ಸ್ವಲ್ಪ ಈ ವಿಷಯ ಕುರಿತು ಯೋಚಿಸಿ...
1 day ago - Shreerama Diwanaಖರ್ಚು ಮಾಡುವ ಸುಲಭ ಮಾರ್ಗಗಳು, ಸಂಪಾದನೆ ಮಾಡಲು ಕಠಿಣ ಹಾದಿಗಳು. ಆಧುನಿಕತೆ - ಜಾಗತೀಕರಣದ ಬಹುದೊಡ್ಡ ಪರಿಣಾಮವೆಂದರೆ ಇರುವ ಹಣವನ್ನು ಅತ್ಯಂತ ಸುಲಭವಾಗಿ, ಸುಲಲಿತವಾಗಿ - ಸರಳವಾಗಿ ಕುಳಿತಲ್ಲಿಂದಲೇ ಹೇಗೆ ಬೇಕಾದರು, ಯಾರು ಬೇಕಾದರೂ ಹಣ ಖರ್ಚು ಮಾಡಬಹುದು. ನಮಗೆ ಬೇಕಾದ ವಸ್ತುಗಳನ್ನು, ಹೂಡಿಕೆಯನ್ನು, ಪಾವತಿಗಳನ್ನು, ವರ್ಗಾವಣೆಯನ್ನು ಮಾಡಬಹುದು ಮತ್ತು ಕೊಳ್ಳಬಹುದು. ಇದಕ್ಕೆ ಯಾವುದೇ ಶ್ರಮ ಬೇಕಿಲ್ಲ. ಒಂದು ಮೊಬೈಲಿನ ಮೂಲಕವೇ ಕೋಟ್ಯಾಂತರ ಹಣ ಖರ್ಚು ಮಾಡಬಹುದು. ಅದಕ್ಕಾಗಿ ಎಲ್ಲಾ ಬಗೆಯ ವೇದಿಕೆ - ಅವಕಾಶ - ಮೂಲ ಸೌಕರ್ಯ ಅಭಿವೃದ್ಧಿಪಡಿಸಲಾಗಿದೆ. ಹಣ ನಿಮ್ಮ ಬಳಿ ಇರಬೇಕಷ್ಟೇ.
ಆದರೆ ಅದಕ್ಕೆ ವಿರುದ್ಧವಾಗಿ ಹಣ ಸಂಪಾದನೆಯ ಮಾರ್ಗಗಳ ಬಗ್ಗೆ ಒಮ್ಮೆ ಯೋಚಿಸಿ ನೋಡಿ. ಇಷ್ಟು ಸುಲಭವಾಗಿ, ಸರಳವಾಗಿ, ಯಾವುದೇ ಒತ್ತಡವಿಲ್ಲದೇ ಹಣವನ್ನು ಸಂಪಾದನೆ ಮಾಡಲು ಸಾಧ್ಯವೇ. ಹೌದು ಕೆಲವು ಅಪರೂಪದ ಜೂಜಿನಂತ ಸ್ವಲ್ಪ ಅಪಾಯಕಾರಿ ಟ್ರೇಡಿಂಗ್ ನಂತಹ ವ್ಯವಹಾರ ಹೊರತುಪಡಿಸಿ ಇತರೇ ವಹಿವಾಟು ಮಾಡಲು ಸಾಧ್ಯವೇ? ಬಹುಶಃ ಇಂದು ನಮ್ಮೆಲ್ಲರ ಬಹುದೊಡ್ಡ ಸವಾಲು ಇದೇ ಆಗಿದೆ. ಸಂಪಾದನೆ ಮತ್ತು ಲಾಭಗಳು ಕಡಿಮೆಯಾಗುತ್ತಾ, ಖರ್ಚುಗಳು ಹೆಚ್ಚಾಗುತ್ತಾ ಅವುಗಳ ನಡುವೆ ಹೊಂದಾಣಿಕೆ ಸಾಧ್ಯವಾಗುತ್ತಿಲ್ಲ. ಇದು ದಿನೇ ದಿನೇ ಅಧಿಕವಾಗುತ್ತಿದೆ.
ಹಾಗೇ ಒಮ್ಮೆ 30-40 ವರ್ಷಗಳ ಹಿಂದಿನ ಜನಜೀವನದ ಬಗ್ಗೆ ಯೋಚಿಸಿ. ಮೊಬೈಲ್ ಇರಲಿಲ್ಲ. ಅದರ ಖರ್ಚು ಸಂಪೂರ್ಣ ಉಳಿತಾಯ. ಇಂದು ಅದು ಅನಿವಾರ್ಯ. ಟಿವಿ ಪ್ರಸಾರ ಉಚಿತವಾಗಿತ್ತು. ಬಟ್ಟೆಗಳು ಹಬ್ಬದ ಸಂದರ್ಭದಲ್ಲಿ ಮಾತ್ರ. ಸರ್ಕಾರಿ ಶಾಲೆಗಳಲ್ಲಿ ಅತ್ಯಂತ ಕಡಿಮೆ ದುಡ್ಡು. ಸಾಮಾನ್ಯ ಖಾಯಿಲೆಗೆ ಸರ್ಕಾರಿ ಆಸ್ಪತ್ರೆಗಳೇ ಸಾಕಾಗಿದ್ದವು. ನೀರಿಗೆ ಬಿಲ್ ಇರಲಿಲ್ಲ. ಹುಟ್ಟಿದ ಹಬ್ಬ, ಮದುವೆ ವ… ಮುಂದೆ ಓದಿ...