುಡುಗಿಯರು; ಇವರೆಲ್ಲರ ಮಧ್ಯವೇ ಒಂದು ಕೈಯಲ್ಲಿ ತಂಗಿಯನ್ನು, ಮತ್ತೊಂದು ಕೈಯಲ್ಲಿ ತಮ್ಮನನ್ನು ಹಿಡಿದುಕೊಂಡು, ಧೀರೋದಾತ್ತ ಹೆಜ್ಜೆ ಇಟ್ಟು ನಡೆದುಹೋದ ಬಾಲಕ; ಪಕ್ಕದಲ್ಲಿಯೆ…
ಲೇಖಕರು: narendra
July 17, 2008
ರೂಪಕದ ಭಾಷೆಯವರೆಂದೇ ಗುರುತಿಸಲ್ಪಡುವ, ಹಲವಾರು ಹೃದ್ಯ ಕತೆಗಳನ್ನು ಕನ್ನಡಕ್ಕೆ ನೀಡಿರುವ, ಅನನ್ಯ ರೀತಿಯಲ್ಲಿ ಕವಿಭಾವ ಪುನರ್‌ಸೃಷ್ಟಿ ಮಾಡಬಲ್ಲ, ಆಪ್ತ ನುಡಿಚಿತ್ರಗಳ ಕುಶಲ ಕಲೆಗಾರ ಜಯಂತ್ ಕಾಯ್ಕಿಣಿ ಜನ್ಮತಃ ಕವಿ. ಅವರ ಕತೆಗಳೂ, `ಬೊಗಸೆಯಲ್ಲಿ ಮಳೆ'ಯಂಥ ಅಂಕಣಗಳೂ, ಎಲ್ಲವೂ ಈ ಅರ್ಥದಲ್ಲಿ ಕವನಗಳೇ. ಆದಾಗ್ಯೂ, ಜಯಂತ್ ಇವತ್ತಿನ ಕನ್ನಡ ಸಾಹಿತ್ಯ ಪರಿಸರದಲ್ಲಿ ಬಹಳ ಮುಖ್ಯವಾಗುವುದು ಅವರಿಗೆ ಮಾನವೀಯತೆಯಲ್ಲಿ, ಮನುಷ್ಯನ ಹೃದಯವಂತಿಕೆಯಲ್ಲಿ, ಮನುಷ್ಯ ಸಂಬಂಧಗಳಲ್ಲಿ, ಮಾನವ ಪ್ರೀತಿಯಲ್ಲಿ…
ಲೇಖಕರು: narendra
July 13, 2008
ಶ್ರೀನಿವಾಸ ವೈದ್ಯರು ಇವನ್ನೆಲ್ಲ ಕಥಾರೂಪಿ ಹರಟೆ, ಹರಟೆ ರೂಪಿ ವ್ಯಕ್ತಿ ಚಿತ್ರಣ ಅಥವಾ ಶುದ್ಧ ತಲೆಹರಟೆ ರೂಪಿ ಹರಟೆ ಎಂದು ಕರೆದಿದ್ದಾರೆ. ಅಂದರೆ ಎಲ್ಲದರಲ್ಲೂ ಹರಟೆಯ ಅಂಶ ಸ್ವಲ್ಪ ಹೆಚ್ಚೇ ಇದ್ದರೆ ಅದು ದೋಷವಲ್ಲ, ಗುಣ ಎಂದೇ ಪರಿಗಣಿಸುವುದು ಅನಿವಾರ್ಯ. ಆದರೆ ಇಲ್ಲಿ ಬರುವ ಎಲ್ಲ ವ್ಯಕ್ತಿಗಳೂ ಘಟನೆಗಳೂ ಕಾಲ್ಪನಿಕ. ಈ ಸ್ಥೂಲ ಪರಿಚಯದೊಂದಿಗೇ ಇಲ್ಲಿನ ಕತೆಗಳನ್ನು ಪ್ರವೇಶಿಸಿದರೆ ಗುಂಗು ಹತ್ತಿಸುವ ವಿವರಗಳು, ಹೃದಯದ ಭಾವಕ್ಕೆ ಮೆದುಳಿನ ತರ್ಕದ ಸ್ಪರ್ಶ, ಹಾಗೆ ಲಾಜಿಕ್‌ಗೆ ಭಾವದ…