ಟ್ವೀಟ್ ಟಾನಿಕ್

ಟ್ವೀಟ್ ಟಾನಿಕ್

ಚೀನಾ ಮಹಾಗೋಡೆಯೇನಾದರೂ ನಮ್ಮ ದೇಶದಲ್ಲಿದ್ದಿದ್ದರೆ ಜಗತ್ತಿನ ಅತಿ ಉದ್ದದ ಶೌಚಾಲಯ ಹೊಂದಿರುವ ಖ್ಯಾತಿ ನಮ್ಮದೇ ಆಗಿರುತ್ತಿತ್ತು.

ತನ್ನ ಮಾತು ಕೇಳುವ ಗಂಡನನ್ನು ಮಹಿಳೆ ಇಷ್ಟಪಡುತ್ತಾಳೆ. ಕಡಿಮೆ ಮಾತನಾಡುವವಳೇ ಹೆಂಡತಿಯಾಗಿ ಬರಲಿ ಎಂದು ಗಂಡ ಅಂದುಕೊಳ್ಳುತ್ತಾನೆ.

ತಾಯ್ತನ ಎಂಬುದು ಎಲ್ಲ ಸ್ತ್ರೀಯರೂ ಬಯಸುವ ಅವಕಾಶ. ಹಾಗಂತ ಅವಕಾಶ ಸಿಕ್ಕಿತೆಂದು ತಾಯಿಯಾಗಬಾರದು.

ನಾವು ಬೇರೆಯವರಿಗೆ ಸಹಾಯ ಮಾಡುವುದಕ್ಕೆ ಈ ಜಗತ್ತಿಗೆ ಬಂದಿದ್ದೇವೆ ಎಂಬ ವಿಚಾರವೇನೊ ಚೆನ್ನಾಗಿದೆ. ಆದರೆ ಆ ಬೇರೆಯವರು ಏನು ಮಾಡಲು ಬಂದಿದ್ದಾರೆ?

ಅಕಸ್ಮಾತ್ತಾಗಿ ಹಾವನ್ನು ತುಳಿದು ಕಚ್ಚಿಸಿಕೊಳ್ಳುವುದು ಅರೇಂಜ್ಡ್ ಮ್ಯಾರೇಜ್. ಹಾವಿನ ಮುಂದೆ ನಿಂತು ಕಡಿ, ಕಡಿ ಎಂದು ಕುಣಿಯುತ್ತಾ ಕಚ್ಚಿಸಿಕೊಳ್ಳುವುದು ಲವ್ ಮ್ಯಾರೇಜ್.

ಫೋನ್ ಕಾಲ್ ರಿಸೀವ್ ಮಾಡುವುದಕ್ಕೆ ನೀವು ಹೆಚ್ಚು ಸಮಯ ತೆಗೆದುಕೊಳ್ಳುತ್ತೀರೆಂದರೆ, ರಿಸೀವ್ ಮಾಡಿದ ಮೇಲೆ ದೊಡ್ಡ ಸುಳ್ಳು ಹೇಳಲಿದ್ದೀರೆಂದರ್ಥ.

ಬೇರೆಯವರಿಗಾಗಿ ಒಳ್ಳೆಯ ಕೆಲಸಮಾಡುತ್ತಲೇ ಹೋದರೆ ಅದು ಸಹಜ ಎನ್ನಿಸಿಬಿಡುತ್ತದೆ. ಗಮನ ಸೆಳೆಯುವುದಕ್ಕಾದರೂ ಕೆಲವೊಮ್ಮೆ ತಪ್ಪು ಮಾಡುತ್ತಿರಬೇಕಾಗುತ್ತದೆ.

ದೆಹಲಿ ಹೆಂಗಸರಿಗೆ ಸುರಕ್ಷಿತವಲ್ಲ. ನೋಡಿ ಶೀಲಾ ದೀಕ್ಷಿತ್ ಅವರಿಗೇನಾಯಿತು.

ವಾದ್ರಾ ಪ್ರಧಾನಿಯಾಗಲಿ ಎಂದು ಬಯಸುತ್ತೇನೆ. ಭೂಮಿ ಬಗ್ಗೆ ಈ ವ್ಯಕ್ತಿಯ ಹಸಿವನ್ನು ನೋಡಿದರೆ, ಕಾಶ್ಮೀರ ಹಾಗಿರಲಿ, ಲಾಹೋರ್- ಇಸ್ಲಾಮಾಬಾದ್ಗಳನ್ನು ಉಳಿಸಿಕೊಡಿ ಅಂತ ಪಾಕಿಸ್ತಾನ ಕೇಳಬಹುದು.

ಭಾರತೀಯ ರಾಜಕಾರಣಿಗಳನ್ನು ಮೂರ್ಖರು ಎನ್ನುವಂತಿಲ್ಲ. ಜನಕ್ಕೆ ಹಾಗೆ ಹೇಳಬಹುದು. ಪ್ರತಿಬಾರಿಯೂ ನೂರು ಕೋಟಿ ಮಂದಿಯನ್ನು ಅವರು ನಂಬಿಸುತ್ತಾರೆ.

ಹೆಂಗಸರ ಬಳಿ ಉಳಿದುಕೊಳ್ಳಬಹುದಾದ ಒಂದೇ ಒಂದು ರಹಸ್ಯ ಎಂದರೆ- ಅವರ ವಯಸ್ಸು.

ದೇವರು ಪ್ರತಿಯೊಬ್ಬ ಪುರುಷನಿಗೂ ಒಬ್ಬ ಮಹಿಳೆಯನ್ನು ಸೃಷ್ಟಿಸಿರುತ್ತಾನೆ. ಆಕೆಯಿಂದ ತಪ್ಪಿಸಿಕೊಂಡರೆ, ಜೀವನ ಅದ್ಭುತವಾಗಿರುತ್ತದೆ.

ಯಾವ ವ್ಯಕ್ತಿಯೂ ಆತನ ಹೆಂಡತಿ ತಿಳಿದುಕೊಂಡಷ್ಟು ಕೆಟ್ಟವನಾಗಿರುವುದಿಲ್ಲ. ಹಾಗೆಯೇ ಅವನ ಅಮ್ಮ ಅಂದುಕೊಂಡಷ್ಟು ಒಳ್ಳೆಯವನೂ ಆಗಿರುವುದಿಲ್ಲ.

ಮಲಗುವಾಗ ಯಾವ ತೊಂದರೆಗಳನ್ನೂ ಹಾಸಿಗೆಗೆ ತೆಗೆದುಕೊಂಡುಹೋಗಬೇಡಿ ಎನ್ನುತ್ತದೆ ಹಳೆಯ ಉಪದೇಶ. ಆದರೆ ಇವತ್ತಿಗೂ ಹೆಚ್ಚಿನವರು ತಮ್ಮ ಹೆಂಡತಿ ಪಕ್ಕದಲ್ಲೇ ಮಲಗುತ್ತಾರೆ.

ಕೆಲವು ಗಂಡಸರ ಸಂಕಟ ವಿಚಿತ್ರವಾಗಿರುತ್ತದೆ. ಹೆಂಡತಿಯ ಮೇಕಪ್ ಖರ್ಚು ಭರಿಸಲಾಗುವುದಿಲ್ಲ. ಆದರೆ ಮೇಕಪ್ಗೆ ಖರ್ಚು ಮಾಡದಿದ್ದರೆ ಹೆಂಡತಿಯನ್ನು ಸಹಿಸಲಾಗುವುದಿಲ್ಲ.

ದಾಂಪತ್ಯ ಚೆನ್ನಾಗಿ ಇರಬೇಕೆಂದರೆ ಮುಖ್ಯವಾಗಿ ಸರಸವಿರಬೇಕು. ಅತಿಮುಖ್ಯವಾಗಿ ಅದು ನಮ್ಮ ಸಂಗಾತಿಯೊಂದಿಗೇ ಇರಬೇಕು.

ಸಾಲ ಮಾಡಿಯಾದರೂ ತುಪ್ಪ ತಿನ್ನಬೇಕು ಎಂಬ ಗಾದೆ ಮಾತಿದೆ. ಹಾಗೆಂದು ತುಪ್ಪ ತಿನ್ನಬೇಕು ಎಂದೆನಿಸಿದಾಗಲೆಲ್ಲ ಸಾಲ ಮಾಡಬಾರದು.

ಮಿಷನ್ ಇಂಪಾಸಿಬಲ್ ಚಿತ್ರವನ್ನು ಕನ್ನಡದಲ್ಲಿ ಮಾಡುವುದಾದರೆ 'ಇದು ಅಸಾಧ್ಯ' ಎಂಬ ಹೆಸರಿಡಬಹುದು. ಮಿಷನ್ ಇಂಪಾಸಿಬಲ್-2 ಮಾಡುವುದಾದರೆ ಆ ಚಿತ್ರಕ್ಕೆ ಇಡಬಹುದಾದ ಹೆಸರು, ನಾವು ಮೊದ್ಲೇ ಹೇಳಿದ್ವಿ ಇದು ಅಸಾಧ್ಯ ಅಂತ.

ನೀವು ಅಂದುಕೊಂಡಂತೆ ಜೀವನ ಸಾಗುತ್ತಿಲ್ಲವೆಂದಾದರೆ ನೀವು ಭವಿಷ್ಯಕ್ಕಿಂತ ಹೆಚ್ಚಾಗಿ ಭೂತಕಾಲದ ಬಗ್ಗೆಯೇ ಯೋಚನೆ ಮಾಡುತ್ತಿದ್ದೀರಿ ಎಂದರ್ಥ. ಹೀಗಾಗಿ ಕಳೆದುಹೋದ ಸಂಗತಿ ಬಿಟ್ಟು ಮುಂದಿನ ಜೀವನದ ಬಗ್ಗೆ ಗಮನಹರಿಸಿ.

ಅದೃಷ್ಟವೆಂಬುದು ನಿಮ್ಮ ಮನೆಯ ಬಾಗಿಲನ್ನು ಬಡಿಯದಿದ್ದರೆ ಬೇಸರಿಸಿಕೊಳ್ಳಬೇಡಿ. ಬಡಿಯಲು ನಿಮ್ಮ ಮನೆಗೆ ಬಾಗಿಲೇ ಇಲ್ಲದಿರಬಹುದು. ಮೊದಲು ಬಾಗಿಲನ್ನು ನಿಲ್ಲಿಸುವ ಕೆಲಸ ಮಾಡಿ. ಪರಿಶ್ರಮಪಡದಿದ್ದರೆ ಅದೃಷ್ಟವೂ ನಿಮ್ಮ ಮನೆ ತನಕ ಬರುವುದಿಲ್ಲ.

ನಿಮಗೇನು ಅನ್ನಿಸುತ್ತೆ ಎಂಬುದರ ಮೇಲೆ ಯಾವುದೇ ನಿರ್ಧಾರಗಳನ್ನು ತೆಗೆದುಕೊಳ್ಳಬೇಡಿ. ಆದರೆ ನೀವು ಏನು ತಿಳಿದುಕೊಂಡಿದ್ದೀರಿ ಎಂಬುದರ ಮೇಲೆ ನಿರ್ಧಾರ ತೆಗೆದುಕೊಳ್ಳಿ. ಏಕೆಂದರೆ ಆ ನಿರ್ಧಾರ ಹೆಚ್ಚು ಗಟ್ಟಿಯಾಗಿರುತ್ತದೆ

ಜಗತ್ತಿನಲ್ಲಿ ನೀವು ನೋಡುತ್ತಿರುವ ಸಂಗತಿಗಳು ನಿಮ್ಮ ಯೋಚನೆಯ ಪ್ರತಿಫಲನಗಳಷ್ಟೇ. ನೀವು ಒಳ್ಳೆಯ ರೀತಿಯಲ್ಲಿ ಯೋಚಿಸಿದರೆ ಜಗತ್ತು ಒಳ್ಳೆಯದಾಗಿರುತ್ತದೆ. ಕೆಟ್ಟ ರೀತಿಯಲ್ಲಿ ಯೋಚಿಸಿದರೆ ಅದೂ ಕೆಟ್ಟದಾಗಿರುತ್ತದೆ.
ಕ್ರಿಯೆ ಮತ್ತು ಯಶಸ್ಸಿನ ನಡುವೆ ಅವಿನಾಭಾವ ಸಂಬಂಧವಿದೆ. ನೀವು ಕೆಲಸವನ್ನೇ ಆರಂಭಿಸದಿದ್ದರೆ ಯಶಸ್ಸು ಕಾಣಲು ಸಾಧ್ಯವೇ ಇಲ್ಲ. ಹೀಗಾಗಿ ಯಶಸ್ಸಿನ ಬೆನ್ನು ಹತ್ತುವ ಮೊದಲು ಯಾವುದಾದರೊಂದು ಕೆಲಸ ಆರಂಭಿಸಿ.

ನಿಮ್ಮಲ್ಲಿರುವ ಜ್ಞಾನ ಎಂದರೆ ಡಬ್ಬದಲ್ಲಿರುವ ಪೈಂಟ್ ಇದ್ದಂತೆ. ಅದನ್ನು ಗೋಡೆಗೆ ಬಳಿದಾಗಲೇ ಅದರ ಮಹತ್ವ ತಿಳಿಯೋದು. ಬರೀ ಡಬ್ಬದಲ್ಲಿದ್ದರೆ ಅದರಿಂದ ಯಾವ ಪ್ರಯೋಜನವೂ ಇಲ್ಲ. ನಿಮ್ಮ ಜ್ಞಾನದಿಂದ ಸುತ್ತಲಿನ ಗೋಡೆಗೆ ವಿವೇಕದ ಬಣ್ಣ ಬಳಿಯಿರಿ.

ಜೀವನದ ಸಾರ್ಥಕ್ಯ ನೀವು ಎಷ್ಟು ಖುಷಿಯಲ್ಲಿದ್ದೀರಿ ಎಂಬುದರ ಮೇಲೆ ನಿರ್ಧಾರವಾಗುವುದಿಲ್ಲ. ಆದರೆ ನಿಮ್ಮಿಂದ ಬೇರೆಯವರು ಎಷ್ಟು ಸಂತೋಷಪಡುತ್ತಾರೆ ಎಂಬುದರ ಮೇಲೆ ನಿರ್ಧರಿತವಾಗುತ್ತದೆ. ಹೀಗಾಗಿ ನಿಮ್ಮ ಸುತ್ತ ಇರುವವರನ್ನು ಖುಷಿಯಾಗಿಡಲು ಪ್ರಯತ್ನಿಸಿ.

ನಿಮಗೆ ಹಾರಲು ಸಾಧ್ಯವಿಲ್ಲವೇ? ಹಾಗಾದರೆ ಓಡಿ. ನಿಮ್ಮಲ್ಲಿ ಓಡಲು ಶಕ್ತಿ ಇಲ್ಲವೇ, ನಡೆದಾಡಿ. ನಿಮಗೆ ನಡೆಯಲೂ ಆಗದಿದ್ದರೆ ತೆವಳಿಕೊಂಡು ಹೋಗಿ. ನೀವು ಏನೇ ಮಾಡಿ, ಮುನ್ನಡೆಯುತ್ತಲೇ ಇರಿ. ಎಲ್ಲಿಯೂ ನಿಲ್ಲಬೇಡಿ.

ಸುಗಮ ರಸ್ತೆಯಿಂದ ಉತ್ತಮ ಚಾಲಕರಾಗಲು ಸಾಧ್ಯವಿಲ್ಲ. ಮೋಡಗಳಿಲ್ಲದ ಆಕಾಶ ಉತ್ತಮ ಪೈಲಟ್ಗಳನ್ನು ತರಬೇತುಗೊಳಿಸದು. ತೊಂದರೆರಹಿತ ಜೀವನ ಉತ್ತಮ ಮನುಷ್ಯರನ್ನು ರೂಪಿಸಲಾರದು. ಹೀಗಾಗಿ ನನಗೇ ಏಕೆ ಸಮಸ್ಯೆಗಳು ಎಂದು ಕೇಳಬೇಡಿ.

Rating
No votes yet

Comments