ಪುಸ್ತಕ ಪರಿಚಯ

ಲೇಖಕರು: Ashwin Rao K P
January 29, 2024
ಡಿ ಬಿ ಮಲ್ಲಿಕಾರ್ಜುನಸ್ವಾಮಿ ಮಹಾಮನೆಯವರ ಕವಿತೆಗಳ ಸಂಗ್ರಹ ‘ವಿಷಾದಗಾಥೆ'. ಈ ಕವನ ಸಂಕಲನಕ್ಕೆ ಮುನ್ನುಡಿಯನ್ನು ಬರೆದಿದ್ದಾರೆ ಖ್ಯಾತ ಲೇಖಕ, ಕಥೆಗಾರ ಎಸ್. ದಿವಾಕರ್. ಅವರು ತಮ್ಮ ಮುನ್ನುಡಿಯಲ್ಲಿ ವ್ಯಕ್ತ ಪಡಿಸಿರುವ ಭಾವನೆಗಳ ಆಯ್ದ ಭಾಗ ಇಲ್ಲಿದೆ... “ಅರಿಸ್ಟಾಟಲನ ಪ್ರಕಾರರೂಪಕವೇ ಕಾವ್ಯದ ಬುನಾದಿ. ಒಂದು ವಸ್ತುವನ್ನು ಅಥವಾ ಭಾವವನ್ನು ಇನ್ನಾವುದೋ ವಸ್ತುವಾಗಿ ಅಥವಾ ಭಾವವಾಗಿ ನೋಡದೆ ಹೋದರೆ ನಿಜಕ್ಕೂ ಹೊಸದೇನನ್ನೂ ಕಾಣಿಸಲಾಗದು. ಗೆಳೆಯ ಮಲ್ಲಿಕಾರ್ಜುನಸ್ವಾಮಿ ಮಹಾಮನೆಯವರ ಈ ‘ವಿಷಾದ…
ಲೇಖಕರು: Ashwin Rao K P
January 26, 2024
ಬೆಂಗಳೂರಿನ ಕರ್ನಾಟಕ ಅನುವಾದ ಸಾಹಿತ್ಯ ಅಕಾಡೆಮಿಯವರು ೨೦೦೭ರಲ್ಲಿ ಹೊರತಂದಿರುವ ಇಟಾಲಿಯನ್ ಭಾಷೆಯ ಕಾದಂಬರಿ ಫೊಂತಮಾರ. ಈ ಕಾದಂಬರಿಯು ಮೊದಲು ಬಿಡುಗಡೆಯಾದದ್ದು ೧೯೫೦ರಲ್ಲಿ. ಅಂದು ಶ್ರೀ ಹೊನ್ನಯ್ಯ ಶೆಟ್ಟಿ ಇವರು ಈ ಪುಸ್ತಕದ ಪ್ರಕಾಶಕರಾಗಿದ್ದರು. ಸುಮಾರು ೪೦ ವರ್ಷಗಳ ಬಳಿಕ ೧೯೯೦ರಲ್ಲಿ ಎರಡನೇ ಮುದ್ರಣ ಕಂಡ ಕೃತಿಯು ನಂತರ ಕರ್ನಾಟಕದ ಸುವರ್ಣ ಮಹೋತ್ಸವದ ಸಮಯದಲ್ಲಿ ಈ ಪುಸ್ತಕವನ್ನು ಮರು ಮುದ್ರಣ ಮಾಡಲಾಗಿದೆ. ೧೯೫೦ರ ಸಮಯದಲ್ಲಿ ಈ ಇಟಾಲಿಯನ್ ಕಾದಂಬರಿಯನ್ನು ಕನ್ನಡಕ್ಕೆ ಅನುವಾದ ಮಾಡುವಾಗ ಕು…
ಲೇಖಕರು: Ashwin Rao K P
January 24, 2024
ಉದಯೋನ್ಮುಖ ಕತೆಗಾರ್ತಿ ಮೇಘನಾ ಕಾನೇಟ್ಕರ್ ಅವರ ನೂತನ ಕಥಾ ಸಂಕಲನ ‘ಲೈಫ್ ನಲ್ಲೊಂದು ಯೂ ಟರ್ನ್'. ಈ ಕಥಾ ಸಂಕಲನಕ್ಕೆ ಬೆನ್ನುಡಿಯನ್ನು ಬರೆದು ಪ್ರೋತ್ಸಾಹಿಸಿದ್ದಾರೆ ಖ್ಯಾತ ಕಾದಂಬರಿಕಾರ, ಅಂಕಣಕಾರರಾದ ಸಂತೋಷಕುಮಾರ್ ಮೆಹೆಂದಳೆ ಇವರು. ಇವರು ತಮ್ಮ ಬೆನ್ನುಡಿಯಲ್ಲಿ “ ಕನ್ನಡ ಕಥೆಗಳ ಸುಗ್ಗಿ ಕಾಲದಲ್ಲಿ ಅನಿರೀಕ್ಷಿತಗಳ ಹೂರಣ, ವಾಸ್ತವವನ್ನು ಮುಖಕ್ಕೆ ರಾಚುವಂತೆ ತೆರೆದಿಡುತ್ತಾ, ಭಾವಾನುಭೂತಿಗಳ ಹಿಂದೆ ಅಡಗಿರಬಹುದಾದ ಕಹಿಸತ್ಯಗಳನ್ನು ನಮಗೆ ಅನುಸಂಧಾನ ಮಾಡಿಸುತ್ತಾ ಸಾಗುವ ಕತೆಗಳ ಲೇಖಕಿ…
ಲೇಖಕರು: Ashwin Rao K P
January 23, 2024
ಕುವೆಂಪು ಭಾಷಾ ಭಾರತಿ ಪ್ರಾಧಿಕಾರ, ಬೆಂಗಳೂರು ಮತ್ತು ಭಾರತೀಯ ವಿದ್ಯಾಭವನ, ಮೈಸೂರು ಕೇಂದ್ರದ ಸಹಯೋಗದೊಂದಿಗೆ ಹೊರತಂದಿರುವ ಜ್ಞಾನ ಭರಿತ ಪುಸ್ತಕ ‘ಮಾರ್ಗವಿಲ್ಲದ ಮಾರ್ಗ' ಈ ಪುಸ್ತಕ ಮಾಲೆಯ ಪ್ರಧಾನ ಸಂಪಾದಕರು ಡಾ. ಪ್ರಧಾನ್ ಗುರುದತ್ತ ಹಾಗೂ ಸಂಪಾದಕರು ಡಾ ಎ ವಿ ನರಸಿಂಹಮೂರ್ತಿ. ಪ್ರಧಾನ ಸಂಪಾದಕರಾದ ಪ್ರಧಾನ್ ಗುರುದತ್ತ ಇವರು ತಮ್ಮ ಬೆನ್ನುಡಿಯ ಬರಹದಲ್ಲಿ ಈ ಕೃತಿಗಳನ್ನು ಹೊರತಂದ ಆಶಯದ ಬಗ್ಗೆ ಮಾಹಿತಿ ನೀಡಿದ್ದಾರೆ. “ಭುವನ್ಸ್ ಬುಕ್ ಯೂನಿವರ್ಸಿಟಿ" ಮಾಲೆಯಲ್ಲಿ ಶ್ರೀಸಾಮಾನ್ಯರಿಗೆ…
ಲೇಖಕರು: Ashwin Rao K P
January 19, 2024
ವಿಜಯಲಕ್ಷ್ಮೀ ನಾಗೇಶ್ ಅವರ ‘ಒಂಟಿ ನಾನಲ್ಲ' ಎನ್ನುವ ಕವನ ಸಂಕಲನ ಇತ್ತೀಚೆಗೆ ಬಿಡುಗಡೆಯಾಗಿದೆ. ಪುಸ್ತಕಕ್ಕೆ ಬೆನ್ನುಡಿಯನ್ನು ಬರೆದಿದ್ದಾರೆ ವಿಮರ್ಶಕ ವೆಂಕಟೇಶ್ ಮಾನು ಇವರು. ಅವರ ಪ್ರಕಾರ ಈ ಕವನಗಳು ಸಂಯಮದೊಡಲಲ್ಲಿ ಬದುಕಿನ ನೋವುಗಳನ್ನು ಮೌನವಾಗಿ ಅನುಭವಿಸಿದ ಪಳೆಯುಳಿಕೆಗಳಂತಿವೆ. ಈ ಕೃತಿಗೆ ಮುನ್ನುಡಿಯನ್ನು ಬರೆದಿದ್ದಾರೆ ವಿಜಯಲಕ್ಷ್ಮೀ ನುಗ್ಗೇಹಳ್ಳಿ. ಇವರು ತಮ್ಮ ಮುನ್ನುಡಿಯಲ್ಲಿ ವ್ಯಕ್ತ ಪಡಿಸಿದ ಭಾವ ಹೀಗಿದೆ... “ಖಾಸಗಿ ವೃತ್ತಿಯಲ್ಲಿ ಶುಶ್ರೂಶಕಿಯಾಗಿದ್ದು ಜನರ ಸ್ವಾಸ್ಥ್ಯ…
ಲೇಖಕರು: Ashwin Rao K P
January 17, 2024
ಸಪ್ನ ಬುಕ್ ಹೌಸ್ ನವರು ‘ಮಹಾಭಾರತದ ಪ್ರಸಿದ್ಧ ಪಾತ್ರಗಳು' ಎನ್ನುವ ಮಾಲಿಕೆಯಲ್ಲಿ ಹೊರತಂದ ಪುಸ್ತಕಗಳಲ್ಲಿ ಹತ್ತನೆಯ ಪುಸ್ತಕ ‘ಹಿರಿಯ ಪಾಂಡವ ಧರ್ಮರಾಯ’. ಮಹಾಭಾರತದ ಪ್ರಮುಖ ಪಾತ್ರಗಳಲ್ಲಿ ಒಂದಾದ ಧರ್ಮರಾಯ ಅಥವಾ ಯುಧಿಷ್ಟಿರನ ವಿವರಗಳನ್ನು ಪುಟ್ಟದ್ದಾಗಿ ಈ ಪುಸ್ತಕದಲ್ಲಿ ನೀಡಿದ್ದಾರೆ. ೨೦೦೫ರಲ್ಲಿ ಪ್ರಥಮ ಮುದ್ರಣ ಕಂಡ ಈ ಕೃತಿ ಈಗ ನಾಲ್ಕನೇ ಮುದ್ರಣವಾಗಿ ಹೊರಬಂದಿದೆ.  ಈ ಮಾಲಿಕೆಯ ಬಗ್ಗೆ ಪ್ರಕಾಶಕರು ಬೆನ್ನುಡಿಯಲ್ಲಿ ಹೀಗೆ ಅಭಿಪ್ರಾಯ ಪಟ್ಟಿದ್ದಾರೆ “ಜಗತ್ತಿನ ಮಹಾಕಾವ್ಯಗಳಲ್ಲಿ ಒಂದೆಂದು…