Sign up | Login
ಸಂಪದ
  • ಲೇಖನಗಳು
  • ಬ್ಲಾಗ್ಸ್
  • ಚರ್ಚೆಯ ವೇದಿಕೆ
  • ಚಿತ್ರಪುಟಗಳು
  • Podcasts
  • ಪುಸ್ತಕಗಳು
  • ಆರ್ಕೈವ್
  • ಸಂಪರ್ಕಿಸಿ
  • Support Sampada
  • ಅಂಚೆ ಪೆಟ್ಟಿಗೆ
  • Font Help

Internet Explorer ಬಳಸುತ್ತಿರುವ ಸಂಪದ ಓದುಗರ ಗಮನಕ್ಕೆ

ಸಂಪದ › ಚರ್ಚಾ ವೇದಿಕೆ › ಸಮುದಾಯ › ಸಮುದಾಯ

Bangalore ಅನ್ನು BENGALURU ಆಗಿ ಬದಲಾಯಿಸುವ

November 14, 2007 - 9:16pm — cmariejoseph

ಬೆಂಗಳೂರು ಎಂಬ ಹೆಸರು ಇಂಗ್ಲಿಷಿನಲ್ಲಿ Bangalore ಎಂದು ಬರೆಯಲಾಗುತ್ತೆ. ಇಂಗ್ಲಿಷಿನಲ್ಲಿ ಯೋಚಿಸುವ ಮಂದಿ Bang (ಬ್ಯಾಂಗ್) Galore (ಗ್ಯಾಲೋರ್) ಎಂಬುದಾಗಿ ಸಂಬೋಧಿಸಿ ಬ್ಯಾಂಗಲೋರ್ ಎನ್ನುವುದನ್ನು ಗಮನಿಸಿದ್ದೇವೆ. ಇದು ಎಷ್ಟರ ಮಟ್ಟಿಗೆ ಬಳಕೆಗೆ ಬಂದಿದೆ ಎಂದರೆ ಹಳ್ಳಿಗಾಡಿನ ಜನರೂ ಸಹ ಬೆಂಗಳೂರನ್ನು ಬೆಂಗಳೂರೆನ್ನದೆ ಬ್ಯಾಂಗಲೋರ್ ಎಂದು ಉಚ್ಚರಿಸುವಷ್ಟರ ಮಟ್ಟಿಗೆ. ಗಮನಿಸತಕ್ಕ ವಿಷಯವೆಂದರೆ ಮೂಲ ಬೆಂಗಳೂರಿಗರೂ ಸುತ್ತಮುತ್ತಲ ಜಿಲ್ಲೆಗಳವರೂ ಈ ರೀತಿ ಪ್ರವರ್ತಿಸುವುದಿಲ್ಲ. ಅಂದರೆ ಸ್ಥಳೀಯರನ್ನು ಹೊರತುಪಡಿಸಿ ಉಳಿದ ಜನರು ಹಾಗೂ ಬೆಂಗಳೂರಿನಲ್ಲಿ ನೆಲೆನಿಂತ ಅನ್ಯ ಜನರು ಬೆಂಗಳೂರನ್ನು ಬ್ಯಾಂಗಲೋರ್ ಎಂದು ಕರೆಯುತ್ತಾರೆಂದಾಯಿತು.

ಈಗ ಬೆಂಗಳೂರನ್ನು ಬೆಂಗಳೂರೆಂದೇ ಕರೆಯೋಣವೆಂಬ ಕೂಗು ಎದ್ದಿದೆ. ಸರ್ಕಾರವೂ ಇದನ್ನು ಒಪ್ಪಿಕೊಂಡಿದೆ. ಆದರೆ ಜನಮಾನಸದ ದುಷ್ಚಟವನ್ನು ಅಷ್ಟು ಸುಲಭದಲ್ಲಿ ಹೋಗಲಾಡಿಸಲಾದೀತೇ?

ವಿಶಾಖಪಟ್ಟಣಕ್ಕೆ ಪ್ರಶಾಂತಿ ಎಕ್ಸ್ ಪ್ರೆಸ್ ಬರುವ ಮುನ್ನ ನಾವೆಲ್ಲ ಮದ್ರಾಸ್ ಮಾರ್ಗವಾಗಿ ಹೋಗಬೇಕಿತ್ತು. ಈಗೀಗ ಮದ್ರಾಸ್ ಎಂದುಬಿಟ್ಟರೆ ಏನೋ ಅಭಾಸವಾಯಿತೆನ್ನುವಂತೆ ಮದ್ರಾಸಿಗರಲ್ಲದವರೂ ಮುಖ ನೋಡುತ್ತಾರೆ. ಚೆನ್ನಾಯಿ ಅಲ್ಲವೇ ಅನ್ನುತ್ತಾರೆ.

ಹೀಗೇ ಮದರಾಸಿನ ರೈಲು ನಿಲ್ದಾಣದಲ್ಲಿ ವಿಜಯವಾಡಕ್ಕೆ ಜನಶತಾಬ್ದಿ ಟಿಕೆಟ್ ಖರೀದಿಸಲು ನಿಂತಿದ್ದೆ. ನಾನು ಚೀಟಿಯಲ್ಲಿ MAS to BZA ಎಂದು ನಮೂದಿಸಿದ್ದಕ್ಕೆ ಕೌಂಟರಿನಲ್ಲಿದ್ದವನು ಆಕ್ಷೇಪಿಸಿದ. ಮತ್ತೆ ಕೋಡ್ ಏನಿದೆಯಪ್ಪ ಎಂದಿದ್ದಕ್ಕೆ ಅದನ್ನು ನಮಗೆ ಬಿಡಿ, ನೀವು ಚೆನ್ನಾಯಿ ಎಂದೇ ಬರೆಯಿರಿ ಎಂದ. ನಿಜ ಹೇಳಬೇಕೆಂದರೆ ಮದರಾಸಿನ ಕೋಡ್ MAS ಎಂದೇ ಇದೆ.

ಈ ನಿಟ್ಟಿನಲ್ಲಿ ನೋಡಿದಾಗ ಬೆಂಗಳೂರನ್ನು ಬೆಂಗಳೂರೆಂದು ಉಚ್ಚರಿಸುವ, ಬರೆಯುವ ಹಾಗೂ ಬೇರೆಯವರಿಂದ ಹಾಗೆ ಹೇಳಿಸುವ ಪ್ರಕ್ರಿಯೆಯಲ್ಲಿ ನಮ್ಮ ಕಲ್ಪನೆಗೂ ಮೀರಿದ ಇಚ್ಛಾಶಕ್ತಿ ಹಾಗೂ ಪ್ರೇರಣೆಗಳ ಅಗತ್ಯವಿದೆ. ಈಗಾಗಲೇ NDTV ಯವರು BENGALURU ಪದದ ಬಳಕೆಯನ್ನು ತಮ್ಮ ಟಿವಿ ವಾಹಿನಿಯಲ್ಲಿ ತಂದುಬಿಟ್ಟಿದ್ದಾರೆ. ಹಾಗೆಯೇ ಹಲವರು ಸ್ವಯಂಪ್ರೇರಣೆಯಿಂದ ತಮ್ಮ ನಾಮಫಲಕಗಳಲ್ಲಿ ಹಾಗೂ ವಿಳಾಸಗಳಲ್ಲಿ BENGALURU ಎಂಬುದಾಗಿ ಬಳಸುತ್ತಿದ್ದಾರೆ. ಸರ್ಕಾರದ ಆದೇಶ ಬರುವವರೆಗೂ ಕಾಯದೆ ಈಗಿಂದೀಗಲೇ ನಾನೂ ನೀವೂ ಬೆಂಗಳೂರನ್ನು BENGALURU ಎಂದು ಬರೆಯುವ ಹಾಗೂ ತಿದ್ದುವ ಪ್ರಯತ್ನದಲ್ಲಿ ತೊಡಗೋಣ.

ನಮ್ಮೆಲ್ಲ ಪತ್ರಗಳು, ಲೇಖನಗಳು, ದಾಖಲೆಗಳು, ದಸ್ತಾವೇಜುಗಳು, ಕರಡಚ್ಚುಗಳು, ನಾಮಫಲಕಗಳು, ಠಸ್ಸೆಗಳು, ಶಿರೋನಾಮೆಗಳು, ವಿಳಾಸಸೂಚಿಗಳು ಇತ್ಯಾದಿಗಳಲ್ಲೆಲ್ಲ Bangalore ಅನ್ನು BENGALURU ಆಗಿ ಬದಲಾಯಿಸುವ ಕೆಲಸಕ್ಕೆ ಇಂದೇ ಚಾಲನೆ ನೀಡೋಣ.

‹ ಟಿ ವಿ ಯಲ್ಲಿ ತೇಜಸ್ವಿ ಬಗ್ಗೆ ಇಸ್ಮಾಯಿಲ್ ಮಾತನಾಡಿದ್ದು ಕೇಳಿದಿರಾ? ದುಡಿಯೋಕೆ ದೇಶ ಬಿಟ್ಟು ಹೊಗೋದು ತಪ್ಪಾ? ›
  • ಸಮುದಾಯ
Ornamental seperator
  • Login or register to post comments
  • 438 hits
  • Email this forum
  • Delicious
  • Google
  • Yahoo

ಕಾಮೆಂಟ್ ನೋಟ ಆಯ್ಕೆಗಳು

Select your preferred way to display the comments and click "Save settings" to activate your changes.
November 15, 2007 - 1:43am — vijayp

ಉ: Bangalore ಅನ್ನು BENGALURU ಆಗಿ ಬದಲಾಯಿಸುವ

vijayp's picture

ನೀವು ಹೇಳೋದು ಸರಿ. ಒಂದು ವಿಷಯ: maps.google.comನಲ್ಲಿ ಬೆಂಗಳೂರನ್ನು Bangalore ಯಾ Bengaluru ಎಂದು ಎರಡೂ ಹೆಸರುಗಳಿಂದ ಸರ್ಚ್ ಮಾಡಬಹುದು. ಆದರೆ ಅದು ನಕಾಶೆಯಲ್ಲಿ ತೋರಿಸುವುದು Bengaluru ಅಂತಲೇ Smiling

  • Login or register to post comments
  • link
  • Email this ಪ್ರತಿಕ್ರಿಯೆ
November 15, 2007 - 7:59am — cmariejoseph

ಉ: Bangalore ಅನ್ನು BENGALURU ಆಗಿ ಬದಲಾಯಿಸುವ

cmariejoseph's picture

maps.google.comನ ಈ ವಿಷಯ ನನಗೆ ತಿಳಿದಿರಲಿಲ್ಲ. ನಿಮಗೆ ತುಂಬಾ ಧನ್ಯವಾದಗಳು.

  • Login or register to post comments
  • link
  • Email this ಪ್ರತಿಕ್ರಿಯೆ
November 15, 2007 - 10:33am — srinivasps

ಉ: Bangalore ಅನ್ನು BENGALURU ಆಗಿ ಬದಲಾಯಿಸುವ

srinivasps's picture

ಸರ್ಕಾರ ಏಕೆ BENGALURU ಅಂಥ ನಿರ್ಧಾರ ಕೈ ಗೊಂಡಿತು?
BENGALOORU ಸರಿ ಅಲ್ಲವೆ? ಉ ಮತ್ತು ಊ ಹೇಗೆ ಬಿಡಿಸಿಯಾರು?
BENGALURU - "ಬೆಂಗಳುರು" ಎಂದು ತಪ್ಪಾಗಿ ಉಚ್ಚರಿಸಬಹುದಲ್ಲವೇ?
ಗೆಳೆಯನ ಜೊತೆ ಮಾತುಕತೆಗೆ ಇಳಿದಾಗ, ಏನೊ algorithm ಇದೆ ಎಂದ, ನಿಜವೇ?
ಅಥವಾ ಇದೂ ಬರೀ numerology ಆಟವೇ - "ಯಡ್ಡ್ಯೂರಪ್ಪ" ನವರ ಹಾಗೇ??Smiling

--ಶ್ರೀ

  • Login or register to post comments
  • link
  • Email this ಪ್ರತಿಕ್ರಿಯೆ

ಮೇಲಿನ ಪುಟವನ್ನು ಹೋಲುವ ಪುಟಗಳು - 'ಸಂಪದ' ಆರ್ಕೈವಿನಿಂದ

  • ಬೆಂಗಳೂರು v/s Bangalore
  • ಸಮಸ್ತ ಕನ್ನಡಿಗರಿಗೆ ಯುಗಾದಿಯ ಶುಭಾಷಯಗಳು
  • ನುಡಿಮುತ್ತುಗಳು
  • ಚಿತ್ತ ಚಿತ್ತಾರ
  • ೧೨ ಊರುಗಳ ಹೆಸರು ಸರಿಪಡಿಸಿಕೆಗೆ ಅಂತೂ ಕೊನೆ ಬಂತು!
Syndicate content

ಲೇಖಕರು

cmariejoseph's picture

ಪೂರ್ಣ ಹೆಸರು
ಮರಿಜೋಸೆಫ್

ಪರಿಚಯ

ಕನ್ನಡ ಕ್ರೈಸ್ತರ ಭಾಷಾ ಚಳವಳಿಯ ಮುಂಚೂಣಿಯಲ್ಲೊಬ್ಬ.

ಸದಸ್ಯರ ಪೂರ್ಣ ಪ್ರೊಫೈಲ್ ವೀಕ್ಷಿಸಿ

ನೀರಿನ ಜಾಡು ಹಿಡಿದು

Sharada Prasad

ವಿಹರಿಸಿ

  • ಹೊಸ ಬರಹ ಸೇರಿಸಿ - Publish your write-up on Sampada
  • 'ಸಂಪದ' ಕುರಿತು ನಿಮ್ಮ ಸಲಹೆ/ಅಭಿಪ್ರಾಯಗಳನ್ನು ಕಳುಹಿಸಿ
  • Mailing Lists
  • ಚಟುವಟಿಕೆ
  • ಕನ್ನಡ ಬಟನ್ನುಗಳು
  • ಕನ್ವರ್ಟರ್

ಚರ್ಚೆ

  • ಸಹಾಯ ಮಾಡಿ : ಕನ್ನಡದ ವೆಬ್ ಪೇಜ್ ಮಾಡಬೇಕಾಗಿದೆ.
  • ದಯವಿಟ್ಟು ಇದನ್ನ ಬಿಡಿಸಿ - ಪಂಪನ ಆದಿಪುರಾಣದ ಪದ್ಯ
  • ನಾಡೋಜ ಎಂದರೆ.....
  • ಸವಾಲೊಂದು ನಿನ್ನ ಮ್ಯಾಲ...
  • ಇಂಗ್ಲಿ’ ಷ್ ’ ನಲ್ಲಿ ’ ಷ ’ ಕಾರ ಯಾಕೆ? ’ ಶ’ ಸಾಲದೇ?
  • ’ದ್ರಾವಿಡ’ ಶಬ್ದದ ಬದಲು ’ತೆನ್ನುಡಿ’ ಎನ್ನುವ ಶಬ್ದ
  • ನೀವೆನ೦ತೀರಿ
ಇನ್ನಷ್ಟು

ಇತ್ತೀಚಿನ ಪ್ರತಿಕ್ರಿಯೆಗಳು

  • raghava
    ಉ: ಅಕ್ಷರೋದಿ ಸೂತ್ರ
    May 17, 2008 - 12:10am
  • uniquesupri
    ಉ: ಬ್ಲಾಗ್ ಮಂಡಲದಲ್ಲಿ ಸಿನಿಮಾ ದಿಗ್ಗಜರು
    May 16, 2008 - 11:37pm
  • uniquesupri
    ಉ: ಒಂದು affair
    May 16, 2008 - 10:47pm
  • karihaida
    ಉ: ವಿಂಡೋಸ್ ಒಳಗೇ ಲಿನಕ್ಸ್ ಹಾಕಿಕೊಳ್ಳಬಹುದು!
    May 16, 2008 - 7:51pm
  • ಸಂಗನಗೌಡ
    ಉ: ಕಲ್ಯಾಣ ಕ್ರಾಂತಿ ಎಂಬ ನೋವಿನ ಹಲ್ಲು!
    May 16, 2008 - 6:13pm
  • hpn
    ಉ: ಅಕ್ಷರೋದಿ ಸೂತ್ರ
    May 16, 2008 - 5:40pm
  • shreekant.mishrikoti
    ಉ: ’ಸಖೇದಾಶ್ಚರ್ಯ’ ಮತ್ತು ’ಸನೇಕ’
    May 16, 2008 - 4:50pm
  • vinayak.mdesai
    ಉ: ವಿಂಡೋಸ್ ಒಳಗೇ ಲಿನಕ್ಸ್ ಹಾಕಿಕೊಳ್ಳಬಹುದು!
    May 16, 2008 - 4:47pm
  • anivaasi
    ಉ: ಕಲಿತರೆ ಹೀಗೆ...
    May 16, 2008 - 3:36pm
  • vinayudupa
    ಉ: ಸಂಸ್ಕೃತರಹಿತ ಕನ್ನಡ ಕನ್ನಡದ ಜಾಲಿಗರಿಗೆ ಮಾತ್ರವೆ?
    May 16, 2008 - 3:32pm
ಇನ್ನಷ್ಟು

ನಿಮಗೆ ಒಂದು ವೇಳೆ ಒಳ್ಳೆಯ ಸಲಹೆ ದೊರೆತರೆ ಅದನ್ನು ಕೂಡಲೆ ಬೇರೆಯವರಿಗೆ ತಲುಪಿಸಿ. ಅದರಿಂದ ನಿಮಗೆ ಉಪಯೋಗವಾಗುವುದು ಅಷ್ಟರಲ್ಲೇ ಇದೆ ಬಿಡಿ.

— ಆಸ್ಕರ್ ವೈಲ್ಡ್, ಹೆಸರಾಂತ ಐರಿಶ್ ಹಾಸ್ಯಗಾರ, ಕವಿ, ಕಾದಂಬರಿಗಾರ

Community: FAQ | ಕಾರ್ಯಕ್ರಮಗಳು | Podcasts | ನುಡಿಮುತ್ತುಗಳು | ಪುಸ್ತಕಗಳು |

Community Blogs: Collective Listing | ಆರೋಗ್ಯ ಸಂಪದ | ಕೃಷಿ - ಶ್ಯಾಮ್ ಕಶ್ಯಪ

Individual Blogs: U R Ananthamurthy | OLN Swamy | N A M Ismail | K V Narayan | Abdul Rashid (Blogambari)

Other associated projects: Kannada Learning Center | Kannada Localization Initiative | Development Wiki | Sampada Mailing Lists

ನಿಮಗಾಗಿ...

ಸಂಪದ ಪಾಡ್ಕ್ಯಾಸ್ಟ್ (ಶ್ರಾವ್ಯ ಸಂದರ್ಶನಗಳು) | "ದಿ ಬೆಸ್ಟ್ ಆಫ್ ಸಂಪದ" | ಪ್ಲಾನೆಟ್ ಕನ್ನಡ
ಡೌನ್ಲೋಡ್ ಮಾಡಿಕೊಳ್ಳಿ:‌ ಬರಹ IME | ಫೈರ್ ಫಾಕ್ಸ್ | ಒಪೇರಾ

Some Rights Reserved. Sampada Initiative by Sampada Foundation, 2005 - 2007.
Terms of Use | Contact | About Sampada | Sampada in News/Media | Core Team

The views expressed here are of the respective author(s) and Sampada administration does not necessarily subscribe to them.
RSS: All posts | Comments
Blogs | Podcasts

separator