ಸಂಪದದಲ್ಲಿ ಹೊಸತು! | Sign up | Login | Font Help
ಸಂಪದ
  • ಲೇಖನಗಳು
  • ಬ್ಲಾಗ್ಸ್
  • ಚರ್ಚೆಯ ವೇದಿಕೆ
  • ಚಿತ್ರಪುಟಗಳು
  • Podcasts
  • ಪುಸ್ತಕಗಳು
  • ಆರ್ಕೈವ್
  • ಸಂಪರ್ಕಿಸಿ
  • Sampada Foundation
  • ಅಂಚೆ ಪೆಟ್ಟಿಗೆ
  • Font Help

ತಿಳಿ ಹಾಸ್ಯ ಮರೆತಿಲ್ಲ: "ಮಜಾವಾಣಿ"

ಸಂಪದ › ಚರ್ಚಾ ವೇದಿಕೆ › ಮಾತುಕತೆ › ಸುದ್ದಿ, ಸಮಾಚಾರ

ಮರಾಠಿಗರಿಗೆ ಜೀವ ತುಂಬಿದ ಕನ್ನಡ ರಣಧೀರ ಪಡೆ

November 16, 2005 - 4:06pm — anoopkittur

ಬೆಳಗಾವಿಯ ಮೇಯರ್ ಶ್ರೀ ವಿಜಯ ಮೋರೆಯವರಿಗೆ ಬೆಂಗಳೂರಿನಲ್ಲಿ ಕನ್ನಡ ರಣಧೀರ ಪಡೆಯ ಕಾರ್ಯಕರ್ತರು ಮಸಿ ಬಳಿದು ಕನ್ನಡದ ರಕ್ಷಣೆಗೆ ಕನ್ನಡದ ನೆಲ, ಜಲದ ರಕ್ಷಣೆಗೆ ಭಾರೀ ಶೌರ್ಯದ ಕೆಲಸ ಮಾಡಿದರೆಂದು ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷರಾದ ಶ್ರೀ ಚಂಪಾ ಕೊಂಡಾಡುತ್ತಿದ್ದಾರೆ. ಆದರೆ ಇತ್ತೀಚೆನ ದಿನಗಳಲ್ಲಿ ಬೆಳಗಾವಿಯಲ್ಲಿ ಮರಾಠಿಯ ವಾತಾವರಣ ಕಡಿಮೆ ಆಗುತ್ತಿದೆ. ಬೆಳಗಾವಿಯ ಮರಾಠಿ ಭಾಷಿಗರು ಕನ್ನಡಿಗರ ಜೊತೆಗೆ ಸೌಹಾರ್ದತೆಯಿಂದ ಬಾಳುವುದನ್ನು ರೂಢಿ ಮಾಡಿಕೊಂಡಿದ್ದಾರೆ.ಅದು ಅವರಿಗೆ ಅನಿವಾರ್ಯವೂ ಮತ್ತು ಅಗತ್ಯವೂ ಆಗಿದೆ. ಬೆಳಗಾವಿ ಮಹಾರಾಷ್ಟ್ರಕ್ಕೆ ಸೇರಬೇಕೆಂಬ ಕೂಗು ಸತ್ತು ಹೋಗಿದೆ. ಇದರಿಂದಾಗಿಯೇ ಭಾಷೆಯ ಆಧಾರದ ಮೇಲೆ, ಬೆಳಗಾವಿ ಮಹಾರಾಷ್ಟ್ರಕ್ಕೆ ಸೇರಬೇಕೆಂಬ ಒಂದೇ ಅಜೆಂಡಾದ ಮೇಲೆ ಚುನಾವಣೆಯಲ್ಲಿ ಗೆಲ್ಲುತ್ತಿದ್ದ ಎಂ.ಇ.ಎಸ್, ನೆಲ ಕಚ್ಚಿದೆ. ಇತ್ತೀಚೆನ ಕೆಲವು ವರ್ಷಗಳಲ್ಲಿ ಬೆಳಗಾವಿಯ ಮೇಯರ್ ಆಗಿ ಕನ್ನಡದ ಶ್ರೀ ಸಿದ್ದನಗೌಡ ಪಾಟೀಲರು ಕಾರ್ಯ ನಿರ್ವಹಿಸಿದ್ದಾರೆ. ಬೆಳಗಾವಿ ಮಹಾರಾಷ್ಟ್ರಕ್ಕೆ ಸೇರಬೇಕೆಂದು ಬೆಳಗಾವಿ ನಗರ ಪಾಲಿಕೆ ಸಾಕಷ್ಟು ಬಾರಿ ನಿರ್ಣಯ ತೆಗೆದುಕೊಂಡಿದೆ. ಆನಿರ್ಣಯಕ್ಕೆ ಯಾವುದೇ ಬೆಲೆ ಇಲ್ಲ. ಅವರ ನಿರ್ಣಯಕ್ಕೆ ತುಂಬಾ ಪ್ರಚಾರ ಸಿಕ್ಕಿದ್ದು ಈ ಸಲವೇ ಇರಬೇಕು. ಇರಲಿ, ಅವರ ನಿರ್ಣಯದ ವಿರುದ್ಧ ಧರಣಿ, ಸತ್ಯಾಗ್ರಹ, ಮೆರವಣಿಗೆ, ಪ್ರತಿಕೃತಿ ದಹನ, ಬಂದ್ ಎಲ್ಲವೂ ಸರಿ. ಆದರೆ, ಮೇಯರ್ ಗೆ ಕಪ್ಪು ಮಸಿ ಬಳಿದು, ಅದರ ಮೂಲಕ ಪ್ರತಿಭಟನೆ ವ್ಯಕ್ತ ಪಡಿಸಿದ್ದು ಕನ್ನಡದ ಹೋರಾಟಕ್ಕೇ ಮಸಿ ಬಳಿದಂತೆ. ಇದರಿಂದ ಆಗಿದ್ದೇನು? ಬೆಳಗಾವಿಯ ನಮ್ಮ ಗೆಳೆಯರು ಹೇಳಿದ್ದು, "ಸತ್ತು ಹೋದ ಎಂ.ಇ.ಎಸ್ ಗೆ ಜೀವ ತುಂಬಿದರು". ಈ ಕುರಿತು ಚಂಪಾ ಆದಿ ಎಲ್ಲಾ ಸಾಹಿತಿ ವರೇಣ್ಯರು ಗಂಭೀರವಾಗಿ ಚಿಂತಿಸುವ ಅಗತ್ಯವಿದೆ

‹ ಈಜಿಯಾಗಿ ಓಡಾಡಿ ...... ಈಜಿ ಆಟೋ ...... ಕುಮಾರಣ್ಣನ style ›
  • ಸುದ್ದಿ, ಸಮಾಚಾರ
~.~
  • Login or register to post comments
  • 1039 hits
  • ಈ ಪುಟವನ್ನು ಇ-ಮೇಯ್ಲ್ ಮಾಡಿ
  • Delicious
  • Google
  • Yahoo

ಕಾಮೆಂಟ್ ನೋಟ ಆಯ್ಕೆಗಳು

Select your preferred way to display the comments and click "Save settings" to activate your changes.
November 22, 2005 - 10:05pm — Jagadish

ಈಗ ಏನು ಅದರಿಂದ ತೊಂದರೆ ಇಲ್ಲ...

Jagadish's picture

ಒಂದ್ ರೀತಿ ನೀವು ಹೇಳೋದು ಸರಿ ಅನ್ನಿಸಿದರೂ, ಅವ್ರಿಗೆ ಮುಟ್ ನೋಡಿಕೊಳ್ಳೊ ಹಂಗೆ ಬಿದ್ರೇನೆ ಸರಿ ಹೋಗೋದು. . .ಮುಖ್ಯ ಎಂ.ಈ.ಎಸ್ ನ ಅಲ್ಲಿಂದ ಓಡಿಸ್ಬೇಕು.

"ನಾನು ಕನ್ನಡದ ಕಂದ"

  • Login or register to post comments
  • link
  • ಈ ಪುಟವನ್ನು ಇ-ಮೇಯ್ಲ್ ಮಾಡಿ

ಮೇಲಿನ ಪುಟವನ್ನು ಹೋಲುವ ಪುಟಗಳು - 'ಸಂಪದ' ಆರ್ಕೈವಿನಿಂದ

  • ಕನ್ನಡ ರಣಧೀರರ ಕೆಲಸ ಬೆಳಗಾವಿಗೆ ಕುತ್ತು
  • ೩ನೆಯ ಸಂಚಿಕೆ: ಜ್ಞಾನಪೀಠ ಪುರಸ್ಕೃತ ಸಾಹಿತಿ, ಯು ಆರ್ ಅನಂತಮೂರ್ತಿಯವರೊಂದಿಗೆ...
  • ಕನ್ನಡದ ಕಂಪು
  • ಗೆಳೆಯರೆ ಇದು ನನ್ನ ಮೊದಲ ಕನ್ನಡ ಬ್ಲಾಗಿಂಗ ಪ್ರಯತ್ನ,
  • ಬೆಳಗಾವಿ ಹೆಸರು ಬದಲಾವಣೆಗೆ ಕೇಂದ್ರ ಸರಕಾರ ನಕಾರ, ಇದು ನ್ಯಾಯವೇ?
Syndicate content

ಲೇಖಕರು

anoopkittur's picture

ಪರಿಚಯ

Am Anoop, working in a cooperative concern in Bangalore.

ಸದಸ್ಯರ ಪೂರ್ಣ ಪ್ರೊಫೈಲ್ ವೀಕ್ಷಿಸಿ

Dr. Ullas Karanth (ಡಾ. ಉಲ್ಲಾಸ್ ಕಾರಂತ)
ನಿರೀಕ್ಷಿಸಿ!

ವಾಟರ್ ಪೋರ್ಟಲ್: ದಿನದ ಚಿತ್ರ

ಬಾವಿ

ಮೂಡಬಿದ್ರಿಯ ಸಾವಿರ ಬಸದಿಯ ಬಳಿ ಒಂದು ಬಾವಿ.
(ಫೋಟೋ: ಸುದರ್ಶನ್ (ಅನಿವಾಸಿ))

ವಾರದ ಲೇಖನ
ಬೃಹತ್ ನೀರಾವರಿ ಯೋಜನೆಗಳು: ಮಹಾ ಅಸಂಗತಕ್ಕೊಂದು ಮುನ್ನುಡಿ - ಎನ್ ಎ ಎಂ ಇಸ್ಮಾಯಿಲ್

ವಾರದ ವೀಡಿಯೋ
ಬಾನಿಗೊಂದು ಆಲಿಕೆ (ಮಳೆನೀರು ಸಂಗ್ರಹ)

ಮತ್ತಷ್ಟು...

ವಿಹರಿಸಿ

  • ಸಂಪದದಲ್ಲಿ ಬರೆಯುವ ಮುನ್ನ
  • ಹೊಸ ಬರಹ/ಚಿತ್ರ ಸೇರಿಸಿ
  • 'ಸಂಪದ' ಕುರಿತು ನಿಮ್ಮ ಸಲಹೆ/ಅಭಿಪ್ರಾಯಗಳನ್ನು ಕಳುಹಿಸಿ
  • ಚಟುವಟಿಕೆ
  • ಕನ್ನಡ ಬಟನ್ನುಗಳು
  • ಕನ್ವರ್ಟರ್

ಚರ್ಚೆ

  • ನಗು ಸಹಜವೋ, ಗಾಂಭೀರ್ಯ ಸಹಜವೋ?
  • ರ, ಱ ಹಾಗೂ ಳ, ೞ ಬಗ್ಗೆ ವಿಚಾರವಿನಿಮಯ ಮಾಡಿಕೊಳ್ಳಲು ಸಂಪದದಲ್ಲಿ ಒಬ್ಬನೇ ಒಬ್ಬ ಕನ್ನಡಿಗ/ಕನ್ನಡಗಿತ್ತಿ ಇಲ್ಲ.
  • ಶಬ್ದಗಳನ್ನು ಸೇರಿಸುವುದು ಹೇಗೆ
  • ಬಿಡ್ತಾರ್‍
  • ಪೆಱೆ/ಹೆಱೆ
  • ಉನ್ನತ ಶಿಕ್ಷಣದಲ್ಲಿ ಕನ್ನಡ ಸಾಧ್ಯವೇ??
  • must, can, may - ಕನ್ನಡದಲ್ಲಿ ಸಮಗಳೇನು?
ಇನ್ನಷ್ಟು

ಇತ್ತೀಚಿನ ಪ್ರತಿಕ್ರಿಯೆಗಳು

  • kadakolla05
    ಉ: ಸುಲಭಕನ್ನಡಕೈಗನ್ನಡಿ- (ಆವೃತ್ತಿ ೧.೦)
    August 30, 2008 - 2:09pm
  • srinivasps
    ಉ: ಕಚೇರಿ ಎಂಬ ನರಕ-೧
    August 30, 2008 - 1:56pm
  • srinivasps
    ಉ: ತಂಬೂರಿ ಮೀಟಿದವ.. ಭವಾಬ್ದಿ ದಾಟಿದವ...
    August 30, 2008 - 1:34pm
  • pallavi.dharwad
    ಉ: ಕಾಡುಕೋಳಿಯ ಜಾಡು ಹಿಡಿದು...
    August 30, 2008 - 12:53pm
  • shreedevikalasad
    ಉ: ತಾರಸಿಯ ಗೋಡೆ ಮತ್ತು ಕ್ಯಾನ್ವಾಸ್
    August 30, 2008 - 12:29pm
  • pallavi.dharwad
    ಉ: ತಾರಸಿಯ ಗೋಡೆ ಮತ್ತು ಕ್ಯಾನ್ವಾಸ್
    August 30, 2008 - 12:20pm
  • pallavi.dharwad
    ಉ: ಕಚೇರಿ ಎಂಬ ನರಕ-೧
    August 30, 2008 - 12:11pm
  • kulmanju
    ಉ: ನೀನು ಕಳುಹಿಸಿದ ಸ್ಮೈಲಿ ಚಾಟು ಬಾಕ್ಸಿನಲ್ಲಿ ಮಿನುಗುತ್ತಿತ್ತು!
    August 30, 2008 - 12:10pm
  • pallavi.dharwad
    ಉ: ಕಚೇರಿ ಎಂಬ ನರಕ-೧
    August 30, 2008 - 12:10pm
  • pallavi.dharwad
    ಉ: ಕಾದಿರುವೆ ನಿನಗಾಗಿ
    August 30, 2008 - 12:09pm
ಇನ್ನಷ್ಟು


ಏನಾದೊಡೆಯುಮಪ್ಪುದುಂಟು, ಸಿದ್ಧನಿರದಕೆ |
ಭಾನು ತಣುವಾದಾನು; ಸೋಮ ಸುಟ್ಟಾನು ||
ಕ್ಷೋಣಿಯೇ ಕರಗೀತು, ಜಗ ಶೂನ್ಯವಾದೀತು |
ಮೌನದಲಿ ಸಿದ್ಧನಿರು -- ಮಂಕುತಿಮ್ಮ ||

— ಡಿ ವಿ ಜಿ

ಮತ್ತಷ್ಟು: ಆರೋಗ್ಯ ಸಂಪದ | ಕೃಷಿ ಸಂಪದ | ನುಡಿಮುತ್ತುಗಳು

ಯೋಜನೆಗಳು: Kannada Learning Center | ಗ್ನು/ಲಿನಕ್ಸ್ ನಲ್ಲಿ ಕನ್ನಡ ತರಲು ನಡೆದಿರುವ ಕೆಲವು ಯೋಜನೆಗಳು | ಡಾಕ್ಯುಮೆಂಟೇಶನ್ Wiki | ಸಂಪದ ಅಂಚೆಪೆಟ್ಟಿಗೆಗಳು (Sampada Mailing Lists)

ಸ್ವರ್ಣ ಸಂಪದ ಸಂಪದ ಪಾಡ್ಕ್ಯಾಸ್ಟ್ (ಶ್ರಾವ್ಯ ಸಂದರ್ಶನಗಳು) | "ದಿ ಬೆಸ್ಟ್ ಆಫ್ ಸಂಪದ" | ಪ್ಲಾನೆಟ್ ಕನ್ನಡ

ಡೌನ್ಲೋಡ್ ಮಾಡಿಕೊಳ್ಳಿ:‌ ಬರಹ IME | ಫೈರ್ ಫಾಕ್ಸ್ | ಒಪೇರಾ

ಕೆಲವು ಹಕ್ಕುಗಳನ್ನು ಕಾಯ್ದಿರಿಸಲಾಗಿದೆ. ಸಂಪದ ಸಮುದಾಯ ಸಂಪದ ಫೌಂಡೇಶನ್ನಿನ ಒಂದು ಯೋಜನೆ.
Some rights reserved Sampada Initiative by Sampada Foundation, 2005 - 2008.
Terms of Use | Contact | About Sampada | Sampada in News/Media

The views expressed here are of the respective author(s) and Sampada administration does not necessarily subscribe to them.
RSS: All posts | Comments
Blogs | Podcasts

separator